State
ಫೆ.11 ರಿಂದ 14ರ ವರೆಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ
ಬೆಂಗಳೂರು: ಇದೇ ಫೆಬ್ರವರಿ 11 ರಿಂದ 14ರ ವರೆಗೆ ನಮ್ಮ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ರಾಜ್ಯ ಸರ್ಕಾರ ಆಯೋಜಿಸಿದೆ.
ಜಪಾನ್, ಆಸ್ಟ್ರೇಲಿಯಾ, ಫ್ರಾನ್ಸ್, ಸಿಂಗಾಪುರ ಸೇರಿದಂತೆ 19 ದೇಶಗಳ 2 ಸಾವಿರ ಮಂದಿ ಹೂಡಿಕೆದಾರರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದು, ರಾಜ್ಯಕ್ಕೆ ಬರೋಬ್ಬರಿ 10 ಲಕ್ಷ ಕೋಟಿ ರೂಪಾಯಿಗಳ ಬಂಡವಾಳ ಹರಿದು ಬರುತ್ತಿದೆ.
Special
2025-26 ನೇ ಸಾಲಿನ “ಉತ್ತಮ ಸಾವಯವ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನ
ಕರ್ನಾಟಕ ಜೀವವೈವಿಧ್ಯ ಮಂಡಳಿ (Karnataka Biodiversity Board) 2025-26ನೇ ಸಾಲಿನ “ಉತ್ತಮ ಜೀವವೈವಿಧ್ಯ / ಸಾವಯವ ಕೃಷಿಕ ಪ್ರಶಸ್ತಿ”ಗಾಗಿ ಅರ್ಜಿ ಆಹ್ವಾನಿಸಿದೆ. ನೈಸರ್ಗಿಕ ಹಾಗೂ ಪರಿಸರ ಸ್ನೇಹಿ ಕೃಷಿಯನ್ನು ಉತ್ತೇಜಿಸಲು, ಮಣ್ಣಿನ ಆರೋಗ್ಯ ಕಾಪಾಡುವ ರೈತರನ್ನು ಸನ್ಮಾನಿಸಲು ಈ ಪ್ರಶಸ್ತಿ ಪ್ರತಿ ವರ್ಷ ನೀಡಲಾಗುತ್ತದೆ.
ಪ್ರಶಸ್ತಿ ಯಾವ ವಿಭಾಗಗಳಲ್ಲಿ ಲಭ್ಯ?
•ಜೀವವೈವಿಧ್ಯ ಸಂರಕ್ಷಣೆ
•ಸಾವಯವ–ಪಾರಂಪರಿಕ ಕೃಷಿ ಪದ್ಧತಿ ಅನುಸರಿಸುವ ಅತ್ಯುತ್ತಮ ರೈತ
•ಅತ್ಯುತ್ತಮ ಜೀವವೈವಿಧ್ಯ ನಿರ್ವಹಣಾ ಸಮಿತಿ
•ಜೀವವೈವಿಧ್ಯ ವಿಷಯದ ಅತ್ಯುತ್ತಮ ಫೋಟೋ/ವೀಡಿಯೊ
•“ವೈದ್ಯ ಶರಣ ಸಂಗಣ್ಣ” ವಿಶೇಷ ಪ್ರಶಸ್ತಿ

ಬಹುಮಾನದ ವಿವರ:
ಪ್ರತಿ ಆಯ್ಕೆಗೊಂಡ ವಿಜೇತರಿಗೆ 50,000 ರೂ. ನಗದು ಬಹುಮಾನ ಹಾಗೂ ಅಧಿಕೃತ ಪ್ರಶಸ್ತಿ ಪ್ರಮಾಣಪತ್ರ
ಅರ್ಹತೆ:
•ಕರ್ನಾಟಕ ರಾಜ್ಯದಲ್ಲಿ ವಾಸಿಸುವ ವೈಯಕ್ತಿಕ ರೈತರು, ಮಹಿಳಾ ರೈತರು, ಸಂಘಗಳು ಮತ್ತು ಸಂಸ್ಥೆಗಳು.
•ಕನಿಷ್ಠ ಮೂರು ವರ್ಷಗಳಿಂದ ಜೈವಿಕ/ಪಾರಂಪರಿಕ ಕೃಷಿ ಪದ್ಧತಿಗಳನ್ನು ಅನುಸರಿಸಿರುವವರು.
