Hassan
ಮುದಿಗೆರೆ ಸರ್ಕಾರಿ ಜಾಗ ಒತ್ತುವರಿ: 16 ಮಂದಿ ವಿರುದ್ಧ ಪ್ರಕರಣ
ಬೇಲೂರು,: ಸಮೀಪದ ಮುದಿಗೆರೆ ಗ್ರಾಮದ ಸರ್ವೆ ನಂ. 3ರಲ್ಲಿರುವ 5.16 ಎಕರೆ ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿ, ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪದ ಮೇರೆಗೆ 16 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸರ್ಕಾರಿ ಜಾಗವನ್ನು ಗ್ರಾಮಸ್ಥರ ಮನವಿ ಮೇರೆಗೆ ವಸತಿ ಶಾಲೆ, ಅಂಗನವಾಡಿ, ಆಟದ ಮೈದಾನ ಸೇರಿದಂತೆ ವಿವಿಧ ಸಾರ್ವಜನಿಕ ಉದ್ದೇಶಗಳಿಗೆ ಬಳಸಲು ಮೀಸಲಿಡಲಾಗಿತ್ತು. ಆದರೆ ಕೆಲವರು ಜಾಗಕ್ಕೆ ಅನಧಿಕೃತವಾಗಿ ಪ್ರವೇಶಿಸಿ ಅಕ್ರಮವಾಗಿ ಶೆಡ್ಗಳು ಹಾಗೂ ಕಟ್ಟಡಗಳನ್ನು ನಿರ್ಮಿಸಿರುವುದು ಅಧಿಕಾರಿಗಳ ಗಮನಕ್ಕೆ ಬಂದಿತ್ತು.
ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ನೇತೃತ್ವದಲ್ಲಿ ಅ. 6ರಂದು ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಕೆಲ ಗ್ರಾಮಸ್ಥರು ತೆರವು ಕಾರ್ಯಾಚರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ತೆರವು ಕಾರ್ಯಾಚರಣೆ ವೇಳೆ ಕೆಲವರು ಸೀಮೆಎಣ್ಣೆ ಹಾಗೂ ವಿಷದ ಬಾಟಲಿ ತೋರಿಸಿ ಬೆದರಿಕೆ ಹಾಕಿದರು. ಅಲ್ಲದೆ, ಟ್ಯಾಂಕ್ ಮೇಲೆ ಹತ್ತಿ ಜಿಗಿಯಲು ಯತ್ನಿಸಿದ ಘಟನೆಯೂ ನಡೆದಿದೆ ಎನ್ನಲಾಗಿದೆ. ಬೆಳಿಗ್ಗೆ 11 ಗಂಟೆಗೆ ಆರಂಭವಾದ ಕಾರ್ಯಾಚರಣೆ ಸಂಜೆ 4 ಗಂಟೆಯಾದರೂ ಪೂರ್ಣಗೊಳ್ಳಲಿಲ್ಲ. ಈ ಸಂದರ್ಭದಲ್ಲಿ ಪೊಲೀಸ್ ಮತ್ತು ಕಂದಾಯ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ.
ಸರ್ಕಾರಿ ಜಾಗಕ್ಕೆ ಅನಧಿಕೃತ ಪ್ರವೇಶ, ಅಕ್ರಮ ಕಟ್ಟಡ ನಿರ್ಮಾಣ ಹಾಗೂ ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಕಸಬಾ ಹೋಬಳಿ ರಾಜಸ್ವ ನಿರೀಕ್ಷಕ ಭಾಸ್ಕರ್ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ದಾಖಲಾಗಿರುವವರು:ಶ್ರೀನಾಥ, ಪುಟ್ಟರಾಜು, ಮಂಜುನಾಥ್, ಮಹೇಶ್ವರಪ್ಪ, ಚಂದ್ರಶೇಖರ್, ರವಿ, ಶಿವಮ್ಮ, ಶ್ಯಾಮಲಾ, ಭಾಗ್ಯ, ಸೋಮಯ್ಯ ಅವರ ಪತ್ನಿ ಶಿವಮ್ಮ, ಲಲಿತಮ್ಮ, ಪ್ರತಿಮಾ, ಜಯಲಕ್ಷ್ಮಿ, ರಜನಿ, ಕವಿತಾ ಹಾಗೂ ರೇಖಾ.
