Chikmagalur
ದ್ವೇಷದ ಹೇಳಿಕೆ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರಿನಲ್ಲಿ ಎಫ್.ಐ.ಆರ್
ಚಿಕ್ಕಮಗಳೂರು: ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದಲ್ಲಿ ಬಿಜೆಪಿ ಮುಖಂಡ ಸಿಟಿ.ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ ನೋಡಲ್ ಅಧಿಕಾರಿಯ ಸೂಚನೆ ಮೇರೆಗೆ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೆ.ಜಯಲಕ್ಷ್ಮಮ್ಮ ನಗರ ಠಾಣೆಗೆ ದೂರು ನೀಡಿ ಎಫ್‌ಐಆರ್ ದಾಖಲಿಸಿದ್ದಾರೆ.
ಸಿ.ಟಿ.ರವಿ ತಮ್ಮ ಎಕ್ಸ್ ಖಾತೆಯಲ್ಲಿ ‘ಸಾಗರಗಳ ಆಳವನ್ನು ಅಳೆಯಬಹುದು. ಹಿಂದೂ ಮತ್ತು ಹಿಂದೂ ಧರ್ಮದ ವಿರುದ್ಧ ರಾಹುಲ್ ಗಾಂಧಿ ದ್ವೇಷವನ್ನು ಎಂದಿಗೂ ಕಂಡು ಹಿಡಿಯಲಾಗುವುದಿಲ್ಲ. ಹಿಂದೂ ಧರ್ಮದಲ್ಲಿ ಶಕ್ತಿ ಎಂಬ ಪದವಿದೆ, ನಮ್ಮ ಹೋರಾಟ ಶಕ್ತಿ ವಿರುದ್ಧ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದುಷ್ಟ ಶಕ್ತಿಗಳ ದಾಳಿಯಿಂದ ನಮ್ಮ ಧರ್ಮವನ್ನು ರಕ್ಷಿಸಲು ಹಿಂದೂಗಳು ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ನಿರ್ದಯವಾಗಿ ತೆಗೆದು ಹಾಕಬೇಕು’ ಎಂದು ಪೋಸ್ಟ್ ಹಾಕಿದ್ದರು.

Chikmagalur
ಚಿಕ್ಕಮಗಳೂರು :ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು
ಚಿಕ್ಕಮಗಳೂರು :ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಒಬ್ಬರು ಮೃತಪಟ್ಟಿದ್ದಾರೆ.
ಅಡಿಕೆ ಮರದಲ್ಲಿ ಗೊನೆ ಕೊಯ್ಯುವಾಗ ಬಿದ್ದು ಸಾವಪ್ಪಿದ ಘಟನೆ ಕಳಸ ತಾಲೂಕಿನ ಬೂದಿಗುಂಡಿ ಗ್ರಾಮದಲ್ಲಿ ನಡೆದಿದೆ.
ಮಂಜು (35) ಮೃತ ದುರ್ದೈವಿ. ಹಳುವಳ್ಳಿ ಗ್ರಾಮದ ಅಡಿಕೆ ತೋಟಕ್ಕೆ ಕೆಲಸಕ್ಕೆ ಹೋಗಿದ್ದ ಮಂಜು ಮರ ಹತ್ತಿ ಗೊನೆ ಕೊಯ್ಯುವಾಗ ಆಯಾ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ.
ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chikmagalur
ಜೋಡೆತ್ತಿನ ಗಾಡಿ ಓಟದ ಸ್ಪರ್ಧೆಗೆ ಚಾಲನೆ ನೀಡಿದ ಕೆ.ಎಸ್.ಗೋಪಾಲಕೃಷ್ಣ
ಚಿಕ್ಕಮಗಳೂರು: ಶ್ರೀ ಬೀರಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ಕೆಂಪನಹಳ್ಳಿ ಕನಕ ಗೆಳೆಯರ ಬಳಗದಿಂದ ನಗರ ಸಮೀಪ ಆಯೋಜಿಸಿದ್ಧ ಎರಡನೇ ವರ್ಷದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಗೆ ಬುಧವಾರ ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯಾಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

