Connect with us

Sports

KSCA ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ನೇಮಕ

Published

on

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಅಧ್ಯಕ್ಷ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್‌  ಭರ್ಜರಿ ಗೆಲುವು ಸಾಧಿಸಿದ್ದಾರೆ.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸೇರಿ ಒಟ್ಟು 16 ಸ್ಥಾನಗಳಿಗೆ ಇಂದು  ಬೆಳಗ್ಗೆಯಿಂದ ಸಂಜೆ ವರೆಗೆ ಮತದಾನ ನಡೆದಿದ್ದು, ಇದೀಗ ಮತದಾನ ಎಣಿಕೆಯಲ್ಲಿ ವೆಂಕಟೇಶ್ ಪ್ರಸಾದ್‌ 191 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಇದರೊಂದಿಗೆ ವೆಂಕಟೇಶ್ ಪ್ರಸಾದ್  12 ವರ್ಷಗಳ ನಂತರ ಮತ್ತೆ  ಅಧ್ಯಕ್ಷರಾಗಿ ಕೆಎಸ್‌ಸಿಎಗೆ ವಾಪಸ್ಸಾಗಿದ್ದಾರೆ.

ಮಾಜಿ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್ ಮತ್ತು ಅನಿಲ್ ಕುಂಬ್ಳೆ ಬಣದ ವೆಂಕಟೇಶ್ ಪ್ರಸಾದ್‌ಗೆ ಒಟ್ಟು 749 ಮತಗಳು ಬಿದ್ದಿದ್ದರೆ, ಬ್ರಿಜೇಶ್ ಪಾಟೀಲ್ ಬಣದ ಶಾಂತಕುಮಾರ್‌ಗೆ 558 ಮತಗಳು ಲಭವಿಸಿವೆ. ಇದರೊಂದಿಗೆ ವೆಂಕಟೇಶ್ ಪ್ರಸಾದ್‌ 191 ಮತಗಳ ಅಂತರದಿಂದ ವಿರೋಧಿ ಶಾಂತಕುಮಾರ್‌ ಅವರನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನೂ ವೆಂಕಟೇಶ್ ಪ್ರಸಾದ್ ಬಣದಿಂದ ಸುಜಿತ್ ಸೋಮಸುಂದರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರೆ, ಮಧುಕರ್ ಅವರು ಖಜಾಂಚಿಯಾಗಿ ನೇಮಕವಾಗಿದ್ದಾರೆ. ಅಲ್ಲದೇ ಕೆಎಸ್‌ಸಿಎ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಮೆನನ್ ಗೆಲುವು ಸಾಧಿಸಿದ್ದಾರೆ. ಈ ಬಾರಿ ಒಟ್ಟು 1315 ಮತಗಳ ಚಲಾವಣೆಯಾಗಿವೆ. 2013 ರಲ್ಲಿ 1351 ಮತಗಳ ಚಲಾವಣೆಗೊಂಡಿದ್ದವು. ಕೆಎಸ್ಸಿಎ ಇತಿಹಾಸದಲ್ಲಿ 2013ರಲ್ಲೇ ಅತಿ ಹೆಚ್ಚು ಮತದಾನವಾಗಿತ್ತು.

ಪರಾಜಿತ ಅಥ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ವೆಂಕಟೇಶ್ ಪ್ರಸಾದ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಶಾಂತಕುಮಾರ್ ಅವರು ಕೋರ್ಟ್ ಮೊರೆ ಹೋಗಿದ್ದು, ಶಾಂತಕುಮಾರ್ ಅವರ ನಾಮಪತ್ರ ಸಿಂಧುಗೊಳಿಸಿ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು. ಅದರಂತೆ ಇಂದು ನಡೆದ ಚುನಾವಣೆಯಲ್ಲೂ ಸಹ ವೆಂಕಟೇಶ್ ಪ್ರಸಾದ್ ಗೆದ್ದು ಬೀಗಿದ್ದಾರೆ.

