Connect with us

Kodagu

ಗೋಣಿಕೊಪ್ಪ: ಸಾಂಸ್ಕೃತಿ ಕಾರ್ಯಕ್ರಮಗಳ ಪ್ರಾರಂಭಕ್ಕೆ ಚಾಲನೆ

Published

on

ಗೋಣಿಕೊಪ್ಪ : ಶ್ರೀ ಕಾವೇರಿ ದಸರಾ ಸಮಿತಿಯ ೪೭ನೇ ದಸರಾ ಜನೋತ್ಸವ ಆಚರಣೆಯ ಸಾಂಸ್ಕೃತಿ ಕಾರ್ಯಕ್ರಮಗಳ ಪ್ರಾರಂಭಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಚಾಲನೆ ನೀಡಿದರು.

ಪ್ರಾಥಮಿಕ ಶಾಲಾ ಮೈದಾನದಲ್ಲಿ ನಿರ್ಮಿಸಿರುವ ಶ್ರೀ ಕಾವೇರಿ ಕಲಾವೇದಿಕೆಯಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಸಾಂಸ್ಕöÈತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಮುಂದಿನ ವರ್ಷಗಳಲ್ಲಿ ಗೋಣಿಕೊಪ್ಪ ದಸರಾ ಆಚರಣೆಗೆ ಒಂದು ಕೋಟಿ ಅನುದಾನವನ್ನು ಒದಗಿಸಿಕೊಡುವ ಭರವಸೆಯನ್ನು ನೀಡಿದರು.
ದಸರಾ ನಾಡಿನ ಹಬ್ಬವಾಗಿ ಚಾಮುಂಡಿ ದೇವಿಯ ಆರಾಧನೆಯಾಗಿ ಸೌಹಾರ್ದತೆಯ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮ ವಾಗಬೇಕು ಎಂದು ಸಲಹೆ ನೀಡಿದರು.

ಶಾಸಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಮಾತನಾಡಿ, ಸ್ಥಳೀಯರಿಗೆ, ಸ್ಥಳೀಯ ಸಂಸ್ಕೃತಿ, ಸಾಹಿತ್ಯಕ್ಕೆ ಹೆಚ್ಚು ಒತ್ತು ನೀಡಬೇಕು ಯಾವುದೇ ವ್ಯತ್ಯಾಸಗಳಾಗದಂತೆ ಎಲ್ಲರನ್ನು ಒಗ್ಗೂಡಿಸಿ ದಸರಾ ಆಚರಣೆಗೆ ಸಮಿತಿ ಸಿದ್ದವಾಗಬೇಕು. ಎಲ್ಲರನ್ನೂ ಒಳಗೊಂಡ ದಸರಾ ನಾಡಹಬ್ಬವಾಗುತ್ತದೆ. ಈ ನಿಟ್ಟಿನಲ್ಲಿ ಸಮಿತಿ ಕಾರ್ಯ ನಿರ್ವಹಿಸಬೇಕು ಎಂದು ಕಿವಿ ಮಾತು ಹೇಳಿದರು.

ಜಿಲ್ಲಾಧಿಕಾರಿ ವೆಂಕಟರಾಜ, ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ , ಉಪ ವಿಭಾಗಾಧಿಕಾರಿ ನೀತಿನ್ ಚಕ್ಕಿ, ಪೊನ್ನಂಪೇಟೆ ತಹಶೀಲ್ದಾರ್ ಮಹೇಶ್ ಕುಮಾರ್, ಕಾವೇರಿ ದಸರಾ ಸಮಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಪ್ರಧಾನ ಕಾರ್ಯದರ್ಶಿ ಕಂದಾದೇವಯ್ಯ, ಕಾರ್ಯಧ್ಯಕ್ಷ ಕೊಳ್ಳಿಮಾಡ ಅಜಿತ್ ಅಯ್ಯಪ್ಪ, ಗೋಣಿಕೊಪ್ಪ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸುನಿಲ್ ಮಾದಪ್ಪ, ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷ ಕಿರಿಯಾಮಾಡ ಅರುಣ್ ಪೂಣಚ್ಚ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಗ್ರಾಮ ಪಂಚಾಯಿತಿ ಸದಸ್ಯ ಬಿ.ಎನ್ ಪ್ರಕಾಶ್, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಕಾವೇರಿ ದಸರಾ ಸಮಿತ ಮಾಜಿ ಅಧ್ಯಕ್ಷ ಬಿ.ಡಿ ಮುಕುಂದ ಮತ್ತು ಶಿವಾಜಿ, ಚಂದನ ಮಂಜುನಾಥ್, ಶೋಭಿತ್, ಚಂದನ್ ಕಾಮತ್,ಇದ್ದರು.

