Connect with us

State

ಫ್ಲೈ ಓವರ್ ಮೇಲೆ ಮೆಟ್ರೋ ಸೇರಿ ಬೆಂಗಳೂರಿಗೆ ಹೊಸ ರೂಪ ನೀಡಲು ನಾನಾ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

Published

on

“ಬೆಂಗಳೂರಿಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. ಇದಕ್ಕೆ ಪೂರಕವಾಗಿ ಸಧ್ಯದಲ್ಲೇ ಪಾಲಿಕೆ ಬಜೆಟ್ ಮಂಡನೆಯಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರು ವಿವಿಯ ಜ್ಞಾನಭಾರತಿ ಬಿಪೆಡ್ ಮೈದಾನದಲ್ಲಿ ಭಾನುವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಹೇಳಿದ್ದಿಷ್ಟು;

“ಬೆಂಗಳೂರಿನ ಹೊಸ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಿಸಲು ನಮ್ಮದೇ ಆದ ಯೋಜನೆಗಳಿವೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಮೆಟ್ರೋ ಹೋಗುವ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣಕ್ಕೂ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ.

 

ಯಶವಂತಪುರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಟನಲ್ ರಸ್ತೆ ಮಾಡಲು ಫೀಸಿಬಲ್ ವರದಿ ಸಿದ್ಧಪಡಿಸಲಾಗುತ್ತಿದೆ. ಸುಮ್ಮನಹಳ್ಳಿ, ಗೊರಗೊಂಟೆ ಪಾಳ್ಯ ಸೇರಿದಂತೆ ಇತರ ಕಡೆಗಳಲ್ಲಿ ಈ ಯೋಜನೆ ಮಾಡಲು ಸಿದ್ಧತೆ ಮಾಡುತ್ತಿದ್ದೇವೆ.

ಇದುವರೆಗೂ 12 ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ ಮಾಡಿದ್ದು, 20 ಸಾವಿರ ಅಹವಾಲುಗಳನ್ನು ದಾಖಲಾಗಿವೆ. ಮುಖ್ಯಮಂತ್ರಿಗಳು ಕೂಡ ಎರಡು ಬಾರಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅವರ ಕಾರ್ಯಕ್ರಮದಲ್ಲೂ ಸಾವಿರಾರು ಮಂದಿ ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಈ ಅರ್ಜಿಗಳ ವಿಲೇವಾರಿಗೆ ಪ್ರತ್ಯೇಕವಾಗಿ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ.

ನೀವು ನಿಮ್ಮ ಸಮಸ್ಯೆ ತೆಗೆದುಕೊಂಡು ನಮ್ಮ ಮನೆ ಬಾಗಿಲಿಗೆ ಸುತ್ತ ಬಾರದು ಎಂದು ನಾನೇ ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಸಮಸ್ಯೆ ಆಲಿಸುತ್ತಿದ್ದೇನೆ. ನಮ್ಮ ಸರ್ಕಾರ ಸದಾ ನಿಮ್ಮ ಜತೆ ಇರಲಿದೆ. ನಿಮ್ಮ ಎಲ್ಲಾ ಸಮಸ್ಯೆ ಒಂದೇ ದಿನದಲ್ಲಿ ಬಾಗೆ ಹರಿಸಲು ಆಗುವುದಿಲ್ಲ. ಆದರೆ ಹಂತ ಹಂತವಾಗಿ ಬಾಗೆಹರಿಸುತ್ತೇವೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳಿಂದ ಕೆಲಸ ಆಗದಿದ್ದಾಗ ಮಾತ್ರ ನೀವು ನಿಮ್ಮ ಸಮಸ್ಯೆಯನ್ನು ನಮ್ಮ ಬಳಿಗೆ ತರುತ್ತೀರಿ.

ನಮ್ಮ ಕಾರ್ಯಕ್ರಮ ನಿಮ್ಮೆಲ್ಲರ ಕಣ್ಣಿಗೆ ಕಾಣುತ್ತಿವೆ:

ಈ ಹಿಂದೆ ಇದ್ದವರ ಯೋಜನೆ, ಅಭಿವೃದ್ಧಿಯ ಆಶ್ವಾಸನೆಗಳು ಬಗ್ಗೆ ಕೇವಲ ಕಿವಿಗೆ ಕೇಳುತ್ತಿತ್ತು. ಆದರೆ ನಮ್ಮ ಕಾರ್ಯಕ್ರಮಗಳು ನಿಮ್ಮೆಲ್ಲರ ಕಣ್ಣಿಗೆ ಕಾಣುತ್ತಿವೆ.

