Chamarajanagar
ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿ.ಪಂ.ಸಿಇಒ ಮೋನಾ ರೋತ್ ಭೇಟಿ : ಪರಿಶೀಲನೆ
ಚಾಮರಾಜನಗರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಚಾಮರಾಜನಗರ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ದಿಢೀರ್ ಭೇಟಿ ನೀಡಿ, ವಿವಿಧ ಯೋಜನೆ ಕಾಮಗಾರಿ ಇನ್ನಿತರ ಕಾರ್ಯಗಳನ್ನು ಪರಿಶೀಲಿಸಿದರು.
ಉದ್ಯೋಗ ಖಾತರಿ ಯೋಜನೆ, ಎನ್.ಆರ್.ಎಲ್.ಎಂ, ಸ್ವಚ್ಛ ಭಾರತ್ ಮಿಷನ್ (ಗ್ರಾ), ಜಲಜೀವನ್ ಮಿಷನ್ ಯೋಜನೆ, ವಿವಿಧ ವಸತಿ ಯೋಜನೆ, 14 ಮತ್ತು 15ನೇ ಹಣಕಾಸು ಯೋಜನೆ ಹಾಗೂ ಇತರೆ ಗ್ರಾಮೀಣಾಭಿವೃದ್ದಿ ಯೋಜನೆಗಳಡಿ ಅನುಷ್ಟಾನಗೊಳಿಸಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಂಥಾಲಯ, ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಘಟಕ, ಕೂಸಿನ ಮನೆ ಕೇಂದ್ರಗಳ ಅನುಷ್ಟಾನ, ನಿರ್ವಹಣೆ ಹಾಗೂ ತೆರಿಗೆ ವಸೂಲಾತಿ ಕುರಿತಾದ ಕಡತಗಳು ಮತ್ತು ದಾಖಲಾತಿಗಳ ನಿರ್ವಹಣೆ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಹಾಜರಾತಿಯನ್ನು ವೀಕ್ಷಿಸಿದರು.
ಮಾದಾಪುರ ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿ ಗ್ರಂಥಾಲಯಕ್ಕೆ ಸದಸ್ಯತ್ವ ನೋಂದಣಿಯಾಗಿರುವ ಸದಸ್ಯರ ಸಂಖ್ಯೆ, ಗ್ರಂಥಾಲಯದಲ್ಲಿ ಸಂಗ್ರಹಿಸಲಾಗಿರುವ ಅಧ್ಯಯನ ಪುಸ್ತಕಗಳು, ಶಾಲಾ ಮಕ್ಕಳ ನೋಂದಣಿ, ಪುಸ್ತಕಗಳ ಸಂಗ್ರಹಣೆ ಮತ್ತು ನಿರ್ವಹಣೆ, ಗ್ರಂಥಾಲಯಕ್ಕೆ ಪ್ರತಿದಿನ ಭೇಟಿ ನೀಡುವವರ ಬಗ್ಗೆ ಗ್ರಂಥಾಲಯದ ಮೇಲ್ವಿಚಾರಕರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸದಸ್ಯರ ನೋಂದಣಿ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಅಗತ್ಯ ಕ್ರಮವಹಿಸುವ ಕುರಿತು ಸೂಚನೆಯನ್ನು ನೀಡಿದರು.

ಗ್ರಾಮದ ಅಂಗನವಾಡಿ ಕೇಂದ್ರ-1 ಮತ್ತು ಕೇಂದ್ರ-2ಕ್ಕೆ ಭೇಟಿ ನೀಡಿ, ಅಂಗನವಾಡಿಯಲ್ಲಿ ದಾಖಲಾಗಿರುವ ಮಕ್ಕಳ ಸಂಖ್ಯೆ, ಮಕ್ಕಳು ಹಾಗೂ ಗರ್ಭಿಣಿ-ಬಾಣಂತಿಯರಿಗೆ ನೀಡುತ್ತಿರುವ ಪೌಷ್ಠಿಕ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ಆಹಾರ ಪದಾರ್ಥಗಳ ದಾಸ್ತಾನು, ಅಂಗನವಾಡಿ ಕಾರ್ಯಕರ್ತೆ ಮತ್ತು ಮೇಲ್ವಿಚಾರಕರ ಹಾಜರಾತಿ, ದಾಸ್ತಾನು ವಹಿ ಹಾಗೂ ಇತರೆ ವೆಚ್ಚದ ವಹಿಗಳು, ಅಡುಗೆ ಕೋಣೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮತ್ತು ಸ್ವಚ್ಛತೆ ಕುರಿತು ವೀಕ್ಷಿಸಿದರು.
