Connect with us

Mandya

*ಎಂಜಿನಿಯರಿಂಗ್ ಶಿಕ್ಷಣ ಭವಿಷ್ಯದ ವೃತ್ತಿಪರರನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಿಇಟಿ ಜಂಟಿ ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್*

Published

on

ಮಂಡ್ಯ: ಎಂಜಿನಿಯರಿಂಗ್ ಶಿಕ್ಷಣ ಭವಿಷ್ಯದ ವೃತ್ತಿಪರರನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಿಇಟಿ ಜಂಟಿ ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್ ತಿಳಿಸಿದರು.

 

ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಪ್ಲೇಸ್ ಮೆಂಟ್ ಸಭಾಂಗ ಣದಲ್ಲಿ ನೆಡೆದ ಪಿಇಎಸ್ಇ ಓಪನ್ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೆ.ವಿ.ಶಂಕರಗೌಡರ ದೂರದೃಷ್ಟಿಯಿಂದ ಸ್ಥಾಪನೆಯಾದ ಪ್ರತಿಷ್ಠಿತ ಪಿ.ಇ.ಎಸ್. ಇಂಜಿನಿ ಯರಿಂಗ್ ಕಾಲೇಜು ಇಂದು ತನ್ನ ಮುಕ್ತ ದಿನಾಚರಣೆ ಕಾರ್ಯಕ್ರಮ

ವನ್ನು ಯಶಸ್ವಿಯಾಗಿ ನಡೆಸಿತು.

 

ಈ ಕಾರ್ಯಕ್ರಮವು ಮಂಡ್ಯ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಪೇಕ್ಷಿತ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಂದು ಉತ್ತಮ ಅವಕಾಶವನ್ನು ಒದಗಿಸಿತು.

 

ಕಾರ್ಯಕ್ರಮವು ಸಂಸ್ಥಾಪಕ ಅಧ್ಯಕ್ಷರಾದ ಪಿ.ಇ.ಟಿ. ಕೆ.ವಿ.ಶಂಕರ ಗೌಡ ಅವರು ಮಂಡ್ಯದ ಯುವಕರಿಗೆ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣವನ್ನು ಒದಗಿಸುವ ಗುರಿಯ ದೂರದೃಷ್ಟಿಗೆ ಸಾಕ್ಷಿಯಾಯಿತು.

 

ಕೆಸಿಇಟಿ ಸೆಲ್‌ನ ತಜ್ಞ ಉದಯಶಂಕರ್ ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡುವ ಅಧಿವೇಶನವನ್ನು ನಡೆಸಿದರು ಮತ್ತು ಕೆಸಿಇಟಿ ಕೌನ್ಸೆಲಿಂಗ್‌ಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಸಲಹೆಗಳನ್ನು ನೀಡಿದರು.

ನಿರೀಕ್ಷಿತ ವಿದ್ಯಾರ್ಥಿಗಳು ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು, ಪ್ರಸ್ತುತ ವಿದ್ಯಾರ್ಥಿಗಳು ಮತ್ತು ಪ್ರವೇಶ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿ, ತಮ್ಮ ವೃತ್ತಿಜೀವನದ ಆಯ್ಕೆಗಳಿಗೆ ಸಂಬಂಧಿಸಿದಂತೆ ಮಾರ್ಗದರ್ಶನ ಪಡೆದರು.

ಈ ಕಾರ್ಯಕ್ರಮವು ಹಲವಾರು ನವೀನ ವಿದ್ಯಾರ್ಥಿ ಯೋಜನೆಗಳನ್ನು ಪ್ರದರ್ಶಿಸಿತು, ಇದು ಕಾಲೇಜಿನ ಸೃಜನಶೀಲತೆ ಮತ್ತು ಸಂಶೋಧನೆಯ ಬದ್ಧತೆಯನ್ನು ಪ್ರತಿಬಿಂಬಿ

ಸುತ್ತದೆ.ವಿಭಾಗೀಯ ಮಳಿಗೆಗಳು ವಿವಿಧ ಎಂಜಿನಿಯರಿಂಗ್ ಕೋರ್ಸ್‌ಗಳು ಮತ್ತು ಪ್ರವೇಶ ಪ್ರಕ್ರಿಯೆಗಳ ಕುರಿತು ಮಾಹಿತಿಯನ್ನು ಒದಗಿಸಿದವು.

