Connect with us

Crime

ಅಬಕಾರಿ ಪ್ರಕರಣಗಳಲ್ಲಿ ಮುಟ್ಟುಗೋಲಾದ ವಾಹನಗಳನ್ನು ಅ.31 ರಂದು ಹರಾಜು ಪ್ರಕ್ರಿಯೆ

Published

on

ಪಿರಿಯಾಪಟ್ಟಣ: ಅಬಕಾರಿ ನಿರೀಕ್ಷಕರ ಕಚೇರಿ ಪಿರಿಯಾಪಟ್ಟಣ ವಲಯದಲ್ಲಿ ಅಬಕಾರಿ ಪ್ರಕರಣಗಳಲ್ಲಿ ಮುಟ್ಟುಗೋಲಾದ ವಾಹನಗಳನ್ನು ಅ.31 ರಂದು ಹರಾಜು ಪ್ರಕ್ರಿಯೆ ಮೂಲಕ ವಿಲೇವಾರಿಗೊಳಿಸುವುದಾಗಿ ಅಬಕಾರಿ ನಿರೀಕ್ಷಕರಾದ ಧರ್ಮರಾಜ್ ತಿಳಿಸಿದ್ದಾರೆ.

ಡೆಪ್ಯೂಟಿ ಕಮಿಷನರ್ ಆಫ್ ಎಕ್ಸೈಸ್ ಮೈಸೂರು ಗ್ರಾಮಾಂತರ ಜಿಲ್ಲೆರವರ ಆದೇಶದಂತೆ ಅಂದು ಬೆಳಗ್ಗೆ 11 ಗಂಟೆಗೆ ಕಚೇರಿ ಆವರಣದಲ್ಲಿ ಮುಟ್ಟುಗೋಲಾದ 16 ದ್ವಿಚಕ್ರ ವಾಹನಗಳನ್ನು ಅಬಕಾರಿ ಉಪ ಅಧೀಕ್ಷಕರು ಹಾಗೂ ಹರಾಜು ನಿರ್ವಹಣಾದಿಕಾರಿ ರವರ ನೇತೃತ್ವದಲ್ಲಿ ಬಹಿರಂಗ ಹರಾಜು ಮಾಡಲಾಗುವುದು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವವರು ಇಚ್ಛಿಸುವವರು ಬೆಳಿಗ್ಗೆ 9 ಗಂಟೆಯಿಂದ 10.30 ಗಂಟೆ ಒಳಗಾಗಿ ಆಗಮಿಸಿ ಮುಂಗಡ ಹಣ ರೂ.5 ಸಾವಿರ ಪಾವತಿಸಿ ಷರತ್ತುಗಳಿಗೆ ಒಳಪಟ್ಟು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ತಿಳಿಸಿದ್ದು ಹೆಚ್ಚಿನ ಮಾಹಿತಿಗಾಗಿ ಪಿರಿಯಾಪಟ್ಟಣ ಅಬಕಾರಿ ನಿರೀಕ್ಷಕರ ಕಚೇರಿ ಸಂಪರ್ಕಿಸುವಂತೆ ಕೋರಿದ್ದಾರೆ.

– ಬೆಕ್ಕರೆ ಸತೀಶ್ ಆರಾಧ್ಯ

Continue Reading
Click to comment

Leave a Reply

Your email address will not be published. Required fields are marked *

Crime

ಪತ್ನಿ ಜೊತೆ ಅನೈತಿಕ ಸಂಬಂಧ ಹಿನ್ನೆಲೆ; ಪ್ರಿಯತಮನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಪತಿ

Published

on

ನಂಜನಗೂಡು: ಪತ್ನಿ ಜೊತೆ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯತಮನನ್ನು ಮಚ್ಚಿನಿಂದ ಕೊಚ್ಚಿ ಪತಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ 39 ವರ್ಷದ ಮಹದೇವಸ್ವಾಮಿ ಮೃತ ದುರ್ಧೈವಿಯಾಗಿದ್ದಾನೆ. 40 ವರ್ಷದ ಸೋಮಯ್ಯ ಎಂಬುವವರ ಪತ್ನಿ ಜೊತೆ ಮಹದೇವಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದ ಎಂದು ಗ್ರಾಮದ ಮಾರಮ್ಮನ ದೇವಾಲಯದಲ್ಲಿ ಮಲಗಿದ್ದ ಮಹದೇವಸ್ವಾಮಿಯನ್ನು ಸೋಮಯ್ಯ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಆರೋಪಿ ಸೋಮಯ್ಯ ಪರಾರಿಯಾಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಡಿವೈಎಸ್ ಪಿ ಗೋವಿಂದರಾಜು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Crime

ಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣ – ಕಿಡ್ನಾಪರ್ಸ್‌ನ್ನು ಪತ್ತೆ ಹಚ್ಚಿದ ಪೊಲೀಸರು

