Chikmagalur
ಮೀಸಲು ಅರಣ್ಯ ಪ್ರದೇಶ ಒತ್ತುವರಿ ತೆರವು
ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಗ್ರಾಮದ ಸರ್ವೆ ನಂಬರ್ 369ರಲ್ಲಿನ ಮತ್ತಾವರ ಬ್ಲಾಕ್ 2ರಲ್ಲಿನ 20 ಎಕರೆ 11 ಗುಂಟೆ ಮೀಸಲು ಅರಣ್ಯ ಪ್ರದೇಶವನ್ನು ಡಿ.ಆರ್. ರಮೇಶ್ ಅವರು ಒತ್ತುವರಿ ಮಾಡಿದ್ದರು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲು ಸಹ ಏರಿದ್ದು, ತೀರ್ಪು ಕೂಡ ಅರಣ್ಯ ಇಲಾಖೆಯ ಪರವಾಗಿ ಬಂದಿತ್ತು.
ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್‌ಬಾಬು ಅವರ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಸ್. ಮೋಹನ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಸುಮಾರು 200 ಮಂದಿ ಸಿಬ್ಬಂದಿ ಅರಣ್ಯ ಒತ್ತುವರಿ ತೆರವುಗೊಳಿಸಿದರು.
Chikmagalur
ಗ್ಯಾರಂಟಿ ಯೋಜನೆಗಳ ನೋಂದಣಿಗೆ ತಾಲ್ಲೂಕು ಪಂಚಾಯಿತಿಯಲ್ಲಿ ಪ್ರತೇಕ ಕಚೇರಿ ಆರಂಭ
ಚಿಕ್ಕಮಗಳೂರು-ಸರ್ಕಾರದ ಜನಪರ ಯೋಜನೆಗಳು ಬಡಜನರಿಗೆ ತಲುಪಬೇಕೆಂಬ ದೃಷ್ಟಿಯಿಂದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಪ್ರತ್ಯೇಕ ಕಚೇರಿ ತೆರೆದು ಗ್ಯಾರಂಟಿ ಯೋಜನೆಗಳ ನೋಂದಣಿಗೆ ಕ್ರಮ ವಹಿಸಲಾಗುವುದೆಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು.
ಅವರು ಇಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹಲವಾರು ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಈಡೇರಿಸಲು ಸರ್ಕಾರದ ಮಟ್ಟದಲ್ಲಿ ಒತ್ತಡ ತಂದು ಈಡೇರಿಸುವುದಾಗಿ ಭರವಸೆ ನೀಡಿದರು.
ಸರ್ಕಾರ ಅಂಗನವಾಡಿ ಉದ್ಯೋಗಿಗಳ ಪರವಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ನಿಮ್ಮ ಕೆಲವು ವರ್ಷಗಳ ಬೇಡಿಕೆಗಳಲ್ಲಿ ಒಂದಾದ ನಿವೃತ್ತಿಯಾದ ಕಾರ್ಯಕರ್ತೆಯರಿಗೆ ಗ್ರ್ಯಾಚುಟಿಯನ್ನು( ಉಪಧನ) ೨೦೨೨-೨೩ ನೇ ಸಾಲಿನಿಂದ ನಿವೃತ್ತಿಯಾಗುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ನೀಡಲು ಮುಂದಾಗಿದೆ ಎಂದರು.
ಅಂಗನವಾಡಿ ಉದ್ಯೋಗಿಗಳ ಸೇವಾ ಭದ್ರತೆ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಜೊತೆಗೆ ಅಕ್ಷರ ದಾಸೋಹ ಕಾರ್ಯಕರ್ತೆಯರಿಗೂ ನಿವೃತ್ತಿ ವೇತನ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಸುಮಾರು ೨೨ ಲಕ್ಷ ರೂ ವೆಚ್ಚದಲ್ಲಿ ೨೨ ದಿವ್ಯಾಂಗ ಚೇತನರಿಗೆ ದ್ವಿಚಕ್ರ ವಾಹನ ಹಾಗೂ ೭೬ ಸಾವಿರ ರೂ ವೆಚ್ಚದಲ್ಲಿ ಬ್ಯಾಟರಿ ಚಾಲಿತ ವೀಲ್ ಚೇರನ್ನು ಇದೇ ಸಂದರ್ಭದಲ್ಲಿ ವಿತರಣೆ ಮಾಡಿದ ಶಾಸಕರು ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಮಾಡುವ ಮೂಲಕ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶ ಹೊಂದಿದೆ ಎಂದರು.
