Connect with us

Sports

ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ

Published

on

ಬರ್ಮಿಂಗ್ಹ್ಯಾಮ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಇಂದು ಚಾಲನೆ ದೊರೆತಿದ್ದು, ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುತ್ತಿದೆ.

ಟಿ20 ಸರಣಿಯಲ್ಲಿ ನಿರಾಸೆ ಅನುಭವಿಸಿದ್ದ ಭಾರತ ಇದೀಗ ಏಕದಿನ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸುವ ಗುರಿ ಹೊಂದಿದೆ. ಅಲ್ಲದೆ, 2027ರ ಏಕದಿನ ವಿಶ್ವಕಪ್‌ ಸಿದ್ಧತೆಯ ದೃಷ್ಟಿಯಿಂದಲೂ ಈ ಸರಣಿ ಮಹತ್ವ ಪಡೆದಿದೆ. ಈ ಸರಣಿಯ ಮೂಲಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬುಮ್ರಾ ಬಹಳ ದಿನಗಳ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟಿಗೆ ಕಣಕ್ಕಿಳಿದಿದ್ದಾರೆ.

ಉಭಯ ತಂಡಗಳ ಮುಖಾಮುಖಿ ದಾಖಲೆಯಲ್ಲಿ ಭಾರತ ಮೇಲುಗೈ ಸಾಧಿಸಿದೆ. ಇದುವರೆಗೆ ನಡೆದ 110 ಏಕದಿನ ಪಂದ್ಯಗಳಲ್ಲಿ ಭಾರತ 61ರಲ್ಲಿ ಗೆದ್ದಿದ್ದರೆ, ಇಂಗ್ಲೆಂಡ್ 44 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಎಡ್ಜ್‌ಬಾಸ್ಟನ್‌ನಲ್ಲೂ ಭಾರತ ಉತ್ತಮ ದಾಖಲೆ ಹೊಂದಿದ್ದು, ಆಡಿದ 12 ಪಂದ್ಯಗಳಲ್ಲಿ 8ರಲ್ಲಿ ಗೆಲುವು ದಾಖಲಿಸಿದೆ.

ಪ್ಲೇಯಿಂಗ್ XI:

ಇಂಗ್ಲೆಂಡ್: ಜಾಕೋಬ್ ಬೆಥೆಲ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಜೋಶ್ ಟಂಗ್, ಆದಿಲ್ ರಶೀದ್.

ಭಾರತ: ಶುಭ್‌ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್.

Continue Reading

Sports

ಟಿ-20 ವೈಫಲ್ಯ: ಗಂಭೀರ್-ಅಯ್ಯರ್ ಜೊತೆ ಬಿಸಿಸಿಐ ಪರಿಶೀಲನಾ ಸಭೆ

Published

on

ಮುಂಬೈ:  ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಬಿಸಿಸಿಐ ಎಚ್ಚೆತ್ತುಕೊಂಡಿದೆ. ಎರಡೂ ಸರಣಿಗಳಲ್ಲಿ ಭಾರತ ಒಂದೂ ಪಂದ್ಯ ಗೆಲ್ಲದಿರುವುದು ಕ್ರಿಕೆಟ್ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಭಾರತ ಇದುವರೆಗೆ ಆಡಿರುವ 6 ಟಿ20 ಪಂದ್ಯಗಳಲ್ಲಿ 5ರಲ್ಲಿ ಸೋಲು ಕಂಡಿದ್ದು, ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 0–2 ಅಂತರದಿಂದ ಕ್ಲೀನ್ ಸ್ವೀಪ್‌ಗೆ ಒಳಗಾಗಿತ್ತು. ಬಳಿಕ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲೂ ಭಾರತ ಹಿನ್ನಡೆ ಅನುಭವಿಸಿದ್ದು, ಮೂರು ಪಂದ್ಯಗಳಲ್ಲಿ ಸೋತಿದೆ. ಒಂದು ಪಂದ್ಯ ಮಳೆಯಿಂದ ರದ್ದಾಗಿದ್ದು, ಇನ್ನೊಂದು ಪಂದ್ಯ ಬಾಕಿಯಿದೆ.

