Connect with us

Sports

KSCA ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ನೇಮಕ

Published

on

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಅಧ್ಯಕ್ಷ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್‌  ಭರ್ಜರಿ ಗೆಲುವು ಸಾಧಿಸಿದ್ದಾರೆ.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸೇರಿ ಒಟ್ಟು 16 ಸ್ಥಾನಗಳಿಗೆ ಇಂದು  ಬೆಳಗ್ಗೆಯಿಂದ ಸಂಜೆ ವರೆಗೆ ಮತದಾನ ನಡೆದಿದ್ದು, ಇದೀಗ ಮತದಾನ ಎಣಿಕೆಯಲ್ಲಿ ವೆಂಕಟೇಶ್ ಪ್ರಸಾದ್‌ 191 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಇದರೊಂದಿಗೆ ವೆಂಕಟೇಶ್ ಪ್ರಸಾದ್  12 ವರ್ಷಗಳ ನಂತರ ಮತ್ತೆ  ಅಧ್ಯಕ್ಷರಾಗಿ ಕೆಎಸ್‌ಸಿಎಗೆ ವಾಪಸ್ಸಾಗಿದ್ದಾರೆ.

ಮಾಜಿ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್ ಮತ್ತು ಅನಿಲ್ ಕುಂಬ್ಳೆ ಬಣದ ವೆಂಕಟೇಶ್ ಪ್ರಸಾದ್‌ಗೆ ಒಟ್ಟು 749 ಮತಗಳು ಬಿದ್ದಿದ್ದರೆ, ಬ್ರಿಜೇಶ್ ಪಾಟೀಲ್ ಬಣದ ಶಾಂತಕುಮಾರ್‌ಗೆ 558 ಮತಗಳು ಲಭವಿಸಿವೆ. ಇದರೊಂದಿಗೆ ವೆಂಕಟೇಶ್ ಪ್ರಸಾದ್‌ 191 ಮತಗಳ ಅಂತರದಿಂದ ವಿರೋಧಿ ಶಾಂತಕುಮಾರ್‌ ಅವರನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನೂ ವೆಂಕಟೇಶ್ ಪ್ರಸಾದ್ ಬಣದಿಂದ ಸುಜಿತ್ ಸೋಮಸುಂದರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರೆ, ಮಧುಕರ್ ಅವರು ಖಜಾಂಚಿಯಾಗಿ ನೇಮಕವಾಗಿದ್ದಾರೆ. ಅಲ್ಲದೇ ಕೆಎಸ್‌ಸಿಎ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಮೆನನ್ ಗೆಲುವು ಸಾಧಿಸಿದ್ದಾರೆ. ಈ ಬಾರಿ ಒಟ್ಟು 1315 ಮತಗಳ ಚಲಾವಣೆಯಾಗಿವೆ. 2013 ರಲ್ಲಿ 1351 ಮತಗಳ ಚಲಾವಣೆಗೊಂಡಿದ್ದವು. ಕೆಎಸ್ಸಿಎ ಇತಿಹಾಸದಲ್ಲಿ 2013ರಲ್ಲೇ ಅತಿ ಹೆಚ್ಚು ಮತದಾನವಾಗಿತ್ತು.

ಪರಾಜಿತ ಅಥ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ವೆಂಕಟೇಶ್ ಪ್ರಸಾದ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಶಾಂತಕುಮಾರ್ ಅವರು ಕೋರ್ಟ್ ಮೊರೆ ಹೋಗಿದ್ದು, ಶಾಂತಕುಮಾರ್ ಅವರ ನಾಮಪತ್ರ ಸಿಂಧುಗೊಳಿಸಿ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು. ಅದರಂತೆ ಇಂದು ನಡೆದ ಚುನಾವಣೆಯಲ್ಲೂ ಸಹ ವೆಂಕಟೇಶ್ ಪ್ರಸಾದ್ ಗೆದ್ದು ಬೀಗಿದ್ದಾರೆ.

12 ವರ್ಷಗಳ ನಂತರ ಮತ್ತೆ ಕೆಎಸ್‌ಸಿಎಗೆ ಅಧ್ಯಕ್ಷರಾದ ವೆಂಕಟೇಶ್‌ ಪ್ರಸಾದ್‌

ವೆಂಕಟೇಶ್‌ ಈ ಹಿಂದೆ 2010ರಿಂದ 2013ರ ವರೆಗೆ ಕೆಎಸ್‌ಸಿಎ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಆಗ ಅನಿಲ್‌ ಕುಂಬ್ಳೆ ಅಧ್ಯಕ್ಷರಾಗಿದ್ದರು. ಜಾವಗಲ್‌ ಶ್ರೀನಾಥ್‌ ಕಾರ್ಯದರ್ಶಿಯಾಗಿದ್ದರು. ಇದೀಗ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ‌ 12 ವರ್ಷಗಳ ಬಳಿಕ ಮತ್ತೆ ಕೆಎಸ್‌ಸಿಎಗೆ ವಾಪಸ್ಸಾಗಿದ್ದಾರೆ.