12 ವರ್ಷಗಳ ನಂತರ ಮತ್ತೆ ಕೆಎಸ್‌ಸಿಎಗೆ ಅಧ್ಯಕ್ಷರಾದ ವೆಂಕಟೇಶ್‌ ಪ್ರಸಾದ್‌

ವೆಂಕಟೇಶ್‌ ಈ ಹಿಂದೆ 2010ರಿಂದ 2013ರ ವರೆಗೆ ಕೆಎಸ್‌ಸಿಎ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಆಗ ಅನಿಲ್‌ ಕುಂಬ್ಳೆ ಅಧ್ಯಕ್ಷರಾಗಿದ್ದರು. ಜಾವಗಲ್‌ ಶ್ರೀನಾಥ್‌ ಕಾರ್ಯದರ್ಶಿಯಾಗಿದ್ದರು. ಇದೀಗ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ‌ 12 ವರ್ಷಗಳ ಬಳಿಕ ಮತ್ತೆ ಕೆಎಸ್‌ಸಿಎಗೆ ವಾಪಸ್ಸಾಗಿದ್ದಾರೆ.

1994ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ವೆಂಕಿ, ಟೀಂ ಇಂಡಿಯಾದ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. 33 ಟೆಸ್ಟ್ ಪಂದ್ಯದಿಂದ 96 ವಿಕೆಟ್ ಕಬಳಿಸಿದ್ದರೆ, 161 ಏಕದಿನ ಪಂದ್ಯದಿಂದ 196 ವಿಕೆಟ್ ಉರುಳಿಸಿದ್ದಾರೆ.

Continue Reading

Sports

ಮೌನ ಮುರಿದು ಮದುವೆ ವಂದತಿಗಳಿಗೆ ಫುಲ್‌ಸ್ಟಾಪ್‌ ಇಟ್ಟ ಸ್ಮೃತಿ ಮಂದಾನ

Published

on

ಮುಂಬೈ: ಸಂಗೀತ ಸಂಯೋಜಕ ಪಲಾಶ್ ‌ಮುಚ್ಚಲ್‌ ಅವರೊಂದಿಗಿನ ಮದುವೆ ಮುಂದೂಡಿಕೆ ಬಗ್ಗೆ ಕೆಲ ದಿನಗಳಿಂದ ಹರಿದಾಡುತ್ತಿದ್ದ ನಾನಾ ವದಂತಿಗಳಿಗೆ ಟೀಂ ಇಂಡಿಯಾ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂದಾನ  ತೆರೆ ಎಳೆದಿದ್ದಾರೆ.

ಮದುವೆಯನ್ನು ರದ್ದುಗೊಳಿಸಿರುವುದಾಗಿ ಖುದ್ದು ಸ್ಮೃತಿ ಅವರೇ ತಮ್ಮ ಇನ್‌ಸ್ಟಾಗ್ರಾಮ್‌  ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಎಲ್ಲಾ ವದಂತಿಗಳಿಗೆ ಫುಲ್‌ಸ್ಟಾಪ್‌ ಇಟ್ಟಿದ್ದಾರೆ. ಅಲ್ಲದೇ ಈ ಹೇಳಿಕೆಯೊಂದಿಗೆ ಈ ವಿಷಯ ಕೊನೆಗೊಳಿಸಲು ಬಯಸುತ್ತೇನೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಸ್ಮೃತಿಮಂದಾನ  ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ಏನಿದೆ?

ಕಳೆದ ಕೆಲ ವಾರಗಳಿಂದ ನನ್ನ ಜೀವನದ ಬಗ್ಗೆ ಸಾಕಷ್ಟು ಊಹಾಪೋಹಗಳು ಹಬ್ಬಿವೆ. ಹಾಗಾಗಿ ಈ ಸಮಯದಲ್ಲಿ ನಾನು ಮಾತನಾಡುವುದು ಮುಖ್ಯ ಅಂತ ಭಾವಿಸಿ ಮಾತನಾಡ್ತಿದ್ದೇನೆ. ನಾನು ತುಂಬಾ ಖಾಸಗಿ ವ್ಯಕ್ತಿ, ಅದನ್ನ ಹಾಗೆಯೇ ಇಡಲು ಬಯಸುತ್ತೇನೆ. ಆದರೆ ಮದುವೆಯನ್ನ ರದ್ದುಗೊಳಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ.