ತಂಡದ ನಿರಂತರ ವೈಫಲ್ಯದ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಇಂಗ್ಲೆಂಡ್ ಸರಣಿ ಮುಕ್ತಾಯವಾದ ಬಳಿಕ ನಾಯಕ ಶ್ರೇಯಸ್ ಅಯ್ಯರ್ ಹಾಗೂ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರೊಂದಿಗೆ ಪರಿಶೀಲನಾ ಸಭೆ ನಡೆಸಿ, ತಂಡದ ದುರ್ಬಲತೆಗಳನ್ನು ವಿಶ್ಲೇಷಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಬಿಸಿಸಿಐ ನಿರ್ಧರಿಸಿದೆ.

ಇದೀಗ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ತಪ್ಪಿಸಿಕೊಳ್ಳಲು ಹಾಗೂ ಟಿ20 ಶ್ರೇಯಾಂಕದಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಳ್ಳಲು ಉಳಿದಿರುವ ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸುವ ಒತ್ತಡದಲ್ಲಿದೆ.

Continue Reading

National - International

ಇಂಗ್ಲೆಂಡ್ ವಿರುದ್ಧ 14 ವರ್ಷಗಳ ಬಳಿಕ ಟಿ-20 ಸರಣಿ ಸೋತ ಟೀಂ ಇಂಡಿಯಾ

Published

on

ಇಂಗ್ಲೆಂಡ್‌: ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾದ ನಿರೀಕ್ಷಿತ ಪ್ರದರ್ಶನ ಕಾಣಿಸಲಿಲ್ಲ. ಹಾಲಿ ಟಿ20 ವಿಶ್ವ ಚಾಂಪಿಯನ್ ಎಂಬ ಹೆಗ್ಗಳಿಕೆ ಹೊಂದಿದ್ದ ಭಾರತ ತಂಡ, ಐರ್ಲೆಂಡ್ ವಿರುದ್ಧವೂ ಹಾಗೂ ಇಂಗ್ಲೆಂಡ್ ವಿರುದ್ಧವೂ ಉತ್ತಮ ಪ್ರದರ್ಶನ ನೀಡಲಿದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಎರಡೂ ಸರಣಿಗಳಲ್ಲಿ ತಂಡ ನಿರಾಸೆ ಮೂಡಿಸಿದ್ದು, ವಿಶೇಷವಾಗಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ 3-0 ಅಂತರದ ಸೋಲಿನಿಂದ 14 ವರ್ಷಗಳ ಅಜೇಯ ಸರಣಿಗೆ ತೆರೆ ಬಿದ್ದಿದೆ.

2012ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳ ಟಿ20 ಸರಣಿಗಳಲ್ಲಿ ಭಾರತ ಸೋಲು ಕಂಡಿರಲಿಲ್ಲ. ಈ ಅವಧಿಯಲ್ಲಿ ನಡೆದ ಆರು ಸರಣಿಗಳಲ್ಲಿ ಭಾರತ ಐದು ಸರಣಿಗಳನ್ನು ಗೆದ್ದರೆ, ಒಂದು ಸರಣಿ ಡ್ರಾದಲ್ಲಿ ಅಂತ್ಯಗೊಂಡಿತ್ತು. ಇದೀಗ ಏಳನೇ ಸರಣಿಯಲ್ಲಿ ಇಂಗ್ಲೆಂಡ್ ಸಂಪೂರ್ಣ ಮೇಲುಗೈ ಸಾಧಿಸಿ 3-0 ಅಂತರದಿಂದ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಇನ್ನು ನಾಯಕ ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಭಾರತ ಟಿ20 ತಂಡದ ಪ್ರದರ್ಶನವೂ ನಿರಾಸೆ ಮೂಡಿಸಿದೆ. ಅವರ ನಾಯಕತ್ವದಲ್ಲಿ ಆಡಿದ ಆರು ಪಂದ್ಯಗಳಲ್ಲಿ ಐದು ಪಂದ್ಯಗಳಲ್ಲಿ ಭಾರತ ಸೋತಿದ್ದು, ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಐರ್ಲೆಂಡ್ ವಿರುದ್ಧದ ವೈಟ್‌ವಾಶ್ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿ ಸೋಲು ತಂಡದ ಮೇಲೆ ಒತ್ತಡ ಹೆಚ್ಚಿಸಿದೆ.

