Connect with us

Chamarajanagar

ಗುಂಡಲ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮಾಜಿ ಶಾಸಕ ಆರ್.ನರೇಂದ್ರ

Published

on

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ಗ್ರಾಮದಿಂದ ಕೀರೆ ಪಾತಿ ಗ್ರಾಮದವರೆಗೆ ಇರುವ 20 ಕೆರೆಗಳಿಗೆ ನೀರು ತುಂಬಿಸಲು ಕ್ಯಾಬಿನೆಟ್ ನಲ್ಲಿ ಅನುಮೋದನೆ ನೀಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯ ವ್ಯಾಪ್ತಿಯ ಅಚ್ಚುಕಟ್ಟು ರೈತರುಗಳು ಹಮ್ಮಿಕೊಂಡಿದ್ದ ಬಾಗಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈತರುಗಳು ಆರ್ಥಿಕವಾಗಿ ಸದೃಢರಾದರೆ ಮಾತ್ರ ಕ್ಷೇತ್ರ ಅಭಿವೃದ್ಧಿ ಆಗುತ್ತದೆ ಎಂಬ ದೂರದೃಷ್ಟಿಯ ಫಲವಾಗಿ ಗುಂಡಾಲ್ ಜಲಾಶಯ, ಹುಬ್ಬೆ ಹುಣಸೆ, ರಾಮನಗುಡ್ಡ, ಉಡುತೊರೆ ಜಲಾಶಯ, ಕೌಳಿ ಹಳ್ಳ ಡ್ಯಾಮ್, ಹೂಗ್ಯಂ ಜಲಾಶಯ, ಕಿರೇ ಪಾತಿ ಜಲಾಶಯ ಸೇರಿದಂತೆ ಗೋಪಿನಾಥಂ ಜಲಾಶಯವನ್ನು ನಮ್ಮ ತಂದೆಯವರಾದ ದಿ.ಜಿ ರಾಜುಗೌಡ ಹಾಗೂ ದೊಡ್ಡಪ್ಪ ದಿ. ಜಿ.ವೆಂಕಟೇಗೌಡರವರ ಶಾಸಕರಾಗಿದ್ದಾಗ ನಿರ್ಮಾಣ ಮಾಡಲಾಗಿದೆ. ಹುಬ್ಬೆ ಹುಣಸೆ ಜಲಾಶಯ ಮಾತ್ರ ನನ್ನ ಅವಧಿಯಲ್ಲಿ 5.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದೇನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲಾ ಜಲಾಶಯಗಳಿಗೆ ನೀರು ತುಂಬಿದರೆ 40 ಸಾವಿರ ಎಕರೆ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಸಿಗಲಿದೆ. ಗುಂಡಾಲ್ ಜಲಾಶಯ ನಿರ್ಮಾಣ ಮಾಡಿ 45 ವರ್ಷಗಳಾಗಿದೆ. ಆದರೆ ಒಂದೇ ಒಂದು ಬಾರಿ ಜಲಾಶಯ ಭರ್ತಿಯಾಗಿತ್ತು. ಉಳಿದ ವರ್ಷಗಳಲ್ಲಿ ಬರಗಾಲ ತತ್ತರಿಸಿದ್ದ ವೇಳೆ ರೈತರಿಗೆ ತೊಂದರೆಯಾಗಿತ್ತು. ಈ ನಿಟ್ಟಿನಲ್ಲಿ ಮೊದಲ ಹಂತದಲ್ಲಿ 127 ಕೋಟಿ ವೆಚ್ಚದಲ್ಲಿ ಗುಂಡಾಲ್ ರಾಮನಗುಡ್ಡ ಹುಬ್ಬೆ ಹುಣಸೆ ಜಲಾಶಯಗಳಿಗೆ ನದಿ ಮೂಲದಿಂದ ನೀರು ತುಂಬಿಸುವ ಯೋಜನೆಗೆ ಅನುಮೋದನೆ ಪಡೆದು ಕಾಮಗಾರಿ ಅಂತಿಮ ಹಂತದಲ್ಲಿದೆ. ಅನುದಾನದ ಕೊರತೆಯಿಂದ ರಾಮನ ಗುಡ್ಡ ಹಾಗೂ ಹುಬ್ಬೆ ಹುಣಸೆ ಜಲಾಶಯಕ್ಕೆ ನೀರು ತುಂಬಿಸುವ ಕಾಮಗಾರಿ ಸ್ಥಗಿತವಾಗಿದ ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಜಲ ಸಂಪನ್ಮೂಲ ಸಚಿವರಾದ ಡಿ.ಕೆ ಶಿವಕುಮಾರ್ ಅವರಿಗೆ ಒಂಬತ್ತು ಕೋಟಿ ಅನುದಾನ ನೀಡುವಂತೆ ಮನವಿ ನೀಡಲಾಗಿದ್ದು ಅವರು ಸಹ ಅನುದಾನ ನೀಡುವ ಭರವಸೆ ನೀಡಿದ್ದಾರೆ. ಅನುದಾನ ನೀಡಿದ ತಕ್ಷಣ ಕಾಮಗಾರಿ ಪೂರ್ಣಗೊಂಡರೆ ಸುಮಾರು 20,000 ಎಕರೆಗೆ ನೀರಾವರಿ ಸೌಲಭ್ಯ ಸಿಗಲಿದೆ ಎಂದರು.

