Connect with us

Chamarajanagar

ಸಮಯ ನಮಗಾಗಿ ಕಾಯುವುದಿಲ್ಲ…ಅದರ ಹಿಂದೆ ನಾವು ಹೋಗಬೇಕು… ಅದನ್ನು ಅರ್ಥ ಮಾಡಿಕೊಳ್ಳಬೇಕು.. ಬಳಸಿಕೊಂಡು ಸಾಧಿಸಬೇಕು…. ಶ್ರೀ ಆರ್ ಶಶಿಧರ್,ನಿವೃತ್ತ ಪ್ರಭಾರ ಪ್ರಾಂಶುಪಾಲರು.

Published

on

ಸರ್ಕಾರಿ ಪದವಿ ಪೂರ್ವ ಕಾಲೇಜು ನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಿದರು.
ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದರು.
ಮುಖ್ಯ ಅತಿಥಿ ಆರ್ ಶಶಿಧರ್ ರವರು ವಿದ್ಯಾರ್ಥಿಗಳ ಆಸಕ್ತಿ, ಚಟುವಟಿಕೆ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ವಿದ್ಯಾರ್ಥಿಗಳ ಜೀವನದಲ್ಲಿ ಕಾಲೇಜಿನಲ್ಲಿ ಸಿಗುವಂತಹ ಮೌಲ್ಯ ಯುತವಾದ ಮಾರ್ಗದರ್ಶನ, ತಿಳುವಳಿಕೆ ಇನ್ನಾವುದರಲ್ಲಿಯೂ ಸಿಗುವುದಿಲ್ಲ.

ವಿದ್ಯಾರ್ಥಿಗಳು ಓದುವ ಕಡೆ ಹೆಚ್ಚಿನ ಆಸಕ್ತಿ ವಹಿಸಬೇಕು. ತಂದೆ ತಾಯಿಗಳ ಬದುಕು ನಮಗೆ ಆದರ್ಶ ಆಗಬೇಕು. ಅವರಿಗೆ ಸಾಮಾಜಿಕ ವಾಗಿ ಗೌರವ ದೊರಕಿಸುವ ಕೆಲಸವನ್ನು ಮಕ್ಕಳು ಮಾಡಬೇಕು. ಮನಸ್ಸನ್ನು ಓದಿನ ಕಡೆಗೆ ಕೇಂದ್ರೀಕರಿಸಬೇಕು.ಕಾಲೇಜಿಗೆ ಉತ್ತಮ ಫಲಿತಾಂಶ ತರಬೇಕು ಎಂದು ಶುಭಕೋರಿದರು.ಈ ಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆದು ತಾಲ್ಲೂಕಿನ ಕೀರ್ತಿ ಹೆಚ್ಚಿಸಬೇಕು ಎಂದು ಪ್ರಭಾರ ಪ್ರಾಂಶುಪಾಲರಾದ ಶ್ರೀ ಎಲ್ ಮಹೇಶ್ ರವರು ಶುಭ ಹಾರೈಸಿದರು.

ಕಾರ್ಯಕ್ರಮ ವನ್ನು ವಿದ್ಯಾರ್ಥಿಗಳಾದ ದಿಶಾ ಮತ್ತು ಮಂಜುಳಾ ಎಂಬ ವಿದ್ಯಾರ್ಥಿನಿಯರು ನಡೆಸಿಕೊಟ್ಟರು. ಉಪನ್ಯಾಸಕರಾದ ಶ್ರೀ ಜಿ ಸ್ಟೀವನ್ ರವರು, ಮೇರಿ ಅಶ್ವಿನಿ, ಪುಷ್ಪಲತಾ,ಎನ್ ನಾಗರಾಜು,ಅಜಯ್ ಕುಮಾರ್,ಜ್ಯೋತಿ, ಮಂಜುಳಾ, ನಂದಿನಿ,ಸಂಗೀತ, ಕೃಷ್ಣರಾಜು,,ರಂಗಸ್ವಾಮಿ ರವರುಗಳು ಹಾಜರಿದ್ದರು. ವಿದ್ಯಾರ್ಥಿಗಳು ಕೂಡ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