ಕರ್ನಾಟಕ ಭೂ ಕಂದಾಯ ಕಾಯ್ದೆ–1964ರ ವಿವಿಧ ಕಲಂಗಳಡಿ ಸರ್ಕಾರಿ ಜಮೀನಿಗೆ ಅನಧಿಕೃತ ಪ್ರವೇಶ, ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಬೆದರಿಕೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮನೆ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಸುಮಾರು 25ಕ್ಕೂ ಹೆಚ್ಚು ಜನರಿಗೆ ಸರ್ಕಾರದಿಂದ ಮಂಜೂರಾಗಿರುವಂತಹ ನಿವೇಶನ ಜಮೀನು ದಾಖಲೆಗಳನ್ನು ಹೊಂದಿದ್ದರು ಸಹ ಸರ್ಕಾರ ಜಾಗವನ್ನು ಒತ್ತುವರಿ ಮಾಡುವ ಉದ್ದೇಶದಿಂದ ಪ್ರತಿಭಟನೆ ಮಾಡಲಾಗಿದೆ ಎಂದು ತಿಳಿಸಿದರು
ಜಿಲ್ಲಾಧಿಕಾರಿಗೆ ವರದಿ:
ಮುದಿಗೆರೆ ಸರ್ವೆ ನಂ. 3ರ 5.16 ಎಕರೆ ಸರ್ಕಾರಿ ಜಾಗವನ್ನು ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಡುವ ಕುರಿತು ಹಾಗೂ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ ಎಂದು ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ತಿಳಿಸಿದ್ದಾರೆ.
ತಹಸೀಲ್ದಾರ್ ಹೇಳಿಕೆ:
“ಮುದಿಗೆರೆ ಸರ್ವೆ ನಂ. 3ರ 5.16 ಎಕರೆ ಸರ್ಕಾರಿ ಜಾಗವನ್ನು ಗ್ರಾಮಸ್ಥರ ಮನವಿ ಮೇರೆಗೆ ವಸತಿ ಶಾಲೆ, ಅಂಗನವಾಡಿ, ಆಟದ ಮೈದಾನ ಸೇರಿದಂತೆ ಸಾರ್ವಜನಿಕ ಉದ್ದೇಶಗಳಿಗೆ ಮೀಸಲಿಡಲಾಗಿದೆ. ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಿಸಿರುವ ಮಾಹಿತಿ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪದ ಮೇರೆಗೆ 16 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ, ಅಲ್ಲದೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಸಹ ಮಂಜೂರಾಗಿರುವಂತಹ ಜಮೀನು ಹಾಗೂ ಮನೆಗಳು ಇರುವುದಕ್ಕೆ ಸಂಪೂರ್ಣ ದಾಖಲೆಗಳನ್ನು ಈಗಾಗಲೇ ಕಂದಾಯ ಇಲಾಖೆಯಿಂದ ಪರಿಶೀಲಿಸಲಾಗಿದೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ತಿಳಿಸಿದ್ದಾರೆ.
Hassan
ಕ್ರೀಡಾ ಕ್ಷೇತ್ರದಲ್ಲಿ ಎಪಿಜೆ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
ಹಾಸನ: ಶಿಕ್ಷಣದ ಜತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕಾಲೇಜಿನ ಕೀರ್ತಿ ಹೆಚ್ಚಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ನಗರದ ಬಿ.ಕಾಟಿಹಳ್ಳಿಯಲ್ಲಿರುವ ಉನ್ನತಿ ಎಜುಕೇಶನ್ ಟ್ರಸ್ಟ್ನ ಎಪಿಜೆ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅಮೋಘ ಪ್ರದರ್ಶನ ನೀಡಿ ಹಲವು ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ.

ಕ್ರೀಡೆಯೆಂದರೆ ಕೇವಲ ಗೆಲುವು-ಸೋಲಿನ ವಿಚಾರವಲ್ಲ. ಶಿಸ್ತು, ಆತ್ಮವಿಶ್ವಾಸ, ನಿರಂತರ ಅಭ್ಯಾಸ, ಸಮಯಪಾಲನೆ ಹಾಗೂ ಸೋಲನ್ನು ಸವಾಲಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುವ ಪ್ರಮುಖ ವೇದಿಕೆಯಾಗಿದೆ.
