Kodagu
27 ಆನೆಗಳನ್ನ ಕಾಡಿಗಟ್ಟಿದ ಅರಣ್ಯ ಇಲಾಖೆ – ಬಾಣಂಗಾಲ ಕಾಫಿತೋಟದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳು
ಸಿದ್ದಾಪುರ : ಕಾಡಿನಿಂದ ನಾಡಿಗೆ ಬಂದು ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಅಪಾರ ಪ್ರಮಾಣದ ಕೃಷಿ ಪಸಲುಗಳನ್ನು ತುಳಿದು ತಿಂದು ನಾಶ ಮಾಡುವ ಮೂಲಕ ಕಾರ್ಮಿಕರು, ಬೆಳೆಗಾರರು, ಶಾಲಾ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿ ಮಾಡುತ್ತಿದ್ದ 27 ಕಾಡಾನೆಗಳನ್ನ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ, ತೂಬನಕೊಲ್ಲಿ, ಮಟ್ಟ, ಹುಂಡಿ, ಮೈಲಾಪುರ, ಮಾರ್ಗೊಲ್ಲಿ, ಘಟ್ಟದಳ, ಸೇರಿದಂತೆ ಇತರ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬಿಡು ಬಿಟ್ಟು ಹಾಡಗಲಿನಲ್ಲೂ ರಾಜಾರೋಷವಾಗಿ ಕಾಣಿಸಿಕೊಳ್ಳುತ್ತಿದ್ದವು.
ಕಾಫಿ ತೋಟದಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಡಾನೆ ಹಾವಳಿಯಿಂದ ಕಾರ್ಮಿಕರು ಕೆಲಸಕ್ಕೆ ತೆರಳಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾದರೆ ಶಾಲಾ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಹಿಂದೇಟು ಹಾಕುತ್ತಿದ್ದರು. ಬಾಡಗ ಬಾಣಂಗಾಲ ಕಾಫಿ ತೋಟದಲ್ಲಿ ಪ್ರತ್ಯಕ್ಷ ಗೊಂಡ 30ಕ್ಕೂ ಹೆಚ್ಚು ಕಾಡಾನೆಗಳನ್ನ ಕಂಡು ಭಯಭೀತರದ ಕಾರ್ಮಿಕರು ತೋಟ ಕೆಲಸ ಸ್ಥಗಿತಗೊಳಿಸಿ ಮನೆಗೆ ಹಿಂತಿರುಗಿದ್ದರು.
ಆನೆ ಸೆರೆಗೆ ಮಂಗಳವಾರ ಕಾರ್ಯಚರಣೆ ಆರಂಭವಾಗಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಆನೆಗಳನ್ನು ಕಾಡಿಗಟ್ಟಲು ಹರಸಹಾಸ ಪಟ್ಟರು. ಆನೆಗಳ ಗುಂಪು ಒಂದು ತೋಟದಿಂದ ಮತ್ತೊಂದು ತೋಟಕ್ಕೆ ನುಸುಳಿ ಬೇರ್ಪಟ್ಟವು. ಮಂಗಳವಾರ ಸಂಜೆಯಾದರಿAದ ಕಾರ್ಯಚರಣೆ ಸ್ಥಗಿತಗೊಳಿಸಿ ಬುಧವಾರ ಬೆಳಿಗ್ಗೆ 10ಕ್ಕೂ ಹೆಚ್ಚು ಸಿಬ್ಬಂದಿಗಳು ಸುಮಾರು ಹದಿನೈದು ಕಿಲೋಮೀಟರ್‌ನಷ್ಟು ಕಾಫಿ ತೋಟಗಳಲ್ಲಿ ನಡೆದು ಮತ್ತೆ ಕಾರ್ಯಚರಣೆ ಮುಂದುವರಿಸಿ ಬೇರ್ಪಟ್ಟ ಆನೆಗಳನ್ನು ಹರಸಹಾಸ ಪಟ್ಟು ಒಂದುಗೂಡಿಸುವಲ್ಲಿ ಯಶಸ್ವಿಯಾದರು.
