Mysore
ಕೆ ಆರ್ ನಗರ ಪಟ್ಟಣದ ಲಯನ್ಸ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಶಾಲೆಯ ಆವರಣದಲ್ಲಿ ನಡೆದ ಗಿಡ ನೆಡುವ ಕಾರ್ಯಕ್ರಮಕ್ಕೆ ವಿಜ್ಞಾನ ಕ್ಲಬ್ ಶಿಕ್ಷಕ ಅನಿಲ್ ಚಾಲನೆ.
ಗಿಡಕ್ಕೆ ನೀರು ಹಾಕಿ ಪರಿಸರ ರಕ್ಷಣೆ ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ಮನೆಗೆ ಎರಡು ಮರ ಊರಿಗೊಂದು ವನ ಇದ್ದರೇ ಕಾಲಕಾಲಕ್ಕೆ ಮಳೆ,ಬೆಳೆ ಮತ್ತು ಮಣ್ಣಿನ ಸಂರಕ್ಷಣೆಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರುಗಳಾದ ಎಲ್.ಎಸ್.ಲೋಕೇಶ್, ಜಿ.ರಮೇಶ್ ಮಕ್ಕಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು, ಈ ಸಂದರ್ಭದಲ್ಲಿ ಶಿಕ್ಷಕರುಗಳಾದ ಸಿ.ಎಂಪುಷ್ಪಾವತಿ, ವನಾಜಾಕ್ಷಿ, ಜಿ.ರಾಮೇಗೌಡ, ಸೌಮ್ಯ, ಎ.ಎಸ್.ಅಶ್ವಿನಿ, ಯೋಗೇಶ್ ಕುಮಾರ್, ಬಿ.ಎಸ್.ಹರೀಶ್, ಎಸ್.ಯೋಗಾನಂದ, ಬೀಬಿಜಾನ್, ಕೆ.ಆರ್.ವಿನುತ, ಹಾಗೂ ಶಾಲಾ ಮಕ್ಕಳು ಹಾಜರಿದ್ದರು..
Mysore
ಉತ್ತಮ ಆರೋಗ್ಯ, ಚಿಂತನೆ ಬೆಳಸಿಕೊಳ್ಳಲು ಕ್ರೀಡೆಯಲ್ಲಿ ಪಾಲ್ಗೊಳ್ಳುವಿಕೆ ಮುಖ್ಯ: ಎನ್.ಕೆ ಲೋಕನಾಥ್
ಮೈಸೂರು: ಉತ್ತಮ ಆರೋಗ್ಯ, ಚಿಂತನೆ ಹಾಗೂ ಉತ್ತಮ ಮಾರ್ಗದರ್ಶಕರಾಗಲು ಕ್ರೀಡೆಯಲ್ಲಿ ಭಾಗವಹಿಸುವಿಕೆ ಬಹಳ ಮುಖ್ಯವಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಶಕ್ತಿಯುತರಾಗಿ ಆರೋಗ್ಯವಂತರಾಗಿರಬಹುದು ಎಂದು ಮೈಸೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್, ಹೇಳಿದರು.
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಮೈಸೂರು 16ನೇ ಅಂತರ ಮಹಾವಿದ್ಯಾಲಯಗಳ ಗೇಮ್ಸ್ ಮತ್ತು ಅಥ್ಲೆಟಿಕ್ಸ್ ಕ್ರೀಡಾಕೂಟ ವತಿಯಿಂದ ಓವಲ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡೋತ್ಕರ್ಷ-2025 ನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ಶಿಕ್ಷಣದಲ್ಲಿ ತೋಟಗಾರಿಗೆ ಶಿಕ್ಷಣ ತೋಟಗಾರಿಕೆಗೆ ಸೀಮಿತವಾಗದೇ ವಿವಿಧ ಶಿಕ್ಷಣದಲ್ಲಿ ಬಹು ಮುಖ ಅಧ್ಯಯನ ಮಾಡಬೇಕು ಎಂಬುದು ನನ್ನ ಆಶಯವಾಗಿದೆ. ಕ್ರೀಡೆಯಲ್ಲಿ ಸೋಲು- ಗೆಲುವು ಸಹಜ, ಆದರೆ ಭಾಗವಹಿಸುವಿಕೆ ಎಂಬುದು ಬಹಳ ಮುಖ್ಯ ಆದ್ದರಿಂದ ಕ್ರೀಡೆಯಲ್ಲಿ ಸೋಲು ಗೆಲುವುವನ್ನು ಸಮಾಂತರವಾಗಿ ತೆಗೆದುಕೊಳ್ಳುವ ಸ್ಪೂರ್ತಿ ವಿದ್ಯಾರ್ಥಿಗಳಲ್ಲಿ ಬರಬೇಕು ಎಂದು ತಿಳಿಸಿದರು.

