Connect with us

Mandya

ತೂಬಿನಕೆರೆ ಬೆಲ್ಟ್‌ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಕೋಟ್ಯಾಂತರ ರೂ. ನಷ್ಟ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿ: ಲಕ್ಷಾಂತರ ಮೌಲ್ಯದ ಕಚ್ಚಾ ವಸ್ತುಗಳ ರಕ್ಷಣೆ

Published

on

ಮಂಡ್ಯ: ಬೆಲ್ಟ್‌ ತಯಾರಿಕಾ ಕಾರ್ಖಾನೆಯಲ್ಲಿ ವಿದ್ಯುತ್ ಶಾರ್ಟ್ ಸೆರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿ ಯಂತ್ರೋಪಕರಣಗಳು ಬೆಂಕಿಗಾಹುತಿಯಾಗಿ ಕೋಟ್ಯಾಂತರ ಕಚ್ಚಾ ವಸ್ತುಗಳು ನಾಶವಾಗಿರುವ ಘಟನೆ ತಾಲ್ಲೂಕಿನ ತೂಬಿನಕೆರೆ ಕೈಗಾರಿಕಾ ಪ್ರದೇಶದಲ್ಲಿರುವ ಬೆಲ್ಟ್‌ ಕಾರ್ಖಾನೆಯಲ್ಲಿ ಭಾನುವಾರ ನಡೆದಿದೆ.

ಹರಿ ಬೆಲ್ಟ್‌ ಅಂಡ್ ಕನ್ವೇಯರ್ಸ್‌ ಪ್ರೈವೇಟ್ ಲಿಮಿಟೆಡ್‌ನಲ್ಲಿ ಶನಿವಾರ ತಡರಾತ್ರಿ ಸುಮಾರು 2.30 ಗಂಟೆ ವೇಳೆಗೆ ಶಾರ್ಟ್‌ಸೆರ್ಕ್ಯೂಟ್ ಸಂಭವಿಸಿರುವುದಾಗಿ ತಿಳಿದುಬಂದಿದೆ. ಬೆಂಕಿ ದುರಂತದಲ್ಲಿ ಕಾರ್ಖಾನೆಯ ಒಂದು ಯೂನಿಟ್‌ನ ಶೆಲ್ಟರ್ ಸಂಪೂರ್ಣವಾಗಿ ಕುಸಿದುಬಿದ್ದಿದೆ. 6 ಸಾಮಾನ್ಯ ಅಗ್ನಿಶಾಮಕ ವಾಹನಗಳು, 2 ಕೈಗಾರಿಕಾ ಅಗ್ನಿಶಾಮಕ ವಾಹನಗಳು ಸೇರಿ 8 ವಾಹನಗಳು ಹಾಗೂ 70 ಅಗ್ನಿಶಾಮಕ ಸಿಬ್ಬಂದಿ ನಿರಂತರವಾಗಿ ಎಂಟು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಬೆಂಕಿ ನಂದಿಸಲು ಹರಸಾಹಸ ಪಟ್ಟ ಸಿಬ್ಬಂದಿಯು ಕೊನೆಗೂ ಯಶಸ್ವಿಯಾಗಿದ್ದಾರೆ. ಶಾರ್ಟ್‌ಸೆರ್ಕ್ಯೂಟ್ ಸಂಭವಿಸಿದ ಸಮಯದಲ್ಲಿ ಕಾರ್ಖಾನೆಯೊಳಗೆ ಯಾರೊಬ್ಬರೂ ಇಲ್ಲದ ಕಾರಣದಿಂದ ಪ್ರಾಣಹಾನಿ ಸಂಭವಿಸಿಲ್ಲ, ಬೆಂಕಿ ಅವಘಡದಲ್ಲಿ ಯೂನಿಟ್‌ವೊಂದರ ಬಲಭಾಗದ ಯಂತ್ರೋಪಕರಣಗಳಿಗೆ ಸಾಕಷ್ಟು ಹಾನಿ ಸಂಭವಿಸಿದೆ, ಇದರ ನಡುವೆ ಬೆಲ್ಟ್‌ಗಳನ್ನು ಸಿದ್ಧ ಪಡಿಸಿದ್ದ ವಸ್ತುಗಳನ್ನು ಸಿಬ್ಬಂದಿ ರಕ್ಷಣೆ ಮಾಡಿ ಸುಮಾರು ಲಕ್ಷಾಂತರ ಮೌಲ್ಯದ ವಸ್ತುಗಳು ಉಳಿದುಕೊಂಡಿವೆ.

