Connect with us

Chikmagalur

ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

Published

on

 

ಚಿಕ್ಕಮಗಳೂರು : ಗಣಪತಿ ವಿಸರ್ಜನೆ ವೇಳೆ ಕೆರೆ ನೀರಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ೨೫ ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ. ಕುರುಬರಹಳ್ಳಿ ಕೆರೆಯಲ್ಲಿ ಕಳೆದ ರಾತ್ರಿ ಗಣಪತಿ ವಿಸರ್ಜನೆ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Chikmagalur

ಚಿಕ್ಕಮಗಳೂರು ನಗರ ವ್ಯಾಪ್ತಿಯ ಎಲ್ಲ ಠಾಣೆಯ ಸಿಬ್ಬಂದಿಗಳಿಂದ ಠಾಣೆಯಲ್ಲೇ ಮಾಹಿತಿ ಪಡೆಯಲಾಗುವುದು : ಐಜಿಪಿ ಚಂದ್ರಗುಪ್ತ

Published

on

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಎಸ್ ಪಿ ವರದಿ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಗಳಿಗೆ ಯಾವ ರೀತಿ ಸಮಸ್ಯೆಯಾಗುತ್ತಿದೆ ಎಂಬ ಬಗ್ಗೆ ಎಲ್ಲಾ ಸಿಬ್ಬಂದಿಗಳ ಜೊತೆ ಠಾಣೆಗಳಲ್ಲಿಯೇ ಮಾಹಿತಿ ಪಡೆಯುತ್ತೇವೆ ಎಂದು ಐಜಿಪಿ ಚಂದ್ರಗುಪ್ತ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರು ನಗರ ವ್ಯಾಪ್ತಿಯ 6 ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿಗಳಿಂದ ಈಗಾಗಲೇ ಮಾಹಿತಿ ಪಡೆಯಲಾಗಿದೆ ಎಂದರು.
ಪೊಲೀಸ್ ಇಲಾಖೆಗೆ ಹೆಚ್ಚಿನ ಜವಾಬ್ದಾರಿಯಿದೆ. ನಮ್ಮ ತೊಂದರೆಯ ಜೊತೆಗೆ ಬೇರೆಯವರ ತೊಂದರೆಯನ್ನು ನಾವು ನೋಡಬೇಕಿದೆ. ಹೀಗಾಗಿ ಸಿಬ್ಬಂದಿಗಳ ಜೊತೆ ಮಾತನಾಡಿ ಧೈರ್ಯ ತುಂಬಿದ್ದೇವೆ. ಎಲ್ಲರೂ ಅವರವರ ಕೆಲಸ ಮಾಡಿಕೊಂಡು ಹೋದರೆ ಸಮಸ್ಯೆ ಬರುವುದಿಲ್ಲ. ಶನಿವಾರ ನಡೆದ ಘಟನೆಯ ಬಗ್ಗೆಯೂ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ವಕೀಲರು ಹಾಗೂ ಪೊಲೀಸ್ ಸಿಬ್ಬಂದಿ ಮೇಲಿನ ಕೇಸ್ ಗಳ ಬಗ್ಗೆ ನಾವು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Continue Reading