Continue Reading

Kodagu

ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ದಿನೇಶ್ ಗುಂಡೂರಾವ್

Published

on

ವಿರಾಜಪೇಟೆ:  ಸಾರ್ವಜನಿಕ ಆಸ್ಪತ್ರೆ ಜಿಲ್ಲಾಸ್ಪತ್ರೆಯಾಗಿ, ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಹಾಗೂ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಹಾಗೂ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ವೀಕ್ಷಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಈ ಬಾರಿ ಬಜೆಟ್ ಸಂದರ್ಭದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಪ್ರಕಟಿಸಲಾಗಿತ್ತು. ಹಾಗೆಯೇ ಪೊನ್ನಂಪೇಟೆ ಮತ್ತು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಉದ್ದೇಶವಾಗಿತ್ತು. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯನ್ನಾಗಿ ಹಾಗೂ ಹುದಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಸಚಿವರು ಹೇಳಿದರು.

‘ವಿರಾಜಪೇಟೆಯಲ್ಲಿ 400 ಹಾಸಿಗೆ ಆಸ್ಪತ್ರೆ ನಿರ್ಮಿಸುವ ಉದ್ದೇಶವಾಗಿತ್ತು. ಸದ್ಯ 250 ಹಾಸಿಗೆಯ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ವೈದ್ಯರು ಹಾಗೂ ಶುಶ್ರೂಷಕರು ಸೇರಿದಂತೆ ಸಿಬ್ಬಂದಿಗಳ ವಸತಿ ಗೃಹವನ್ನು ಸಹ ನಿರ್ಮಿಸಲಾಗುತ್ತಿದೆ ಸುಮಾರು 105 ಕೋಟಿ ರೂ. ವೆಚ್ಚದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಅವರು ಮಾಹಿತಿ ನೀಡಿದರು.

ಹುದಿಕೇರಿಯಲ್ಲಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ 30 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಹಾಗೆಯೇ ಕುಶಾಲನಗರದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.’
ವಸತಿ ಗೃಹ ನಿರ್ಮಾಣ ಸೇರಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ವಾರ ಟೆಂಡರ್ ಆಹ್ವಾನಿಸಲಾಗುವುದು. ಜೊತೆಗೆ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ವಿರಾಜಪೇಟೆ, ಹುದಿಕೇರಿ ಮತ್ತು ಕುಶಾಲನಗರ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಸಚಿವರು ಪ್ರಕಟಿಸಿದರು.

ಸ್ಥಳೀಯ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದಿಂದ ವಿರಾಜಪೇಟೆ ಕ್ಷೇತ್ರದ ಆಸ್ಪತ್ರೆ ಸೇರಿದಂತೆ ಹೆಚ್ಚಿನ ಅಭಿವೃದ್ಧಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ನಾನು ಸಹ ಇದೇ ಜಿಲ್ಲೆಯವನಾಗಿರುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು.


ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು ಪ್ರಜಾಪ್ರಭುತ್ವದಲ್ಲಿ ಯಾವುದೇ ಕೆಲಸ ಮಾಡುವಾಗ ಪರ ವಿರೋಧ ಇದ್ದೇ ಇರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಲ್ಲಾ ವರ್ಗದ ಜನರಿಗೆ ಸರ್ಕಾರದ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಪ್ರತಿ ಬಡವರಿಗೂ ಮೀಸಲಾತಿ ಕಲ್ಪಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ವಿಶೇಷ ಸೌಲಭ್ಯಗಳನ್ನು ತಲುಪಿಸುವುದು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತದೆ ಎಂದರು.