•ಸರ್ಕಾರದ ನೌಕರರು, ಇಲಾಖೆಗಳ ಸಿಬ್ಬಂದಿ ಹಾಗೂ ಹಿಂದೆ ಈ ಪ್ರಶಸ್ತಿ ಪಡೆದವರು ಅರ್ಹರಲ್ಲ.
ಅರ್ಜಿ ಸಲ್ಲಿಸುವ ವಿಧಾನ:
•ಅರ್ಜಿ ನಿಗದಿತ ನಮೂನೆಯನ್ನು ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿ ಭರ್ತಿ ಮಾಡಬೇಕು.
•ಎಲ್ಲಾ ದಾಖಲೆಗಳನ್ನು ಸೇರಿಸಿ, ಮುಚ್ಚಿದ ಲಕೋಟೆಯಲ್ಲಿ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು:
[ಕರ್ನಾಟಕ ಜೀವವೈವಿಧ್ಯ ಮಂಡಳಿ,
ನೆಲ ಮಹಡಿ, ವನವಿಕಾಸ ಕಟ್ಟಡ,
18ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು – 560003]
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31 ಡಿಸೆಂಬರ್ 2025
ಅಧಿಕೃತ ವೆಬ್‌ಸೈಟ್: kbb.karnataka.gov.in
ಜೈವಿಕ ಕೃಷಿಯನ್ನು ನಿಷ್ಠೆಯಿಂದ ಅನುಸರಿಸುತ್ತಿರುವವರಿಗೆ ಇದು ದೊಡ್ಡ ಅವಕಾಶ. ಈ ಪ್ರಶಸ್ತಿ ರೈತರ ಕೆಲಸಕ್ಕೆ ಗೌರವ ನೀಡುವುದಷ್ಟೇ ಅಲ್ಲ, ರಾಜ್ಯದಲ್ಲಿ ಪರಿಸರ ಸಂರಕ್ಷಣೆಗೆ ಸಹ ಸಹಕಾರಿಯಾಗುತ್ತದೆ.
Hassan
ಬೆಳಗಾವಿ ಅಧಿವೇಶನದಲ್ಲಿ ಆನ್ ಲೈನ್ ಗೇಮ್, ಸೈಬರ್ ಕ್ರೈಮ್ ವಿರುದ್ದ ಧ್ವನಿ ಎತ್ತಿದ ಶಾಸಕ ಸಿಮೆಂಟ್ ಮಂಜು
ಬೆಳಗಾವಿ/ಸಕಲೇಶಪುರ: ರಾಜ್ಯದಲ್ಲಿ ಆನ್ ಲೈನ್ ಬೆಟ್ಟಿಂಗ್, ಆನ್ ಲೈನ್ ಗೇಮ್ಸ್ ಗಳನ್ನು ನಿಷೇಧ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಶಾಸಕ ಸಿಮೆಂಟ್ ಮಂಜು ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಇಂದು ಮಾತನಾಡಿದ ಅವರು , ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಹಾಗೂ ಆನ್ ಲೈನ್ ಗೇಮಿಂಗ್ ಆ್ಯಪ್‌ಗಳ ವ್ಯಸನಕ್ಕೆ ಹಾಸನ ಜಿಲ್ಲೆಯಲ್ಲಿ ಮಾತ್ರವಲ್ಲದೇ ರಾಜ್ಯದ ಹಲವೆಡೆ ಯುವಕರು ಈ ವ್ಯಸನಕ್ಕೆ ಬಲಿಯಾಗಿ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಸೈಬರ್ ಕ್ರೈಂ ಗಳಿಗೆ ಒಳಗಾಗಿ ಸಾವಿರಾರು ಯುವಕರು ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಪ್ರಸ್ತುತ ಇಡೀ ದೇಶದಲ್ಲಿ ಸೈಬರ್ ಅಪರಾಧಗಳ ಕುರಿತು ಕರ್ನಾಟಕದಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಈ ಕುರಿತು ಸರ್ಕಾರ ಗಮನ ಹರಿಸಿ ಸೂಕ್ತ ರೀತಿಯ ಕಾನೂನು ರೂಪಿಸಬೇಕು ಹಾಗೂ ಕೇಂದ್ರ ಸರ್ಕಾರದ ಸೈಬರ್ ಕ್ರೈಂ ಸಹಾಯವಾಣಿ (1930) ರ ಮಾದರಿ ರಾಜ್ಯ ಸರ್ಕಾರದ ವತಿಯಿಂದಲೂ ಸಹಾಯವಾಣಿ ಸ್ಥಾಪಿಸುವ ಮೂಲಕ ಸೈಬರ್ ಅಪರಾಧಗಳನ್ನು ತಡೆಗಟ್ಟಲು ಕ್ರಮ ವಹಿಸಬೇಕೆಂದು ಗೃಹಸಚಿವರಿಗೆ ತಿಳಿಸಿದರು.