Continue Reading

Chamarajanagar

ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ: ಸಿ.ಎಂ.ಸಿದ್ದರಾಮಯ್ಯ

Published

on

ರಾಚಯ್ಯ ಅವರು ನಿರಂತರವಾಗಿ ಬಡವರು, ಶೋಷಿತರ ಪರವಾಗಿದ್ದರು

ನಾನು ರಾಚಯ್ಯನವರ ಪ್ರಾಡಕ್ಟು: ಸಿ.ಎಂ

ಚಾಮರಾಜನಗರ : ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ರಾಜ್ಯಪಾಲ ದಿ|| ಬಿ.ರಾಚಯ್ಯ ಅವರ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದರು.

ರಾಚಯ್ಯ ಅವರು ರಾಜ್ಯ ರಾಜಕಾರಣದ ಅತ್ಯಂತ ಮುತ್ಸದ್ದಿ ರಾಜಕಾರಣಿ. ಹೆಚ್ಚು ಮಾತಾಡುತ್ತಿರಲಿಲ್ಲ. ಬಡವರ ಪರವಾಗಿ ಹೆಚ್ಚೆಚ್ಚು ಕೆಲಸ ಮಾಡುತ್ತಿದ್ದರು ಎಂದರು.

ರಾಮಕೃಷ್ಣ ಹೆಗಡೆ ಅವರ ಮಂತ್ರಿ ಮಂಡಲದಲ್ಲಿ ಪ್ರಭಾವಿ ಆಗಿದ್ದ ರಾಚಯ್ಯನವರಿಗೆ, ಪ್ರತಿಭಾವಂತ, ಜನಪರ ಕಾಳಜಿಯುಳ್ಳ ರಾಜಕಾರಣಿಗಳನ್ನು ಹತ್ತಿರಕ್ಕೆ ಕರೆದು ಬೆಳೆಸುವ ಗುಣ ಇತ್ತು. ಹೆಗಡೆ ಮತ್ತು ರಾಚಯ್ಯ ಅವರು ನನ್ನನ್ನು ಕರೆದು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದರು. ಬಳಿಕ ನನ್ನನ್ನು ಮಂತ್ರಿ ಮಾಡಿದರು ಎಂದು ಇತಿಹಾಸ ಸ್ಮರಿಸಿಕೊಂಡರು.

ಅವತ್ತು ನಾನು ಮಂತ್ರಿ ಆಗದೇ ಹೋಗಿದ್ದರೆ ನಾನು ಇವತ್ತು ಎರಡನೇ ಬಾರಿ ಮುಖ್ಯಮಂತ್ರಿ ಆಗಲು ಸಾಧ್ಯವಿರಲಿಲ್ಲ. ಇದೇ ಕೆಲವರಿಗೆ ಹೊಟ್ಟೆಯುರಿ ಎಂದು ತಮ್ಮ ಮೇಲೆ ಆರೋಪಿಸಿರುವವರಿಗೆ ಟೀಕಿಸಿದರು.

ಮೈಸೂರು, ಚಾಮರಾಜನಗರ ಜಿಲ್ಲೆಯ ಬಹುತೇಕ ಕಾಂಗ್ರೆಸ್ ಮುಖಂಡರು ರಾಚಯ್ಯನವರ ಪ್ರಾಡಕ್ಟ್ ಗಳು. ನಾನೂ ರಾಚಯ್ಯನವರ ಪ್ರಾಡಕ್ಟು ಎಂದರು.

ರಾಚಯ್ಯನವರು ನಡೆದಂತ ದಾರಿಯಲ್ಲೇ ನಡೆಯಪ್ಪಾ ಎಂದು ಅವರ ಪುತ್ರ ಶಾಸಕ ಕೃಷ್ಣಮೂರ್ತಿ ಅವರಿಗೆ ಇದೇ ಸಂದರ್ಭದಲ್ಲಿ ಸಿಎಂ ಕಿವಿ ಮಾತು ಹೇಳಿ, ಸದಾ ಬಡವರ ಪರವಾಗಿ ಇರಬೇಕು. ಯಾರನ್ನೂ ದ್ವೇಷಿಸಬಾರದು ಎಂದರು.