ಜೋಡೆತ್ತಿನ ಗಾಡಿ ಸ್ಪರ್ಧೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದು, ಪ್ರಥಮ ಹಾ ಗೂ ದ್ವಿತೀಯ ಹೆಚ್.ಎಫ್. ಡಿಲಕ್ಸ್ ಬೈಕ್, ತೃತೀಯ 25 ಸಾವಿರ ನಗದು ಟ್ರೋಫಿ ಮತ್ತು ಚತುರ್ಥ ವಿಜೇತರಿಗೆ 20 ಸಾವಿರ ನಗದು ಆಕರ್ಷಕ ಟ್ರೋಫಿ ವಿತರಿಸಲಾಗುವುದು ಎಂದು ಸ್ಪರ್ಧೆಯ ಆಯೋಜಕ ಕೆಂಪನಹಳ್ಳಿ ಸುನೀಲ್ ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಮಂಜುಳಾ ಲಕ್ಷ್ಮಣ್, ಎಲ್.ಬಿ.ಎಸ್. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರತೀಪ್, ಕೆಂಪನಹಳ್ಳಿ ಗ್ರಾಮಸ್ಥರಾದ ಚರಣ್, ಹರೀಶ್, ರಾಕೇಶ್, ಶಶಾಂಕ್, ಸಚಿನ್, ಕಾರ್ತೀಕ್ , ವರುಣ್, ಡಿಂಪು, ವಸಂತ್, ದರ್ಶನ್ ಮತ್ತಿತರರು ಹಾಜರಿದ್ದರು.
Chikmagalur
ಅಸ್ಸಾಂನಿಂದ ಬಂದಿರುವ ಕಾರ್ಮಿಕನಿಂದ ಕಾಫಿ ತೋಟದಲ್ಲಿ ಗೋ ಹತ್ಯೆ
ಚಿಕ್ಕಮಗಳೂರು : ಕಾಫಿ ತೋಟದಲ್ಲಿ ಗೋ ಹತ್ಯೆ ಮಾಡಿದ ಘಟನೆ ನಡೆದಿದ್ದು, ಅಸ್ಸಾಂನಿಂದ ಕೂಲಿ ಕೆಲಸಕ್ಕೆ ಬಂದಿರುವ ಕಾರ್ಮಿಕರಿಂದ ಕೃತ್ಯ ನಡೆದಿದೆ.
ಗೋವುಗಳನ್ನು ಕದ್ದು ತೋಟದಲ್ಲಿ ಹತ್ಯೆ ಮಾಡಲಾಗಿದೆ.ಖಚಿತ ಮಾಹಿತಿ ಮೇರೆಗೆ ಪೊಲೀಸರಿಂದ ದಾಳಿ ನಡೆದಿದ್ದು ಆರೋಪಿಗಳು-ಗೋಮಾಂಸ ಪಕ್ಷಕ್ಕೆ ಪಡೆಯಲಾಗಿದೆ.
ಕೊಪ್ಪ ತಾಲೂಕಿನ ಜಯಪುರ ಸಮೀಪದ ಹೇರೂರಿನ ಕಾಫಿ ಎಸ್ಟೇಟ್ ನಲ್ಲಿ ಘಟನೆ ನಡೆದಿದ್ದು,ಎರಡು ದನಗಳನ್ನು ಹತ್ಯೆ ಮಾಡಿ, ಮಾಂಸ ಹಂಚಿಕೆ ವೇಳೆಯಲ್ಲಿ ದಾಳಿ ಆಗಿದೆ.

ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ.ಪಿ.ಎಸ್.ಐ. ರವೀಶ್ ನೇತೃತ್ವದಲ್ಲಿ ದಾಳಿ ನಡೆಸಿಆರೋಪಿಗಳಾದ ಅನ್ಸರ್, ಮಜೀದ್, ಮುಜಾಮಿಲ್ ನನ್ನು ಬಂಧಿಸಿದ್ದಾರೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
-
Kodagu6 hours agoಆಮೆಗತಿಯಲ್ಲಿ ಸಾಗುತ್ತಿರುವ ರಸ್ತೆ ಕಾಮಗಾರಿ: ಎಸ್ಟಿ ಮೋರ್ಚಾ ಅಸಮಾಧಾನ
-
Chamarajanagar20 hours agoಮ.ಮ.ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ: 28 ದಿನಗಳ ಅವಧಿಯಲ್ಲಿ 2.53 ಕೋಟಿ ರೂ. ಸಂಗ್ರಹ
-
Kodagu20 hours agoಪ್ರಧಾನಿ ಬಗ್ಗೆ ಅವಹೇಳನ – ಮಡಿಕೇರಿಯ ಮೂವರ ಬಂಧನ
-
State21 hours agoದ್ವೇಷ ಭಾಷಣ, ದ್ವೇಷ ಅಪರಾಧಗಳ ವಿಧೇಯಕ ಮಂಡಿಸಿದ ಡಾ.ಜಿ.ಪರಮೇಶ್ವರ್
-
Hassan24 hours agoಡಿ. 11ರಿಂದ 14 ರವರೆಗೆ ಶ್ರೀ ಮೆಳೆಯಮ್ಮದೇವಿ, ಚಿಕ್ಕಮ್ಮದೇವಿ ಅದ್ದೂರಿ ಜಾತ್ರಾ ಮಹೋತ್ಸವ
-
Hassan23 hours agoಗಾಂಜಾ ಅಮಲಿನಲ್ಲಿ ಯುವಕನೋರ್ವನ ಹ*ತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು
-
Chamarajanagar22 hours agoರಾಗಿ ಒಕ್ಕಣೆ ಮಿಷನ್ ನಿಂದ ಕೂಲಿ ಕಾರ್ಮಿಕಳೊಬ್ಬಳ ಕೈ ತುಂಡು
-
Kodagu19 hours agoಕೊಡಗಿನ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್