State
ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ ಹೆಮ್ಮೆ, ಸ್ವಾಭಿಮಾನದ ಸಂಕೇತವಾಗಿದೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಇಂದು ಅನಾವರಣಗೊಳಿಸಲಾಗಿದ್ದು, ಇದಕ್ಕೆ ಕಾರಣರಾದ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಮತ್ತು ಕಲಬುರಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರ ಕುಟುಂಬಸ್ಥರಿಗೂ ಸರ್ಕಾರದಿಂದ ಮುಖ್ಯಮಂತ್ರಿಗಳು ಅಭಿನಂದಿಸಿದರು.

ಸ್ವಾತಂತ್ರ‍್ಯ ಚಳವಳಿಯ ಸಂದರ್ಭದಲ್ಲಿ ತ್ರಿವರ್ಣ ಧ್ವಜವನ್ನು ಜಾರಿಗೆ ತಂದರು. ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ. ಈ ಧ್ವಜದಲ್ಲಿ ಮೂರು ವರ್ಣ ಮತ್ತು ಅಶೋಕ ಚಕ್ರವನ್ನು ಒಳಗೊಂಡಿದೆ. ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳಿದ್ದು, ದೇಶದ ಸ್ವಾಭಿಮಾನ, ಆರ್ಥಿಕತೆ ಮತ್ತು ತ್ಯಾಗಬಲಿದಾನ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಹಾಗೂ ಭಾರತೀಯರಿಗೆ ರಾಷ್ಟ್ರಭಕ್ತಿಯನ್ನು ಸಾರುವ ಸಂದೇಶವನ್ನು ನೀಡುತ್ತದೆ. ಬಿಳಿಬಣ್ಣ ಶಾಂತಿ ಮತ್ತು ಸತ್ಯವನ್ನು ಪ್ರತಿನಿಧಿಸಿದರೆ, ಹಸಿರು ಸಮೃದ್ಧಿಯನ್ನು ಬಿಂಬಿಸುತ್ತದೆ. ಅಶೋಕ ಚಕ್ರ ನಿರಂತರವಾಗಿ ದೇಶದ ಆರ್ಥಿಕತೆಯನ್ನು, ಹಾಗೂ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವುದರ ಸಂಕೇತವಾಗಿದೆ ಎಂದು ಹೇಳಿದರು.
ನಮ್ಮ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಗೌರವಿಸಿ ಹೆಮ್ಮೆಯಿಂದ ಕಾಣಬೇಕು. ಪ್ರತಿಯೊಬ್ಬರೂ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು. ಈ ಸಂದರ್ಭದಲ್ಲಿ ರಾಷ್ಟ್ರಕ್ಕಾಗಿ ತ್ಯಾಗಬಲಿದಾನ, ಹೋರಾಟ ಮಾಡಿದವರನ್ನು ಸ್ಮರಿಸುವುದು ಅಗತ್ಯ. ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರ ಹೋರಾಟ ನಡೆಯಿತು. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಗಾಂಧೀಜಿ ವಹಿಸಿದ್ದರು. ಇದು ನಡೆದು ನೂರು ವರ್ಷಗಳಾದ ಹಿನ್ನೆಲೆ ಕಳೆದ ವರ್ಷ ಬೆಳಗಾವಿಯಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಸುವರ್ಣ ಸೌಧದ ಪಕ್ಕದಲ್ಲಿ ಸ್ಥಾಪಿಸಲಾಗಿದೆ ಎಂದರು.