ಗುಂಪಿನಲ್ಲಿದ್ದ 30 ಕ್ಕೂ ಹೆಚ್ಚು ಆನೆಗಳ ಪೈಕಿ 27 ಆನೆಗಳನ್ನ ಮಾರ್ಗೊಲ್ಲಿ, ಚೌಡಿಕಾಡು, ಘಟ್ಟದಳ ಮಾರ್ಗವಾಗಿ ದುಬಾರೆ ಅರಣ್ಯಕ್ಕೆ ಹಟ್ಟುವಲ್ಲಿ ಯಶಸ್ವಿಯಾದರು.
ಎಸಿಎಫ್ ಗೋಪಾಲ್, ಆರ್‌ಎಫ್ಓ ತೀರ್ಥ ಮಾರ್ಗದರ್ಶನದಲ್ಲಿ ಡಿಆರ್ ಎಫ್‌ಓ ಶ್ರೀನಿವಾಸ್ ಹಾಗೂ ಸಿಬ್ಬಂದಿಗಳಾದ ರೋಷನ್, ದನು, ಸಚಿನ್, ಗುರು, ಶಂಕರ್, ಭಾರತ್, ಸುಂದರ್, ಮುತ್ತ, ತೀರ್ಥ ಸೇರಿದಂತೆ ಇತರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Kodagu
ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ: ಅಪ್ಪಚೆಟ್ಟೋಳಂಡ ಡಿಯಾ ಗೆ ಪ್ರಶಸ್ತಿ
ವರದಿ: ಝಕರಿಯ ನಾಪೋಕ್ಲು
ನಾಪೋಕ್ಲು: ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣ ಸಮಿತಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ನಾಪೋಕ್ಲು ಬಳಿಯ ಬಲ್ಲಮಾಟಿ ಗ್ರಾಮದ ಅಪ್ಪಚೆಟ್ಟೋಳಂಡ ಎ.ಎಂ. ಡಿಯಾ ಪಾಲ್ಗೊಂಡು ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿ ಪಡೆದಿದ್ದಾರೆ.
ಕೊಡಗಿನ ಜವಾಹರ್ ನವೋದಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಯಾಗಿರುವ ಡಿಯಾ ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೊಳಂಡ ಮಿಥುನ್ ಮಾಚಯ್ಯ ಹಾಗೂ ನೀನಾ ಮಾಚಯ್ಯ ದಂಪತಿಗಳ ಪುತ್ರಿಯಾಗಿದ್ದಾರೆ.
Kodagu
ಕೊಡಗು ಎನ್.ಐ.ಎಂ.ಎ ಗೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ
ಮಡಿಕೇರಿ: ಕೊಡಗು ಜಿಲ್ಲೆಯ ನಿಮಾ 2022-24 ಸಾಲಿನಲ್ಲಿ ತೋರಿದ ಸರ್ವಾಂಗೀಣ ಚಟುವಟಿಕೆಗಳಿಗೆ ರಾಜ್ಯದ 34 ಶಾಖೆಗಳ ಪೈಕಿ ಪ್ರಥಮ ಸ್ಥಾನವನ್ನು ಪಡೆದ ಹಿರಿಮೆಗೆ ಪಾತ್ರವಾಯಿತು.
ರಾಣಿಬೆನ್ನೂರು ನಲ್ಲಿ ನಡೆದ ಎನ್.ಐ.ಎಂ.ಎ ರಾಜ್ಯ ಸಮಿತಿ ಸಭೆಯಲ್ಲಿ ಕೊಡಗು ಜಿಲ್ಲೆಯ ನಿಮಾ, ಪ್ರಥಮ ಸ್ಥಾನ ಪಡೆದುಕೊಂಡಿರುವ ಅಧಿಕೃತ ಘೋಷಣೆ ಮಾಡಲಾಯಿತು.
ಕೊಡಗು ಜಿಲ್ಲೆಯಿಂದ ರಾಜ್ಯ ಪ್ರತಿನಿಧಿಗಳಾದ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ.ಶ್ಯಾಮ ಪ್ರಸಾದ್ ಪಿ.ಎಸ್ ಹಾಗೂ ಕೊಡಗು ಜಿಲ್ಲಾ ಅಧ್ಯಕ್ಷ ಡಾ.ರಾಜಾರಾಮ.ಎ.ಆರ್.ಜಿಲ್ಲೆಯ ಪರವಾಗಿ ಪ್ರಶಸ್ತಿ ಪಡೆದುಕೊಂಡರು.
