State
5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು

ಬೆಂಗಳೂರು: ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.
ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. ಅಲ್ಲದೆ, ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದೆ.
ಬೋರ್ಡ್ ಪರೀಕ್ಷೆ ನಡೆಸುವ ಕರ್ನಾಟಕ ಸರ್ಕಾರದ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಭಾಗೀಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಅಲ್ಲದೆ, ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು.
ಅದರಂತೆ, ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಟ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದ್ದು, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿದೆ.
State
ನಮ್ಮ ಮೆಟ್ರೋ ದರ ಏರಿಕೆ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ.
ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ.
ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ.
ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ.
ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.
2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು?
ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ ಮದ್ರಾಸ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು, ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ತನ್ನ ಪತ್ರದಲ್ಲಿ ತಿಳಿಸಿತ್ತು.
ಮೂರು ತಿಂಗಳ ಅವಧಿಯಲ್ಲಿ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ ದೆಹಲಿ ಮತ್ತು ಚೆನೈಗಳಿಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡಾ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು.
2017ರ ಜೂನ್ ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ ನಿಗದಿಗೊಳಿಸಿದ್ದ ಪ್ರಯಾಣದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು. ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್ ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಬರ್ 16ರಂದು ಸಮಿತಿ ತನ್ನ ವರದಿನ್ನು ಸಲ್ಲಿಸಿತ್ತು.
2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶ: ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್ ಗೆ ವಿಸ್ತರಣೆ ಗೊಂಡಿದೆ. ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ.
ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣದರವನ್ನು ಅಧ್ಯಯನ ಮಾಡಿದೆ. ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ ರೂ.10 ಮತ್ತು ಗರಿಷ್ಠ ರೂ.60 ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣದರ ರೂ.10 ಮತ್ತು ಗರಿಷ್ಠ ಪ್ರಯಾಣ ದರ ರೂ.80 ಆಗಿದೆ.
ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ( ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್ ) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ.
State
ಅಲ್ಪ ಜ್ಞಾನ ವಿನಾಶಕ್ಕೆ ದಾರಿ: ರಾಜ್ಯ ಬಿಜೆಪಿ ವಿರುದ್ಧ ರಾಮಲಿಂಗರೆಡ್ಡಿ ಕಿಡಿ

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ ದರವನ್ನು ಏಕಾಏಕಿ ಹೆಚ್ಚಿಸಿರುವ ರಾಜ್ಯ ಸರ್ಕಾರದ ನಡೆಗೆ ರಾಜ್ಯಾದ್ಯಂತ ಬಿಜೆಪಿ ಆಕ್ರೋಶ ಹೊರಹಾಕುತ್ತಿದೆ. ರಾಜ್ಯ ಸರ್ಕಾರದಿಂದ ಹೆಚ್ಚಿಲಾಗಿದೆ ಎಂದು ಹೇಳುತ್ತಿರುವ ಬಿಜೆಪಿ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಕಿಡಿಕಾರಿದ್ದಾರೆ.
ಈ ಸಂಬಂಧ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಅಲ್ಪ ಜ್ಞಾನ ವಿನಾಶಕ್ಕೆ ದಾರಿ ಮಾಡಿಕೊಡುತ್ತದೆ ಎಂಬುದರ ಬಗ್ಗೆ ಅರಿವಿಗಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ.
ಎಕ್ಸ್ ಪೋಸ್ಟ್‌ನಲ್ಲೇನಿದೆ?
ಮೆಟ್ರೋ ದರ ಏರಿಕೆ ಬಗ್ಗೆ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿರುವ ಅಜ್ಞಾನಿ ಬಿಜೆಪಿಯವರೇ, ಅಲ್ಪ ಜ್ಞಾನ ವಿನಾಶಕ್ಕೆ ದಾರಿ ಮಾಡಿಕೊಡುತ್ತದೆ ಎಂಬುದರ ಬಗ್ಗೆ ಅರಿವಿರಲಿ.
ಮೆಟ್ರೋ ಕಾಯಿದೆ ಪ್ರಕಾರ ದರ ಏರಿಕೆ ಮಾಡಲು ಒಂದು ಸಮಿತಿ ಇರುತ್ತದೆ, ಸಮಿತಿಯ ಶಿಫಾರಸ್ಸು ಅನ್ನು ಮೆಟ್ರೋ ಮಂಡಳಿ ಸಭೆಯಲ್ಲಿ ಮಂಡಿಸುತ್ತಾರೆ, ಮಂಡಳಿಯ ಅಧ್ಯಕ್ಷರು ಕೇಂದ್ರ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಕಾರ್ಯದರ್ಶಿಗಳಿದ್ದು, ಅವರು ದರ ಏರಿಕೆಯನ್ನು ಅಂತಿಮಗೊಳಿಸುತ್ತಾರೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವೇನೂ ಇರುವುದಿಲ್ಲ.
ಮೆಟ್ರೋ ಬೆಂಗಳೂರಿಗೆ ತಂದಿದ್ದು ದೂರದೃಷ್ಟಿಯುಳ್ಳ ಕಾಂಗ್ರೆಸ್ ಸರ್ಕಾರ, ಬುರುಡೆ ಪಕ್ಷದ ಕೆಲವು ನಾಯಕರು ಮೆಟ್ರೋ ತಂದಿದ್ದು ನಾವೇ ಎಂದು ಪ್ರತಿದಿನ ಪೋಸ್ ಕೊಡುತ್ತಿದ್ದವರು ಇಂದು ದರ ಏರಿಕೆಯ ಬಗ್ಗೆ ಚಕಾರವೆತ್ತಲು ಆಗದಿರುವುದನ್ನು ನೋಡಿದರೆ ಪಾಪ ಅನ್ನಿಸುತ್ತಿದೆ.
ಕೇಂದ್ರ ಸರ್ಕಾರದ ಕಾರ್ಯದರ್ಶಿಗಳು ರಾಜ್ಯ ಸರ್ಕಾರದ ಅಧೀನದಲ್ಲಿ ಕರ್ತವ್ಯ ನಿರ್ವಹಿಸುತ್ತಾರೆಯೇ ಅಥವಾ ಕೇಂದ್ರ ಸರ್ಕಾರದ ಅಧೀನದಲ್ಲಿಯೇ ಎಂಬುದನ್ನು ಬಿ.ಜೆ.ಪಿ ನಾಯಕರು ತಿಳಿಸುವ ಕಷ್ಟ ತೆಗೆದುಕೊಳ್ಳುತ್ತೀರಾ ?
ನಾಯಕನ ಗುಣ ವಿಶೇಷಣ ಒಪ್ಪು ತಪ್ಪು ಎರಡನ್ನೂ ಸಮನಾಗಿ ಸ್ವೀಕರಿಸಿ, ತಪ್ಪನ್ನು ಒಪ್ಪಿಕೊಳ್ಳುವ ಉದಾರತೆ ಇರಬೇಕು. ಕ್ರೆಡಿಟ್ ತಗೋಳೋದಿಕ್ಕೆ ನಾ ಮುಂದು, ತಾ ಮುಂದು ಎನ್ನುವ ಬಿ.ಜೆ.ಪಿ ನಾಯಕರು ಇಂದು ಮೆಟ್ರೋ ದರ ಏರಿಕೆ ಬಗ್ಗೆಯೂ ಕ್ರೆಡಿಟ್ ತೆಗೆದುಕೊಳ್ಳುವ ಎದೆಗಾರಿಕೆ ತೋರಿಸಿ ನೋಡೋಣ? ಕಾಂಗ್ರೆಸ್ ಪಕ್ಷವನ್ನು ದೂಷಿಸಲು ತಮಗೆ ಆತ್ಮಸಾಕ್ಷಿ ಚುಚ್ಚುವುದಿಲ್ಲವೇ? ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
State
ಅಕ್ರಮ ಅದಿರು ಗಣಿಗಾರಿಕೆ ಪ್ರಕರಣ: 24ಕ್ಕೆ ಅಂತಿಮ ತೀರ್ಪು ಎಂದ ಹೈ