ಕ್ರೀಡೆ ಎಂದರೆ ಎಲ್ಲರೂ ಒಟ್ಟಿಗೆ ಸೇರಿ ಆಟ ಆಡುವುದಾಗಿದೆ. ಎಲ್ಲರೂ ಒಟ್ಟಿಗೆ ಸೇರುವುದೇ ಒಂದು ನಿಜವಾದ ಗೆಲುವು. ಆದ್ದರಿಂದ ಎಲ್ಲರೂ ಸಹ ಒಟ್ಟಿಗೆ ಸೇರಿ ಸಂತೋಷದಿಂದ ಒಗ್ಗಟಿನಿಂದ ಕೂಡಿ ಈ ನಾಲ್ಕು ದಿನಗಳ ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕ್ರೀಡೆಯನ್ನು ಯಶಸ್ವಿಗೊಳಿಸಿ ಎಂದು ಹೇಳಿದರು.
ದಕ್ಷಿಣ ವಲಯದ ಉಪ ಪೊಲೀಸ್ ಮಹಾನಿರ್ದೇಶಕ ಡಾ. ಎಂ. ಬಿ. ಬೋರಲಿಂಗಯ್ಯ ಮಾತನಾಡಿ, ಕ್ರೀಡೆ ಎಂಬುದು ಪ್ರತಿಯೊಬ್ಬರಿಗೂ ಬಹಳ ಅತ್ಯವಶ್ಯಕವಾಗಿದೆ. ಕ್ರೀಡೆಯಲ್ಲಿ ಏಳು – ಬೀಳು, ಸೋಲು ಗೆಲುವನ್ನು ಕ್ರೀಡೆಯಲ್ಲಿ ಸಮನಾಗಿ ಸ್ವೀಕರಿಸಬೇಕು. ಜನರ ಆರೋಗ್ಯ ಸಮಸ್ಯೆಯನ್ನು ನಿವಾರಿಸಲು ಕ್ರೀಡೆಯು ಸಹ ಸಹಕಾರಿಯಾಗಿದೆ. ಪ್ರತಿಯೊಬ್ಬರು ಜೀವನದಲ್ಲಿ ಕ್ರೀಡೆಯನ್ನು ಅಳವಡಿಸಿಕೊಳ್ಳಬೇಕು. ಕ್ರೀಡೆ ಕಡೆಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಬೇಕು. ಕ್ರೀಡೆ ದೈಹಿಕ ಸಾಮರ್ಥ್ಯಕ್ಕೆ ಒಂದು ಸಾಧನವಾಗಿದೆ. ಆದ್ದರಿಂದ ಎಲ್ಲರೂ ಸಹ ದೈಹಿಕ ಸಾಮರ್ಥ್ಯದ ಕಡೆಗೆ ಹೆಚ್ಚು ಗಮನವನ್ನು ಕೊಡಬೇಕು ಎಂದು ತಿಳಿಸಿದರು.
ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ರಾಷ್ಟ್ರೀಯ ಬಾಸ್ಕೆಟ್ ಬಾಲ್ ಆಟಗಾರರಾದ ಡಾ.ಸಿ. ವೆಂಕಟೇಶ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿರಲು ಹಾಗೂ ಭಾವನೆಗಳ ಸಮತೋಲನಕ್ಕೆ ಕ್ರೀಡೆ ಎಂಬುದು ಅತ್ಯವಶ್ಯಕವಾಗಿದೆ. ಸತತ ಪ್ರಯತ್ನವೇ ಯಶಸ್ಸಿಗೆ ಮೂಲ ಕಾರಣ ಎಂಬುವ ಆಗೆ ಕ್ರೀಡೆಯಲ್ಲಿ ನಾವು ಹೆಚ್ಚು ಶ್ರಮಪಟ್ಟರೆ ಯಶಸ್ಸು ಕಂಡಿದ ನಮ್ಮದಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ತೋಟಗಾರಿಕೆ ಮಹಾ ವಿದ್ಯಾಲಯದ ಕ್ರೀಡಾಕೂಟದ ಸಂಘಟನಾ ನಿರ್ದೇಶಕ ಡೀನ್ ಡಾ. ಸಿ. ಎನ್. ಹಂಚಿಮನೆ ಮಾತನಾಡಿ, ಕ್ರೀಡೆಗಳು ವಿಧ್ಯಾರ್ಥಿಗಳ ಜೀವನದಲ್ಲಿ ದೈಹಿಕ ಚಟುವಟಿಕೆಗಳ ಮೌಲ್ಯವನ್ನು ಅರ್ಥ ಮಾಡಿಕೊಳ್ಳಲು ಪ್ರೋತ್ಸಾಹ ನೀಡುತ್ತವೆ. ಶಿಸ್ತು ಮತ್ತು ಆರೋಗ್ಯ ಜೀವನ ಶೈಲಿಯನ್ನು ಕಲ್ಪಿಸುತ್ತದೆ. ದೇಹವನ್ನು ಬಲ ಪಡಿಸುವುದರ ಜೊತೆಗೆ ಮನಸ್ಸನ್ನು ಒಂದುಗೂಡಿಸುತ್ತದೆ. ಕ್ರೀಡೆಯಿಂದ ಶಿಸ್ತಿನ ನಾಯಕತ್ವ , ಒಳ್ಳೆಯ ಗುಣಗಳು ಬರುತ್ತವೆ ಆದ್ದರಿಂದ ಎಲ್ಲರೂ ಸಹ ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮಕ್ಕೆ ಕುರುಬೂರು ಮಹಿಳಾ ಖೋ- ಖೋ ವಿಶ್ವಕಪ್ ವಿಜೇತರಾದ ಚೈತ್ರಾ, ಅವರು ಕ್ರೀಡೋತ್ಕರ್ಷ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಾಂತರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ, ಪರಿಸರ ಅಧಿಕಾರಿ ಸುನೀಲ್ ವಿ, ಮೈಸೂರು ನಗರದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ಜಯಲಕ್ಷ್ಮಿ ಎಂ.ಜೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲಾ ಎಸ್.ಹೆಚ್ , ಬಾಗಲಕೋಟೆ ತೋಟಗಾರಿಗೆ ವಿಜ್ಞಾನ ವಿಶ್ವವಿದ್ಯಾಲಯದ ಡಾ. ಎಸ್. ಎನ್. ವಾಸುದೇವನ್, ವ್ಯವಸ್ಥಾಪನ ಮಂಡಳಿಯ ಸದಸ್ಯ ಹೆಚ್. ಜೆ. ಮನೋಹರ , ತೋಟಗಾರಿಕೆ ಮಹಾ ವಿದ್ಯಾಲಯದ ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿ ಡಾ. ರಾಜೀವ್ ಹೆಚ್.ಎನ್., ತೋಟಗಾರಿಕೆ ಮಹಾ ವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣದ ಕ್ರೀಡಾಕೂಟ ಸಂಘಟನಾ ಡೀನ್ ಡಾ.ಎಂ.ಜಿ ಕೆರೂಟಗಿ ಅವರು ಸೇರಿದಂತೆ ವಿವಿಧ ವಿಭಾಗದ ತೋಟಗಾರಿಕೆ ಇಲಾಖೆಯ ಡೀನ್ ಗಳು ಉಪಸ್ಥಿತರಿದ್ದರು.
Mysore
ಡಿ.21ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಲು ಜಿಲ್ಲಾಧಿಕಾರಿ ಮನವಿ
ಮೈಸೂರು: ಡಿ. 21ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.
ಜಿಲ್ಲಾ ಪಂಚಾಯಿತಿಯ ಡಿ ದೇವರಾಜ ಅರಸು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಬೂತ್ ಮಟ್ಟದಲ್ಲಿ ಲಸಿಕೆ ನೀಡಲಾಗುತ್ತದೆ.
