Cultural
ಹುಲಿ ಕಾರ್ಯಾಚರಣೆಗೆ ತೆರೆಳಿದ ಅರ್ಜುನ ದಸರಾಗೆ ಕಮ್ ಬ್ಯಾಕ್
ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2023.ಅಮವಾಸ್ಯೆ ಹಿನ್ನೆಲೆ.ಗಜಪಡೆ ತಾಲೀಮಿಗೆ ಇಂದು ಬ್ರೇಕ್ ಬಿದ್ದಿದೆ.
ರೆಸ್ಟ್ ಮೋಡ್‌ನಲ್ಲಿರುವ ಜಂಬೂ ಸವಾರಿ ಆನೆಗಳು.
ಗಜಪಡೆ ಸೇರಿಕೊಂಡ ಅರ್ಜುನ ಆನೆ.ಅರಮನೆ ಆವರಣಕ್ಕೆ ಆಗಮಿಸಿದ ಅರ್ಜುನ.ದಸರಾ ಗಜಪಡೆಯ ಮಾಜಿ ಕ್ಯಾಪ್ಟನ್ ಅರ್ಜುನ ಎಂಟ್ರಿ.ಮೊದಲ ಹಂತದ ದಸರಾ ಗಜಪಡೆಯೊಂದಿಗೆ ಆಗಮಿಸಿದ್ದ ಅರ್ಜುನ ಆನೆ.
ಆ ಬಳಿಕ ಹೆಚ್ ಡಿ ಕೋಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಗೆ ತೆರಳಿದ್ದ ಅರ್ಜುನ.
ಇಂದು ಅರಮನೆ ಅವರಣಕ್ಕೆ ಎಂಟ್ರಿ ಕೊಟ್ಟ ಅರ್ಜುನ.
ಅರ್ಜುನ ಆನೆಗೆ ಪೂಜೆ ಸಲ್ಲಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು.
ಕಬ್ಬು ಬೆಲ್ಲ ತಿನ್ನಿಸಿ ಆನೆ ಬರಮಾಡಿಕೊಂಡ ಸಿಬ್ಬಂದಿ.
ಮಾವುತ ಕಾವಾಡಿಗಳಿಂದ ಆನೆಗೆ ಸ್ನಾನ ಮಾಡಿಸುವ ಕಾರ್ಯ.ನಾಳೆಯಿಂದ ನಿತ್ಯ ತಾಲೀಮಿನಲ್ಲಿ ಭಾಗಿಯಾಗಲಿರುವ ಅರ್ಜುನ.
Cultural
ಪಾಕಿಸ್ತಾನಿಯರನ್ನು ದೇಶದಿಂದ ಹೊರಗೆ ಕಳುಹಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು : ಡಾ.ಇಂದ್ರೇಶ್
ಮಂಡ್ಯ: ಕೇಂದ್ರ ಸರ್ಕಾರ ಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಹೊರ ಹೋಗಲು, ದೇಶದ ರಾಜ್ಯ ಸರ್ಕಾರಗಳು ಗಡಿಪಾರು ಮಾಡುವಂತೆ ಆದೇಶಿಸಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ಪತ್ತೆಹಚ್ಚಿ ಪಾಕಿಸ್ತಾನಕ್ಕೆ ಮರಳಲು ಕ್ರಮ ವಹಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ತಲೆ ತಗ್ಗಿಸುವ ರೀತಿ ಪಹಲ್ಗಾಮ್ ಹತ್ಯಾಕಾಂಡ ನಡೆದ ಹಿನ್ನಲೆ ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದು ಮಾಡಿದೆ . ದೇಶದ ಬಿಜೆಪಿ ಸರ್ಕಾರ ಇರುವ ಎಲ್ಲ ರಾಜ್ಯಗಳಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಹಿಂದಿರುಗಿಸಲು ಕ್ರಮವಹಿಸಿದ್ದು, ರಾಜ್ಯದಲ್ಲಿ ಮಾತ್ರ ಸದರಿ ಕೆಲಸ ಆಗುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಓಟ್ ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರ ಓಲೈಕೆಯಿಂದಾಗಿ ಅವರ ಮೇಲಿನ ಪ್ರಕರಣಗಳ ಕುಲಾಸೆ ಮಾಡಿ, ಬಿಡುಗಡೆ ಮಾಡಿದ್ದರಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ನಿಷೇಧ ಮಾಡಿದ್ದು, ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಎಲ್ಲಿದ್ದಾರೆ, ಯಾವ ಸಂಘಟನೆಯಲ್ಲಿದ್ದಾರೆ, ಯಾವ ಕೃತ್ಯವೆಸಗುತ್ತಿದ್ದಾರೆ ಇದರ ಬಗ್ಗೆ ಕ್ರಮ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ಅಂತೆಯೇ ದೇಶದಿಂದ ಪಾಕಿಸ್ತಾನಿ ಪ್ರಜೆಗಳನ್ನು ಹಿಂದಿರುಗಿಸುವಂತೆ ಕ್ರಮ ವಹಿಸಲು ನಾಳೆ(ಬುಧವಾರ) ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದರ ಜೊತೆಗೆ ಸಿದ್ದರಾಮಯ್ಯ ಅವರನ್ನು ಆಗ್ರಹಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿವೇಕ್, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಮಾಧ್ಯಮ ವಕ್ತಾರ ನಾಗಾನಂದ್, ಚಂದ್ರು ಇದ್ದರು.
