Connect with us

State

ಮಹಿಳೆಯರಿಗೆ ಗುಡ್ ನ್ಯೂಸ್ – ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸಲು ಅವಕಾಶ!

Published

on

ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸಲು ಸಾರಿಗೆ ಸಂಸ್ಥೆ ಅವಕಾಶ ನೀಡಿ ಆದೇಶ ಹೊರಡಿಸಿದೆ.

ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ 179 ದಿನಾಂಕ 7.6.2023 ರಲ್ಲಿ ಅವಕಾಶ ಕಲ್ಪಿಸಿತ್ತು.

ಮುಂದುವರೆದ ಉಲ್ಲೇಖ ಪತ್ರ-ತಿರ ತಿದ್ದುಪಡಿ ಆದೇಶದಲ್ಲಿ ಸದರಿ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲನಕಲು/ಡಿಜಿಟಲ್ ಹಾರ್ಡ್ ಮತ್ತು ಸಾಫ್ಟ್ ಕಾಪಿ ಮಾದರಿಯಲ್ಲಿ ತೋರಿಸಿದ್ದಲ್ಲಿ ಹಾಜರುಪಡಿಸಿದ್ದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ತಿಳಿಸಿದಾಗಿದೆ.

ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಅಧಿಕೃತ ಗುರುತಿನ ಚೀಟಿ ತೋರಿಸಿದರೂ ಸಹ ಮೊಬೈಲ್ ನಲ್ಲಿನ ಗುರುತಿನ ಚೀಟಿ ನಡೆಯುವುದಿಲ್ಲ ಎಂದು ಕೆಲವು ನಿರ್ವಾಹಕರು ಅನವಶ್ಯಕವಾಗಿ ಮಹಿಳಾ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇಪದೇ ದೂರುಗಳು ಕೇಳಿ ಬರುತ್ತಿರುವುದಾಗಿ ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಅಡಚಣೆಯಾಗದಂತೆ ಮತ್ತು ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವಂತೆ ಉಲ್ಲೇಖ 4ರ ಪತ್ರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರ ಕಚೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ

State

ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?

Published

on

Cochin Shipyard Recruitment – ಮಿನಿರತ್ನ ಕಂಪನಿಯಾಗಿರುವ ಕೋಚಿನ್ ಶಿಪ್ ಯಾರ್ಡ್ ನಲ್ಲಿ ವಿವಿಧ 70 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೇವಲ ಒಂದು ದಿನ ಮಾತ್ರ ಬಾಕಿ ಇದೆ.

ಹಾಗಿದ್ದರೆ ಈ ನೇಮಕಾತಿಯಲ್ಲಿ ಯಾವ ಯಾವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬ ಇತ್ಯಾದಿ ಮಾಹಿತಿ ಇಲ್ಲಿದೆ..

ಯಾವ ಯಾವ ಹುದ್ದೆಗಳು ಖಾಲಿ ಇವೆ?

• Scaffolder ಹುದ್ದೆಗಳು – 11
• Semi Skilled Rigger – 59 ಹುದ್ದೆಗಳು

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು?

• Scaffolder ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸಾಗಿದ್ದು ಅದರ ಜೊತೆಗೆ ಸಂಬಂಧಪಟ್ಟ ಕೆಲಸದಲ್ಲಿ 2 ವರ್ಷದ ಅನುಭವ ಹೊಂದಿರಬೇಕು.
• Semi Skilled Rigger ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 4ನೇ ತರಗತಿ ಪಾಸಾಗಿದ್ದು ಅದರ ಜೊತೆಗೆ ಸಂಬಂಧಪಟ್ಟ ಕೆಲಸದಲ್ಲಿ 3 ವರ್ಷದ ಅನುಭವ ಹೊಂದಿರಬೇಕು.

ವಯೋಮಿತಿ ಅರ್ಹತೆ – ಗರಿಷ್ಠ 45 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ ಎಷ್ಟು ಇರಲಿದೆ?

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹22,100 ಸಂಬಳದ ಜೊತೆಗೆ ಹೆಚ್ಚಿನ ಕೆಲಸಕ್ಕೆ ಮಾಸಿಕ ₹5,530 ರೂ. ಪಡೆಯುವ ಅವಕಾಶವಿದೆ.