ಡಿ 22 ರಿಂದ ಡಿ24 ರವರೆಗೆ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಡಿ 21 ರಿಂದ ಡಿ 24 ರವರೆಗೆ 4 ದಿನಗಳು ಸಂಚಾರ ಕೇಂದ್ರಗಳು ಹಾಗೂ ಹೆಚ್ಚಿನ ಅಪಾಯ ಪ್ರದೇಶಗಳಲ್ಲಿ ವಿಶೇಷ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಡಿಸೆಂಬರ್ 21 ಕ್ಕೆ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪ್ರತಿಯೊಂದು ಮಗುವಿಗೂ ತಪ್ಪಿದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ. ಪಲ್ಸ್ ಪೋಲಿಯೋ ಲಸಿಕೆ ನೀಡಲು ಅಗತ್ಯವಿರುವ ಸಿಬ್ಬಂದಿಗೆ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಿ. ರೂಟ್ ಮ್ಯಾಪ್ ಗಳನ್ನು ಸಮರ್ಪಕವಾಗಿ ಮಾಡಿಕೊಳ್ಳಿ ಎಂದು ಸೂಚನೆ ನೀಡಿದರು.
ಡಾ.ಸುಧೀರ್ ನಾಯಕ್ ಮಾತನಾಡಿ, ಕಳೆದ 14 ವರ್ಷಗಳಿಂದ ದೇಶದಲ್ಲಿ ಯಾವುದೇ ಪೋಲಿಯೋ ಪ್ರಕರಣಗಳು ಕಂಡು ಬಂದಿಲ್ಲ. ಕರ್ನಾಟಕದಲ್ಲಿ 2007 ರಲ್ಲಿ ಕೊನೆಯದಾಗಿ ಒಂದು ಪೋಲಿಯೋ ಪ್ರಕರಣ ಕಂಡುಬಂದಿತ್ತು. ನಂತರ ಯಾವುದೇ ಪೋಲಿಯೋ ಪ್ರಕರಣಗಳು ಕಂಡು ಬಂದಿಲ್ಲ. ಪೋಲಿಯೋ ಲಸಿಕೆ ಹಾಕಿಸಿದ ಮಗುವಿನ ಬೆರಳಿಗೆ ಇಂಕ್ ಹಾಕಲಾಗುವುದು. ಇದರಿಂದ ಯಾರಿಗೆ ಲಸಿಕೆ ಹಾಕಲಾಗಿದೆ ಎಂಬುದನ್ನು ಹಾಗೂ ಎರಡೆರಡು ಬಾರಿ ಲಸಿಕೆ ಹಾಕಿಸುವುದನ್ನು ತಪ್ಪಿಸಬಹುದಾಗಿದೆ ಎಂದು ತಿಳಿಸಿದರು.
ವಲಸೆ ಹೋಗಿರುವ ಹಾಗೂ ವಲಸೆ ಬಂದಿರುವ ಕುಟುಂಬದ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ.
ಜಿಲ್ಲೆಯಲ್ಲಿ 5 ವರ್ಷದೊಳಗಿನ 2,22,084 ಮಕ್ಕಳು ಇದ್ದಾರೆ. ಇವರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. 1648 ಬೂತ್ ಗಳಲ್ಲಿ ಲಸಿಕೆ ನೀಡಲಾಗುತ್ತದೆ. 50 ಮೊಬೈಲ್ ಟಿಮ್ ಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಕುಮಾರ್ ಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜು, ಆರ್‌ಸಿಎಚ್ ಅಧಿಕಾರಿ ಮಹಮ್ಮದ್ ಸಿರಾಜ್ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Mysore
ಕೆಎಸ್‌ಪಿ ಮ್ಯಾಗ್ನೆಟ್ ಹೆಸರಲ್ಲಿ ಶಾಲೆ ಮುಚ್ಚುವ ಹುನ್ನಾರ: ಮೂಡಲಹುಂಡಿ ಶಾಲೆ ಎದುರು ಪ್ರತಿಭಟನೆ
ಮೈಸೂರು: ಮೂಡಲಗುಂಡಿ ಗ್ರಾಮದಲ್ಲಿ ಸರ್ಕಾರಿ ಶಾಲೆ ಉಳಿಸಲು ಒತ್ತಾಯಿಸಿ ಎಐಡಿಎಸ್ಒ ನೇತೃತ್ವದಲ್ಲಿ ಗ್ರಾಮಸ್ಥರ ಮತ್ತು ವಿದ್ಯಾರ್ಥಿಗಳು ಪ್ರತಿಭಟನೆಯನ್ನು ನಡೆಸಿದರು.