 

ಉದ್ಘಾಟನಾ ಸಮಾರಂಭದಲ್ಲಿ ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಎಚ್.ಎಂ.ನಂಜುಂಡಸ್ವಾಮಿ ಮತ್ತು ಉಪಪ್ರಾಂಶುಪಾಲ ಡಾ.ವಿನಯ್ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಡೆಂಗ್ಯೂ ಜ್ವರ ಹರಡದಂತೆ ತಡೆಯಲು ಹೆಚ್ಚಿನ ನಿಗಾ ವಹಿಸಿ: ಡಿಸಿ ಕುಮಾರ

Published

on

ಮಂಡ್ಯ: ಡೆಂಗ್ಯೂ ಜ್ವರಕ್ಕೆ ಸರಿಯಾದ ಚಿಕಿತ್ಸೆ ಪಡೆಯದಿದ್ದಲ್ಲಿ ಮಾರಣಾಂತಿಕವಾಗಿ ಪರಿಣಮಿಸುತ್ತದೆ. ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ತಿಳಿಸಿದರು.

ಅವರು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ‌ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ 415 ಪ್ರಕರಣಗಳು ವರದಿಯಾಗಿದ್ದು, ಒಂದೇ ಸ್ಥಳದಲ್ಲಿ 2 ಅಥವಾ ಹೆಚ್ಚಿನ ಪ್ರಕರಣ ಕಂಡು ಬಂದಲ್ಲಿ ತಕ್ಷಣ ಸುತ್ತ ಮುತ್ತ ಪ್ರದೇಶದಲ್ಲಿ ಕಡ್ಡಾಯವಾಗಿ ಲಾರ್ವಾ ಪರೀಕ್ಷೆ ನಡೆಸಿ ಎಂದರು.

ಡೆಂಗ್ಯೂ ಪ್ರಕರಣಗಳಲ್ಲಿ ವಯಸ್ಸುವಾರು ಪಟ್ಟಿ ಮಾಡಿಕೊಂಡು ಮಕ್ಕಳಲ್ಲಿ ಹೆಚ್ಚು ಕಂಡು ಬಂದಿದ್ದರೆ ಅಂತಹ ಶಾಲೆ ಹಾಗೂ ಅಂಗನವಾಡಿಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಸುತ್ತಮುತ್ತಲಿನ ಪ್ರದೇಶವನ್ನು ಪರಿಶೀಲಿಸಿ ಎಂದರು.

ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಬ್ಲಾಕ್ ಶಿಕ್ಷಣಾಧಿಕಾರಿಗಳು ಸಭೆ ನಡೆಸಿ ಡೆಂಗ್ಯೂ ತಡೆಗಟ್ಟುವ ಬಗ್ಗೆ ಯೋಜನೆಗಳನ್ನು ರೂಪಿಸಿ ಜಾಗೃತಿ ಕಾರ್ಯಕ್ರಮಗಳನ್ಬು ಆಯೋಜಿಸಿ ಎಂದರು.

ಸ್ಥಳೀಯ ಸಂಸ್ಥೆಗಳು ಹಾಗೂ, ಆರೋಗ್ಯ ಇಲಾಖೆಯವರು ಪ್ರತಿ ದಿನ ದೊಡ್ಡ ಶಾಲೆ ಹಾಗೂ ಹಾಸ್ಟಲ್ ಗಳನ್ನು ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಿ. ಆರೋಗ್ಯ ಇಲಾಖೆಯಿಂದ ಸಾರ್ವಜನಿಕರು ಹಾಗೂ ಮಕ್ಕಳು ಕೈಗೊಳ್ಳಬೇಕಿರುನ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಸಿ ಅನುಸರಿಸುವಂತೆ ಪ್ರೇರೆಪಿಸಿ ಎಂದರು‌.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್ ಮಾತನಾಡಿ, ಡೆಂಗ್ಯೂ ಹರಡುವ ಸೊಳ್ಳೆ ಕಡಿತವನ್ನು ತಪ್ಪಿಸಲು ಆದಷ್ಟು ಸಾರ್ವಜನಿಕರು ತುಂಬು ತೋಳಿನ ಉಡುಪು ಧರಿಸಿ, ಬೇವಿನ ಎಣ್ಣೆಯನ್ನು ಕೈ ಮತ್ತು ಕಾಲಿಗೆ ಹಚ್ಚಿಕೊಳ್ಳಿ. ಜ್ವರ ಬಂದ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆಗೆ ಒಳಪಡಿ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿ ಆರೋಗ್ಯ ಇಲಾಖೆಯ 157 ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ಸ್ಥಳದ ಅವಶ್ಯಕತೆ ಇದ್ದು, ಗ್ರಾಮದ ಹತ್ತಿರ ಸ್ಥಳವನ್ನು ಗುರುತಿಸಿ ಎಂದರು.

ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆಯಡಿ 18 ರಿಂದ 50 ವರ್ಷದೊಳಗಿನವರು ವಾರ್ಷಿಕವಾಗಿ ರೂ 436/- ಪ್ರಿಮಿಯಂ ಪಾವತಿಸಿ ಯಾವುದೇ ಕಾರಣಕ್ಕೂ ಮೃತ ಪಟ್ಟರೂ ರೂ 2 ಲಕ್ಷದ ವಿಮೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ವಾರ್ಷಿಕವಾಗಿ ರೂ 20 ಪ್ರೀಮಿಯಂ ಪಾವತಿಸಿದರೆ ಅಪಘಾತದಿಂದ ಮೃತ ಪಟ್ಟಲ್ಲಿ ರೂ 2 ಲಕ್ಷದ ವಿಮೆ ದೊರೆಯಲಿದೆ. ಈ ಬಗ್ಗೆ ಎಲ್ಲಾ ಸಿಬ್ಬಂದಿಗಳು, ಮಹಿಳಾ ಸಂಘಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿ ನೊಂದಾಯಿಸಿಕೊಳ್ಳುವಂತೆ ಪ್ರೇರೇಪಿಸಿ ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಾತನಾಡಿ,ಜನಸ್ಪಂದನದಲ್ಲಿ ಸ್ವೀಕೃತವಾಗುವ ಸಾರ್ವಜನಿಕರ ದೂರು ಅರ್ಜಿಗಳನ್ನು ಗಂಭೀರವಾಗಿ‌ ಪರಿಗಣಿಸಿ, ಅವರಿಗೆ ಪರಿಹಾರ ಒದಗಿಸಿ ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯತರ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಆಧಾರ್ ಸೀಡಿಂಗ್ ಮಿಸ್ ಮ್ಯಾಚ್ ಆಗಿರುವುದರಿಂದ ಸುಮಾರು 527 ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಪಾವತಿಯಾಗಿಲ್ಲ. 10 ದಿನದೊಳಗಾಗಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ತೊಂದರೆ ಸರಿಪಡಿಸಿ ವಿದ್ಯಾರ್ಥಿ ವೇತನ ಪಾವತಿಗೆ ಕ್ರಮವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಯಲು ಕ್ರಮ ಜರುಗಿಸಿ: ಜಿಲ್ಲಾಧಿಕಾರಿ

Published

on

ಮಂಡ್ಯ: ‌ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಇಲಾಖೆಗಳು ಸಮನ್ವಯವಾಗಿ ಕಾರ್ಯನಿರ್ವಹಿಸಿ ಬಾಲ್ಯವಿವಾಹ ಪ್ರಕರಣಗಳನ್ನು ತಡೆಗಟ್ಟಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ತಡೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಮನ್ವಯ ಹಾಗೂ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಮಂಡ್ಯ ಜಿಲ್ಲೆಯಲ್ಲಿ ಒಟ್ಟು 60 ಬಾಲ್ಯ ವಿವಾಹ ಕುರಿತು ಬಂದ ದೂರುಗಳಲ್ಲಿ 46 ಬಾಲ್ಯ ವಿವಾಹವನ್ನು ತಡೆಯಲಾಗಿದೆ. ಮಂಡ್ಯ ತಾಲ್ಲೂಕಿನಲ್ಲಿ – 12, ಮದ್ದೂರು – 3, ಮಳವಳ್ಳಿ – 1, ಶ್ರೀರಂಗಪಟ್ಟಣ – 4, ಕೆ ಆರ್ ಪೇಟೆ – 12, ನಾಗಮಂಗಲ – 5, ಪಾಂಡವಪುರ ತಾಲ್ಲೂಕಿನಲ್ಲಿ – 9 ಪ್ರಕರಣಗಳನ್ನು ತಡೆಯಲಾಗಿದ್ದು, ಉಳಿದ 14 ಪ್ರಕರಣಗಳನ್ನು ಎಫ್ ಐ ಆರ್ ನಲ್ಲಿ ದಾಖಲು ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ 14 ಬಾಲ್ಯ ವಿವಾಹ ಪ್ರಕರಣಗಳು ಜರುಗಿರುವುದು ತಲೆ ತಗ್ಗಿಸುವ ಸಂಗತಿಯಾಗಿದೆ. ಈ ಬಗ್ಗೆ ಏನೇನು ಕ್ರಮ ಕೈಗೊಂಡಿದ್ದೀರಿ ಎಂದು ಸಂಬಂಧಪಟ್ಟವರನ್ನು ವಿಚಾರಿಸಿದರು.