ಇವತ್ತು ನಾವೆಲ್ಲಾ ಶಾಸಕರಾಗಿರುವುದು, ಮಂತ್ರಿಗಳಾಗಿರುವುದು, ಮುಖ್ಯಮಂತ್ರಿಗಳಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದ. ರಾಚಯ್ಯನವರು ಸಂವಿಧಾನದ ಮಾರ್ಗದಲ್ಲಿ ನಡೆದರು. ಇವರು ಇವತ್ತಿನ ಯುವ ಪೀಳಿಗೆಗೂ ಮಾದರಿ ಎಂದರು.

ರಾಚಯ್ಯ ಸ್ಮಾರಕದಲ್ಲಿ IAS-IPS ತರಬೇತಿ ಕೇಂದ್ರ ಸ್ಥಾಪಿಸಲು ಸರ್ಕಾರದ ನೆರವನ್ನು ಶಾಸಕ ಕೃಷ್ಣಮೂರ್ತಿ ಅವರು ಕೇಳಿದ್ದಾರೆ. ಈ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಚಾಮರಾಜನಗರ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಲೂರು ಗ್ರಾಮದಲ್ಲಿ ಸ್ಮಾರಕ ಭವನ ನಿರ್ಮಿಸಲಾಗಿದೆ.

ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ, ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಚಪ್ಪ ಅವರ ಪತ್ನಿ ಗೌರಮ್ಮ, ಸಂಸದರಾದ ಸುನಿಲ್ ಬೋಸ್, ಶಾಸಕರುಗಳಾದ ಎ.ಆರ್.ಕೃಷ್ಣಮೂರ್ತಿ, ಹೆಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ತಿಮ್ಮಯ್ಯ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ನಮಗೆ ತಂಗಳು ಇರ್ತಿತ್ತು. ಇಡ್ಲಿ, ದೋಸೆ ಇರ್ತಿಲಿಲ್ಲ

ನಮಗೆ ಮನೆಯಲ್ಲಿ ತಂಗಳು ಇರ್ತಿತ್ತೇ ಹೊರತು, ಇಡ್ಲಿ, ದೋಸೆ, ಉಪ್ಪಿಟ್ಟು ಏನೂ ಇರ್ತಾ ಇರ್ಲಿಲ್ಲ. ರಾತ್ರಿ ಉಳಿದ ಮುದ್ದೆಗೆ ಮಜ್ಜಿಗೆ ಬೆರೆಸಿ ತಂಗಳು ತಿಂತಾ ಇದ್ವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆ ದಿನಗಳನ್ನು ಸ್ಮರಿಸಿದರು.

ರಾಯಚ್ಯನವರ ಸ್ಮಾರಕ‌ ಉದ್ಘಾಟನಾ ಭಾಷಣ ಶುರು ಮಾಡುವ ವೇಳೆಗೆ ಸಂಜೆ 4 ಗಂಟೆ ಆಗಿತ್ತು. ಊಟದ ಸಮಯ ತಡವಾದದ್ದನ್ನು ಪ್ರಸ್ತಾಪಿಸಿ ಕ್ಷಮೆ ಕೋರಿ ಭಾಷಣ ಆರಂಭಿಸಿದ ಮುಖ್ಯಮಂತ್ರಿಗಳು ಮೇಲಿನ‌ ಪ್ರಸಂಗ ನೆನಪಿಸಿಕೊಂಡರು.

ರಾಚಯ್ಯ ಅವರ ಮನೆಯಲ್ಲೂ ಇಡ್ಲಿ ದೋಸೆ ಇರ್ತಿಲಿಲ್ಲ ಅಂತ ಕಾಣ್ತದೆ. ಅವರೂ ನನ್ನಂಗೆ ತಂಗಳು ತಿಂದು ಗಟ್ಟಿಯಾದರು ಎಂದರು.