1400 ಕೋಟಿ ಯೋಜನೆಗಳಿಗೆ ಕ್ರಿಯಾಯೋಜನೆ: ನಾನು ಮೂರನೇ ಬಾರಿ ಶಾಸಕನಾಗಿದ್ದಾಗ ಉಡುತೊರೆ ಜಲಾಶಯಕ್ಕೆ ಕೆರೆ ನೀರು ತುಂಬಿಸಲು 200 ಕೋಟಿ ವೆಚ್ಚದಲ್ಲಿ ಕ್ರಿಯಾಯೋಜನೆ ಮಾಡಿ ಕಳುಹಿಸಲಾಗಿತ್ತು. ಅನುಮೋದನೆ ಹಂತಕ್ಕೆ ತಲುಪಿದ ನಂತರ ಅದು ಸ್ಥಗಿತವಾಗಿದೆ. ಈ ಬಾರಿ ಈ ಯೋಜನೆಗೂ ಅನುದಾನ ನೀಡುವಂತೆ ಮನವಿ ಮಾಡಿದ್ದೇನೆ ಇದಲ್ಲದೆ ಮುಖ್ಯ ಕಾಲುವೆ, ತೋಬು ಕಾಲುವೆ, ಹಾಗೂ ಕಾಲುವೆಗಳಲ್ಲಿ ತುಂಬಿರುವ ಹೂಳು ತೆಗೆಯಲು ಅನುದಾನ ಕೇಳಿದ್ದು ಸರ್ಕಾರ ಅನುದಾನ ನೀಡಿದರೆ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದರು.