ನಮ್ಮ ಎಲ್ಲಾ ಗ್ಯಾರಂಟಿ ಯೋಜನೆಗಳು ಶೆ.95ರಷ್ಟು ಅರ್ಹ ಫಲಾನುಭವಿಗಳಿಗೆ ತಲುಪಿವೆ. 5-6% ಜನರಿಗೆ ಮಾತ್ರ ತಾಂತ್ರಿಕ ಸಮಸ್ಯೆಗಳಿಂದ ಹಣ ತಲುಪಿಲ್ಲ. ಅವರ ಸಮಸ್ಯೆ ಬಗೆಹರಿಸಲಾಗುತ್ತದೆ. ಗೃಹಲಕ್ಷ್ಮಿ ಹಣ ತಲುಪುತ್ತಿದೆ, ಶಕ್ತಿ ಯೋಜನೆಯಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ನೀಡದಿದ್ದರೂ ಅದಕ್ಕೆ ಹಣ ನೀಡುತ್ತಿದ್ದೇವೆ. ಗೃಹಜ್ಯೋತಿ ಯೋಜನೆಯಲ್ಲಿ ಉಚಿತ ವಿದ್ಯುತ್ ಸಿಗುತ್ತಿದೆ. ಯುವನಿಧಿ ಯೋಜನೆಯಲ್ಲಿ ನಿರುದ್ಯೋಗ ಭತ್ಯೆ ಸಿಗುತ್ತಿದೆ. ಹಿಂದೆ ಇದ್ದ ಯಾವುದಾದರೂ ಸರ್ಕಾರ ಇಂತಹ ಕಾರ್ಯಕ್ರಮ ನೀಡಿದ್ದೇವೆ? ನೀವು ಆರಿಸಿದ ಸರ್ಕಾರ ನುಡಿದಂತೆ ನಡೆಯುತ್ತಿದೆ.

ಇಂಧನ ಇಲಾಖೆ ಮೂಲಕ ನಿಮ್ಮ ಮನೆ ಮಹಡಿ ಮೇಲೆ ಸೌರ ವಿದ್ಯುತ್ ಪ್ಯಾನೆಲ್ ಅಳವಡಿಸಲು ಸರ್ಕಾರದಿಂದ ಸಬ್ಸಿಡಿ ನೀಡಲಾಗುವುದು.

ನಾವು ಭಾವನೆ ಮೇಲೆ ರಾಜಕಾರಣ ಮಾಡುವುದಿಲ್ಲ. ಜನರ ಬದುಕು ಕಟ್ಟಿಕೊಡುವ ಬಗ್ಗೆ ರಾಜಕಾರಣ ಮಾಡುತ್ತೇವೆ. ಬೆಲೆ ಏರಿಕೆ ಸಮಸ್ಯೆಗೆ ಸಿಲುಕಿರುವ ನಿಮಗೆ ಪರಿಹಾರ ನೀಡಲು ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿದೆ.

ಈ ಕಾರ್ಯಕ್ರಮದಲ್ಲಿ ಸರ್ಕಾರದ ಯಾವುದೇ ಯೋಜನೆ ನಿಮಗೆ ಸಿಗದಿದ್ದರೆ ಅವುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದರ ಜತೆಗೆ ನಿಮ್ಮ ಖಾತಾ ಸಮಸ್ಯೆ, ಪಿಂಚಣಿ ಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಿಕೊಳ್ಳಬಹುದು.

ಇನ್ನು ಬೆಂಗಳೂರಿನಲ್ಲಿರುವ ಎಲ್ಲಾ ಆಸ್ತಿಗಳನ್ನು ಸಮೀಕ್ಷೆ ಮಾಡಿಸಿ, ನಿಮ್ಮ ಮನೆ ಬಾಗಿಲಿಗೆ ಉಚಿತವಾಗಿ ದಾಖಲೆಗಳನ್ನು ತಲುಪಿಸುವ “ನಮ್ಮ ಸ್ವತ್ತು” ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.