1994ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ವೆಂಕಿ, ಟೀಂ ಇಂಡಿಯಾದ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. 33 ಟೆಸ್ಟ್ ಪಂದ್ಯದಿಂದ 96 ವಿಕೆಟ್ ಕಬಳಿಸಿದ್ದರೆ, 161 ಏಕದಿನ ಪಂದ್ಯದಿಂದ 196 ವಿಕೆಟ್ ಉರುಳಿಸಿದ್ದಾರೆ.

Continue Reading

Sports

IPL-2026ರ ಪಂದ್ಯಗಳು ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಫಿಕ್ಸ್‌: KSCA ಅಧಿಕೃತ ಘೋಷಣೆ

Published

on

ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ  ಐಪಿಎಲ್- 2026 ಪಂದ್ಯಗಳು ನಡೆಯಲಿವೆ ಎಂದು ಕೆಎಸ್‌ಸಿಎ ಅಧಿಕೃತವಾಗಿ ಘೋಷಣೆ ಮಾಡಿದೆ.

ಬೆಂಗಳೂರಿನಲ್ಲಿ ಇಂದುನಡೆದ ಸುದ್ದಿಗೋಷ್ಠಿಯಲ್ಲಿ ಕೆಎಸ್‍ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಜಿಬಿಎ, ಬೆಸ್ಕಾಂ, ಜಲಮಂಡಳಿಗೂ ಮನವಿ ಮಾಡಿದ್ದೇವೆ. ಕೆಎಸ್‍ಸಿಎ ಸುರಕ್ಷತೆಗೆ ಅಧಿಕ ಆದ್ಯತೆ ನೀಡಲಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಇತ್ತೀಚೆಗೆ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್, ಅಂತಾರಾಷ್ಟ್ರೀಯ ಪಂದ್ಯಗಳನ್ನು ನಡೆಸಲು ಅನುಮತಿ ನೀಡಿತ್ತು.

Continue Reading

National

ವಿರಾಟ್‌ ಕೊಹ್ಲಿ ಈಗ ವಿಶ್ವದ ನಂ.1 ಬ್ಯಾಟ್ಸ್‌ಮನ್‌

Published

on

ಮುಂಬೈ: ರನ್‌ ಮಿಷಿನ್‌ ವಿರಾಟ್‌ ಕೊಹ್ಲಿ ತಮ್ಮ 37ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟರ್‌ ಆಗಿ ಹೊರಹೊಮ್ಮಿದ್ದಾರೆ.

ಇಂದು ಬಿಡುಗಡೆಯಾದ ನೂತನ ಐಸಿಸಿ  ಏಕದಿನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ  785 ಅಂಕ ಪಡೆಯುವ ಮೂಲಕ ಅಗ್ರಸ್ಥಾನಕ್ಕೇರಿದ್ದಾರೆ.

2013ರಲ್ಲಿ ಮೊಟ್ಟ ಮೊದಲ ಬಾರಿಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಪಡೆದಿದ್ದ ಕೊಹ್ಲಿ, 2018ರಲ್ಲಿ ಇಂಗ್ಲೆಂಡ್‌ ವಿರುದ್ಧ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಪುನಃ ಅಗ್ರಸ್ಥಾನಕ್ಕೆ ಜಿಗಿದಿದ್ದರು. ಆ ನಂತರ ಟಾಪ್‌ 11 ರಲ್ಲಿ ಅನೇಕ ಸ್ಥಾನಗಳಲ್ಲಿದ್ದ ಕೊಹ್ಲಿ 5 ವರ್ಷಗಳ ಬಳಿಕ ಮತ್ತೆ ನಂ.1 ಪಟ್ಟಕ್ಕೇರಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಮೊದಲ ಎರಡೂ ಪಂದ್ಯಗಳಲ್ಲಿ ಕೊಹ್ಲಿ ಡಕೌಟ್‌ ಆಗಿದ್ದರು. ಮೂರನೇ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದರು. ಇನ್ನೂ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 2 ಶತಕ, 1 ಅರ್ಧಶತಕ ಗಳಿಸುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದೀಗ ಕಿವೀಸ್‌ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 91 ಎಸೆತಗಳಲ್ಲಿ 93 ರನ್‌ ಗಳಿಸಿದ್ದರು. ಈ ಮೂಲಕ 785 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಮೊದಲು ಐದು ಸ್ಥಾನಗಳಲ್ಲಿರುವ ಆಟಗಾರರು ಯಾರು?

ಹೊಸದಾಗಿ ಬಿಡುಗಡೆಯಾದ ಐಸಿಸಿ ಏಕದಿನ ರ‍್ಯಾಂಕಿಗ್‌ನಲ್ಲಿ 785 ಅಂಕಗಳೊಂದಿಗೆ ಕಿಂಗ್‌ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, ಡೇರಿಲ್‌ ಮಿಚೆಲ್‌ 784, ರೋಹಿತ್‌ ಶರ್ಮಾ 775, ಇಬ್ರಾಹಿಂ ಜದ್ರಾನ್ 764, ಶುಭಮನ್‌ ಗಿಲ್‌ 725 ಅಂಕ ಅಂಕಗಳೊಂದಿಗೆ ಮೊದಲ 5 ಸ್ಥಾನಗಳಲ್ಲಿದ್ದಾರೆ.