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಚಂದ್ರಿಕಾ ಅವರು ಮಾತನಾಡಿ, 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇರುವ ಮೂಡಲ ಹುಂಡಿಯ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಆಗ್ರಹಿಸಿದರು.
KPS – ಮ್ಯಾಗ್ನೆಟ್ ಹೆಸರಿನಲ್ಲಿ ರಾಜ್ಯ ಸರ್ಕಾರ 40 ಸಾವಿರಕ್ಕೂ ಹೆಚ್ಚುಶಾಲೆ ಮುಚ್ಚಲು ಮುಂದಾಗಿದ್ದರೂ ಶಿಕ್ಷಣ ಸಚಿವರು ಮಾಧ್ಯಮಗಳ ಮುಂದೆ ಮತ್ತು ಬೆಳಗಾವಿ ಅಧಿವೇಶನದಲ್ಲಿ ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ’ ಎಂದು ಸುಳ್ಳು ಹೇಳುತ್ತಿದ್ದಾರೆ.

ಇಲಾಖೆಯಿಂದ ಶಾಲೆ ಮುಚ್ಚುವ ಆದೇಶ ಮತ್ತು ಪಟ್ಟಿಗಳನ್ನು ಬಿಡುಗಡೆ ಮಾಡುತ್ತಿರುವ ಸರ್ಕಾರ ಬಡವರಿಂದ ಶಿಕ್ಷಣವನ್ನು ಕಸಿಯುತ್ತಿದೆ. ಸಚಿವ ಎಚ್ .ಕೆ ಪಾಟೀಲ್ ಅವರು ಈ ಯೋಜನೆಯನ್ನು ಜಾರಿ ಮಾಡಲು ಕೆಲವು ಸರ್ಕಾರಿ ಶಾಲೆಗಳನ್ನು ಮುಚ್ಚಬೇಕಾಗುತ್ತದೆ ಎಂದು ಹೇಳಿದ್ದಾರೆ.
ಸರ್ಕಾರದ ಆದೇಶಗಳು ಹೇಳುವುದು ಒಂದು, ಸಚಿವರ ಹೇಳಿಕೆ ಮತ್ತೊಂದು-ಜನರು ಯಾವುದನ್ನು ನಂಬಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕೂಡಲೇ ರಾಜ್ಯ ಸರ್ಕಾರ ತನ್ನ ಅಕ್ಟೋಬರ್ 15ರ ಆದೇಶದಲ್ಲಿ ನಮೂದಿಸಿರುವ ವಿಲೀನದ ಅಂಶವನ್ನು ಹಿಂಪಡೆಯಲಿ ಜೊತೆಗೆ ವಿಲೀನದ ಹೆಸರಿನಲ್ಲಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಲಿಖಿತ ಆದೇಶ ಹೊರಡಿಸಲಿ ಎಂದು ಒತ್ತಾಯಿಸಿದರು.
ನಂತರ ಮೂಡಲಹುಂಡಿ ಗ್ರಾಮದ ವಿದ್ಯಾರ್ಥಿನಿ ಅಮೃತ ಮಾತನಾಡಿ, ನಾನು ನನ್ನ ಪ್ರಾಥಮಿಕ ಶಿಕ್ಷಣವನ್ನು ಇದೇ ಊರಿನ ಸರ್ಕಾರಿ ಶಾಲೆಯಲ್ಲಿ ಮುಗಿಸಿದ್ದೇನೆ. ಪ್ರೌಢ ಶಾಲೆಗೆ ವರಕೊಡುಗೆ ಹೋಗುತ್ತಿದ್ದೇನೆ.