ಬಾಲ್ಯ ವಿವಾಹದ ಕಾರಣ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರು ಹೆಚ್ಚಾಗಿದ್ದಾರೆ. ಜಿಲ್ಲೆಯಲ್ಲಿ ಶಾಲೆಬಿಟ್ಟ ಹೆಣ್ಣು ಮಕ್ಕಳ ಸಂಖ್ಯೆಯನ್ನು ಪಟ್ಟಿಮಾಡಿ ಹಾಗೂ 15 ದಿನಗಳಿಗಿಂತ ಹೆಚ್ಚು ಸತತವಾಗಿ ಶಾಲೆಗೆ ಗೈರು ಹಾಜರಾಗುವ ಹೆಣ್ಣು ಮಕ್ಕಳ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಎಲ್ಲಾ ತಾಲ್ಲೂಕಿನ ಬಿಇಒ ಗಳಿಗೆ ತಿಳಿಸಿದರು.

18 ವರ್ಷದೊಳಗಿನ ಹೆಣ್ಣು ಮಕ್ಕಳು ಆಧಾರ್ ಕಾರ್ಡ್ ನಲ್ಲಿ ವಯಸ್ಸನ್ನು ಬದಲಾಯಿಸಿಕೊಂಡು ಸುಳ್ಳು ವಯಸ್ಸಿನ ದಾಖಲೆಗಳನ್ನು ಆಸ್ಪತ್ರೆಗೆ ನೀಡುತ್ತಿರುವುದು ಕೇಳಿ ಬರುತ್ತಿದೆ. ಈ ರೀತಿಯ ಆಧಾರ್ ಕಾರ್ಡ್ ನಲ್ಲಿ ಸುಳ್ಳು ವಯಸ್ಸನ್ನು ಬದಲಾವಣೆ ಮಾಡುವುದು ಕಂಡು ಬಂದಲ್ಲಿ ಅಥವಾ ಸಹಕರಿಸುವವರು ಕಂಡುಬಂದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಪ್ರತಿ ಗ್ರಾಮ ಪಂಚಾಯಿತಿ, ತಾಲ್ಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡಂತೆ ಸಮನ್ವಯ ಸಮಿತಿಯನ್ನು ಈ ಹಿಂದೆಯೇ ರಚಿಸಲಾಗಿದೆ. ಬಾಲ್ಯ ವಿವಾಹ, ಬಾಲ ಗರ್ಭಿಣಿ ಹಾಗೂ ಹೆಣ್ಣು ಭ್ರೂಣ ಪತ್ತೆಯ ವಿಚಾರಗಳ ಬಗ್ಗೆ ಪ್ರತಿ 2 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಬೇಕು ಎಂದರು.

ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ತೀವ್ರ ನಿಗಾ

ಜಿಲ್ಲೆಯಲ್ಲಿ ಯಾವುದೇ ಭ್ರೂಣ ಹತ್ಯೆ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಿ. ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ತೀವ್ರ ನಿಗಾ ಇಟ್ಟು ಆಗಾಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಂದು ಸಂಬಂಧಪಟ್ಟ ಇಲಾಖೆಗೆ ತಿಳಿಸಿದರು.

