Connect with us

Mysore

ಇಲಾಖೆಗಳ ಸಮನ್ವಯದೊಂದಿಗೆ ಮಾಜಿ ಸೈನಿಕರ ಕುಂದುಕೊರತೆ ನಿವಾರಣೆ: ಜಿ.ಲಕ್ಷ್ಮೀಕಾಂತ್‌ ರೆಡ್ಡಿ

Published

on

ಮೈಸೂರು: ಜಿಲ್ಲೆಯ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರ ಕುಂದುಕೊರತೆಗಳನ್ನು ನಿವಾರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಾರ್ಯ ವ್ಯಾಪ್ತಿಗೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಅವಲಂಬಿತರ ಕುಂದು ಕೊರತೆ ಆಲಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ನೂರಾರು ಸಂಖ್ಯೆಯಲ್ಲಿ ಸೇರಿದ್ದ ಮಾಜಿ ಸೈನಿಕರು ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ಜಿಲ್ಲಾಧಿಕಾರಿಗಳು ಅಹವಾಲುಗಳನ್ನು ಸ್ವೀಕರಿಸಿ ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿದರು. ಇನ್ನು ಮುಂದೆಯೂ ಮಾಜಿ ಸೈನಿಕರ ಸಮಸ್ಯೆಗಳನ್ನು ಪ್ರಥಮ ಆದ್ಯತೆಯಾಗಿ ಪರಿಹರಿಸಲಾಗುವುದು ಎಂದು ತಿಳಿಸಿದರು.


ತಮ್ಮ ಹಂತದಲ್ಲಿ ಪ್ರತಿ ತಿಂಗಳು ಮಾಜಿ ಸೈನಿಕರ ಕುಂದು ಕೊರತೆಗಳ ಸಭೆ ನಡೆಸಿ ಪರಿಹರಿಸುವಂತೆ ಈ ಸಂಬಂಧ ವರದಿ ನೀಡುವಂತೆ ಉಪ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೆಶಕರಿಗೆ ಸೂಚನೆ ನೀಡಿದರು.

ಮಾಜಿ ಸೈನಿಕರಿಗೆ ನಿವೇಶನಗಳನ್ನು ನೀಡುವ ಕುರಿತು ನಗರಾಭಿವೃದ್ಧಿ ಹಾಗೂ ಪೌರಾಡಳಿತ ಇಲಾಖೆಗಳು ನಿಯಮಾನುಸಾರ ಕ್ರಮ ಕೂಗೊಳ್ಳುವಂತೆ ನಿರ್ದೇಶನ ನೀಡಿದರು.


ತಮ್ಮ ಅಹವಾಲುಗಳನ್ನು ಸಲ್ಲಿಸಿದ ನೂರಾರು ಮಾಜಿ ಸೈನಿಕರು ಸಭೆಯನ್ನು ಏರ್ಪಡಿಸಿದ್ದರಿಂದ ನಮ್ಮ ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಲು ಒಂದು ವೇದಿಕೆ ದೊರಕಿದಂತಾಗಿದೆ. ನಮ್ಮ ಹಲವಾರು ಸಮಸ್ಯೆಗಳು ಇಂದು ಪರಿಹಾರವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಕ್ಷಿತ್, ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತೆ ಕುಸುಮಾ ಕುಮಾರಿ ಸೇರಿದಂತೆ ನೂರಾರು ಮಾಜಿ ಸೈನಿಕರು ಹಾಗೂ ಅವರ ಅವಲಂಬಿರ ಕುಟುಂಬದವರು ಉಪಸ್ಥಿತರಿದ್ದರು.

Continue Reading

Mysore

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ವಿರೋಧ: ಕರ್ನಾಟಕ ಸೇನಾ ಪಡೆ ಧರಣಿ

Published

on

ಮೈಸೂರು:ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವುದನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ನಗರದ ಹಳೆಯ ಜಿಲ್ಲಾಧಿಕಾರಿ (DC) ಕಚೇರಿ ಮುಂಭಾಗ ತೀವ್ರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಸಾಲು ಸಾಲು ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. “ಬೇಡವೇ ಬೇಡ, ದಸರಾಗೆ ಕಂಬಳ ಬೇಡ” ಎಂದು ಪಟ್ಟು ಹಿಡಿದ ಸಂಘಟನೆಯ ಸದಸ್ಯರು, ಕಂಬಳ ಕ್ರೀಡೆಗೆ ನಮ್ಮ ಯಾವುದೇ ವಿರೋಧವಿಲ್ಲ; ಅದು ತುಳುನಾಡಿನ ಹೆಮ್ಮೆಯ ಸಾಂಸ್ಕೃತಿಕ ಪರಂಪರೆ. ಕಂಬಳ ಅಲ್ಲಿಗೇ ಸೀಮಿತವಾಗಿರಲಿ, ಮೈಸೂರಿಗೆ ದಸರಾ ಸಂಸ್ಕೃತಿಯೇ ಸರಿ. ಯಾವುದೇ ಕಾರಣಕ್ಕೂ ದಸರಾ ಉತ್ಸವದಲ್ಲಿ ಕಂಬಳವನ್ನು ಸೇರಿಸಿ ಇಲ್ಲಿನ ಸಾಂಪ್ರದಾಯಿಕ ಚೌಕಟ್ಟನ್ನು ಬದಲಾಯಿಸಬಾರದು ಎಂದು ಆಗ್ರಹಿಸಿದರು.