ಸತತ ಸೋಲುಗಳಿಂದ ಕಂಗೆಟ್ಟಿರುವ ಟೀಂ ಇಂಡಿಯಾ ಈಗ ಮುಂದಿನ ಜಿಂಬಾಬ್ವೆ ಪ್ರವಾಸದಲ್ಲಿ ಪುಟಿದೇಳುವ ವಿಶ್ವಾಸದಲ್ಲಿದೆ. ತಂಡ ತನ್ನ ತಪ್ಪುಗಳನ್ನು ಸರಿಪಡಿಸಿ ಮತ್ತೆ ಗೆಲುವಿನ ಹಾದಿಗೆ ಮರಳುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

Continue Reading

National

ಏಕದಿನ ಕ್ರಿಕೆಟ್‌ಗೆ 40 ಓವರ್‌ ಮಾದರಿ? : ಐಸಿಸಿ ಗಂಭೀರ ಚಿಂತನೆ

Published

on

ನವದೆಹಲಿ: ಟಿ-20 ಕ್ರಿಕೆಟ್‌ನ ಹೆಚ್ಚುತ್ತಿರುವ ಜನಪ್ರಿಯತೆ ಹಾಗೂ ಬದಲಾಗುತ್ತಿರುವ ಪ್ರೇಕ್ಷಕರ ಅಭಿರುಚಿಗೆ ಅನುಗುಣವಾಗಿ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಏಕದಿನ ಕ್ರಿಕೆಟ್‌ನಲ್ಲಿ ಮಹತ್ವದ ಬದಲಾವಣೆ ತರಲು ಗಂಭೀರ ಚಿಂತನೆ ನಡೆಸಿದೆ. ಸದ್ಯದ 50 ಓವರ್‌ಗಳ ಏಕದಿನ ಪಂದ್ಯಗಳನ್ನು 40 ಓವರ್‌ಗಳಿಗೆ ಇಳಿಸುವ ಪ್ರಸ್ತಾವನೆ ಐಸಿಸಿ ಪರಿಶೀಲನೆಯಲ್ಲಿದೆ.

ಕ್ರಿಕೆಟ್‌ನ ಭವಿಷ್ಯದ ಕಾರ್ಯತಂತ್ರದ ಕುರಿತು ಜಾಗತಿಕ ಸಲಹಾ ಸಂಸ್ಥೆ ಮೆಕಿನ್ಸೆ ನಡೆಸಿದ ಅಧ್ಯಯನದಲ್ಲಿ, ಏಕದಿನ ಕ್ರಿಕೆಟ್‌ನ್ನು ಉಳಿಸಿಕೊಳ್ಳಬೇಕಾದರೆ ಕ್ರಾಂತಿಕಾರಿ ಬದಲಾವಣೆಗಳು ಅಗತ್ಯ ಎಂದು ಶಿಫಾರಸು ಮಾಡಲಾಗಿದೆ.

ಓವರ್ ಕಡಿತಕ್ಕೆ ಪ್ರಮುಖ ಕಾರಣಗಳು:

  • ಮೂರುರಿಂದ ನಾಲ್ಕು ಗಂಟೆಗಳಲ್ಲಿ ಮುಗಿಯುವ ಟಿ-20 ಪಂದ್ಯಗಳಿಗೆ ಹೋಲಿಸಿದರೆ ಸುಮಾರು ಎಂಟು ಗಂಟೆಗಳ ಕಾಲ ನಡೆಯುವ ಏಕದಿನ ಪಂದ್ಯಗಳ ಬಗ್ಗೆ ಪ್ರೇಕ್ಷಕರ ಆಸಕ್ತಿ ಕಡಿಮೆಯಾಗುತ್ತಿದೆ.
  • ಪಂದ್ಯವನ್ನು 40 ಓವರ್‌ಗಳಿಗೆ ಇಳಿಸಿದರೆ ಸುಮಾರು ಆರು ಗಂಟೆಗಳಲ್ಲಿ ಪೂರ್ಣಗೊಳ್ಳಲಿದ್ದು, ವೀಕ್ಷಕರ ಸಂಖ್ಯೆಯನ್ನು ಹೆಚ್ಚಿಸುವ ಸಾಧ್ಯತೆ ಇದೆ.
  • 50 ಓವರ್ ಪಂದ್ಯಗಳಲ್ಲಿ 15ರಿಂದ 40ನೇ ಓವರ್‌ಗಳ ನಡುವಿನ ಆಟ ಹೆಚ್ಚು ರೋಚಕವಾಗಿರುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಆರಂಭದಿಂದ ಅಂತ್ಯದವರೆಗೆ ಪಂದ್ಯವನ್ನು ಕುತೂಹಲಕರವಾಗಿರಿಸುವುದು ಐಸಿಸಿಯ ಉದ್ದೇಶವಾಗಿದೆ.
  • ಆಟಗಾರರ ಮೇಲಿನ ದೈಹಿಕ ಒತ್ತಡ ಮತ್ತು ಗಾಯದ ಸಮಸ್ಯೆಗಳನ್ನು ಕಡಿಮೆ ಮಾಡುವ ಉದ್ದೇಶವೂ ಈ ಪ್ರಸ್ತಾವನೆಯ ಹಿಂದಿದೆ.