ಕಳೆದ ೨ ತಿಂಗಳಿಂದ ತಾಂತ್ರಿಕ ತೊಂದರೆಯಿಂದಾಗಿ ಗೃಹಲಕ್ಷ್ಮಿ ಹಣ ಬಂದಿರುವುದಿಲ್ಲ, ಈ ಬಗ್ಗೆ ಪರಿಶೀಲಿಸಲಾಗುತ್ತಿದೆ. ಈಗಾಗಲೇ ಕೆಲವರಿಗೆ ಜಿಬಿಟಿ ಮೂಲಕ ಫಲಾನುಭವಿ ಖಾತೆಗೆ ಹಣ ರವಾನಿಸಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಮಹಾಂತೇಶ್, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಾರಾನಾಥ್, ಕೆಡಿಪಿ ಸದಸ್ಯ ಸಂತೋಷ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್, ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಪೃಥ್ವಿ, ಗ್ರಾ.ಪಂ ಸದಸ್ಯ ಹೆಚ್.ಪಿ ಮಂಜೇಗೌಡ, ಹಿರೇಗೌಜ ಶಿವು, ಬಿಳೆಕಲ್ಲಳ್ಳಿ ಪುಟ್ಟೇಗೌಡ ಮತ್ತಿತರರು ಉಪಸ್ಥಿತರಿದ್ದರು.
Chikmagalur
ಅತಿವೃಷ್ಟಿಯಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರ ವೈಜ್ಞಾನಿಕ ಪರಿಹಾರ ನೀಡಬೇಕು – ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ
ಚಿಕ್ಕಮಗಳೂರು: ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಮುಂಗಾರಿನ ಬೆಳೆ ಕಳೆದುಕೊಂಡ ರೈತರ ಬೆಳೆ ಸಮೀಕ್ಷೆ ನಡೆಸಿ ವೈಜ್ಞಾನಿಕವಾಗಿ ಸೂಕ್ತ ಪರಿಹಾರ ನೀಡಬೇಕು ಮತ್ತು ಹಿಂಗಾರು ಬೆಳೆ ಮಾಡುಲು ರೈತರಿಗೆ ಬೀಜ, ರಸಗೊಬ್ಬರ, ಔಷಧಿಗಳನ್ನು ಉಚಿತವಾಗಿ ವಿತರಣೆ ಮಾಡಲು ಕ್ರಮವಹಿಸುವಂತೆ ಒತ್ತಾಯಿಸಿದರು.
ಪ್ರಸಕ್ತ ವರ್ಷದ ಮೇ ಯಿಂದ ಜುಲೈ ಅಂತ್ಯದವರೆಗೆ ವಾಡಿಕೆಗಿಂತ ಅತೀ ಹೆಚ್ಚು ಮಳೆಯಾಗಿರುವ ಪರಿಣಾಮ ಮುಂಗಾರಿನಲ್ಲಿ ಬಿತ್ತನೆ ಮಾಡಿದ್ದ ಎಲ್ಲಾ ಬೆಳೆಗಳು ಹಾನಿಯಾಗಿದ್ದು, ಫಸಲಿಗೆ ಬಂದ ಮೆಣಸಿನಕಾಯಿ, ಟೊಮ್ಯಾಟೋ, ಬೀನ್ಸ್, ಮೆಕ್ಕೆಜೋಳ ಸೇರಿದಂತೆ ಕಾಫಿ, ಅಡಿಕೆ, ತೆಂಗು, ಏಲಕ್ಕಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳು ನೆಲ ಕಚ್ಚಿರುವುದರಿಂದ ಸರ್ಕಾರ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಕ್ಕೆ ಮುಂದಾಗಬೇಕೆಂದು ಹೇಳಿದರು.
ಬಾರಿ ಬಿರುಗಾಳಿಗೆ ಜಿಲ್ಲೆಯಾದ್ಯಂತ ನೂರಾರು ಮನೆಗಳು ಕುಸಿದಿವೆ, ಚಿಕ್ಕಮಗಳೂರು ತಾಲ್ಲೂಕು ಒಂದರಲ್ಲೇ ೬೫ ಮನೆಗಳು ಪೂರ್ಣ ಹಾಗೂ ಭಾಗಶಃ ಹಾನಿಯಾಗಿದ್ದು, ಸುಮಾರು ೩ ಸಾವಿರ ವಿದ್ಯುತ್ ಕಂಬಗಳು ಮುರಿದು ಬಿದ್ದಿರುವುದರಿಂದ ಹಲವು ಗ್ರಾಮಗಳಿಗೆ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲೆಯಲ್ಲಿ ದಿನದೂಡುವಂತಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಸೂಕ್ತ ಕ್ರಮ ಕೈಳ್ಳಬೇಕೆಂದು ಆಗ್ರಹಿಸಿದರು.