ಈ ನಿಟ್ಟಿನಲ್ಲಿ ಎಪಿಜೆ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ತೋರಿಸಿರುವ ಸಾಧನೆ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಿದೆ.
ರಾಷ್ಟ್ರಮಟ್ಟಕ್ಕೆ ಸಿಂಚನ ಕೆ:ಹೆಚ್::ಕಾಲೇಜಿನ ವಿದ್ಯಾರ್ಥಿನಿ ಸಿಂಚನ ಕೆ. ಹೆಚ್:ಅವರು ವೇಟ್ಲಿಫ್ಟಿಂಗ್ನಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಮತ್ತೊಂದು ಹೆಮ್ಮೆ ತಂದಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ವೇಟ್ಲಿಫ್ಟಿಂಗ್ ಕ್ರೀಡಾಕೂಟದಲ್ಲಿ 48 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿರುವ ಅವರು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕಠಿಣ ಪರಿಶ್ರಮ, ನಿರಂತರ ತರಬೇತಿ ಮತ್ತು ಆತ್ಮವಿಶ್ವಾಸದ ಫಲವಾಗಿ ಸಿಂಚನ ಈ ಸಾಧನೆ ಮಾಡಿದ್ದಾರೆ. ಮುಂದಿನ ನವೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಅವರು ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ರಾಷ್ಟ್ರಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ಕಾಲೇಜು ಹಾಗೂ ಜಿಲ್ಲೆಗೆ ಮತ್ತಷ್ಟು ಕೀರ್ತಿ ತರಬೇಕೆಂಬ ಆಶಯವನ್ನು ಎಲ್ಲರೂ ವ್ಯಕ್ತಪಡಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿ ಪ್ರಕೃತ್ ಎತ್ತರ ಜಿಗಿತ ಹಾಗೂ ತ್ರಿವಿಧ ಜಿಗಿತ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಯಶ್ವಂತ್ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದರೆ, ನವಜೋತ್ ಸಿಂಗ್ ಕರಾಟೆ ಸ್ಪರ್ಧೆಯಲ್ಲಿ ಹಾಗೂ ನೀರಜ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಪ್ರೀತಮ್ ಬಿ.ಸ್ wieght ಲಿಫ್ಟಿಂಗ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಗಳಿಸಿದ್ದಾರೆ.
ಅದೇ ರೀತಿ ಟೆಕ್ವಾಂಡೋ ಸ್ಪರ್ಧೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಸ್ಕಂದನ್ 60 ಕೆ.ಜಿ. ವಿಭಾಗದಲ್ಲಿ, ನಿಹಾಲ್ 75 ಕೆ.ಜಿ. ವಿಭಾಗದಲ್ಲಿ ಹಾಗೂ ನೀರಜ್ ಕೆ.ಪಿ. 65 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.
ಇನ್ನು ಚಿನ್ಮಯಿ 3000 ಮೀಟರ್ ನಡಿಗೆ (ವಾಕ್ ರೇಸ್) ಹಾಗೂ ಗುಡ್ಡಗಾಡು ಓಟ (ಕ್ರಾಸ್ ಕಂಟ್ರಿ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ವಿಶೇಷ ಸಾಧನೆಯಾಗಿದೆ. ಒಂದೇ ಕ್ರೀಡಾಕೂಟದಲ್ಲಿ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳು ತೋರಿದ ಈ ಸಾಮೂಹಿಕ ಸಾಧನೆ ಕಾಲೇಜಿನ ಕ್ರೀಡಾ ಚಟುವಟಿಕೆಗಳಿಗೆ ದೊರೆಯುತ್ತಿರುವ ಪ್ರೋತ್ಸಾಹಕ್ಕೆ ಸಾಕ್ಷಿಯಾಗಿದೆ.
ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಕ್ರೀಡೆಯಲ್ಲಿ ವಿದ್ಯಾರ್ಥಿಗಳು ತೋರಿರುವ ಈ ಸಾಧನೆಗೆ ಉನ್ನತಿ ಎಜುಕೇಶನ್ ಟ್ರಸ್ಟ್ನ ಕಾರ್ಯದರ್ಶಿ ಡಿ. ಮುರಳಿ, ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ತರಬೇತಿ ಮತ್ತು ಪ್ರೋತ್ಸಾಹ ನೀಡುವ ಮೂಲಕ ಮುಂದಿನ ದಿನಗಳಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ.