ಈ ವಿಚಾರವನ್ನು ಇಲ್ಲಿಗೆ ಮುಗಿಸಲು ನಾನು ಬಯಸುತ್ತೇನೆ, ನೀವೂ ಕೂಡ ಈ ವಿಷಯವನ್ನ ಇಲ್ಲಿಗೆ ಬಿಡಬೇಕೆಂದು ಮನವಿ ಮಾಡುತ್ತೇನೆ. ದಯವಿಟ್ಟು ಈ ಸಮಯದಲ್ಲಿ ಎರಡೂ ಕುಟುಂಬಗಳ ಗೌಪ್ಯತೆ ಗೌರವಿಸಿ. ನಮ್ಮದೇ ಹಾದಿಯಲ್ಲಿ ಮುಂದುವರಿಯಲು ನಮಗೆ ಅವಕಾಶ ಮಾಡಿಕೊಡಿ ಎಂದು ವಿನಂತಿಸಿಕೊಳ್ಳುತ್ತೇನೆ.

ನಮ್ಮೆಲ್ಲರನ್ನೂ ಮತ್ತು ನನ್ನನ್ನು ಮುನ್ನಡೆಸುವ ಒಂದು ಉನ್ನತ ಉದ್ದೇಶವಿದೆ ಎಂದು ನಾನು ನಂಬುತ್ತೇನೆ. ಅದು ಯಾವಾಗಲೂ ನನ್ನ ದೇಶವನ್ನು ಉನ್ನತ ಮಟ್ಟದಲ್ಲಿ ಪ್ರತಿನಿಧಿಸುತ್ತಿದೆ. ಸಾಧ್ಯವಾದಷ್ಟು ಕಾಲ ಭಾರತಕ್ಕಾಗಿ ಆಟವಾಡುವುದನ್ನ ಮತ್ತು ಟ್ರೋಫಿಗಳನ್ನು ಗೆಲ್ಲುವುದನ್ನು ಮುಂದುವರಿಸಬೇಕೆಂದು ನಾನು ಭಾವಿಸುತ್ತೇನೆ. ಅದರ ಕಡೆಗೆಯೇ ನನ್ನ ಗಮನ ಶಾಶ್ವತವಾಗಿರುತ್ತದೆ. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು. ಇದು ಮುಂದುವರಿಯುವ ಸಮಯ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಹಿಂದೆ ನಡೆದಿದ್ದು ಏನು?

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ನ.23ರಂದು ಸ್ಮೃತಿ-ಪಲಾಶ್‌ ಮುಚ್ಚಲ್‌ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದರು. ಆದರೆ ಅಲ್ಲಿ ಆಗಿದ್ದೇ ಬೇರೆ. ಮದುವೆಗೆ ಕೆಲ ಗಂಟೆಗಳು ಬಾಕಿಯಿರುವಾಗಲೇ ಮಂಧಾನ ತಂದೆಗೆ ಲಘು ಹೃದಯಾಘಾತವಾಗಿತ್ತು. ಅವರು ಸಂಪೂರ್ಣ ಗುಣಮುಖರಾಗುವವರೆಗೆ ಮದುವೆ ಸಮಾರಂಭ ಮುಂದೂಡಲು ಸ್ಮೃತಿ ನಿರ್ಧರಿಸಿದ್ದರು. ಈ ಬೆನ್ನಲ್ಲೇ ಸ್ಮೃತಿ ಮಂಧಾನ ತನ್ನ ಇನ್‌ಸ್ಟಾಗ್ರಾಂ ಖಾತೆಯಿಂದ ಪಲಾಶ್‌ ಹಾಗೂ ವಿವಾಹಕ್ಕೆ ಸಂಬಂಧಿಸಿದ ಎಲ್ಲಾ ಫೋಟೋ ಹಾಗೂ ವಿಡಿಯೋಗಳನ್ನು ಡಿಲೀಟ್ ಮಾಡಿದ್ದರು.

ಇದರ ಮಧ್ಯೆ ಸ್ಮೃತಿ ಅವರ ಜೊತೆ ಮದುವೆ ನಿಶ್ಚಯವಾಗಿದ್ದರೂ ಪಲಾಶ್‌ ಮುಚ್ಚಲ್ ಬೇರೊಬ್ಬ ಯುವತಿ ಜೊತೆ ಚಾಟ್ ಮಾಡಿದ್ದಾರೆ ಎನ್ನಲಾದ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಬಳಿಕ ಪಲಾಶ್‌ ತನ್ನ ಎಕ್ಸ್‌ ಗರ್ಲ್‌ಫ್ರೆಂಡ್‌ ಪ್ಲಾಸ್ಟಿಕ್ ಸರ್ಜನ್ ಬಿರ್ವಾ ಶಾ ಅವರಿಗೆ ಪ್ರಪೋಸ್‌ ಮಾಡಿದ್ದ ಫೋಟೋಗಳು ಹಾಗೂ ಆಕೆಯೊಂದಿಗೆ ರೊಮ್ಯಾಂಟಿಕ್‌ ಮೂಡ್‌ನಲ್ಲಿದ್ದ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದವು. ಬಳಿಕ ಮದುವೆ ರದ್ದಾಗಿದೆ ಎಂಬ ವಿಷಯ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ ಆಗುತ್ತಲೇ ಇತ್ತು. ಇದೀಗ ಈ ಎಲ್ಲ ವದಂತಿಗಳಿಗೆ ಖುದ್ದು ಸ್ಮೃತಿ ಮಂದಾನ ಅವರೇ ತೆರೆ ಎಳೆದಿದ್ದಾರೆ.