Chikmagalur

ಕೊನೆಗೂ ಪ್ರತಿಭಟನೆ ಕೈಬಿಟ್ಟ ಪೊಲೀಸರು

Published

on

ವಕೀಲರ ಮೇಲೆ ಪ್ರತ್ಯೇಕವಾಗಿ ನಾಲ್ಕು ಎಫ್ಐಆರ್ ದಾಖಲು

ಚಿಕ್ಕಮಗಳೂರು: ವಕೀಲರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಆರಂಭಿಸಿದ್ದ ಪೊಲೀಸರು ಭಾನುವಾರ ಬೆಳಗಿನ ಜಾವ ಪ್ರತಿಭಟನೆ ಕೈಬಿಟ್ಟಿದ್ದಾರೆ.
ಐ ಜಿ ಪಿ ಶನಿವಾರ ರಾತ್ರಿ ಬಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದ ಕೆಲವೇ ಕ್ಷಣಗಳಲ್ಲಿ ಮತ್ತೆ ಪ್ರತಿಭಟನೆ ಆರಂಭಿಸಿದ್ದ ಪೊಲೀಸರು ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸಲಾರಂಭಿಸಿದ್ದರು. ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಪೊಲೀಸರು ಪ್ರತಿಭಟನೆಗೆ ಸಾಥ್ ನೀಡಿದ್ದರು. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮುಂದುವರಿಸಿದ್ದ ಪೊಲೀಸರು. ಕೊನೆಗೂ ಪೊಲೀಸರ ಬೇಡಿಕೆಗೆ ಸ್ಪಂದಿಸಿದ ಹಿರಿಯ ಅಧಿಕಾರಿಗಳು. ಹೀಗಾಗಿ ಭಾನುವಾರ ಬೆಳಗ್ಗೆ ಐದು ಮೂವತ್ತಕ್ಕೆ ಪ್ರತಿಭಟನೆ ಹಿಂಪಡೆದ ಪೊಲೀಸರು.


ಪೊಲೀಸರ ಪ್ರತಿಭಟನೆ ಹಿನ್ನೆಲೆಯಲ್ಲಿ ವಕೀಲರ ಮೇಲೆ ಪ್ರತ್ಯೇಕವಾಗಿ ನಾಲ್ಕು ಎಫ್ಐಆರ್ ದಾಖಲಿಸಿರುವ ಪೊಲೀಸ್ ಅಧಿಕಾರಿಗಳು. ಇದರ ಜೊತೆಗೆ ಈಗಾಗಲೇ ಅಮಾನತ್ತಾಗಿರುವ ಪೊಲೀಸರ ಅಮಾನತು ಆದೇಶ ಹಿಂಪಡೆಯಲು ಸಮಯವಕಾಶ ಕೇಳಿದ ಎಸ್ ಪಿ. ಬೆಳಗಿನ ಜಾವ ದೂರವಾಣಿ ಕರೆಯಲ್ಲಿ ಸಿಬ್ಬಂದಿಗಳ ಜೊತೆ ಮಾತನಾಡಿದ ಎಸ್ ಪಿ. ಹೀಗಾಗಿ ಪ್ರತಿಭಟನೆ ಹಿಂಪಡೆದ ಪೊಲೀಸ್ ಸಿಬ್ಬಂದಿಗಳು. ಮಂಗಳವಾರ ಹೈಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆದು ಇಲಾಖೆಗೆ ಸಹಕಾರ ನೀಡಿರುವ ಪೊಲೀಸ್ ಸಿಬ್ಬಂದಿ

Continue Reading

Chikmagalur

ಹೃದಯಾಘಾತದಿಂದ ಕರ್ತವ್ಯನಿರತ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಸಾವು

Published

on

ಮೂಡಿಗೆರೆ, ಗುತ್ತಿಹಳ್ಳಿ , ಹೆಸ್ಗೋಡ್ ಗ್ರಾಮಕ್ಕೆ ಹೋಗುವ ದಾರಿ ಮಧ್ಯೆ ಚಾಲಕನಿಗೆ ಹೃದಯಾಘಾತ

ಬಸ್ ಚಾಲನೆ ಮಾಡಿವಾಗ ಚಾಲಕನಿಗೆ ಕಾಣಿಸಿಕೊಂಡ ಎದೆ ನೋವು

ತೀವ್ರ ಎದೆ ನೋವಿನಿಂದ ರಸ್ತೆ ಮಧ್ಯೆ ಬಸ್ ನಿಲ್ಲಿಸಿದ ಚಾಲಕ

ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಚಾಲಕ ರವಿ ಲಮಾಣಿ (46) ಸಾವು

ಮೂಡಿಗೆರೆ ತಾಲ್ಲೂಕಿನ ಹೆಸಗೊಡ್ ಗ್ರಾಮದ ಬಳಿ ಘಟನೆ

ಕೊಪ್ಪಳದ ಕೂಕ್ನೂರ್ ಗ್ರಾಮದ ನಿವಾಸಿ ರವಿ ಲಮಾಣಿ

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು

Continue Reading

Trending

error: Content is protected !!