Hassan
ರೈತರನ್ನು ಎದುರು ಹಾಕಿಕೊಂಡು ಯಾವ ಸರ್ಕಾರವೂ ಹೆಚ್ಚು ದಿನ ಉಳಿದಿಲ್ಲ: ನಿಖಿಲ್ ಕುಮಾರಸ್ವಾಮಿ
ಹಾಸನ: ರಾಜ್ಯ ಸರ್ಕಾರದ ಆಡಳಿತ ಹಾಗೂ ರೈತಪರ ನೀತಿಗಳನ್ನು ಟೀಕಿಸಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ರೈತರನ್ನು ಎದುರು ಹಾಕಿಕೊಂಡು ಯಾವ ಸರ್ಕಾರವೂ ಹೆಚ್ಚು ದಿನ ಉಳಿದಿಲ್ಲ ಎಂದು ಹೇಳಿದರು.

ಚನ್ನರಾಯಪಟ್ಟಣದ ಎಪಿಎಂಸಿ ಆವರಣದಲ್ಲಿ ರೈತರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಲಾಶಯಗಳಲ್ಲಿ ನೀರಿದ್ದರೂ ಬೆಳೆಗಳಿಗೆ ನೀರು ಬಿಡಲಿಲ್ಲ. ಜಲಾಶಯಗಳನ್ನು ನಂಬಿ ರೈತರು ಬಿತ್ತನೆ ಮಾಡಬಾರದು ಎಂದು ಹೇಳುವ ಪರಿಸ್ಥಿತಿ ಬಂದಿದೆ. ರಾಜ್ಯದ ಇತಿಹಾಸದಲ್ಲಿ ಈ ರೀತಿಯ ಹೇಳಿಕೆ ನೀಡಿದ ಮೊದಲ ಮುಖ್ಯಮಂತ್ರಿ ಇವರೇ ಎಂದು ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದರು.
ಸರ್ಕಾರ ಪ್ರಜಾ ಸೇವೆಯ ಮೂಲಕ ಜನರ ಸೇವೆ ಮಾಡುವ ಬದಲು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ನಿಖಿಲ್, ಹಣಕಾಸು ಇಲಾಖೆಯ ಅಧಿಕಾರಿಗಳು ಯಾವುದೇ ಹೊಸ ಯೋಜನೆಗಳನ್ನು ಘೋಷಿಸಬಾರದು ಎಂಬ ಅಧಿಕೃತ ಪತ್ರ ಹೊರಡಿಸಿದ್ದಾರೆಯೇ ಅಥವಾ ಅದು ಸೋರಿಕೆಯಾಗಿದೆಯೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಸಾಲದ ಬಗ್ಗೆಯೂ ಪ್ರಸ್ತಾಪಿಸಿದ ಅವರು, ರಾಜ್ಯ ಸರ್ಕಾರ ₹4.36 ಲಕ್ಷ ಕೋಟಿ ಸಾಲ ಮಾಡಿದ್ದು, ವರ್ಷಕ್ಕೆ ಸುಮಾರು ₹48 ಸಾವಿರ ಕೋಟಿ ಬಡ್ಡಿ ಪಾವತಿಸುತ್ತಿದೆ ಎಂದು ಆರೋಪಿಸಿದರು. ಜನರು ತಮ್ಮ ಕಷ್ಟಗಳನ್ನು ಹೇಳಿಕೊಂಡು ಕಣ್ಣೀರಿಡುತ್ತಾ ಬರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರಕ್ಕೆ ತಾಯಿ ಹೃದಯ ಇದೆಯೇ ಎಂದು ಪ್ರಶ್ನಿಸಿದರು.
ಇತ್ತೀಚೆಗೆ ನಡೆದ ವಿಶೇಷ ಅಧಿವೇಶನದ ಕುರಿತು ಮಾತನಾಡಿದ ಅವರು, ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿ ಒಂದು ದಿನ ಹೆಚ್ಚುವರಿ ಅಧಿವೇಶನ ನಡೆಸಿದರೂ, ಅದು ಕೇವಲ ಮೂಗಿಗೆ ತುಪ್ಪ ಸವರುವ ಕೆಲಸವಾಗಿದೆ ಎಂದು ಟೀಕಿಸಿದರು.