Continue Reading

Mysore

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಮೈಸೂರಿನಲ್ಲಿ ಐಎನ್‌ಟಿಯುಸಿ ಪ್ರತಿಭಟನೆ

Published

on

ಮೈಸೂರು: ನೀಟ್‌ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹಾಗೂ ಕೇಂದ್ರ ಸರ್ಕಾರದ ನಡೆ ಖಂಡಿಸಿ ಐಎನ್‌ಟಿಯುಸಿ (INTUC) ಕರ್ನಾಟಕ ರಾಜ್ಯ ಘಟಕದ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ರಾಮಸ್ವಾಮಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಐಎನ್‌ಟಿಯುಸಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ, ನೀಟ್‌ ಪರೀಕ್ಷೆ ಅಕ್ರಮದಿಂದ ಮನನೊಂದಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರಗಳನ್ನು ಪ್ರದರ್ಶಿಸಿ, ನೀಟ್‌ ಪರೀಕ್ಷೆ ಅಕ್ರಮದ ಹೊಣೆಗಾರಿಕೆಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು ಎಂದು ಒತ್ತಾಯಿಸಲಾಯಿತು. ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳಿಂದ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೀಡಾಗಿದ್ದು, ಇದರಿಂದ ಹಲವರು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಪರವಾಗಿ ಕಾರ್ಯನಿರ್ವಹಿಸುವ ಬದಲು ಅವರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಟೀಕಿಸಿದ ಪ್ರತಿಭಟನಾಕಾರರು, ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಆಡಳಿತವನ್ನು ಕೈಬಿಟ್ಟು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸುವ ನಿಟ್ಟಿನಲ್ಲಿ ಪಾರದರ್ಶಕ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆ ವೇಳೆ ಕೆಲಕಾಲ ರಾಮಸ್ವಾಮಿ ವೃತ್ತದಲ್ಲಿ ಘೋಷಣೆಗಳು ಮೊಳಗಿದವು.

Continue Reading

Mysore

ನೀಟ್‌ ಅಕ್ರಮ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ಖಂಡಿಸಿ ಮೈಸೂರಿನಲ್ಲಿ ಐಎನ್‌ಟಿಯುಸಿ ಪ್ರತಿಭಟನೆ

Published

on

ಮೈಸೂರು:ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಅದರಿಂದ ಕಂಗೆಟ್ಟು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ಖಂಡಿಸಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಐ.ಎನ್.ಟಿ.ಯು.ಸಿ (INTUC) ರಾಜ್ಯ ಘಟಕದ ವತಿಯಿಂದ ತೀವ್ರ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರು ನೀಟ್ ಅಕ್ರಮದಿಂದಾಗಿ ಪ್ರಾಣ ಕಳೆದುಕೊಂಡ ಅಮಾಯಕ ವಿದ್ಯಾರ್ಥಿಗಳ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರಗಳನ್ನು ಹಿಡಿದು, ಕೇಂದ್ರ ಸರ್ಕಾರವನ್ನು ಸಂವಿಧಾನ ಹಾಗೂ ವಿದ್ಯಾರ್ಥಿ ವಿರೋಧಿ ಎಂದು ಸಾಲು ಸಾಲು ಘೋಷಣೆಗಳನ್ನು ಕೂಗಿದರು. ಕೇಂದ್ರ ಸರ್ಕಾರ ತನ್ನ ಅಧಿಕಾರದ ಗುಂಡಾವರ್ತನೆಯನ್ನು ಬಿಟ್ಟು ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ತಕ್ಷಣವೇ ನ್ಯಾಯ ಒದಗಿಸಬೇಕು ಎಂದು ಮುಖಂಡರು ಆಗ್ರಹಿಸಿದರು.

Continue Reading

Trending

error: Content is protected !!