ಅರ್ಜಿ ಶುಲ್ಕ – 200ರೂ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 28 ಮಾರ್ಚ್ 2025

ಅರ್ಜಿ ಸಲ್ಲಿಸುವ ವಿಧಾನ : ಅರ್ಹತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಕೊಚ್ಚಿನ್ ಶಿಪ್ ಯಾರ್ಡ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿರಿ.

ಅಧಿಕೃತ ಜಾಲತಾಣ – https://cochinshipyard.in/careerdetail/career_locations/672

Continue Reading

State

ಎಚ್‌ಡಿ ಕುಮಾರಸ್ವಾಮಿ ಭೇಟಿ ಬಗ್ಗೆ ಸಚಿವ ಸತೀಶ್‌ ಜಾರಕಿಹೊಳಿ ಫಸ್ಟ್‌ ರಿಯಾಕ್ಷನ್‌

Published

on

ನವದೆಹಲಿ: ಸಚಿವ ಸತೀಶ್‌ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ಭಾರೀ ಕೋಲಾಹಲ ಎದ್ದಿದ್ದು, ಇದೀಗ ಸಚಿವ ಸತೀಶ್‌ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಯಾವ ಕಾರಣಕ್ಕೆ ಭೇಟಿ ಮಾಡಿದ್ದೆ ಎಂಬುದರ ಬಗ್ಗೆ ಹೈಕಮಾಂಡ್‌ ನಾಯಕರಿಗೆ ಹೇಳಿದ್ದೇನೆ. ಎಚ್‌ಡಿಕೆ ಭೇಟಿ ಕುರಿತು ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲ ಅವರಿಗೂ ಮಾಹಿತಿ ನೀಡಿದ್ದೇನೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಎಚ್‌ಡಿಕೆ ಭೇಟಿ ಮಾಡಿದ್ದ ಬಗ್ಗೆ ನಾಳೆ ಎಲ್ಲವನ್ನೂ ಸಂಪೂರ್ಣವಾಗಿ ಹೇಳುತ್ತೇನೆ ಎಂದರು.

Continue Reading

State

ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು: ಎಂಎಲ್‌ಸಿ ರಾಜೇಂದ್ರ ಹೊಸ ಬಾಂಬ್‌

Published

on

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್‌ ಸಿಕ್ಕಿದ್ದು, ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ.

ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ. ಸಚಿವರು ಕೂಡ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ನನ್ನ ಮೇಲೆ ಹನಿಟ್ರ್ಯಾಪ್‌ ಆಗಿಲ್ಲ. ದೂರವಾಣಿ ಕರೆ ಮೂಲಕ ಯತ್ನ ನಡೆಯುತ್ತಾ ಇತ್ತು ಎಂದರು.

ನವೆಂಬರ್.‌16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕಲು ಸ್ವಲ್ಪ ಜನ ಬಂದಿದ್ದರು. ಆ ವೇಳೆ ನನ್ನನ್ನು ಹತ್ಯೆ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳಿದರು.

ಈ ಬಗ್ಗೆ ನನ್ನ ಆಪ್ತರ ಮೂಲಕ ಆಡಿಯೋ ಸಿಕ್ಕಿತು. ಆಡಿಯೋದಲ್ಲಿ 5 ಲಕ್ಷ ಸುಪಾರಿ ನೀಡಿದ್ರು. ಮೂರು ಜನ ಹತ್ಯೆ ಮಾಡಲು ಪ್ರಯತ್ನಿಸಿದ್ದರು ಎಂದು ಮಾಹಿತಿ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ಸಿಐಡಿಗೆ ಹೋಗಿದೆ. ಪೊಲೀಸರು ರಾಜಣ್ಣ ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಮನೆ ಕೆಲಸದವರ ಹೇಳಿಕೆಯನ್ನು ಸಹ ಪಡೆದಿದ್ದಾರೆ. ಈ ಪ್ರಕರಣದ ನಾಯಕ ಯಾರು ಎಂದು ಗೊತ್ತಾಗುತ್ತಿಲ್ಲ. ನಾನು ಯಾರ ಹೆಸರನ್ನು ಕೂಡ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.

Continue Reading

Trending

error: Content is protected !!