ನಾವೆಲ್ಲರೂ ದೇಶಪ್ರೇಮಿಗಳಾಗಬೇಕು. ದೇಶದಲ್ಲಿ ಅನೇಕ ಜಾತಿ, ಧರ್ಮಗಳಿದ್ದು, ನಾವೆಲ್ಲರೂ ಜಾತ್ಯತೀತರಾಗಬೇಕಾಗಿರುವುದು ಅವಶ್ಯಕ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಜಾತ್ಯತೀತ ರಾಷ್ಟ್ರ ನಿರ್ಮಾಣ ಕಷ್ಟವಾಗುತ್ತದೆ ಎಂದು ತಿಳಿಸಿದರು.
ಸ್ವಾತಂತ್ರ‍್ಯ ಬಂದು 79 ವರ್ಷಗಳಾಗಿವೆ. ನಾವೆಷ್ಟರಮಟ್ಟಿಗೆ ಭ್ರಾತೃತ್ವ, ದೇಶಪ್ರೇಮ, ಮನುಷ್ಯ ಸಮಾಜವನ್ನು ಈ ದೇಶದಲ್ಲಿ ಸಾಧಿಸಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದಿಲ್ಲದೇ ಹೋದರೆ ಮನುಷ್ಯರಾಗಿ ಬಾಳುವುದು ಸಾಧ್ಯವಿಲ್ಲ. ಎಲ್ಲ ವಿದ್ಯಾರ್ಥಿಗಳಲ್ಲಿ, ಯುವಕರಲ್ಲಿ ಈ ಮನೋಭಾವ ಬೆಳೆಯಬೇಕು ಎಂದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ಓದಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಅದಕ್ಕಾಗಿಯೇ ಇಂಥ ಐತಿಹಾಸಿಕ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರು ಕೊಟ್ಟಿರುವ ರಾಷ್ಟ್ರಧ್ವಜಕ್ಕಾಗಿ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ಸಲ್ಲಿಸಿದರು.
-
Hassan16 hours agoಎಲೈಟ್ ಸಂಸ್ಥೆಯ ನಾಗರಾಜ್ಗೆ ’ಕರ್ನಾಟಕ ಗುರುರತ್ನ ಪ್ರಶಸ್ತಿ-2025’
-
Mysore23 hours agoಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ಗೆ ಏಕವಚನ ಬಳಕೆ: ಸಿಎಂ ವಿರುದ್ಧ ಹೇಮಾ ನಂದೀಶ್ ಅಸಮಾಧಾನ
-
Mysore21 hours agoಚಾಮುಂಡಿಬೆಟ್ಟದ ವಿಶೇಷ ದರ್ಶನ, ಸೇವೆಗಳ ಶುಲ್ಕ ಹೆಚ್ಚಳ ವಿರೋಧಿಸಿ ಪ್ರತಿಭಟನೆ
-
Mandya15 hours agoಭತ್ತ ಮತ್ತು ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗಧಿ
-
Manglore14 hours agoದ.ಕ.ಜಿಲ್ಲೆಯಲ್ಲಿ ಪ್ರತೀಕಾರದ ಕೊಲೆಗೆ ಕುಮ್ಮಕ್ಕು: 16 ಇನ್ಸ್ಟ್ಗ್ರಾಮ್ ಪೇಜ್ಗಳ ವಿರುದ್ಧ FIR ದಾಖಲು
-
Sports13 hours agoInd v/s SA 1st T-20: ಸೌತ್ ಆಫ್ರಿಕಾ ಆಲೌಟ್, ಟೀಂ ಇಂಡಿಯಾಗೆ 101 ರನ್ಗಳ ಭರ್ಜರಿ ಜಯ
-
Hassan17 hours agoಈ ಶಿಕ್ಷಕ ಎಣ್ಣೆದಾಸ, ಆತನ ಹೆಂಡತಿ ಮಕ್ಕಳ ಪಾಲಿಗೆ ರಾಕ್ಷಸಿ: ಕಾನೂನು ಕ್ರಮಕೈಗೊಳ್ಳುವಂತೆ ಗ್ರಾಮಸ್ಥರಿಂದ ಆಗ್ರಹ
-
Hassan17 hours agoNOC ಇಲ್ಲದೇ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಜಿಲ್ಲಾಡಳಿತ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಲಿ: ಆರ್. ಮರಿಜೋಸೆಫ್ ಆಗ್ರಹ