ಇತ್ತೀಚೆಗೆ ಆಸ್ತಿ ದಾಖಲೆ ಪರಿಶೀಲನೆಯ ಪ್ರಾಯೋಗಿಕ ಕಾರ್ಯಕ್ರಮವನ್ನು ನಿಮ್ಮದೇ ಕ್ಷೇತ್ರದಲ್ಲಿ ಮಾಡಲಾಗಿದೆ. ಈ ವೇಳೆ ಕೆಲವು ಅಧಿಕಾರಿಗಳು ದಾಖಲೆ ತಿದ್ದಲು ಪ್ರಯತ್ನಿಸಿದ್ದಾರೆ. ಅವರ ವಿರುದ್ಧ ಪೊಲೀಸ್ ದೂರು ದಾಖಲಾಗಿದ್ದು, ಎಫ್ ಐಆರ್ ದಾಖಲಿಸಲಾಗಿದೆ.

ಕಟ್ಟಡ ಕಾರ್ಮಿಕರು, ಬೀದಿ ವ್ಯಾಪಾರಿಗಳು ನೋಂದಣಿ ಮಾಡಿಸಬೇಕು. ಆಗ ಸರ್ಕಾರಿ ಸೌಲಭ್ಯಗಳು ಸಿಗಲಿವೆ. ಬೀದಿ ವ್ಯಾಪಾರಿಗಳು ಪಾದಚಾರಿ ಮಾರ್ಗದಲ್ಲಿ ಅಂಗಡಿ ಹಾಕದೆ ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಬೇಕು.

ಇನ್ನು ತೆರಿಗೆ ಪಾವತಿ ವಿಚಾರವಾಗಿ ಕಳೆದ ಸರ್ಕಾರ ತಿದ್ದುಪಡಿ ಮಾಡಿದ ಕಾನೂನಿನಲ್ಲಿ ದುಬಾರಿ ದಂಡ ವಿಧಿಸಲಾಗಿದೆ. ಇದನ್ನು ಸರಿಪಡಿಸಲು ಮತ್ತೆ ಕಾನೂನಿಗೆ ತಿದ್ದುಪಡಿ ತರಲಾಗುವುದು. ಇದರಿಂದ ಸರಳವಾದ ತೆರಿಗೆ ವ್ಯವಸ್ಥೆ ಜಾರಿ ಮಾಡಲಾಗುವುದು.

ಯಶವಂತಪುರ, ಆರ್ ಆರ್ ನಗರ ನನ್ನ ಎರಡು ಕಣ್ಣುಗಳಂತೆ:

ಶಾಸಕರಾದ ಸೋಮಶೇಖರ್ ಅವರು ಬಿಡಿಎ ಸಮಸ್ಯೆ, 110 ಹಳ್ಳಿಗಳ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಈ ಎರಡು ಕ್ಷೇತ್ರ ನಮಗೆ ಎರಡು ಕಣ್ಣುಗಳಂತೆ.

ಶಾಸಕ ಮುನಿರತ್ನ ಅವರು ಹೇಳಿರುವಂತೆ ಕೊಳವೆ ಬಾವಿಯನ್ನು ಇನ್ನೂ 500 ಅಡಿ ಕೊರೆಸುವ ಬಗ್ಗೆ ಬಿಡಬ್ಲ್ಯೂಎಸ್ಎಸ್ ಬಿ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ.

ಇನ್ನು ಬೆಂಗಳೂರು ನಗರಕ್ಕೆ 6 ಟಿಎಂಸಿ ನೀರು ಬಳಕೆಗೆ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಜನರಿಗಾಗಿ ನಮ್ಮ ನೀರು ನಮ್ಮ ಹಕ್ಕು ಹೋರಾಟ ಮಾಡಿದೆ. ಮೇ ತಿಂಗಳ ಒಳಗಾಗಿ ಈ ಕಾವೇರಿ ನೀರು ನಿಮಗೆ ತಲುಪುವಂತೆ ಮಾಡುತ್ತೇವೆ.

ನನ್ನ ಸಹೋದರ ಸುರೇಶ್ ಸಂಸದನಾಗಿ ಅಲ್ಲ, ಪಂಚಾಯ್ತಿ ಸದಸ್ಯನಂತೆ ನಿಮ್ಮ ಮನೆ ಬಾಗಿಲಿಗೆ ಬಂದು ಕೆಲಸ ಮಾಡುತ್ತಿದ್ದಾರೆ. ಅವರಂತೆ ಬೀದಿ ಬೀದಿ ಸುತ್ತಿ ಕೆಲಸದ ಮಾಡಿದ ಬೇರೆ ಸಂಸದರನ್ನು ನೋಡಿಲ್ಲ. ಕನಕಪುರದಲ್ಲಿ ನನಗೆ 1.23 ಲಕ್ಷ ಮತಗಳಿಂದ ಗೆಲ್ಲಿಸಿದ್ದರೆ. ಅದಕ್ಕೆ ಡಿ.ಕೆ. ಸುರೇಶ್ ಕಾರಣ.