ಮೆಕಿನ್ಸೆ ಸಂಸ್ಥೆಯ ಪ್ರಮುಖ ಶಿಫಾರಸುಗಳು:

  • 50 ಓವರ್‌ಗಳ ಬದಲಿಗೆ 40 ಓವರ್‌ಗಳ ಏಕದಿನ ಪಂದ್ಯಗಳನ್ನು ಪರಿಚಯಿಸುವುದು.
  • ಏಕದಿನ ವಿಶ್ವಕಪ್‌ಗೆ ಮುನ್ನ 18 ತಿಂಗಳ ಅವಧಿಯಲ್ಲಿ ಮಾತ್ರ ಏಕದಿನ ಸರಣಿಗಳನ್ನು ಆಯೋಜಿಸುವುದು.
  • ಟೆಸ್ಟ್, ಏಕದಿನ ಹಾಗೂ ಟಿ-20 ಮಾದರಿಗಳಿಗೆ ಪ್ರತ್ಯೇಕ ಹಾಗೂ ನಿಗದಿತ ವೇಳಾಪಟ್ಟಿಯನ್ನು ರೂಪಿಸುವುದು.
  • ಏಷ್ಯಾಕಪ್ ಮಾದರಿಯಲ್ಲಿ ಇತರ ಖಂಡಗಳಲ್ಲಿಯೂ ಕಾಂಟಿನೆಂಟಲ್ ಟೂರ್ನಿಗಳು ಹಾಗೂ ತ್ರಿಕೋನ ಸರಣಿಗಳನ್ನು ಉತ್ತೇಜಿಸುವುದು.

ಈ ಪ್ರಸ್ತಾವನೆಯ ಕುರಿತು ಎಡಿನ್‌ಬರ್ಗ್‌ನಲ್ಲಿ ನಡೆಯಲಿರುವ ಐಸಿಸಿ ವಾರ್ಷಿಕ ಸಾಮಾನ್ಯ ಸಭೆಯಲ್ಲಿ 12 ಪೂರ್ಣ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಚರ್ಚೆ ನಡೆಸಲಿದ್ದಾರೆ. ಬಳಿಕವೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.

ಆದಾಗ್ಯೂ, ಯಾವುದೇ ಹೊಸ ನಿಯಮಗಳು 2027ರ ಏಕದಿನ ವಿಶ್ವಕಪ್‌ಗೂ ಮುನ್ನ ಜಾರಿಗೆ ಬರುವುದಿಲ್ಲ. ಪ್ರಸ್ತುತ ಜಾರಿಯಲ್ಲಿರುವ ಫ್ಯೂಚರ್ ಟೂರ್ಸ್ ಪ್ರೋಗ್ರಾಂ (FTP) ಹಾಗೂ ಜಾಗತಿಕ ಕ್ರಿಕೆಟ್ ವೇಳಾಪಟ್ಟಿಯನ್ನು ಪರಿಶೀಲಿಸಿದ ಬಳಿಕವೇ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. ಅಲ್ಲಿಯವರೆಗೆ ಎಲ್ಲಾ ಏಕದಿನ ಪಂದ್ಯಗಳು ಸಾಂಪ್ರದಾಯಿಕ 50 ಓವರ್‌ಗಳ ಮಾದರಿಯಲ್ಲೇ ಮುಂದುವರಿಯಲಿವೆ.

Continue Reading

Trending

error: Content is protected !!