Chamarajanagar
ಬೆಳಗಿನ ವೇಳೆ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತರಿಂದ ಪ್ರತಿಭಟನೆ
ಕೊಳ್ಳೇಗಾಲ: ತಾಲೂಕಿನ ಕುಂತೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಗಲು ವೇಳೆಯಲ್ಲಿ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು.
ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕಚೇರಿ ಮುಂಭಾಗದಲ್ಲಿ ರೈತ ಮುಖಂಡ ಕುಂತೂರು ನಂಜುಂಡಸ್ವಾಮಿ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ ನಡೆಸಲಾಯಿತು.
ಕುಂತೂರು ಭಾಗದ ಜಮೀನುಗಳಿಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿರುವುದರಿಂದ ರೈತರು ಕೃಷಿ ಚಟುವಟಿಕೆಗಳಿಗೆ ಜಮೀನಿಗೆ ತೆರಳಲು ಕಾಡು ಪ್ರಾಣಿಗಳಿಂದ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಿನ ಸಮಯದಲ್ಲಿ ವಿದ್ಯುತ್ ಪೂರೈಕೆ ಮಾಡುವಂತೆ ರೈತರು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಸೆಸ್ಕ್ ಕಾರ್ಯಪಾಲಕ ಅಭಿಯಂತರ ತಬಸ್ಸುಮ್ ಆಗಮಿಸಿ ಮಾತನಾಡಿದ ಅವರು, ಬಳ್ಳಾರಿಯಿಂದ ಹೆಚ್ಚುವರಿ ವಿದ್ಯುತ್ ತರಲು ಹೆವಿ ಲೈನ್ ಕಾಮಗಾರಿ ನಡೆಯುತ್ತಿರುವ ಕಾರಣಕ್ಕೆ ರಾತ್ರಿ ವೇಳೆ ವಿದ್ಯುತ್ ನೀಡಲಾಗುತ್ತಿದೆ ಎಂದು ತಿಳಿಸಿದರು.
ಫೆ. 12ರ ನಂತರ ಬೆಳಗಿನ ಸಮಯದಲ್ಲಿ ಏಳು ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡುವುದಾಗಿ ಭರವಸೆ ನೀಡಿದರು. ಈ ಭರವಸೆಯ ಮೇರೆಗೆ ರೈತರು ಪ್ರತಿಭಟನೆಯನ್ನು ಕೈಬಿಟ್ಟು ತೆರಳಿದರು. ಈ ವೇಳೆ ಎಇಇ ರಾಜು ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ಕುಂತೂರು ನಂಜುಂಡಸ್ವಾಮಿ, ಗಿರೀಶ್ ಆಲಹಳ್ಳಿ, ತೋಟದಾರ್ಯ ತೇರಂಬಳ್ಳಿ, ಲೋಕೇಶ್, ರೇಚಣ್ಣ, ಸತೀಶ್, ಗುರುಪಾದಸ್ವಾಮಿ ತೇರಂಬಳ್ಳಿ, ಮಹೇಶ್, ಕುಂತೂರು ಮಲ್ಲಿಕಾರ್ಜುನ, ನಿರಂಜನಮೂರ್ತಿ, ಬಾಬು, ನಾಗೇಶ್, ಅಂಗಡಿ ರವಿ ಸೇರಿದಂತೆ ಹಲವರು ಭಾಗವಹಿಸಿದ್ದರು.
Chamarajanagar
ಗಾಜನೂರಿನಲ್ಲಿ ರಾಜಕುಮಾರ್ ಸರ್ಕಲ್ ಸ್ಥಾಪನೆ
ಚಾಮರಾಜನಗರ: ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ಗಾಜನೂರು ಗ್ರಾಮದಲ್ಲಿ ಗ್ರಾಮಸ್ಥರ ಮುಂದಾಳತ್ವದಲ್ಲಿ ಇಂದು ಕಣ್ಮನ ಸೆಳೆಯುವಂತೆ ವರನಟ ಡಾ. ರಾಜಕುಮಾರ್ ಅವರ ಹೆಸರಿನ ಸರ್ಕಲ್ ಸ್ಥಾಪಿಸಲಾಯಿತು.