ಚುನಾವಣೆ ಬರುತ್ತಿದೆ. ನೀವು ನಿಮ್ಮ ಸೇವೆ ಮಾಡಿದವರಿಗೆ ಬೆಂಬಲ ನೀಡಬೇಕು. ಬೇರೆಯವರು ಕೆಲವು ಜಾಹೀರಾತಿನಲ್ಲಿ ಪ್ರಚಾರ ಮಾಡುತ್ತಾರೆ. ಆದರೆ ನಾವು ಜನರ ಸೇವೆ ಮಾಡುತ್ತಿದ್ದೇವೆ.

ಮಾಧ್ಯಮ ಪ್ರತಿಕ್ರಿಯೆ:

ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಶಾಸಕರ ದೂರಿನ ಬಗ್ಗೆ ಕೇಳಿದಾಗ, “ಅವರು ಜನಪ್ರತಿನಿಧಿಗಳು, ಅವರ ಅಹವಾಲು ಹೇಳಿಕೊಂಡಿದ್ದಾರೆ. ಅವರ ಅಭಿಪ್ರಾಯವನ್ನು ನಾವು ಪರಿಗಣಿಸಿ ಸರಿಪಡಿಸುವ ಕೆಲಸ ಮಾಡುತ್ತೇವೆ” ಎಂದರು.

ವಾಟರ್ ಮಾಫಿಯಾ ಬಗ್ಗೆ ಕೇಳಿದಾಗ, “ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ನೀರಿನ ಮಟ್ಟ ಕುಸಿದಿದೆ. ಕೊಳವೆ ಬಾವಿ ಇನ್ನು ಆಳಕ್ಕೆ ಕೊರೆಯುವ ಬಗ್ಗೆ ಸಲಹೆ ನೀಡಿದ್ದು, ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಇನ್ನು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನಾವು 200 ಕೋಟಿ ಅನುದಾನ ನೀಡಿದ್ದೇವೆ” ಎಂದು ತಿಳಿಸಿದರು

Continue Reading
Click to comment

Leave a Reply

Your email address will not be published. Required fields are marked *

State

ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?

Published

on

Cochin Shipyard Recruitment – ಮಿನಿರತ್ನ ಕಂಪನಿಯಾಗಿರುವ ಕೋಚಿನ್ ಶಿಪ್ ಯಾರ್ಡ್ ನಲ್ಲಿ ವಿವಿಧ 70 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೇವಲ ಒಂದು ದಿನ ಮಾತ್ರ ಬಾಕಿ ಇದೆ.

ಹಾಗಿದ್ದರೆ ಈ ನೇಮಕಾತಿಯಲ್ಲಿ ಯಾವ ಯಾವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬ ಇತ್ಯಾದಿ ಮಾಹಿತಿ ಇಲ್ಲಿದೆ..

ಯಾವ ಯಾವ ಹುದ್ದೆಗಳು ಖಾಲಿ ಇವೆ?

• Scaffolder ಹುದ್ದೆಗಳು – 11
• Semi Skilled Rigger – 59 ಹುದ್ದೆಗಳು

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು?

• Scaffolder ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸಾಗಿದ್ದು ಅದರ ಜೊತೆಗೆ ಸಂಬಂಧಪಟ್ಟ ಕೆಲಸದಲ್ಲಿ 2 ವರ್ಷದ ಅನುಭವ ಹೊಂದಿರಬೇಕು.
• Semi Skilled Rigger ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 4ನೇ ತರಗತಿ ಪಾಸಾಗಿದ್ದು ಅದರ ಜೊತೆಗೆ ಸಂಬಂಧಪಟ್ಟ ಕೆಲಸದಲ್ಲಿ 3 ವರ್ಷದ ಅನುಭವ ಹೊಂದಿರಬೇಕು.

ವಯೋಮಿತಿ ಅರ್ಹತೆ – ಗರಿಷ್ಠ 45 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ ಎಷ್ಟು ಇರಲಿದೆ?