ಕೆಲವು ತಂದೆ ತಾಯಿಗಳಿಗೆ ತಮ್ಮ ಮನೆಯ ಹೆಣ್ಣು ಮಕ್ಕಳಿಗೆ ಆದಷ್ಟು ಬೇಗ ಮದುವೆ ಮಾಡಿ ಜವಾಬ್ದಾರಿಯಿಂದ ಮುಕ್ತವಾಗಬೇಕು ಅನ್ನೋ ಭಾವನೆ, ಶಿಕ್ಷಣದ ಕೊರತೆ, ಮೂಡ ನಂಬಿಕೆಗಳಿಂದ ಕೆಲವು ಪೋಷಕರು ಬಾಲ್ಯ ವಿವಾಹಕ್ಕೆ ಮನಸೋಲುತ್ತಾರೆ. ಕೆಲವು ವೇಳೆ ಪ್ರೇಮ ಪ್ರಕರಣಗಳ ಕಾರಣದಿಂದಲೂ ಬಾಲ ಗರ್ಭಿಣಿಯರು ಸೃಷ್ಟಿಯಾಗುತ್ತಾರೆ. ಕಾರಣ ಯಾವುದೇ ಇರಲಿ, 18 ವರ್ಷ ತುಂಬುವುದಕ್ಕಿಂತಾ ಮೊದಲು ಗರ್ಭಿಣಿ ಆಗುವ ಬಾಲಕಿಯರು ಹಲವು ದೈಹಿಕ, ಮಾನಸಿಕ ಸಂಕಷ್ಟ ಅನುಭವಿಸುತ್ತಾರೆ ಎಂದು ಹೆಣ್ಣು ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಎಂದರು.

ಬಾಲ ಗರ್ಭಿಣಿಯರಿಗೆ ರಕ್ತಹೀನತೆ, ಗರ್ಭಾವಸ್ಥೆಯ ಅಧಿಕ ರಕ್ತದೊತ್ತಡ, ಕಡಿಮೆ ಜನನ ತೂಕ, ಶಿಶು ಮರಣದ ಹೆಚ್ಚಿನ ಪ್ರಮಾಣ, ಖಿನ್ನತೆ, ಪ್ರಿ-ಎಕ್ಲಾಂಪ್ಸಿಯಾ, ಮಾನಸಿಕ ಆರೋಗ್ಯ ಅಸ್ವಸ್ಥತೆಗಳು, ನವಜಾತ ಶಿಶುವಿನ ಸಾವು ಸಂಭವಿಸುತ್ತದೆ. ಈ ಬಗ್ಗೆ ಆರೋಗ್ಯ ಇಲಾಖೆ ಅವರು ಸಹ ಜಾಗೃತಿ ಮೂಡಿಸಿ ಎಂದರು

ಬಾಲ ತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆ ಮಾಡುವಂತೆ ಸೂಚಿಸಿದರು.

ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪ್ರತಿ ಗ್ರಾಮು ಸಭೆಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.

ಜಿಲ್ಲೆಯಲ್ಲಿರುವ ಶಾಲೆಗಳ ಮುಖ್ಯಸ್ಥರು, ವಸತಿ ನಿಲಯಗಳ ಮೇಲ್ವಿಚಾರಕರು,ದೇವಸ್ಥಾನದ ಮುಖ್ಯಸ್ಥರು, ಮುದ್ರಣಾಲಯದ ಮಾಲೀಕರಿಗೆ, ಕಲ್ಯಾಣ ಮಂಟಪಗಳ ವ್ಯವಸ್ಥಾಪಕರು, ಸಾಮೂಹಿಕ ವಿವಾಹಗಳ ಆಯೋಜಕರು, ಧಾರ್ಮಿಕ ಮುಖಂಡರುಗಳಿಗೆ ಬಾಲ್ಯ ವಿವಾಹ ತಡೆಗಟ್ಟಲು ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆ ಸಭೆ ಕರೆದು ತಿಳಿಸಿ ಎಂದರು.

ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್ ಅವರು ಮಾತನಾಡಿ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು, ಪಿಯುಸಿ ನಲ್ಲಿ ಪ್ರವೇಶ ಪಡೆಯದೆ ಇರುವ ವಿದ್ಯಾರ್ಥಿಗಳ ಬಗ್ಗೆ ವಿಚಾರಿಸಿ ಮುಖ್ಯವಾಗಿ ಹೆಣ್ಣು ಮಕ್ಕಳ ಬಗ್ಗೆ ಮಾಹಿತಿ ಪಡೆದು ವರದಿ ಸಲ್ಲಿಸಬೇಕು. ಈಗಾಗಲೇ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಮಿತಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಇನ್ನೂ ಹೆಚ್ಚಾಗಿ ಬಲವರ್ಧನೆಯಾಗಬೇಕು ಎಂದರು.