ರೈತರಿಗೆ ₹2,500 ನೀಡುವುದಾಗಿ ಹೇಳುತ್ತಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಿಖಿಲ್, ರೈತರು ಭಿಕ್ಷುಕರಲ್ಲ. ಅವರು ಸ್ವಾಭಿಮಾನಿಗಳು. ರೈತರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಪರಿಣಾಮ ಎದುರಾಗಲಿದೆ ಎಂದು ಹೇಳಿದರು.
ತಮ್ಮ ರಾಜಕೀಯ ಭವಿಷ್ಯದ ಕುರಿತು ಮಾತನಾಡಿದ ಅವರು, ನನ್ನ ಮೇಲೆ ಅನುಕಂಪದಿಂದ ಮಾತನಾಡುವ ಅಗತ್ಯವಿಲ್ಲ. ನಾನು ಧೃತಿಗೆಟ್ಟಿಲ್ಲ. ಸದನದ ಒಳಗೆ ಹೋಗಿ ರೈತರ ಪರ ಧ್ವನಿಯಾಗಿ ಹೋರಾಡುವ ಅವಕಾಶ ಸಿಗದಿದ್ದರೂ ಬೇಸರವಿಲ್ಲ. ಬೀದಿಯಲ್ಲಿ ನಿಂತು ರೈತರ ಪರ ಹೋರಾಟ ಮಾಡುತ್ತೇನೆ ಎಂದರು.
ದೇವೇಗೌಡರು, ಕುಮಾರಸ್ವಾಮಿ ಹಾಗೂ ರೇವಣ್ಣ ಅವರ ಹೆಸರನ್ನು ಉಳಿಸುವ ಕೆಲಸ ಮಾಡುತ್ತೇನೆ. ನಿಖಿಲ್ ಕುಮಾರಸ್ವಾಮಿ ದ್ರೋಹ ಬಗೆಯುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು.
ಹಾಸನ ಜಿಲ್ಲೆಯ ಕಾರ್ಯಕರ್ತರು ಜೆಡಿಎಸ್ ಪಕ್ಷವನ್ನು ತೊರೆದು ಹೋಗಿಲ್ಲ. ಈಗಾಗಲೇ ಜನರು ಸರ್ಕಾರದ ಆಡಳಿತದಿಂದ ಬೇಸತ್ತಿದ್ದಾರೆ. ಚುನಾವಣೆಗೆ ಇನ್ನೂ ಸುಮಾರು ಒಂದೂವರೆ ವರ್ಷ ಬಾಕಿ ಇದ್ದರೂ ಈಗಾಗಲೇ ಚುನಾವಣಾ ಕಾವು ಆರಂಭವಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
136 ಶಾಸಕರನ್ನು ಹೊಂದಿರುವ ಸರ್ಕಾರಕ್ಕೆ ಸಾಲಮನ್ನಾ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರಧಾನಿ ಬಳಿ ಸಾಲಮನ್ನಾ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ರೈತರ ಕಣ್ಣೀರಿಗೆ ಕಾರಣವಾಗುತ್ತಿರುವ ಸರ್ಕಾರದ ಪತನ ಬಹಳ ದೂರವಿಲ್ಲ. ರೈತರನ್ನು ಎದುರು ಹಾಕಿಕೊಂಡು ಯಾವ ಸರ್ಕಾರವೂ ಹೆಚ್ಚು ದಿನ ಉಳಿದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
Hassan
ಬೇಲೂರು ಪುರಸಭೆಗೆ ಆಡಳಿತಾಧಿಕಾರಿ ನೇಮಕ:ಚುನಾಯಿತ ಮಂಡಳಿ ಅವಧಿ ಮುಕ್ತಾಯ: ಆಡಳಿತಾಧಿಕಾರಿಯಾಗಿ ಸಕಲೇಶಪುರ ಉಪವಿಭಾಗಾಧಿಕಾರಿ
ಬೇಲೂರು: ಬೇಲೂರು ಪುರಸಭೆಯ ಚುನಾಯಿತ ಮಂಡಳಿಯ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ, ಹೊಸ ಚುನಾಯಿತ ಮಂಡಳಿ ಅಸ್ತಿತ್ವಕ್ಕೆ ಬರುವವರೆಗೆ ಪುರಸಭೆಯ ಆಡಳಿತ ನಿರ್ವಹಣೆಗೆ ಸಕಲೇಶಪುರ ಉಪವಿಭಾಗಾಧಿಕಾರಿ ಹುಲಿಮನಿ ತಿಪ್ಪಣ್ಣ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅ.07-10-2026ರ ಅಧಿಸೂಚನೆಯಂತೆ, ಕರ್ನಾಟಕ ಪುರಸಭೆಗಳ ಅಧಿನಿಯಮ, 1964ರ ಕಲಂ 389ರ ಅನ್ವಯ ಈ ನೇಮಕಾತಿ ಮಾಡಲಾಗಿದೆ.