ಬೆಂಗಳೂರು: ಮಾಜಿ ಸಚಿವ ಆನಂದ್ ಸಿಂಗ್ ವಿರುದ್ಧ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 24ಕ್ಕೆ ಅಂತಿಮ ತೀರ್ಪು ಪ್ರಕಟಿಸುವುದಾಗಿ ಕೋರ್ಟ್ ಹೇಳಿದೆ.
ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಗಜಾನನ ಭಟ್ ಅವರಿದ್ದ ಏಕ ಸದಸ್ಯ ಪೀಠ ಅಂತಿಮ ತೀರ್ಪುನ್ನು 24ಕ್ಕೆ ಮುಂದೂಡಿದೆ.
ಮಾಜಿ ಸಚಿವ ಆನಂದ ಸಿಂಗ್ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಈ ಆದೇಶದ ಹಿನ್ನಲೆ 2015ರಲ್ಲಿ ಪ್ರಕರಣ ದಾಖಲಿಸಿಕೊಂಡ ಕರ್ನಾಟಕ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿತ್ತು.
ಡಿವೈಎಸ್ಪಿ ವೇಣುಗೋಪಾಲ್ ನೇತೃತ್ವದ ತಂಡ ತನಿಖೆ ನಡೆಸಿ, ಜೈಸಿಂಗ್‌ಪುರದ ಬಳಿ ಎಸ್‌ವಿಕೆ ಪ್ಲಾಟ್‌ನಲ್ಲಿ 16,976 ಮೆಟ್ರಿಕ್ ಟನ್ ಅದಿರು ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.
-
Kodagu12 hours ago
ಸ್ಪ್ರಿಂಕ್ಲರ್ ಪೈಪಿಗೆ ಕೃಷಿ ಇಲಾಖೆಯಿಂದ ಸಹಾಯಧನ
-
Hassan21 hours ago
HASSAN: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ವಿಂಗರ್ ವಾಹನ ಪಲ್ಟಿ
-
Kodagu12 hours ago
ಮಡಿಕೇರಿಯಲ್ಲಿ ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
Kodagu15 hours ago
ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ: ಕಾರಣವೇನು?
-
Mysore21 hours ago
ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ : ಆರೋಪಿ ಬಂಧನಕ್ಕೆ ರಸ್ತೆ ತಡೆದು ಪ್ರತಿಭಟನೆ
-
Hassan16 hours ago
ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ: ಮರು ಚುನಾವಣೆಗೆ ಒತ್ತಾಯ
-
State14 hours ago
ನಮ್ಮ ಮೆಟ್ರೋ ದರ ಏರಿಕೆ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ
-
Hassan21 hours ago
ಶ್ರೀ ಲಕ್ಷ್ಮೀ ವೆಂಕಟೇಶ್ವರಸ್ವಾಮಿ ಜಾತ್ರಾ ಮಹೋತ್ಸವ: ಜೆಡಿಎಸ್ ಹಾಗೂ ಕಾಂಗ್ರೆಸ್ನಿಂದ ಪ್ರತ್ಯೇಕವಾಗಿ ಆರ್ಕೆಸ್ಟ್ರಾ ಆಯೋಜನೆ