ಈ ಊರಿನ ಶಾಲೆಯನ್ನು ಮುಚ್ಚಿದರೆ ಒಂದನೇ ಮತ್ತು ಎರಡನೇ ತರಗತಿಯ ಚಿಕ್ಕ ಮಕ್ಕಳು ಮೂರು ಮತ್ತು ನಾಲ್ಕು ಕಿಲೋಮೀಟರ್ ಇರುವ ವರಕೊಡು ಶಾಲೆಗೆ ಹೋಗೋದು ಬಹಳ ಕಷ್ಟ. ಹೀಗಾದರೆ ಮಕ್ಕಳು ಶಾಲೆಗೆ ಹೋಗುವುದನ್ನೇ ನಿಲ್ಲಿಸುತ್ತಾರೆ. ಈಗಾಗಲೇ ಪ್ರತಿದಿನ ನಾವು ನಡೆದುಕೊಂಡು ಹೋಗಿ ಶಿಕ್ಷಣ ಪಡೆದುಕೊಳ್ಳುತ್ತಿದ್ದೇವೆ. ಯಾವುದೇ ಕಾರಣಕ್ಕೂ ಈ ಊರಿನ ಸರ್ಕಾರಿ ಶಾಲೆಯನ್ನು ಮುಚ್ಚಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೂಡಲ ಹುಂಡಿ ಗ್ರಾಮಸ್ಥರು ಒಕ್ಕೊರಲಿನಿಂದ ನಮ್ಮೂರಿನ ಸರ್ಕಾರಿ ಶಾಲೆಯನ್ನು ಮುಚ್ಚಬಾರದು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ನಿತಿನ್, ಉಪಾಧ್ಯಕ್ಷೆ ಸ್ವಾತಿ, ಪದಾಧಿಕಾರಿಗಳಾದ ಚಂದ್ರಿಕಾ, ಹೇಮಲತಾ ಹಾಗೂ ಮೂಡಲ ಹುಂಡಿಯ ಗ್ರಾಮಸ್ಥರಾದ ಲೋಕೇಶ್, ಸತೀಶ್, ನಾಗಮ್ಮ, ಸೌಮ್ಯಾ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
-
Kodagu5 hours agoಆಮೆಗತಿಯಲ್ಲಿ ಸಾಗುತ್ತಿರುವ ರಸ್ತೆ ಕಾಮಗಾರಿ: ಎಸ್ಟಿ ಮೋರ್ಚಾ ಅಸಮಾಧಾನ
-
Chamarajanagar19 hours agoಮ.ಮ.ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ: 28 ದಿನಗಳ ಅವಧಿಯಲ್ಲಿ 2.53 ಕೋಟಿ ರೂ. ಸಂಗ್ರಹ
-
Kodagu18 hours agoಪ್ರಧಾನಿ ಬಗ್ಗೆ ಅವಹೇಳನ – ಮಡಿಕೇರಿಯ ಮೂವರ ಬಂಧನ
-
State19 hours agoದ್ವೇಷ ಭಾಷಣ, ದ್ವೇಷ ಅಪರಾಧಗಳ ವಿಧೇಯಕ ಮಂಡಿಸಿದ ಡಾ.ಜಿ.ಪರಮೇಶ್ವರ್
-
Chamarajanagar21 hours agoರಾಗಿ ಒಕ್ಕಣೆ ಮಿಷನ್ ನಿಂದ ಕೂಲಿ ಕಾರ್ಮಿಕಳೊಬ್ಬಳ ಕೈ ತುಂಡು
-
Hassan22 hours agoಡಿ. 11ರಿಂದ 14 ರವರೆಗೆ ಶ್ರೀ ಮೆಳೆಯಮ್ಮದೇವಿ, ಚಿಕ್ಕಮ್ಮದೇವಿ ಅದ್ದೂರಿ ಜಾತ್ರಾ ಮಹೋತ್ಸವ
-
Hassan21 hours agoಗಾಂಜಾ ಅಮಲಿನಲ್ಲಿ ಯುವಕನೋರ್ವನ ಹ*ತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು
-
Special18 hours ago14.21 ಲಕ್ಷ ರೈತರಿಗೆ ಬೆಳೆ ಹಾನಿ ಪರಿಹಾರ ವಿತರಣೆ: ರಾಜ್ಯ ಸರ್ಕಾರದ ಮಹತ್ವದ ಘೋಷಣೆ
