Connect with us

Mandya

ಅಕ್ರಮ ಆಸ್ತಿ ಗಳಿಕೆ: ಕಾರ್ಯಪಾಲಕ ಎಂಜಿನಿಯರ್‌ ಹರ್ಷ ಅಮಾನತು

Published

on

ಮಂಡ್ಯ: ಇಲ್ಲಿನ ಲೋಕೋಪಯೋಗಿ‌ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಎಚ್.ಆರ್.ಹರ್ಷ ಎಂಬುವ ಅಧಿಕಾರಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪ‌‌ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ.

ಜ.30 ರಂದು ಲೋಕಾಯುಕ್ತ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು, ಈ ಪ್ರಾಥಮಿಕ‌ ವರದಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವುದು ಸಾಬೀತಾಗಿದೆ.

ಲೋಕಾಯುಕ್ತ ಆರೋಪ: ಪರಿಶೀಲನಾ ಅವಧಿಯಲ್ಲಿ ₹1.40 ಕೋಟಿ ಆದಾಯ ಹೊಂದಿದ್ದು, ₹1,25,50,336 ಖರ್ಚು ಹೊಂದಲಾಗಿದೆ. ಅಂತೆಯೇ ₹14,49,664 ಉಳಿತಾಯ‌‌ ಹೊಂದಿರುತ್ತಾರೆ. ಆದರೆ, ತನಿಖೆ ವೇಳೆ ₹3,32,87,997 ಆಸ್ತಿಯಲ್ಲಿ ₹3,18,38,333 ಅಂದರೆ ಆದಾಯಕ್ಕಿಂತ ಶೇ.227.416 ರಷ್ಟು ಹೆಚ್ಚುವರಿ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಆರೋಪಿಸಿದೆ.

ವಿಚಾರಣೆ ಬಾಕಿ ಇರಿಸಿ ಅಮಾನತು: ಹರ್ಷ ಎಂಬುವ ಅಧಿಕಾರಿಯನ್ನು ಆರೋಪದ ಹಿನ್ನಲೆಯಲ್ಲಿ ವಿಚಾರಣೆ ಬಾಕಿ ಇರಿಸಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಕಲಂ 13(1)(ಬಿ) ರಡಿ ಕ್ರಿಮಿನಲ್ ಮೊಕದ್ದಮೆ, ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) (ಎಎ)ರನ್ವಯ ತಕ್ಷಣವೇ ಜಾರಿಗೆ ಬರುವಂತೆ ಸೇವೆಯಿಂದ ಮಾ.26 ರಂದು ಲೋಕೋಪಯೋಗಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮುರುಳೀಧರ ಎಸ್.ತಳ್ಳಿಕೇರಿ ಅವರು ಅಮಾನತುಗೊಳಿಸಿರುವ ಆದೇಶ ಹೊರಡಿಸಿದ್ದಾರೆ‌.

Continue Reading
Click to comment

Leave a Reply

Your email address will not be published. Required fields are marked *

Mandya

ಮಂಡ್ಯ ಪೋಲೀಸರಿಂದ 17 ಕೆಜಿ ಮಾದಕ ವಸ್ತು ನಾಶ

Published

on

ಮಂಡ್ಯ: ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಎನ್.ಡಿ.ಪಿ.ಎಸ್ ಕಾಯ್ದೆಯಡಿ 2024 ಮತ್ತು 2025 ನೇ ಇಸವಿಯ ಈವರೆಗೆ ವರದಿಯಾಗಿದ್ದ 19 ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಂಡು ಸುಮಾರು 3,60,460 ರೂ. ಮೌಲ್ಯದ 17 ಕೆ.ಜಿ 613 ಗ್ರಾಂ. ಗಾಂಜಾವನ್ನು ನಾಶಪಡಿಸಲಾಗಿದೆ.

ಎನ್.ಡಿ.ಪಿ.ಎಸ್ ಕಾಯ್ದೆ ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಂಡಿರುವ ಮಾದಕ ವಸ್ತುಗಳನ್ನು Drug Disposal Committee ವತಿಯಿಂದ ನಾಶಪಡಿಸಿದ್ದಾರೆ.

ಮಂಡ್ಯ ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಸಮಿತಿ ಮುಖಾಂತರ ನಾಶಪಡಿಸಲು ನ್ಯಾಯಾಲಯವು ಆದೇಶಿಸಿ ಸಮಿತಿಗೆ ನೀಡಿತ್ತು. ಅದರಂತೆ ಒಟ್ಟು 17 ಕೆ.ಜಿ 613 ಗ್ರಾಂ ಮಾದಕ ವಸ್ತು(ಗಾಂಜಾ)ವನ್ನು ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು Drug Disposal Committee ಮಂಡ್ಯ ಜಿಲ್ಲೆ ಅಧ್ಯಕ್ಷ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಸಮಿತಿಯ ಸದಸ್ಯರ ಸಮಕ್ಷಮದಲ್ಲಿ ನಿಯಮಾನುಸಾರ ಬುಧವಾರ (ಜ.22) ಮೈಸೂರು ಜಿಲ್ಲೆ, ಜಯಪುರ ಹೋಬಳಿಯ ಗುಚ್ಚೇನಹಳ್ಳಿ ಗ್ರಾಮದ M/S GIPS Bio-Tech Incinerator waste management ನಲ್ಲಿ ನಾಶಪಡಿಸಲಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