Continue Reading

Sports

ಐಸಿಸಿ ಅಂಡರ್-19 ವಿಶ್ವಕಪ್: ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ BCCI

Published

on

ಮುಂಬೈ:  2026 ರಂದು ನಡೆಯಲಿರುವ ಟಿ-20 ವಿಶ್ವಕಪ್‌ಗೆ ಬಿಸಿಸಿಐ (BCCI) ಕೆಲವೇ ದಿನಗಳ ಹಿಂದೆ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವನ್ನು ಪ್ರಕಟಿಸಿತ್ತು. ಆದರೆ ಅದಕ್ಕೂ ಮೊದಲು ಐಸಿಸಿ ಅಂಡರ್-19 ವಿಶ್ವಕಪ್  ನಡೆಯಲಿದ್ದು, ಈ ವಿಶ್ವಕಪ್‌ಗಾಗಿ ಟೀಂ ಇಂಡಿಯಾ ಯುವ ತಂಡವನ್ನು ಇದೀಗ ಪ್ರಕಟಿಸಲಾಗಿದೆ.

 

ಬಿಸಿಸಿಐ ಇಂದು ಈ ಟೂರ್ನಮೆಂಟ್‌ಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಘೋಷಿಸಿದೆ. ಇದರಲ್ಲಿ 14 ವರ್ಷದ ಸ್ಟಾರ್ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಸೇರಿದ್ದು, ಎಂದಿನಂತೆ ಆಯುಷ್ ಮ್ಹಾತ್ರೆ ಅವರಿಗೆ ಇನ್ನೊಮ್ಮೆ ತಂಡದ ನಾಯಕತ್ವ ನೀಡಲಾಗಿದೆ. ಜನವರಿ. 15 ರಂದು ಯುನೈಟೆಡ್ ಸ್ಟೇಟ್ಸ್ ವಿರುದ್ಧದ ಗುಂಪು ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ವಿಶ್ವಕಪ್ ಅನ್ನು ಆಡಲಿದೆ.

ಬಿ ಗುಂಪಿನಲ್ಲಿ ಟೀಂ ಇಂಡಿಯಾ ತಂಡ

ಅಂಡರ್-19 ವಿಶ್ವಕಪ್ ಜ. 15 ರಿಂದ ಫೆ. 6 ರವರೆಗೆ ಜಿಂಬಾಬ್ವೆ ಹಾಗೂ ನಮೀಬಿಯಾದಲ್ಲಿ ನಡೆಯಲಿದೆ. 16 ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಐದು ಬಾರಿ ಅಂಡರ್-19 ವಿಶ್ವಕಪ್ ವಿಜೇತ ಭಾರತವನ್ನು ನ್ಯೂಜಿಲೆಂಡ್, ಯುನೈಟೆಡ್ ಸ್ಟೇಟ್ಸ್ ಮತ್ತು ಬಾಂಗ್ಲಾದೇಶದೊಂದಿಗೆ ಗ್ರೂಪ್ ಬಿಯಲ್ಲಿ ಇರಿಸಲಾಗಿದೆ.

ಟೀಂ ಇಂಡಿಯಾ ಜ. 15 ರಂದು ಅಮೆರಿಕ ವಿರುದ್ಧ ತನ್ನ ಅಭಿಯಾನವನ್ನು ಆರಂಭಿಸಲಿದೆ. ಬಳಿಕ ತಂಡವು ಜ. 17 ರಂದು ಬಾಂಗ್ಲಾದೇಶ ಹಾಗೂ ಜ. 24 ರಂದು ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. ಟೂರ್ನಿಯ ಫೈನಲ್ ಪಂದ್ಯ ಹರಾರೆಯಲ್ಲಿ ನಡೆಯಲಿದೆ.

ಆಯುಷ್ ಮ್ಹಾತ್ರೆ (ನಾಯಕ), ವಿಹಾನ್ ಮಲ್ಹೋತ್ರಾ (ಉಪನಾಯಕ), ವೈಭವ್ ಸೂರ್ಯವಂಶಿ, ಆರನ್ ಜಾರ್ಜ್, ವೇದಾಂತ್ ತ್ರಿವೇದಿ, ಅಭಿಜ್ಞಾನ್ ಕುಂಡು, ಹರ್ವಂಶ್ ಸಿಂಗ್, ಆರ್‌ಎಸ್ ಅಂಬರೀಶ್, ಕಾನಿಷ್ಕ್ ಚೌಹಾಣ್, ಖಿಲಾನ್ ಪಟೇಲ್, ಮೊಹಮ್ಮದ್ ಎನಾನ್, ಹೆನಿಲ್ ಪಟೇಲ್, ಡಿ.ದೀಪೇಶ್, ಕಿಶನ್ ಕುಮಾರ್ ಸಿಂಗ್, ಉದ್ಧವ್ ಮೋಹನ್ ಅವರು ಟೀಂ  ಇಂಡಿಯಾ ಪರ ಆಡಲಿದ್ದಾರೆ.
Continue Reading

Trending

error: Content is protected !!