Chamarajanagar
ದಾಖಲಾತಿ ಗಣಕೀಕರಣಕ್ಕೆ ಜಿಲ್ಲೆಯ ಯಳಂದೂರು ಆಯ್ಕೆ
ಯಳಂದೂರು: ಕಂದಾಯ ಇಲಾಖೆಯು ನೇರವಾಗಿ ಜನರಿಗೆ ಮತ್ತು ರೈತರಿಗೆ ಸಂಬಂಧಪಟ್ಟ ಇಲಾಖೆಯನ್ನು ಗಣಕೀಕರಣ ಮಾಡುವ ಮುಖಾಂತರ ಯಾವಾಗ ಬೇಕಾದರೂ ದಾಖಲೆಗಳನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ. ದಾಖಲಾತಿ ಗಣಕೀಕರಣ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಯಳಂದೂರು ತಾಲೂಕು ಆಯ್ಕೆ ಮಾಡಿಕೊಳ್ಳಲಾಗಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ತಾಲೂಕುಗಳಿಗೆ ವಿಸ್ತರಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ತಿಳಿಸಿದರು.

ಅವರು ಪಟ್ಟಣದ ತಹಸಿಲ್ದಾರ್ ಕಚೇರಿಯಲ್ಲಿ ನಡೆದ ಅಭಿಲೇಖಾಲಯದ ದಾಖಲೆಗಳನ್ನು ತಂತ್ರಾಂಶದಲ್ಲಿ 100 ದಿನಗಳ ಅವಧಿ ಒಳಗೆ ಸಂಪೂರ್ಣವಾಗಿ ಗಣಕೀಕರಣಗೊಳಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲಾಧಿಕಾರಿ ಶಿಲ್ಪನಾಗ್ ಮಾತನಾಡಿ ಅಭಿಲೇಕಾಲಯದ ದಾಖಲೆಗಳನ್ನು ಗಣಕೀಕರಣಗೊಳಿಸುವ ತಂತ್ರಾಂಶದಿಂದ ಪಾರದರ್ಶಕತೆ ಮೂಡುತ್ತದೆ. ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆದಾಟ ನಿಲ್ಲುತ್ತದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ತಾಲೂಕಿನ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ತಪಾಸಣೆ ಮಾಡಿ ಅವರ ಮಾರ್ಗದರ್ಶನದ ಜೊತೆಗೆ ಹಳೆಯ ದಾಖಲೆಗಳನ್ನು ನವೀಕರಣ ಮಾಡಿಕೊಳ್ಳಲಾಗುತ್ತಿದೆ ಇದಕ್ಕಾಗಿ ಎಂಟು ಕಂಪ್ಯೂಟರ್ 3 ಸ್ಕ್ಯಾನರ್ ಮತ್ತು 10 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಶಾಸಕ ಎಆರ್ ಕೃಷ್ಣಮೂರ್ತಿ ಮಾತನಾಡಿ ಬೆಳಂದೂರು ತಹಸೀಲ್ದಾರ್ ಕಚೇರಿ ರಾಜ್ಯದಲ್ಲಿ ಮೊದಲನೇ ಸ್ಥಾನದಲ್ಲಿ ಹೊರಹಮ್ಮಿದೆ. ರೈತ ಬಾಂಧವರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. 1919 20ರ ಹಿಂದಿನ ದಾಖಲೆಗಳು ಇವೆ ಅದನ್ನೆಲ್ಲಾ ನವೀಕರಣ ಮಾಡುವ ಮುಖಾಂತರ ಯಾವಾಗ ಬೇಕಾದರೂ ದಾಖಲೆಗಳನ್ನು ಪಡೆದುಕೊಳ್ಳಬಹುದು. ದಾಖಲಾತಿ ದೃಷ್ಟಿಯಿಂದ ಯಾರು ಸಹ ಮೂಲ ದಾಖಲಾತಿಗೆ ಯಾರು ಏನು ಮಾಡಲು ಸಾಧ್ಯವಿಲ್ಲ. ಸಾರ್ವಜನಿಕರು ದಿನನಿತ್ಯ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಇಲ್ಲ ಎಂದು ತಿಳಿಸಿದರು.

ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಅಪರ ಜಿಲ್ಲಾಧಿಕಾರಿ ಗೀತಾ ಹುಡೆದ್, ತಹಶೀಲ್ದಾರ್ ಜಯಪ್ರಕಾಶ್, ಮಂಜುಳಾ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್, ಪಟ್ಟಣ ಪಂಚಾಯತಿ ಸದಸ್ಯ ಮಹೇಶ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರು ಸೇರಿದಂತೆ ಸಿಬ್ಬಂದಿಗಳು ಸಾರ್ವಜನಿಕರು ಹಾಗೂ ಮುಖಂಡರುಗಳು ಹಾಜರಿದ್ದರು.
Chamarajanagar
ಚಂಡು ಹೂ ಕಾರ್ಖಾನೆ ಮುಚ್ಚಿಸುವಂತೆ ಒತ್ತಾಯ:ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕಗ್ಗಳದಗುಂಡಿ ಗ್ರಾಮದ ಸಮೀಪವಿರುವ ಚಂಡು ಹೂ ಕಾರ್ಖಾನೆಯನ್ನು ಮುಚ್ಚಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಗುಂಡ್ಲುಪೇಟೆಯಿಂದ ಬೈಕ್ ರ್ಯಾಲಿ ಮೂಲಕ ನಗರದ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ರೈತ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ರೈತ ಮುಖಂಡ ಹೊನ್ನೂರು ಪ್ರಕಾಶ್ ಮಾತನಾಡಿದರು.
ಪ್ರತಿಭಟನೆಯಲ್ಲಿ ವಿವಿಧ ತಾಲ್ಲೂಕಿನ ರೈತ ಮುಖಂಡರು ಭಾಗವಹಿಸಿದ್ದರು.
Chamarajanagar
ಬೈಕ್ ಡಿಕ್ಕಿ : ಸ್ಕೂಟರ್ ಸವಾರ ಸಾ*ವು
ಚಾಮರಾಜನಗರ: ತಾಲ್ಲೂಕಿನ ಸಂತೇಮರಹಳ್ಳಿ ಪೆಟ್ರೋಲ್ ಬಂಕ್ ಸಮೀಪದಲ್ಲಿ ಬೈಕ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಸಂಭವಿಸಿದೆ.
ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ನಿವಾಸಿ ಮಹದೇವಸ್ವಾಮಿ(50) ಮೃತ ವ್ಯಕ್ತಿ.
ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮಹದೇವಸ್ವಾಮಿ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವದಿಂದ ಸ್ಥಳದಲ್ಲೇ ಮೃತ.
ವಿಷಯ ತಿಳಿದು ಸ್ಥಳಕ್ಕೆ ಸಂತೇಮರಹಳ್ಳಿ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಸಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chamarajanagar
ಮ.ಮ.ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ: 28 ದಿನಗಳ ಅವಧಿಯಲ್ಲಿ 2.53 ಕೋಟಿ ರೂ. ಸಂಗ್ರಹ
ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 2.53 ಕೋಟಿ ಸಂಗ್ರಹವಾಗಿದೆ.
ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಹಾಗೂ ಸಾಲೂರು ಬೃಹನ್ ಮಠದ ಅಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ರವರ ಸಮ್ಮುಖದಲ್ಲಿ ಇಂದು ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಗೊಂಡು ಸಂಜೆ 6 ಗಂಟೆಗೆ ಮುಕ್ತಾಯವಾಯಿತು.

ಸರ್ಕಾರಿ ರಜಾ ದಿನ, ಅಮಾವಾಸ್ಯೆ , ಕಾರ್ತಿಕ ಮಾಸ, ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದu ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಬಾರಿ 28 ದಿನಗಳ ಅವಧಿಯಲ್ಲಿ 2,53,98,859 ನಗದು ಹಣ, 25 ಗ್ರಾಂ ಚಿನ್ನ ಹಾಗೂ 1 ಕೆಜಿ 253 ಗ್ರಾಂ ಬೆಳ್ಳಿಯ ವಸ್ತುಗಳನ್ನು ಹುಂಡಿಗೆ ಕಾಣಿಕೆ ಸಲ್ಲಿಸಿದ್ದಾರೆ. ಅಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 3 ನೋಟುಗಳು 16 ವಿದೇಶಿ ನೋಟುಗಳು ಕಂಡುಬಂದಿವೆ.
ಈ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಮಹದೇವು.ಸಿ, ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಧೀಕ್ಷಕರಾದ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ , ಭಾರತಿ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.
-
Kodagu7 hours agoಆಮೆಗತಿಯಲ್ಲಿ ಸಾಗುತ್ತಿರುವ ರಸ್ತೆ ಕಾಮಗಾರಿ: ಎಸ್ಟಿ ಮೋರ್ಚಾ ಅಸಮಾಧಾನ
-
Chamarajanagar21 hours agoಮ.ಮ.ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ: 28 ದಿನಗಳ ಅವಧಿಯಲ್ಲಿ 2.53 ಕೋಟಿ ರೂ. ಸಂಗ್ರಹ
-
State21 hours agoದ್ವೇಷ ಭಾಷಣ, ದ್ವೇಷ ಅಪರಾಧಗಳ ವಿಧೇಯಕ ಮಂಡಿಸಿದ ಡಾ.ಜಿ.ಪರಮೇಶ್ವರ್
-
Kodagu20 hours agoಪ್ರಧಾನಿ ಬಗ್ಗೆ ಅವಹೇಳನ – ಮಡಿಕೇರಿಯ ಮೂವರ ಬಂಧನ
-
Chamarajanagar23 hours agoರಾಗಿ ಒಕ್ಕಣೆ ಮಿಷನ್ ನಿಂದ ಕೂಲಿ ಕಾರ್ಮಿಕಳೊಬ್ಬಳ ಕೈ ತುಂಡು
-
Hassan23 hours agoಗಾಂಜಾ ಅಮಲಿನಲ್ಲಿ ಯುವಕನೋರ್ವನ ಹ*ತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು
-
Kodagu19 hours agoಕೊಡಗಿನ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್
-
Special20 hours ago14.21 ಲಕ್ಷ ರೈತರಿಗೆ ಬೆಳೆ ಹಾನಿ ಪರಿಹಾರ ವಿತರಣೆ: ರಾಜ್ಯ ಸರ್ಕಾರದ ಮಹತ್ವದ ಘೋಷಣೆ