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹22,100 ಸಂಬಳದ ಜೊತೆಗೆ ಹೆಚ್ಚಿನ ಕೆಲಸಕ್ಕೆ ಮಾಸಿಕ ₹5,530 ರೂ. ಪಡೆಯುವ ಅವಕಾಶವಿದೆ.

ಅರ್ಜಿ ಶುಲ್ಕ – 200ರೂ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 28 ಮಾರ್ಚ್ 2025

ಅರ್ಜಿ ಸಲ್ಲಿಸುವ ವಿಧಾನ : ಅರ್ಹತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಕೊಚ್ಚಿನ್ ಶಿಪ್ ಯಾರ್ಡ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿರಿ.

ಅಧಿಕೃತ ಜಾಲತಾಣ – https://cochinshipyard.in/careerdetail/career_locations/672

Continue Reading

State

ಎಚ್‌ಡಿ ಕುಮಾರಸ್ವಾಮಿ ಭೇಟಿ ಬಗ್ಗೆ ಸಚಿವ ಸತೀಶ್‌ ಜಾರಕಿಹೊಳಿ ಫಸ್ಟ್‌ ರಿಯಾಕ್ಷನ್‌

Published

on

ನವದೆಹಲಿ: ಸಚಿವ ಸತೀಶ್‌ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ಭಾರೀ ಕೋಲಾಹಲ ಎದ್ದಿದ್ದು, ಇದೀಗ ಸಚಿವ ಸತೀಶ್‌ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಯಾವ ಕಾರಣಕ್ಕೆ ಭೇಟಿ ಮಾಡಿದ್ದೆ ಎಂಬುದರ ಬಗ್ಗೆ ಹೈಕಮಾಂಡ್‌ ನಾಯಕರಿಗೆ ಹೇಳಿದ್ದೇನೆ. ಎಚ್‌ಡಿಕೆ ಭೇಟಿ ಕುರಿತು ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲ ಅವರಿಗೂ ಮಾಹಿತಿ ನೀಡಿದ್ದೇನೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಎಚ್‌ಡಿಕೆ ಭೇಟಿ ಮಾಡಿದ್ದ ಬಗ್ಗೆ ನಾಳೆ ಎಲ್ಲವನ್ನೂ ಸಂಪೂರ್ಣವಾಗಿ ಹೇಳುತ್ತೇನೆ ಎಂದರು.

Continue Reading

State

ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು: ಎಂಎಲ್‌ಸಿ ರಾಜೇಂದ್ರ ಹೊಸ ಬಾಂಬ್‌

Published

on

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್‌ ಸಿಕ್ಕಿದ್ದು, ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ.

ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ. ಸಚಿವರು ಕೂಡ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ನನ್ನ ಮೇಲೆ ಹನಿಟ್ರ್ಯಾಪ್‌ ಆಗಿಲ್ಲ. ದೂರವಾಣಿ ಕರೆ ಮೂಲಕ ಯತ್ನ ನಡೆಯುತ್ತಾ ಇತ್ತು ಎಂದರು.

ನವೆಂಬರ್.‌16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕಲು ಸ್ವಲ್ಪ ಜನ ಬಂದಿದ್ದರು. ಆ ವೇಳೆ ನನ್ನನ್ನು ಹತ್ಯೆ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳಿದರು.

ಈ ಬಗ್ಗೆ ನನ್ನ ಆಪ್ತರ ಮೂಲಕ ಆಡಿಯೋ ಸಿಕ್ಕಿತು. ಆಡಿಯೋದಲ್ಲಿ 5 ಲಕ್ಷ ಸುಪಾರಿ ನೀಡಿದ್ರು. ಮೂರು ಜನ ಹತ್ಯೆ ಮಾಡಲು ಪ್ರಯತ್ನಿಸಿದ್ದರು ಎಂದು ಮಾಹಿತಿ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ಸಿಐಡಿಗೆ ಹೋಗಿದೆ. ಪೊಲೀಸರು ರಾಜಣ್ಣ ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಮನೆ ಕೆಲಸದವರ ಹೇಳಿಕೆಯನ್ನು ಸಹ ಪಡೆದಿದ್ದಾರೆ. ಈ ಪ್ರಕರಣದ ನಾಯಕ ಯಾರು ಎಂದು ಗೊತ್ತಾಗುತ್ತಿಲ್ಲ. ನಾನು ಯಾರ ಹೆಸರನ್ನು ಕೂಡ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.

Continue Reading

Trending

error: Content is protected !!