ಅಧಿಸೂಚನೆಯ ಪ್ರಕಾರ, ಅ.04-10-2026ರಿಂದ ಜಾರಿಗೆ ಬರುವಂತೆ ಸಕಲೇಶಪುರ ಉಪವಿಭಾಗಾಧಿಕಾರಿಯನ್ನು ಬೇಲೂರು ಪುರಸಭೆಯ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಹೊಸ ಚುನಾಯಿತ ಪುರಸಭಾ ಮಂಡಳಿ ಅಸ್ತಿತ್ವಕ್ಕೆ ಬರುವವರೆಗೆ ಅವರು ಆಡಳಿತ ನಿರ್ವಹಿಸಲಿದ್ದಾರೆ. ಬೇಲೂರು ಪುರಸಭೆಯ ವ್ಯಾಪ್ತಿಯಲ್ಲಿ ನಗರ ಸ್ವಚ್ಛತೆ, ಕುಡಿಯುವ ನೀರು, ರಸ್ತೆ ಮತ್ತು ಚರಂಡಿ ನಿರ್ವಹಣೆ, ಘನತ್ಯಾಜ್ಯ ವಿಲೇವಾರಿ ಸೇರಿದಂತೆ ವಿವಿಧ ಸಾರ್ವಜನಿಕ ಸೇವೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಆಡಳಿತಾತ್ಮಕ ಕಾರ್ಯಗಳು ಮುಂದುವರಿಯಲಿವೆ.
-
Mysore21 hours agoನಂಜನಗೂಡು ದೇಬೂರು ಸರ್ಕಾರಿ ಕಾಲೇಜಿನ ಆವ್ಯವಸ್ಥೆ ಬಯಲು : ಮಾಜಿ ಶಾಸಕ ಬಿ.ಹರ್ಷವರ್ಧನ್ ಖುದ್ದು ಭೇಟಿ
-
National22 hours agoತಮಿಳುನಾಡಿಗೆ 15 ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ CWMA ಆದೇಶ
-
Chikmagalur19 hours agoಉಪ ವಲಯ ಅರಣ್ಯಾಧಿಕಾರಿ ರವಿಕುಮಾರ್ ಅಮಾನತು
-
National24 hours agoದರ್ಶನ್ಗೆ ಮತ್ತೊಂದು ಕಾನೂನು ಹಿನ್ನಡೆ: ಪ್ರದೂಷ್ ‘ಮಾಫಿ ಸಾಕ್ಷಿ’ ವಿಚಾರದ ಅರ್ಜಿ ವಜಾ
-
Mysore21 hours agoನಾಳೆ ಅ.9ಕ್ಕೆ ನಂಜನಗೂಡಿನಲ್ಲಿ BSP ಬಹುಜನರ ಸಂಕಲ್ಪ ಸಮಾವೇಶ
-
National20 hours agoಜಿಎಸ್ಟಿ ಅಡಿಯಲ್ಲಿ ಬಂಧನ ಅಧಿಕಾರ ರದ್ದು ಪ್ರಸ್ತಾವನೆ: ವಿಚಾರಣಾ ಮಿತಿ ₹5 ಕೋಟಿಗೆ ಹೆಚ್ಚಳ
-
Kodagu23 hours agoಪೋಷಣ್ ಮಾಸಾಚರಣೆ ಮುಕ್ತಾಯ ಸಮಾರಂಭ: ಗ್ರಾಮೀಣ ಒಕ್ಕೂಟದಿಂದ ಅಂಗನವಾಡಿಗೆ ಕೊಡುಗೆ
-
National3 hours agoಇಸ್ರೇಲ್ನಿಂದ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ಗೆ ಶೌರ್ಯ ಪ್ರಶಸ್ತಿ ಘೋಷಣೆ