12 ಹಾಡಿಗಳಿಗೆ ವಿದ್ಯುತ್ ಸಂಪರ್ಕ: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 32 ಹಾಡಿಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲದೆ ತೊಂದರೆ ಅನುಭವಿಸುತ್ತಿದ್ದರು ನಾನು ಶಾಸಕನಾಗಿ ಆಯ್ಕೆಯಾದ ನಂತರ 20 ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕೊಡಿಸಿದ್ದೇನೆ. ಉಳಿದ 12 ಹಾಡುಗಳಿಗೂ ವಿದ್ಯುತ್ ಸಂಪರ್ಕ ನೀಡಲು ಕ್ರಿಯೆ ಯೋಜನೆ ಮಾಡಿ ಅನುಮೋದನೆಗಾಗಿ ಕಳುಹಿಸಲಾಗಿತ್ತು .ಈಗ ಅನುಮೋದನೆ ಸಿಕ್ಕಿದ್ದು ಅತಿ ಶೀಘ್ರದಲ್ಲಿಯೇ ಈ ಹಾಡಿಗಳಿಗೂ ವಿದ್ಯುತ್ ಸಂಪರ್ಕ ಸಿಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಕೊಳ್ಳೇಗಾಲ, ಯಳಂದೂರು, ಹನೂರು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕೆ ಸಿ ಮಾದೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಗೋವಿಂದ, ಪಟ್ಟಣ ಪಂಚಾಯಿತಿ ಸದಸ್ಯರಾದ ಗಿರೀಶ್ ಹರೀಶ್ ನವೀನ್, ಮುಖಂಡರಾದ ವೆಂಕಟರಮಣ ನಾಯ್ಡು, ಕಾಮಗೆರೆ ಕುಮಾರ್ ಗೌಡ, ನವನೀತ್ ಗೌಡ, ಕಾಮಗೆರೆ ರವಿ, ಪ್ರದೀಪ್, ಉದ್ದನೂರು ಸಿದ್ದರಾಜು, ಚೇತನ್ ದೊರೆರಾಜು, ಚಿಕ್ಕ ಮಾಲಾಪುರ ಅಂಕರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.

Continue Reading

Chamarajanagar

ಪಿಎಂ ಶ್ರಮ ಯೋಗಿ ಮಾನ್‌ಧನ್ ಯೋಜನೆ ಸದುಪಯೋಗ ಪಡೆದುಕೊಳ್ಳಿ: ಅಮ್ಜದ್ ಪಾಷಾ

Published

on

ಯಳಂದೂರು: ಪ್ರಧಾನಮಂತ್ರಿ ಶ್ರಮ ಯೋಗಿ ಮನ್‌ಧನ್ ಯೋಜನೆಯ ಮೂಲಕ ಅಸಂಘಟಿತ ವಲಯ ಕಾರ್ಮಿಕರು 60 ವರ್ಷದ ನಂತರ ಮಾಸಿಕ ಪಿಂಚಣಿ ಮೂರು ಸಾವಿರ ರೂಪಾಯಿಗಳನ್ನು ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆ ಅಭಿಯಾನ ವ್ಯವಸ್ಥಾಪಕ ಅಮ್ಜದ್ ಪಾಷಾ ತಿಳಿಸಿದರು.

ಅವರು ಪಟ್ಟಣದ ಸಿಡಿಎಸ್ ಸಮುದಾಯ ಭವನದಲ್ಲಿ ಪಟ್ಟಣ ಪಂಚಾಯಿತಿ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಚಾಮರಾಜನಗರ ವತಿಯಿಂದ ಹಮ್ಮಿಕೊಂಡಿದ್ದ ಸ್ವ ನಿಧಿ ಸೇ ಸಮೃದ್ಧಿ ಯೋಜನೆ ಅಡಿ ಬೀದಿ ಬದಿ ವ್ಯಾಪಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯ ಜೋಡಣೆ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ ಫಲಾನುಭವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3000 ರೂಪಾಯಿಗಳ ಖಚಿತ ಕನಿಷ್ಠ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಯೋಜನೆಗೆ ಒಳಪಡುವ ಕಾರ್ಮಿಕರು ಆಸಂಘಟಿತ ವಲಯದ ಕಾರ್ಮಿಕರಾಗಿದ್ದು 18ರಿಂದ 40 ವರ್ಷದೊಳಗಿರಬೇಕು ಅವರ ಮಾಸಿಕ ಆದಾಯ 15,000 ಕ್ಕಿಂತ ಕಡಿಮೆ ಇರಬೇಕು, ಅವರು ಆದಾಯ ತೆರಿಗೆ, ಇ ಎಸ್ ಐ, ಪಿ ಎಫ್, ಎನ್ ಪಿ ಎಸ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು,ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಸಂಖ್ಯೆ ಹೊಂದಿರಬೇಕು ಎಂದು ತಿಳಿಸಿದರು.

ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆಯ ಅಭಿಯಾನ ವ್ಯವಸ್ಥಾಪಕರಾದ ಡಾಕ್ಟರ್ ಪುಟ್ಟಸ್ವಾಮಿ, ಎಮ್ ಟಿ ಓ ಅನ್ಸಾರ್ ಖಾನ್, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್, ಪಟ್ಟಣ ಪಂಚಾಯಿತಿ ಸಮುದಾಯ ಸಂಘಟನಾಧಿಕಾರಿ ಪರಶಿವಮೂರ್ತಿ, ಕಾರ್ಮಿಕ ಇಲಾಖೆ ಸಿಬ್ಬಂದಿಗಳಾದ ಸುಚಿತ್ರ, ಪ್ರಸಾದ್, ಸಿ ಎಸ್ ಸಿ ಸೆಂಟರ್ ಸಿಬ್ಬಂದಿಗಳು, ಪಪಂ ಸಿಬ್ಬಂದಿಗಳಾದ ಗಣೇಶ್, ರಿಹಾನ, ಬೀದಿ ಬದಿ ವ್ಯಾಪಾರಿಗಳು ಹಾಜರಿದ್ದರು.

Continue Reading

Chamarajanagar

ಯಳಂದೂರು: ಪಟ್ಟಣ ಪಂಚಾಯಿತಿ ವತಿಯಿಂದ ವಿವಿಧ ಬಾಬ್ತುಗಳಿಗೆ ಬಹಿರಂಗ ಹರಾಜು

Published

on

ಯಳಂದೂರು: ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ವಿವಿಧ ಬಾಬ್ತುಗಳಿಗೆ ಬಹಿರಂಗ ಹರಾಜು ಮಾಡಲಾಯಿತು.

ಪಟ್ಟಣ ಪಂಚಾಯಿತಿ ವಾರದ ಸಂತೆ ಸುಂಕ ವಸೂಲಾತಿ ಹಕ್ಕು ರೂ. 1,57,000 ರೂಪಾಯಿಗಳಿಗೆ, ಪಟ್ಟಣ ಪಂಚಾಯಿತಿ ಬಸ್ ನಿಲ್ದಾಣದ ಸುಂಕ ವಸೂಲಾತಿ ಹಕ್ಕು 2,5,000 ರೂಪಾಯಿಗಳಿಗೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನೆಲ ಸುಂಕ ವಸೂಲಾತಿ ಹಕ್ಕು 3,87,000 ರೂಪಾಯಿಗಳಿಗೆ, ಎಲೆಕೇರಿ ಮಾಂಸದ ಅಂಗಡಿ 26 ಸಾವಿರ ರೂಪಾಯಿಗಳಿಗೆ, ಎಲೆಕೇರಿ ಮಾಂಸದ ಅಂಗಡಿ 2 ಹನ್ನೊಂದು ಸಾವಿರ ರೂಪಾಯಿಗಳಿಗೆ, ಎಲೆಕೇರಿ ಕೋಳಿ ಮಾಂಸದ ಅಂಗಡಿ 55,000 ರೂಪಾಯಿಗಳಿಗೆ,ಎಲೆಕೇರಿ ಕೋಳಿ ಮಾಂಸದ ಅಂಗಡಿ -2 25,000 ರೂಪಾಯಿಗಳಿಗೆ ಮಾರಾಟವಾಯಿತು.

ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್ ಮಾತನಾಡಿ ಹರಾಜಿನಲ್ಲಿ ಬಿಡ್ ಆದ ಟೆಂಡರ್ ಮೊತ್ತಕ್ಕೆ ಶೇಕಡಾ 18 ರಷ್ಟು ಶೇಕಡಾ 18ರಷ್ಟು ಜಿಎಸ್‌ಟಿ ತೆರಿಗೆಯನ್ನು ಪಾವತಿಸಬೇಕು, ಪಟ್ಟಣ ಪಂಚಾಯಿತಿಯಿಂದ ನೀಡುವ ನಿರ್ದೇಶನಗಳಿಗೆ ಬದ್ಧರಾಗಿರಬೇಕು, ಏಕ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಲಕ್ಷ್ಮಿ ಮಲ್ಲು, ಉಪಾಧ್ಯಕ್ಷ ಶಾಂತಮ್ಮ, ಸದಸ್ಯರಾದ ಮಹೇಶ್, ರಂಗನಾಥ್, ಪ್ರಭಾವತಿ ರಾಜಶೇಖರ್, ಸುಶೀಲ ಪ್ರಕಾಶ್, ಶ್ರೀಕಂಠ ಮೂರ್ತಿ, ಮುನಾವಾರ ಬೇಗ್, ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಾದ ಮಂಜು ಮಲ್ಲು,  ಲಕ್ಷ್ಮಿ , ಜಯಲಕ್ಷ್ಮಿ, ವಿಜಯ, ಮುಖಂಡರಾದ  ಮಲ್ಲು, ನಿಂಗರಾಜು, ಬಿಡ್ ದಾರರು, ಸಾರ್ವಜನಿಕರು ಹಾಜರಿದ್ದರು.

Continue Reading

Chamarajanagar

ಕೊಳ್ಳೇಗಾಲದಲ್ಲಿ ಭೀಕರ ಅಪಘಾ*ತ: ಇಬ್ಬರು ಮಹಿಳೆಯರ ಧಾರುಣ ಸಾ*ವು

Published

on

ಕೊಳ್ಳೇಗಾಲ ದ ಸಿದ್ದಯ್ಯನಪುರ ಗ್ರಾಮದ ಬಳಿ ಭೀಕರ ಅಪಘಾತ : ಇಬ್ಬರು ಮಹಿಳೆಯರು ಸಾವು,10 ಜನರಿಗೆ ಗಾಯ.

ವರದಿ :ಸುನೀಲ್ ಪ್ರಶಾಂತ್

ಕೊಳ್ಳೇಗಾಲ ಪಟ್ಟಣದ ಸಿದ್ದಯ್ಯನಪುರ ಗ್ರಾಮದ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟಾಟಾ ಎಎಸ್ ಬೈಕ್ ನಡುವೆ ಮುಖ ಮುಖ ಡಿಕ್ಕಿ ಸ್ಥಳದಲ್ಲಿ ಇಬ್ಬರು ಮಹಿಳೆಯರ ಸಾವು.
ಕೊಳ್ಳೇಗಾಲ, ಶ್ರೀ ಮಲೆ ಮಹದೇಶ್ವರ ಬೆಟ್ಟ ದ ರಸ್ತೆ ಯಲ್ಲಿ ಬೆಳಿಗ್ಗೆ ಕೆಎಸ್ಆರ್ಟಿಸಿ ಹಾಗೂ ಟಾಟಾ ಎಎಸ್ ಬೈಕ್ ನಡುವೆ ಅಪಘಾತದಲ್ಲಿ ಹನೂರು ತಾಲ್ಲೂಕಿನ ಬಾಣಾವರ ಗ್ರಾಮದ 50 ವರ್ಷ ದ ಮಹಾದೇವಮ್ಮ,28 ವರ್ಷ ದ ಶೃತಿ ಮೃತ ಪಟ್ಟರೆ 10 ಕ್ಕೂ ಜನ ಗಾಯ ಗೊಂಡಿದಾರೆ.
ಗಾಯಳು ಗಳನ್ನು ಪಟ್ಟಣದ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಲವರನ್ನು ಹೆಚ್ಚಿನ ಚಿಕಿತ್ಸೆ ಗೆ ಮೈಸೂರು, ಹಾಗೂ ಚಾಮರಾಜನಗರ ಜಿಲ್ಲಾ ಆಸ್ಪತ್ರೆ ಗೆ ಕಳುಹಿಸಲಾಗಿದೆ

Continue Reading

Trending

error: Content is protected !!