ಕೊಡಗು ಜಿಲ್ಲೆಯ ನೀಮಾ ಮಹಿಳಾ ಘಟಕ ಕೂಡ ಮಹಿಳಾ ವಿಭಾಗದಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿತು.
25ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಇರುವ ಕೊಡಗು ನೀಮಾ ಈ ವರ್ಷದಲ್ಲಿ ಸಾರ್ವಜನಿಕರಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ನಿಮಾ ಕೊಡಗು ಘಟಕದ ಅಧ್ಯಕ್ಷ ಡಾ. ರಾಜಾರಾಂ ತಿಳಿಸಿದ್ದಾರೆ.
Kodagu
ಜನವರಿ 26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ
ಮಡಿಕೇರಿ : ಉಪನ್ಯಾಸಕಿ ಮತ್ತು ಲೇಖಕಿ ಕೆ. ಜಯಲಕ್ಷ್ಮಿ ಅವರು ಬರೆದಿರುವ ಮತ್ತೆ ವಸಂತ ಹೆಸರಿನ ಕಥಾ ಸಂಕಲನ ಇದೇ ಜನವರಿ 26 ರಂದು ಲೋಕಾರ್ಪಣೆಯಾಗಲಿದೆ.
ನಗರದ ರೆಡ್ ಬ್ರಿಕ್ಸ್ ಇನ್ ಸಭಾಂಗಣದಲ್ಲಿ ಜನವರಿ 26 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಮತ್ತೆ ವಸಂತ ಕಥಾ ಸಂಕಲನವನ್ನು ಆಕಾಶವಾಣಿಯ ಉದ್ಘೋಷಕ ಸುಬ್ರಾಯ ಸಂಪಾಜೆ ಲೋಕಾರ್ಪಣೆ ಮಾಡಲಿದ್ದಾರೆ.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಟಿ. ಪಿ ರಮೇಶ್ ಅಧ್ಯಕ್ಷತೆಯ ಕಾರ್ಯಕ್ರಮದಲ್ಲಿ ಶಕ್ತಿ ಪತ್ರಿಕೆಯ ಸಂಪಾದಕ
ಜಿ . ಚಿದ್ವಿಲಾಸ್, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್ ಟಿ., ಬೆಳ್ತಂಗಡಿಯ ಎನ್. ಜಯಪ್ರಕಾಶ್ ಶರ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಮತ್ತೆ ವಸಂತ ಕಥಾ ಸಂಕಲನದ ಕಥೆಗಾರ್ತಿ ಜಯಲಕ್ಷ್ಮಿ ತಿಳಿಸಿದ್ದಾರೆ.
-
Chamarajanagar20 hours ago
Hannur|ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ಜಟಾಪಟಿ
-
Hassan22 hours ago
Hassan| ಕಾಡಾನೆ ದಾಳಿಗೆ ಕಾರ್ಮಿಕ ಬ*ಲಿ
-
State15 hours ago
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
-
Chamarajanagar11 hours ago
ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ
-
National - International14 hours ago
ಪನಾಮಾ ಕಾಲುವೆ ವಿವಾದ: ಟ್ರಂಪ್ ಹೇಳಿಕೆ ತಿರಸ್ಕರಿಸಿದ ಪನಾಮಾ ಅಧ್ಯಕ್ಷ ಜೋಸ್ ರೌಲ್
-
Hassan17 hours ago
ಕಾಡಾನೆ ದಾಳಿಯಿಂದ ವೃದ್ದ ಸಾ*ವು ಪ್ರಕರಣ
-
Kodagu11 hours ago
ಸಾರ್ವಜನಿಕರಿಗೆ ಪಂಗನಾಮ ಹಾಕಿದ್ದ ಫರ್ನೀಚರ್ ಅಂಗಡಿ ಮಾಲೀಕನ ಬಂಧನ
-
National - International12 hours ago
ರಾಜ್ಯದಲ್ಲಿ ಪ್ರತ್ಯೇಕ ಎರಡು ಕಡೆ ಅಪಘಾತ: ಮೃತರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