Mandya

ಜ. 24 ರಿಂದ 28 ರವರೆಗೆ ಮಂಡ್ಯದಲ್ಲಿ ಫಲಪುಷ್ಪ ಪ್ರದರ್ಶನ : ಶೇಖ್ ತನ್ವೀರ್ ಅಸೀಫ್

Published

on

ಮಂಡ್ಯ : ಜಿಲ್ಲಾ ಪಂಚಾಯತ್, ತೋಟಗಾರಿಕಾ ಸಂಘ, ತೋಟಗಾರಿಕೆ ಇಲಾಖೆ ಇವರ ಸಹಯೋಗದಲ್ಲಿ “ಪ್ರತಿ ತುತ್ತಿಗೂ ರೈತರನ್ನು ಸ್ಮರಿಸೋಣ” ಎಂಬ ಶೀರ್ಷಿಕೆಯಡಿ ಜನವರಿ 24 ರಿಂದ 28 ರವರೆಗೆ ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ-2025 ಉದ್ಘಾಟನಾ ಕರರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ತಿಳಿಸಿದರು.

ತೊಟಗಾರಿಕೆ ಇಲಾಖೆ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಐದು ದಿನಗಳ ಕಾಲ ನಡೆಯುವ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲೆಯ ರೈತರು, ಸಾರ್ವಜನಿಕರು, ನಾಗರೀಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಫಲಪುಷ್ಪ ಪ್ರದರ್ಶನ ಯಶಸ್ವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ತೋಟಗಾರಿಕೆ ಕಚೇರಿ ಆವರಣ ಹಾಗೂ ಕಾವೇರಿ ಉದ್ಯಾನವನದಲ್ಲಿ ಮನಸೂರೆಗೊಳ್ಳುವ ವಿವಿಧ ಹೂ ಅಲಂಕಾರಿಕ ಕುಂಡಗಳ ಜೋಡಣೆ, ವಿವಿಧ ತರಕಾರಿ ಬೆಳೆಗಳು ಹಾಗೂ ಪೌಷ್ಠಿಕ ಕೈತೋಟ ಮಾದರಿ ಹಾಗೂ ತರಕಾರಿ ಕೆತ್ತನೆ ಪ್ರದರ್ಶನ ಮತ್ತು ಜಿಲ್ಲೆಯ ತೋಟಗಾರಿಕೆ ಬೆಳೆಗಳ ವೈವಿದ್ಯತೆಯ ಮಾದರಿಗಳ ಪ್ರದರ್ಶನ ಹಾಗೂ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಮತ್ತು ವಿವಿಧ ಅಭಿವೃದ್ಧಿ ಇಲಾಖೆಗಳ ಕಾರ್ಯಕ್ರಮಗಳ ಸಮಗ್ರ ಮಾಹಿತಿಯನ್ನು ಫಲಪುಷ್ಪ ಪ್ರದರ್ಶನದಲ್ಲಿ ನೀಡಲಾಗುವುದು ಎಂದರು.

ಪ್ರತಿ ದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ದಿನ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಯಸ್ಕರಿಗೆ ಟಿಕೆಟ್ ದರ 30, 6-12 ವರ್ಷದ ಮಕ್ಕಳಿಗೆ 20 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ಮಕ್ಕಳ ಗುಂಪುಗಳಿಗೆ ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಪ್ರವೇಶ ಉಚಿತ ಎಂದರು.

ಸುದ್ದಿಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರಿ ಕೆ.ಎನ್., ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಬಿ.ಎನ್.ಸುವೇದ, ಜಿಲ್ಲಾ ತೋಟಗಾರಿಕೆ ಸಂಘದ ಜಂಟಿ ಕಾರ್ಯದರ್ಶಿ ಎಸ್.ಪಿ.ಶ್ರೀಧರ್ ಹಾಗೂ ನಿರ್ದೇಶಕರಾದ ಎಂ.ಆರ್.ಅರವಿಂದ್ ಉಪಸ್ಥಿತರಿದ್ದರು.

Continue Reading

Mandya

ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

Published

on

ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದೆ.

ಜಿಲ್ಲಾಧಿಕಾರಿಗಳಿಗೆ 2024- 25 ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನವಾಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ ಪ್ರಶಸ್ತಿ ದೊರೆಯಲಿದೆ.

ಈ ಪ್ರಶಸ್ತಿಯನ್ನು ಜನವರಿ 25 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮತದಾರರ ದಿನಾಚರಣೆಯಲ್ಲಿ ನೀಡಲಾಗುವುದು ಎಂದು ರಾಜ್ಯ ಚುನಾವಾಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

Continue Reading

Trending

error: Content is protected !!