Cultural
ಶ್ರೀರಾಮನ ಚರಿತ್ರೆ ವಿಶ್ವಕ್ಕೆ ಸಾರಿದ ಶ್ರೀಮಹರ್ಷಿ ವಾಲ್ಮೀಕಿ — ಶಾಸಕ ದರ್ಶನ್ ಧ್ರುವನಾರಾಯಣ್

ನಂಜನಗೂಡು ನ.15
ಶ್ರೀ ರಾಮನ ಚರಿತ್ರೆಯನ್ನು ವಿಶ್ವಕ್ಕೆ ಸಾರಿದ ಮಹಾನ್ ನಾಯಕ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಗುಣಗಳು ಪ್ರಜಾಪ್ರಭುತ್ವಕ್ಕೆ ಬಹು ಮುಖ್ಯವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ.ಅವುಗಳನ್ನು ಪ್ರತಿಯೊಬ್ಬರು ಸದ್ಬಳಕೆ ಪಡೆದುಕೊಳ್ಳುವ ಮೂಲಕ ಆರ್ಥಿಕ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು ಸಮಾಜದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಮೂಲಕ ಎಲ್ಲಾ ರೀತಿಯ ಸಹಕಾರ ನೀಡುತ್ತೆನೆ ಎಂದರು.
ಸರ್ಕಾರಿ ಸೌಲಭ್ಯ ಪಡೆಯಲು ಯಾವುದೇ ಜಾತಿಭೇದ ಮಾಡಬೇಡಿ ಸಮಾಜಕ್ಕೆ ನಾವೆಲ್ಲರೂ ಒಂದೇ ಎಂಬ ಸಂದೇಶ ವಾಲ್ಮೀಕಿ ಸಮುದಾಯ ಸಾರಬೇಕು.ಎಲ್ಲರನ್ನೂ ಒಗ್ಗೂಡಿಸುವ ಮೂಲಕ ಯಾವುದೇ ಭಿನ್ನಾಭಿಪ್ರಾಯ ಬಾರದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಗ್ರಾಮದ ಎಲ್ಲ ನಾಯಕ ಸಮಾಜದವರನ್ನು ಒಟ್ಟಾಗಿ ಕರೆದೊಯ್ಯುವ ಜವಾಬ್ದಾರಿ ಇರಬೇಕು.ಶ್ರೀ ಮಹರ್ಷಿ ವಾಲ್ಮೀಕಿ ಅವರ ರಾಮಾಯಣದಲ್ಲಿ ಹೆಚ್ಚು ರೂಪಕ ಅಲಂಕಾರ ಬಳಕೆಯಾಗಿರುವುದ್ದರಿಂದ ಕಾಳಿದಾಸ ಕವಿ ಮಹರ್ಷಿ ವಾಲ್ಮೀಕಿ ಅವರನ್ನು ಕವಿಕುಲ ಚಕ್ರವರ್ತಿ ಎಂಬುದಾಗಿಯೋ ವರ್ಣಿಸಿದ್ದಾರೆ ಅಲ್ಲದೇ ಜಗತ್ತಿನ ಶ್ರೇಷ್ಠ ವಿಮಾರ್ಶಕ ಥಾಮಸ್ ಪ್ರಕಾರ ವಾಲ್ಮೀಕಿ ರಾಮಾಯಣ ಜಗತ್ತಿನ ಶ್ರೇಷ್ಠ ಕಾವ್ಯ ಸಂಪತ್ತು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕುಂಬ್ರಳ್ಳಿ ಸುಬ್ಬಣ್ಣ, ಶ್ರೀ ಕಂಠನಾಯಕ,ತಾ ಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್,ನಾಯಕ ಸಂಘದ ತಾಲ್ಲೂಕು ಅದ್ಯಕ್ಷ ಬಂಗಾರನಾಯಕ, ಕಾಂಗ್ರೆಸ್ ಯುವ ಘಟಕದ ಅದ್ಯಕ್ಷ ದೇಬೂರು ಆಶೋಕ್,ಗ್ರಾ ಪಂ ಅದ್ಯಕ್ಷೆ ತಾಯಮ್ಮ,
ದೊರೆಸ್ವಾಮಿನಾಯಕ,ಅಭಿನಂದನ್ ಪಾಟೀಲ್,ಗ್ರಾ ಪಂ ಸದಸ್ಯದೇವನಾಯಕ,ನಾಗನಾಯ್ಕ,ಶ್ರೀಕಂಠಸ್ವಾಮಿ,ಶಿವರಾಜು,ಪ್ರಕಾಶ್,ನಂಜುಂಡಸ್ವಾಮಿ, ಸಿದ್ದು,ಮಹೇಶ್, ಮಹೇಂದ್ರ, ಹಾಗೂ ಕಿಚ್ಚಿನ ಅಭಿಮಾನಿ ಬಳಗದವರು ಹಾಜರಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.