ಕಳೆದ ವರ್ಷ ಜಿಲ್ಲೆಯಲ್ಲಿ ಬರಗಾಲ ಪೀಡಿತವಾಗಿದ್ದು, ಇದರಿಂದ ರೈತರು ಕಂಗಾಲಾಗಿದ್ದರು. ಸರ್ಕಾರ ಸಮರ್ಪಕ ಪರಿಹಾರ ವಿತರಣೆ ಮಾಡದೆ ರೈತರಿಗೆ ಅನ್ಯಾಯವೆಸಗಿದೆ ಎಂದ ಅವರು ಚಿಕ್ಕಮಗಳೂರು ತಾಲ್ಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡದೇ ಇರುವುದರಿಂದ ರೈತರು ಅಪಾರ ಪ್ರಮಾಣದ ನಷ್ಟ ಅನುಭವಿಸಿದ್ದಾರೆ. ಸರ್ಕಾರಿ ಆಡಳಿತ ಯಂತ್ರ ಈ ಬಗ್ಗೆ ಜಾಣ ಮೌನ ತಾಳಿದೆ ಎಂದು ಆರೋಪಿಸಿದರು.
ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಸರ್ಕಾರಿ ಪ್ರಾಯೋಜಿತ ಮೋಸದ ಜಾಲವಾಗಿದ್ದು, ಈ ಯೋಜನೆಯಡಿ ನೊಂದಾಯಿಸಿದ ಶೇ. ೯೫ ರಷ್ಟು ರೈತರಿಗೆ ವಿಮಾ ಸೌಲಭ್ಯ ದೊರೆಯದಂತೆ ನಿಯಮಗಳನ್ನು ಜಾರಿಮಾಡಿ ರೈತರಿಗೆ ಮೋಸ ಮಾಡಿದ್ದಾರೆ ಎಂದು ದೂರಿದರು.
೭ ವರ್ಷಗಳ ಬೆಳೆಯ ಶೇಕಡವಾರು ಅಂದಾಜುಮಾಡಿ ಪರಿಹಾರ ಜಾರಿ ಮಾಡುವುದು ಹಾಗೂ ಕ್ರಾಪ್ ಕಟ್ಟಿಂಗ್ ಎಕ್ಸಪೆರಿಮೆಂಟ್ ಈ ಎರಡು ನಿಯಮಗಳು ಅವೈಜ್ಞಾನಿಕವಾಗಿದ್ದು, ರೈತರಿಗೆ ಮೋಸ ಮಾಡುವ ಸಲುವಾಗಿ ಸರ್ಕಾರ ರೂಪಿಸಿರುವ ಈ ನಿಯಮಗಳನ್ನು ರದ್ದುಪಡಿಸುವಂತೆ ಆಗ್ರಹಿಸಿದ ಅವರು ಬೆಳೆ ವಿಮೆ ವ್ಯಾಪ್ತಿಯಿಂದ ರೈತರ ಉತ್ಪನ್ನಗಳನ್ನು ಹೊರಗಿಡುವಂತೆ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಮಾಜಿ ಜಿಲ್ಲಾಧ್ಯಕ್ಷ ಎಂ.ಸಿ ಬಸವರಾಜು, ತಾಲ್ಲೂಕು ಅಧ್ಯಕ್ಷ ಸುನಿಲ್ ಕುಮಾರ್, ಉಪಾಧ್ಯಕ್ಷ ಹೆಚ್.ಎಂ ಲೋಕೇಶ್, ತಾಲ್ಲೂಕು ಖಜಾಂಚಿ ಜೆ.ಎಸ್ ಶಿವಣ್ಣ ಉಪಸ್ಥಿತರಿದ್ದರು.
Chikmagalur
ಪ್ರಥಮ ದರ್ಜೆ ಕಾಲೇಜಿನ ವಿವಿಧ ವಿದ್ಯಾರ್ಥಿ ಸಂಘಗಳ ಚಟುವಟಿಕೆಗಳ ಸಮಾರೋಪ ಸಮಾರಂಭ
ಚಿಕ್ಕಮಗಳೂರು ಆ,೧೦, ಯುವಜನತೆ ತಮ್ಮ ಬದುಕಿನಲ್ಲಿ ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿ ದೆಸೆಯಲ್ಲೇ ಉನ್ನತವಾದ ಗುರಿ ಮತ್ತು ಉತ್ತಮವಾದ ಕನಸುಗಳನ್ನು ಹೊಂದಿರಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್ ನಯಾಜ್ ಹೇಳಿದರು.
ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಶನಿವಾರ ನಡೆದ ಎಂ,ಎಸ್, ಪದ್ಮಾವತಮ್ಮ, ಎಂ,ಕೆ, ಸಾಂಬಶಿವ ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ವಿವಿಧ ವಿದ್ಯಾರ್ಥಿ ಸಂಘಗಳ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಉನ್ನತವಾದ ಗುರಿ, ಅತ್ಯುತ್ತಮವಾದ ಕನಸುಗಳನ್ನು ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಜೀವನದಲ್ಲಿ ಯಶಸ್ವಿಯಾಗುತ್ತಾರೆ, ವಿದ್ಯಾರ್ಥಿ ಜೀವನ ಬದುಕಿನ ಅತ್ಯಂತ ಪ್ರಮುಖವಾದ ಘಟ್ಟ, ಅದು ಮತ್ತೆ ಮತ್ತೆ ನಮ್ಮ ಬದುಕಿನಲ್ಲಿ ಬರುವುದಿಲ್ಲ, ಹಾಗಾಗಿ ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ವಿದ್ಯಾರ್ಥಿಗಳು ತಮ್ಮ ಸರ್ವತೋಮುಖ ಬೆಳವಣಿಗೆಗಾಗಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು ಎಂದು ಸಲಹೆ ಮಾಡಿದರು.
ಮಲೆನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ, ಡಿ, ಎಲ್, ವಿಜಯಕುಮಾರ್ ಮಾತನಾಡಿ ವಿದ್ಯಾರ್ಜನೆಗೆ ಯಾವುದೇ ಕೊರತೆಯಾಗದಂತೆ ವಿದ್ಯಾರ್ಥಿಗಳಿಗೆ ಸಂಸ್ಥೆಯಲ್ಲಿ ಎಲ್ಲಾ ರೀತಿಯ ಸವಲತ್ತು, ಸೌಲಭ್ಯಗಳನ್ನೂ ಒದಗಿಸಲಾಗುತ್ತಿದ್ದು ವಿದ್ಯಾರ್ಥಿಗಳು ಅದನ್ನು ಸಮರ್ಪಕವಾಗಿ ಬಳಸಿಕೊಂಡು ಶಿಕ್ಷಣವಂತರಾಗಿ ಹೊರಹೊಮ್ಮ ಬೇಕು ಎಂದು ಹೇಳಿದರು.
ಕಾಲೇಜಿನ ವಾರ್ಷಿಕ ವರದಿಯನ್ನು ಮಂಡಿಸಿದ ಪ್ರಾಂಶುಪಾಲೆ ಹಸೀನಾ ಬಾನು ಕೇವಲ ಐದು ವಿದ್ಯಾರ್ಥಿಗಳಿಂದ ಆರಂಭಗೊಂಡಿದ್ದ ಕಾಲೇಜು ಇಂದು ಸಹಸ್ರಾರು ವಿದ್ಯಾರ್ಥಿಗಳ ಭವಿ?ವನ್ನು ರೂಪಿಸುತ್ತಿದ್ದು ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ತನ್ನದೇ ಆದ ಛಾಪನ್ನು ಹೊಂದಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮಲೆನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಎನ್,ಕೇಶವಮೂರ್ತಿ, ವಿದ್ಯಾರ್ಥಿಗಳು ಹೆತ್ತವರು ಮತ್ತು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಹೇಳಿದರು.
ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಪುರಸ್ಕರಿಸಿ, ಬಹುಮಾನ ನೀಡಲಾಯಿತು, ಸಿಡಿಎ ಅಧ್ಯಕ್ಷ ಮೊಹಮ್ಮದ್ ನಯಾಜ್ ಅವರನ್ನು ಸನ್ಮಾನಿಸಿ,ಅಭಿನಂದಿಸಲಾಯಿತು.
ಮಲೆನಾಡು ವಿದ್ಯಾಸಂಸ್ಥೆಯ ಉಪಾಧ್ಯಕ್ಷೆ ರಾಧಾ ಸುಂದರೇಶ್, ಪದ ನಿಮಿತ್ತ ಸದಸ್ಯ ಎಂ,ಎಸ್, ಮಂಜುನಾಥ್, ನಿರ್ದೇಶಕ ಕನಕ ರಾಜ್, ಶೈಕ್ಷಣಿಕ ಸಲಹೆಗಾರ ಪ್ರೊ, ಕೆ,ಎನ್, ಮಂಜುನಾಥ ಭಟ್, ಉಪನ್ಯಾಸಕರಾದ ಸುಮಂತ್ ಕುಮಾರ್, ಕೆ,ಡಿ, ಸುದೀಪ್, ವಿದ್ಯಾರ್ಥಿಗಳಾದ ಶಶಾಂಕ್ ಯು ಅಂಬೋರೆ, ಭೂಮಿಕ ಉಪಸ್ಥಿತರಿದ್ದರು.
-
Mysore4 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan4 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.