Published

on

ಹಾಸನ : ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣ
ಕಿಡ್ನಾಪರ್ಸ್‌ನ್ನು ಪತ್ತೆ ಹಚ್ಚಿದ ಪೊಲೀಸರು
ನೆಲ್ಯಾಡಿ ಬಳಿ ತೆರಳುತ್ತಿದ್ದ ವೇಳೆ ಎಲ್ಲರೂ ಪೊಲೀಸರ ವಶಕ್ಕೆ


ಅರ್ಪಿತಳನ್ನು ರಕ್ಷಿಸಿ ಕಿಡ್ನಾಪ್ ಮಾಡಿದವರನ್ನು ವಶಕ್ಕೆ ಪಡೆದ ಪೊಲೀಸರು
ಹಾಸನ ನಗರ ಪೊಲೀಸ್ ಠಾಣೆಗೆ ಕರೆತರುತ್ತಿರುವ ಪೊಲೀಸರು
ಯುವತಿ ಅಪಹರಿಸಿ ಸೋಮವಾರಪೇಟೆ ಕಡೆ ಕರೆದೊಯ್ದಿದ್ದ ಖತರ್ನಾಕ್ ಕಿಡ್ನಾಪರ್ಸ್


ಪೊಲೀಸರಿಗೆ ಸಿಗದ ರೀತಿ ಪ್ಲಾನ್ ಮಾಡಿ ಅರ್ಪಿತಾಳನ್ನು ಕರೆದೊಯ್ಯಲು ಯತ್ನಿಸುತ್ತಿದ್ದ ರಾಮು ಮತ್ತು ತಂಡ
ಅಪರಹರಣಕ್ಕೊಳಗಾಗಿದ್ದ ಅರ್ಪಿತಾಳನ್ನು ರಕ್ಷಿಸಿ ರಾಮು ಮತ್ತು ತಂಡವನ್ನು ವಶಕ್ಕೆ ಪಡೆದು ಹಾಸನಕ್ಕೆ ಕರೆತರುತ್ತಿರುವ ಪೊಲೀಸರು

Continue Reading

Crime

ಉದ್ಯಮಿ ಕೃಷ್ಣೇಗೌಡ ಕೊಲೆ ಪ್ರಕರಣ CIDಗೆ – ಇಂದಿನಿಂದಲೇ CID ಡ್ರಿಲ್

Published

on

ಹಾಸನ : ಮಾಜಿ ಸಚಿವ ಎಚ್.ಡಿ.ರೇವಣ್ಣ ಆಪ್ತ ಉದ್ಯಮಿ ಕೃಷ್ಣೇಗೌಡ ಕೊಲೆ ಪ್ರಕರಣ

ಆರೋಪಿಗಳ ಬಂಧನದ ವಿಷಯದಲ್ಲಿ ಜಿಲ್ಲಾ ಪೊಲೀಸ್ ವಿಫಲ

ಪ್ರಕರಣ ಮುಚ್ಚಿ ಹೋಗಬಹುದು ಸಾಧ್ಯತೆ ಹಿನ್ನಲೆ

ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶ

ತಕ್ಷಣದಿಂದ ಜಾರಿಗೆ ಬರುವಂತೆ ಪ್ರಕರಣದ ತನಿಖಾಧಿಕಾರಿ ಹತ್ಯೆಗೆ ಸಂಬಂಧಿಸಿದ ಎಲ್ಲ ಕಡತಗಳನ್ನು ಸಿಐಡಿಗೆ ಸಲ್ಲಿಸಲು ಸೂಚನೆ

ಕೃಷ್ಣೇಗೌಡ ಹತ್ಯೆ ನಂತರ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು

ಪ್ರಮುಖ ಆರೋಪಿಗಳಾದ ಯೋಗಾನಂದ ಹಾಗೂ ಅನಿಲ್ ಅವರಿಬ್ಬರ ಸುಳಿವು ಪತ್ತೆಯಲ್ಲಿ ಸಂಪೂರ್ಣ ವಿಫಲ

ಈ ನಡುವೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ

ಇಡೀ ರಾಜ್ಯದ ಗಮನ ಸೆಳೆದಿದ್ದ ಪ್ರಕರಣ ಹಳ್ಳ ಹಿಡಿಯುವ ಸಾಧ್ಯತೆ

ಪ್ರಕರಣದ ಗಂಭೀರತೆಗೆ ತಕ್ಕಂತೆ ತನಿಖೆ ನಡೆಯದಿರುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಚರ್ಚೆ

ಪ್ರಕರಣ ನಡೆದಾಗ ಇದ್ದ ಎಸ್ಪಿ ಹರಿರಾಂಶಂಕರ್ ವರ್ಗಾವಣೆ

ಆ ಸ್ಥಾನಕ್ಕೆ ಬಂದ ಮೊಹಮದ್ ಸುಜೀತಾ ಅವರಿಂದಲೂ ಆರೋಪಿಗಳ ಬಂಧಿಸುವಲ್ಲಿ ವಿಫಲ

ಈಗ ಸಿಐಡಿ ಪ್ರವೇಶದಿಂದ ಪ್ರಕರಣದ ತನಿಖೆಯ ದಿಕ್ಕು ಬದಲಾಗುವ ಸಾಧ್ಯತೆ

 

Continue Reading

Trending

error: Content is protected !!