ತೂಬಿನಕೆರೆ ಕೈಗಾರಿಕಾ ಪ್ರದೇಶದಲ್ಲಿರುವ ಹರಿ ಬೆಲ್ಟ್‌ ಅಂಡ್ ಕನ್ವೇಯರ್ಸ್‌ ಪ್ರೈವೇಟ್ ಲಿಮಿಟೆಡ್‌ನಲ್ಲಿ 43 ಮಂದಿ ಕೆಲಸಗಾರರು ಕಾರ್ಯನಿರ್ವಹಿಸುತ್ತಿದ್ದು, ಶನಿವಾರ ರಾತ್ರಿ ಕೆಲಸ ಮುಗಿದ ನಂತರ ಎಲ್ಲರೂ ಕಾರ್ಖಾನೆಯಿಂದ ಹಿಂತಿರುಗಿದ್ದಾರೆ. ಶನಿವಾರ ಮಧ್ಯರಾತ್ರಿ 2.30 ಗಂಟೆ ವೇಳೆಗೆ ಶಾರ್ಟ್‌ಸಕ್ಯೂಟ್ ಸಂಭವಿಸಿ ಬೆಲ್ಟ್‌ ತಯಾರಿಸಲು ಇರಿಸಲಾಗಿದ್ದ ಕಚ್ಚಾವಸ್ತುಗಳಿಗೆ ಬೆಂಕಿ ಹೊತ್ತಿಕೊಂಡಿದೆ.

ಆ ಬೆಂಕಿಯು ಕಾರ್ಖಾನೆಯ ಒಂದು ಯೂನಿಟ್‌ನ್ನು ಆವರಿಸಿಕೊಂಡಿದೆ. ಅಲ್ಲಿದ್ದ ಬೆಲ್ಟ್‌ಗಳು ತಯಾರಿಕಾ ಸಾಮಗ್ರಿಗಳು, ಯಂತ್ರೋಪಕರಣಗಳೆಲ್ಲವೂ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಹೊತ್ತಿ ಉರಿಯಲಾರಂಭಿಸಿದವು. ಕಾರ್ಖಾನೆಯೊಳಗೆ ಬೆಂಕಿ ಧಗ ಧಗಿಸುತ್ತಿರುವುದು, ದಟ್ಟವಾದ ಹೊಗೆ ಬರುತ್ತಿರುವ ದೃಶ್ಯ ಕಂಡ ಭದ್ರತಾ ಸಿಬ್ಬಂದಿ ಕೂಡಲೇ ಮಾಲೀಕರಿಗೆ ವಿಷಯ ಮುಟ್ಟಿಸಿದರು. ನಂತರ ಅಗ್ನಿಶಾಮಕ ದಳ ಇಲಾಖೆಗೆ ಕರೆ ಮಾಡಿ ವಿಷಯ ಮುಟ್ಟಿಸಿದರು ಎನ್ನಲಾಗಿದೆ.

ಆರಂಭದಲ್ಲಿ ಎರಡು ಅಗ್ನಿಶಾಮಕ ವಾಹನಗಳು ಬಂದವು. ಬಾಗಿಲು ತೆರೆದು ನೋಡಿದಾಗ ಬೆಂಕಿ ದುರಂತದ ಅಗಾಧತೆ ಕಂಡು ಅಗ್ನಿಶಾಮಕ ಇಲಾಖೆ ಪ್ರಾದೇಶಿಕ ಅಧಿಕಾರಿ ಗುರುರಾಜ್ ಅವರು ಶ್ರೀರಂಗಪಟ್ಟಣ, ಪಾಂಡವಪುರ, ಮಂಡ್ಯ, ಮೈಸೂರಿನಿಂದ ತಲಾ ಎರಡು ಅಗ್ನಿಶಾಮಕ ವಾಹನಗಳು ಮತ್ತು 2 ಕೈಗಾರಿಕಾ ಪಡೆಯ ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕರೆಸಲಾಯಿತು. 70 ಅಗ್ನಿಶಾಮಕ ಸಿಬ್ಬಂದಿ ಸತತವಾಗಿ ಕಾರ್ಯಾಚರಣೆ ನಡೆಸಿ ಮಧ್ಯರಾತ್ರಿ 3.30 ಗಂಟೆಯಿಂದ ಬೆಳಗ್ಗೆ 12 ಗಂಟೆಯವರೆಗೆ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿ, ಬೆಂಕಿ ಅವಘಡದ ನಡುವೆಯೂ ಲಕ್ಷಾಂತರ ರು. ವೌಲ್ಯದ ಸಿದ್ಧಪಡಿಸಿದ್ದ ಬೆಲ್ಟ್‌ಗಳನ್ನು ಸುರಕ್ಷಿತವಾಗಿ ಹೊರತರಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Mandya

ಎಚ್ಡಿಕೆ ಮಂಡ್ಯದಲ್ಲಿ ಅಬ್ಬರದ ಪ್ರಚಾರ

Published

on

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ – ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಪ್ರಚಾರದ ಕೊನೆಯ ದಿನ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿಪ್ರದರ್ಶಿಸಿದರು.

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ನಡೆಸಿದ ಹೆಚ್‍.ಡಿ ಕುಮಾರಸ್ವಾಮಿಗೆ ಅಪಾರ ಜನಸ್ತೋಮ ಬೆಂಬಲ ಸೂಚಿಸಿತು.