Continue Reading

Sports

ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಡಿಕೆಶಿ : ಬೆಂಗಳೂರಿನಲ್ಲೇ ಐಪಿಎಲ್‌ ಫಿಕ್ಸ್‌ ಡಿಸಿಎಂ ಘೋಷಣೆ

Published

on

ಬೆಂಗಳೂರು : ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಒಂದನ್ನು ಡಿಕೆಶಿ ನೀಡಿದ್ದಾರೆ. ಹೌದು, ಬೆಂಗಳೂರಿನಲ್ಲೇ ಐಪಿಎಲ್‌ ಫಿಕ್ಸ್‌ ಎಂದು ಸ್ವತಃ ಡಿಸಿಎಂ ಘೋಷಣೆ ಮಾಡಿದ್ದಾರೆ.

ಹೌದು, 19ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. 2026ರ ಐಪಿಎಲ್‌ಗೆ ಆರ್‌ಸಿಬಿ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿದೆ ಎಂದು ಖುದ್ದು ಡಿಸಿಎಂ ಡಿಕೆ ಶಿವಕುಮಾರ್‌ ಘೋಷಣೆ ಮಾಡಿದ್ದಾರೆ.

ನಗರದಲ್ಲಿ ಕೆಎಸ್‌ಸಿಎ ಚುನಾವಣೆಯ ಮತದಾನದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್‌, ನಾನು ಕ್ರಿಕೆಟ್‌ ಲವರ್‌, ಆರ್‌ಸಿಬಿ ನಮ್ಮ ಹೆಮ್ಮೆ. ಯಾವುದೇ ಕಾರಣಕ್ಕೂ ನಮ್ಮಿಂದ ಐಪಿಎಲ್‌ ಕೈ ತಪ್ಪೋದಿಲ್ಲ. ಬೆಂಗಳೂರಿನಲ್ಲೇ ನಡೆಯುತ್ತೆ, ನಾನ್‌ ಎಲ್ಲಾ ಮಾತನಾಡ್ತೀನಿ ಅಂತ ತಿಳಿಸಿದ್ದಾರೆ.

Continue Reading

Sports

IND vs SA ODI: 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ

Published

on

ಆಂಧ್ರ ಪ್ರದೇಶ: ವಿಶಾಖಪಟ್ಟಣಂನಲ್ಲಿ ಇಂದು ನಡೆದ ಟೀಂ ಇಂಡಿಯಾ ಮತ್ತು ಸೌತ್‌ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 9 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ  ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡು ಭರ್ಜರಿ ಗೆಲುವು ಸಾಧಿಸಿದೆ.

ಕನ್ನಡಿಗ ಕೆ.ಎಲ್. ರಾಹುಲ್ ನೇತೃತ್ವದಲ್ಲಿ ಇಂದು ವಿಶಾಖಪಟ್ಟಣಂನ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಪ್ರಿಕಾ ತಂಡ ಪೂರ್ಣ 50 ಓವರ್​ಗಳನ್ನು ಆಡದೆ 47.5 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ಗಳನ್ನು  ಕಳೆದುಕೊಂಡು 270 ರನ್ ಕಲೆಹಾಕಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 1 ವಿಕೆಟ್ ಕಳೆದುಕೊಂಡು 39.5 ಓವರ್​ಗಳಲ್ಲಿ ಜಯಗಳಿಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಟೆಸ್ಟ್ ಸರಣಿಯಲ್ಲಿನ ಹೀನಾಯ ಸೋಲಿಗೆ ಸೇಡು ತೀರಿಸಿಕೊಂಡಿದೆ.

Continue Reading

Trending

error: Content is protected !!