ಗಾಜನೂರಿನ ಪೆಟ್ರೋಲ್ ಬಂಕ್ ಸಮೀಪದಲ್ಲಿರುವ ಸರ್ಕಲ್ ಗೆ ಡಾ.ರಾಜಕುಮಾರ್ ಅವರ ಹೆಸರನ್ನು ನಾಮಕರಣ ಮಾಡಲಾಗಿದ್ದು, ಇದೇ ಸಂದರ್ಭದಲ್ಲಿ ಡಾ.ರಾಜಕುಮಾರ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಿ ವಿವಿಧ ಪ್ರದರ್ಶನಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಮೆರಗು ನೀಡಿದವು.

ಈ ಸಂದರ್ಭದಲ್ಲಿ ಡಾ.ರಾಜಕುಮಾರ್ ಅವರ ಸಂಬಂಧಿಗಳಾದ ಗೋಪಾಲ್, ರಾಮಮೂರ್ತಿ, ಕದಿರಯ್ಯ ಮಾಸ್ಟರ್, ನಾಗರಾಜು, ಪ್ರೇಮಗೋಪಾಲ್, ಮಂಗಳಮ್ಮ ಸೇರಿದಂತೆ ದೊಡ್ಡ ಗಾಜನೂರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
Chamarajanagar
ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳ ಅಕಾಲಿಕ ಸಾವು: ಗ್ರಾಮಸ್ಥರಲ್ಲಿ ಆತಂಕ
ಹನೂರು: ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಮೇಯಲು ಹೋಗಿ ವಾಪಸ್ ಬರುತ್ತಿದ್ದ ಆರು ಹಸುಗಳು ಅಚಾನಕ್ ಮೃತಪಟ್ಟ ಘಟನೆ ನಡೆದಿದೆ. ಈ ಘಟನೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮೃತಪಟ್ಟ ಜಾನುವಾರುಗಳು ಗ್ರಾಮದ ಪರಶಿವ ಅವರಿಗೆ ಸೇರಿದವು ಎನ್ನಲಾಗಿದೆ. ವಿಷಯುಕ್ತ ಮೇವು ಸೇವನೆಯಿಂದಲೇ ಜಾನುವಾರುಗಳ ಸಾವು ಸಂಭವಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಜಾನುವಾರುಗಳು ಮೇಯಲು ಹೋಗಿ ಮರಳುವ ವೇಳೆ ಏಕಾಏಕಿ ಕುಸಿದು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ರೈತರು ಹಾಗೂ ಗ್ರಾಮಸ್ಥರು, ಸ್ಥಳಕ್ಕೆ ಪಶುವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಜಾನುವಾರುಗಳ ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ನಂತರವೇ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Politics19 hours agoಆಡಳಿತ- ವಿಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾದ ವಿಧಾನ ಪರಿಷತ್ ಕಲಾಪ
-
Special2 hours agoBSNL Recruitment 2026: ಬಿಎಸ್ಎನ್ಎಲ್ನಲ್ಲಿ ಭರ್ಜರಿ ನೇಮಕಾತಿ;ತಿಂಗಳಿಗೆ ₹90,000 ವರೆಗೆ ವೇತನ
-
Hassan17 hours agoಪ್ರತ್ಯೇಕ ಪ್ರಕರಣ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
-
Hassan21 hours ago2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ
-
National20 hours agoಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಭೂಪೇಂದ್ರ ಯಾದವ್ಗೆ ಎಚ್ಡಿಕೆ ಮನವಿ
-
Chikmagalur2 hours agoವಿವಾಹಿತ ಹಿಂದೂ ಮಹಿಳೆಯ ಜೊತೆ : ಸಿಕ್ಕಿ ಬಿದ್ದ ಕಾಂಗ್ರೆಸ್ ಮುಖಂಡ
-
Chamarajanagar20 hours agoಬೆಳಗಿನ ವೇಳೆ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತರಿಂದ ಪ್ರತಿಭಟನೆ
-
Mysore20 hours agoಜಿಲ್ಲಾ ಪೊಲೀಸರಿಂದ ಗೋದಾಮು, ಕೈಗಾರಿಕಾ ಶೋಧ