Continue Reading

Chamarajanagar

ಚೆಲುವ ಚಾಮರಾಜನಗರ ಭರಚುಕ್ಕಿ ಜಲಪಾತೋತ್ಸವ ಕ್ಕೆ ಇಂದು ಸಿಎಂ ರಿಂದ ಚಾಲನೆ: ಡಿಸಿ. ಶಿಲ್ಪಾ ನಾಗ್

Published

on

ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ ದಲ್ಲಿ ಇಂದು ಸಂಜೆ ಚೆಲುವ ಚಾಮರಾಜನಗರ ಭರಚುಕ್ಕಿ ಜಲಪಾತೋತ್ಸವ ಕ್ಕೆ ಸಿಎಂ ಸಿದ್ದರಾಮಯ್ಯ ನವರಿಂದ ಚಾಲನೆ ದೊರೆಯಲಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ರವರಿಂದ ಮಾಹಿತಿ,
ಮಾಧ್ಯಮ ಅವರೊಂದಿಗೆ ಮಾತನಾಡಿ ಜಿಲ್ಲಾಧಿಕಾರಿಗಳು ಎರಡು ದಿನಗಳ ಕಲಾ ನೆಡೆಯುವ ಕಾರ್ಯಕ್ರಮ ಕ್ಕೆ ಜಿಲ್ಲಾಡಳಿತ ಹಾಗೂ ಸ್ಥಳೀಯ ಶಾಸಕರಾದ ಮಂಜುನಾಥ್ ನವರ ಜಲಪಾತೋತ್ಸವ ಸಕಲ ಸಿದ್ಧತೆ ನೆಡೆದಿದೆ ಖ್ಯಾತ ಗಾಯಕ ರಾದ ಕಂಬದ ರಂಗಯ್ಯ,

ಅನನ್ಯ ಭಟ್, ರವರಿಂದ ರಸಮಂಜರಿ, ಜಾನಪದ ಡೊಳ್ಳು ವಾದ್ಯ,ಸ್ಥಳೀಯ ಕಲಾವಿದ ರಿಂದ ಹಾಡು ಗಾರಿಕೆ ಮತ್ತು ನೊರೆಯ ಹಾಲಿನಂತೆ ಬೋರ್ಗರೆಯುತ್ತಿರುವ ಜಲಪಾತ ಕ್ಕೆ ವರ್ಣ ರಂಜಿತ ದೀಪಾಲಂಕರ ಆಯೋಜನೆ ಮಾಡಲಾಗಿದೆ,
ಭರಚುಕ್ಕಿ ಜಲಪಾತ ವನ್ನು ರಾಷ್ಟ್ರೀಯ ಗಮನ ಸೆಳೆಯಲು
ಮತ್ತು ಪ್ರವಾಸೋದ್ಯಮದ ದೃಷ್ಟಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

Continue Reading

Chamarajanagar

ವಿಶೇಷ ಕಣ್ಣಿನ ಚಿರತೆ

Published

on

ಮೊಟ್ಟಮೊದಲ ಬಾರಿಗೆ ರಾಷ್ಟ್ರೀಯ ಉದ್ಯಾನವನ ಬಂಡಿಪುರ ಹುಲಿ ಸಂರಕ್ಷಿತ ಅರಣ್ಯ ವಲಯದಲ್ಲಿ ವಿಶೇಷ ಕಣ್ಣಿನ ಚಿರತೆ ಪತ್ತೆಯಾಗಿದೆ . ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯಲ್ಲಿ ಎರಡು ವಿಭಿನ್ನ ಬಣ್ಣದ ವಿಶೇಷ ಕಣ್ಣುಗಳುಳ್ಳ ಚಿರತೆ. ಪತ್ತೆಯಾಗಿದೆ ವನ್ಯ ಜೀವಿ ಛಾಯಾಗ್ರಹಕ ಧ್ರುವ ಪಾಟೀಲ್ ಎಂಬುವರು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ

Continue Reading

Trending

error: Content is protected !!