ಸಭೆಯಲ್ಲಿ ಡಿ.ವೈ.ಎಸ್.ಪಿ ಗಂಗಾಧರ ಸ್ವಾಮಿ, ಜಿಲ್ಲಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕರಾದ ರಾಜಮೂರ್ತಿ ಎಸ್, ಆರ್ ಸಿ ಎಚ್ ಒ ಅಧಿಕಾರಿ ಡಾ ಅನಿಲ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್ ಶಿವರಾಮೇಗೌಡ, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಸಮಾಜ ಕಲ್ಯಾಣಾಧಿಕಾರಿ ಡಾ.ಸಿದ್ದಲಿಂಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Continue Reading

Mandya

ಕೆ.ಆರ್.ಎಸ್ ನಲ್ಲಿ ಡೆಂಘೀ ಜಾಗೃತಿ

Published

on

ಶ್ರೀರಂಗಪಟ್ಟಣ: ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ಕೆಆರ್ ಸಾಗರ್ ದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಪ್ರಭಾರಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಡಿ.ಟಿ.ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, ಡೆಂಗ್ಯೂ ಜ್ವರದ ನಿಯಂತ್ರಣಕ್ಕೆ ಲಾರ್ವ ಪತ್ತೆ ಹಾಗೂ ಉತ್ಪತ್ತಿ ತಾಣ ನಾಶ ಮಾಡುವುದು ಒಂದೇ ದಾರಿಯಾಗಿದೆ. ಡೆಂಗ್ಯೂ ಜ್ವರಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಅಥವಾ ಲಸಿಕೆ ಲಭ್ಯವಿಲ್ಲದೆ ಇರುವುದರಿಂದ ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಖಾಯಿಲೆ ಬರದಂತೆ ತಡೆಗಟ್ಟುವುದೇ ಒಳ್ಳೆಯದು ಎಂದು ಅವರು ಕಿವಿಮಾತು ಹೇಳಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಮಾತನಾಡಿ, ಸೊಳ್ಳೆಗಳ ಜೀವನ ಚಕ್ರದ ಹಂತಗಳು ಮೊಟ್ಟೆ, ಲಾರ್ವಾ, ಫೂಪ, ವಯಸ್ಕ ಹಂತಗಳ ಬಗ್ಗೆ, ನಿಯಂತ್ರಣದ ಕ್ರಮಗಳು ಹಾಗೂ ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ಪರದೆ ಉಪಯೋಗಿಸುವ ಕುರಿತು ಅರಿವು ಮೂಡಿಸಿದರು.

ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್ ಮಾತನಾಡಿ, ಡೆಂಗ್ಯೂ ಜ್ವರದ ಲಕ್ಷಣಗಳು, ಪತ್ತೆ ಹಚ್ಚುವಿಗೆ, ಚಿಕಿತ್ಸೆ ಹಾಗೂ ಮುಂಜಾಗ್ರತ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಗ್ರಾಮದಲ್ಲಿ ಎಲ್ಲಾ ಸಾರ್ವಜನಿಕರು ಪ್ರತಿ ಶುಕ್ರವಾರ ತಮ್ಮ ಮನೆಯ ಎಲ್ಲಾ ನೀರಿನ ಸಂಗ್ರಹಗಳಾದ ನೀರಿನ ತೊಟ್ಟಿ ,ಪ್ಲಾಸ್ಟಿಕ್ ಬ್ಯಾರಲ್ ಇತರೆ ನೀರಿನ ಪರಿಕರಗಳನ್ನು ಎಲ್ಲವನ್ನು ಸಹ ಕಡ್ಡಾಯವಾಗಿ ಖಾಲಿ ಮಾಡಿ ಚೆನ್ನಾಗಿ ಉಜ್ಜಿ ನೀರನ್ನು ತುಂಬಿಸಿಕೊಳ್ಳುವುದು ಕಡ್ಡಾಯ. ಇದರ ಪರಿಶೀಲಿನೆಗಾಗಿ ಆರೋಗ್ಯ ಸಿಬ್ಬಂದಿ ವರ್ಗದವರು ಮನೆ ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಸಹಕಾರ ಬಹಳ ಮುಖ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಬಿ.ಕುಮಾರ್, ಕಾಲೇಜಿನ ಪ್ರಾಂಶುಪಾಲ ಲಿಂಗರಾಜು ಉಪನ್ಯಾಸಕ ಕುಮಾರ್, ಆಡಳಿತ ವೈದ್ಯಾಧಿಕಾರಿ ಡಾ.ಪ್ರಫುಲ್ಲ, ಆರೋಗ್ಯ ನಿರೀಕ್ಷಣಾಧಿಕಾರಿ ರಮ್ಯ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು

Continue Reading

Trending

error: Content is protected !!