Cultural
ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ
ಆಲೂರು : ನೂರಾರು ವರ್ಷಗಳ ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.ತಾಲ್ಲೂಕಿನ ಕಸಬಾ ಹೋಬಳಿ ಸೊಂಪುರ ಗ್ರಾಮದ ಸಮೀಪದಲ್ಲಿರುವ ನಂಜದೇವರ ಕಾವಲಿನಲ್ಲಿ ಸುಕ್ಷೇತ್ರ ನಂಜುಂಡೇಶ್ವರ ದೇವಾಲಯದಲ್ಲಿ 52ನೇ ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಬೆಳಗಿನ ಜಾವದಿಂದಲೇ ದೇವಾಲಯ ಶುಚಿಗೊಳಿಸಿ ವಿವಿಧ ಹೂಗಳಿಂದ ಅಲಂಕರಿಸಿ ಪೂಜಾ ವಿಧಿ ವಿಧಾನಗಳು ಪ್ರಾರಂಭವಾಗಿ ವಿವಿಧ ಅಭಿಷೇಕ ಸೇರಿದಂತೆ ಅಲಂಕಾರ ಮಹಾ ಮಂಗಳಾರತಿ ತೀರ್ಥ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು.

ಆಲೂರು ತಾಲೂಕು ಸೇರಿದಂತೆ ಹಲವೆಡೆಗಳಿಂದ ನೂರಾರು ಭಕ್ತರ ದಂಡು ಅಗಮಿಸಿ ಪೂಜಾ ಕಾರ‍್ಯದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.ವಿಶೇಷ ಎಂದರೆ ಭಕ್ತಾಧಿಗಳು ತಮ್ಮ ಇಷ್ಟಾರ್ಥ ಕೋರಿಕೆಗಾಗಿ ಹರಕೆ ಹೊರುತ್ತಿದ್ದು. ಕೋರಿಕೆಗಳು ಈಡೇರಿದ ನಂತರ ಭಕ್ತರು ಪ್ರತಿ ಸೋಮವಾರ, ಶುಕ್ರವಾರ, ಅಮಾವಾಸ್ಯೆ, ಹುಣ್ಣಿಮೆಯ ದಿನಗಳಂದು ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಾಧಿಗಳೇ ಸ್ವಯಂ ಪ್ರೇರಿತರಾಗಿ ಹಮ್ಮಿಕೊಳ್ಳುತ್ತ ಬಂದಿದ್ದಾರೆ ಎಂದು ದೇಗುಲ ಟ್ರಸ್ಟ್ ಅಧ್ಯಕ್ಷ ಈರಣ್ಣಯ್ಯ ತಿಳಿಸಿದ್ದಾರೆ.
-
Chamarajanagar20 hours agoನಾನಂಥವನಲ್ಲಾ ಎಂದ ನಂದಕುಮಮಾರ್: ಚಾಮರಾಜನಗರ ಹಿರಿಕಾಟಿ ಕ್ರಷರ್ ವಿವಾದಕ್ಕೆ ಸ್ಪಷ್ಟನೆ
-
Hassan18 hours agoಕೃಷಿ ಸಾಲವನ್ನು ತೀರಿಸಲಾಗದೆ ರೈತನೋರ್ವ ಆತ್ಮ*ತ್ಯೆ
-
Special22 hours agoದಂತ ಭಾಗ್ಯ ಯೋಜನೆ, ಹಿರಿಯರ ಆರೋಗ್ಯಕ್ಕೆ ಸರ್ಕಾರದ ಭರವಸೆ.
-
Uncategorized11 hours agoದಿ. ರಾಕೇಶ್ ಸಿದ್ದರಾಮಯ್ಯ ಸ್ಮರಣಾರ್ಥ ಕಾರ್ ರೇಸ್ : ಕುಚುಕು ಗೆಳೆಯ ನನ್ನ ನೆನೆದ ಸಂಸದ ಸುನಿಲ್ ಬೋಸ್
-
Kodagu11 hours agoಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ
-
Kodagu11 hours agoಮಂಗಳವಾರ ಬ್ಯಾಡಗೊಟ್ಟ ಪಂಚಾಯತ್ ನ ನೂತನ ಕಟ್ಟಡ ಉದ್ಬಾಟನೆ
-
Uncategorized12 hours agoಫೆ.11ರಂದು ನಾಪೋಕ್ಲುವಿನಲ್ಲಿ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನೆ ಹಾಗೂ ದಅವಾ ಸಮ್ಮೇಳನ
-
State12 hours agoಬೆಸ್ಕಾಂನಲ್ಲಿ 520 ಹುದ್ದೆಗಳಿಗೆ ನೇರ ನೇಮಕಾತಿ!