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಿಂದ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗೂಡಿ ರೋಡ್ ಶೋ ಮೂಲಕ ಮತಯಾಚನೆಗೆ ಹೊರಟ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಜಯ ಘೋಷ ಮೊಳಗಿಸಿ ಹರ್ಷೋದ್ಗಾರದ ನಡುವೆ ಪುಷ್ಪಾರ್ಚನೆ ಮೂಲಕ ಹೆಜ್ಜೆ ಹಾಕಿದರು. ಅಪಾರ ಜನಸ್ತೋಮದ ನಡುವೆ ತೆರೆದ ವಾಹನದಲ್ಲಿ ಕೈ ಮುಗಿದು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.


ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಹಿರಂಗ ಪ್ರಚಾರದ ಕೊನೆಯ ದಿನ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಶಕ್ತಿಪ್ರದರ್ಶಿಸುವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಅಣಿಯಾಗಿದ್ದಾರೆ.

Continue Reading

Mandya

ಕಾಂಗ್ರೆಸ್ ಪಕ್ಷದಿಂದ ಬೈಕ್ ರ್‍ಯಾಲಿ

Published

on

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಎರು ಮಂಡ್ಯದಲ್ಲಿ ಬೈಕ್ ರ್‍ಯಾಲಿ ಮೂಲಕ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ ಜೊತೆಗೂಡಿ ಕೊನೆಯ ದಿನದ ಪ್ರಚಾರ ಮಾಡಿದರು.

ನಗರದ ಕಾರಿಮನೆ ಗೇಟ್ ನಿಂದ ಬೈಕ್ ರ್‍ಯಾಲಿ ಮೂಲಕ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕರು, ಬೆಂಗಳೂರು ಮೈಸೂರು ಹೆದ್ದಾರಿ ಮೂಲಕ ಜಯ ಚಾಮರಾಜೇಂದ್ರ ಒಡೆಯರ್ ವೃತ್ತ, ಆರ್ ಪಿ ರಸ್ತೆ, ಅಂಬೇಡ್ಕರ್ ರಸ್ತೆ ಯಲ್ಲಿ ಮತಯಾಚಿಸಿ ಹೊಸಹಳ್ಳಿಯಲ್ಲಿ ಪ್ರಚಾರ ಮಾಡಿದರು.

ಕಾಂಗ್ರೆಸ್ ಪಕ್ಷ ಜನರ ಪರವಾದ ಪಕ್ಷವಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ಸವಲತ್ತು ದೊರಕಿಸಿಕೊಟ್ಟಿದೆ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮತ್ತಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Continue Reading

Mandya

ಕುಮಾರಸ್ವಾಮಿ ಪರ ಮತ ಪ್ರಚಾರ

Published

on

ಭಾರತೀನಗರ :ಕೆ.ಎಂ.ದೊಡ್ಡಿಯಲ್ಲಿನ 1 ಮತ್ತು 2ನೇ ಬ್ಲಾಕ್ನಲ್ಲಿ ಜಾ.ದಳ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಎನ್.ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಪ್ರತೀ ಮನೆಯಲ್ಲಿ ಮತದಾರರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕೊಟ್ಟ ಕೊಡುಗೆಗಳ ಹಾಗೂ ಅಭಿವೃದಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು, ರೈತರ ಉದ್ಧಾರಕ್ಕೋಸ್ಕರ ಸಾಲ ಮನ್ನಾ ಮಾಡಿದ್ದರು. ಹಾಗಾಗಿ ಕುಮಾರಸ್ವಾಮಿ ಅವರ ತೆನೆ ಹೊತ್ತ ಮಹಿಳೆ ಗುರುತಿಗೆ ಮತ ನೀಡುವ ಮೂಲಕ ಅತ್ಯಧಿಕ ಮತಗಳಿಂದ ಜಯಗಳಿಸುವಂತೆ ಮಾಡಬೇಕೆಂದು ಮನವಿ ಮಾಡಿದರು.
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಪಕ್ಷದ ಪ್ರದಾನಮಂತ್ರಿ ನರೇಂದ್ರ ಮೋದಿ ಅವರು ಜನತೆಯ ಹಿತಕಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ, ರೈತರ ಶ್ರೇಯೋಬಿವೃದ್ಧಿ ಹಿನ್ನೆಯಲ್ಲಿಯೂ ಕೂಡ ಹಲವು ಯೋಜನೆಗಳನ್ನು ಜಾರಿ ಮಾಡಿದ್ದಾರೆ ಎಂದು ಮತದಾರರಿಗೆ ತಿಳಿಸಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಪ್ರದಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ್, ಮುಖಂಡರಾದ ಮೊಬೈ ವೆಂಕಟೇಶ್, ಕುಮಾರ್ , ರವಿ, ವಿಶ್ವ ಶ್ರೀನಿವಾಸ್, ಪುನೀತ್, ವಿಕಾಸ್ (ಬೋರ), ಪ್ರಶಾಂತ್, ಲಕ್ಷ್ಮಮ್ಮ, ರಂಗಮ್ಮ ಮುಂತಾದವರುಗಳು ಭಾಗವಹಿಸಿದ್ದರು

Continue Reading

Trending

error: Content is protected !!