ಬಡ ಜನರಿಗೆ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ಅಂಕಿ ಅಂಶಗಳು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿದೆ. ಅದನ್ನು ಬಿಟ್ಟು ಅಪಸ್ವರ ತೆಗೆಯುವುದು ಸರಿಯಲ್ಲ. ಅನುಮಾನ ಇದ್ದಲ್ಲಿ ಮಾಹಿತಿ ನೀಡಬಹುದಾಗಿದೆ. ಅದನ್ನು ಬಿಟ್ಟು ಗೊಂದಲ ನಿರ್ಮಾಣ ಮಾಡುವುದು ಬೇಡ ಎಂದರು.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಚುನಾವಣಾ ಸಂದರ್ಭದಲ್ಲಿಯೇ ವಿರಾಜಪೇಟೆ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಪ್ರಕಟಿಸಲಾಗಿತ್ತು. ಅದರಂತೆ ಈಗ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಹೇಳಿದರು.

ಹಾಗೆಯೇ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ತಾಲೂಕು ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಪ್ರತ್ಯೇಕ ಪ್ರಣಾಳಿಕೆಯಲ್ಲಿ ಪ್ರಕಟಿಸಲಾಗಿತ್ತು, ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಮತ್ತು ಸಚಿವರು ಸ್ಪಂದಿಸಿದ್ದಾರೆ. ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಒಳ್ಳೆಯ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಹೇಳಿದರು.

ಸಚಿವ ದಿನೇಶ್ ಗುಂಡೂರಾವ್ ಅವರು ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ಕ್ಷೇಮ ವಿಚಾರಿಸಿದರು. ತೀವ್ರ ನಿಗಾ ಘಟಕ ಸೇರಿದಂತೆ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದರು. ಬಡ ಜನರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವಂತೆ ವೈದ್ಯರಿಗೆ ಸೂಚಿಸಿದರು.
ಎಂಜಿನಿಯರ್‌ಗಳ ಜೊತೆ ಜಾಗ ಪರಿಶೀಲಿಸಿದರು. ಬಳಿಕ ಹುದಿಕೇರಿಯಲ್ಲಿ ನಿರ್ಮಾಣವಾಗುವ ಸಮುದಾಯ ಆರೋಗ್ಯ ಕೇಂದ್ರ ಸ್ಥಳ ವೀಕ್ಷಿಸಿದರು. ನಗರದ ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ತಾಲ್ಲೂಕು ಆಸ್ಪತ್ರೆಯ ಸ್ಥಳ ವೀಕ್ಷಣೆ ಮಾಡಿದರು. ಬಳಿಕ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ.ಆನಂದ್, ಡಾ.ಸನತ್ ಕುಮಾರ್, ಡಾ.ಮದುಸೂದನ್, ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ.ಸಿಂಪಿ, ಡಾ.ಯತೀಶ್ ಕುಮಾರ್, ವಿರಾಜಪೇಟೆ ಪುರಸಭೆ ಅಧ್ಯಕ್ಷರಾದ ಮನೆಯಪಂಡ ದೇಚಮ್ಮ ಕಾಳಪ್ಪ, ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ಇತರರು ಇದ್ದರು.

Continue Reading

Kodagu

ಬಾಳೆಯಡ ಕಿಶನ್ ಪೂವಯ್ಯ ರಚಿತ ’ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಬಿಡುಗಡೆ

Published

on

ಮಡಿಕೇರಿ: ಲೇಖಕ ಬಾಳೆಯಡ ಕಿಶನ್ ಪೂವಯ್ಯ ಅವರು ರಚಿಸಿರುವ ಕೊಡವ ಮಕ್ಕಡ ಕೂಟದ ೧೧೮ನೇ ಪುಸ್ತಕ ’ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಬಿಡುಗಡೆಗೊಂಡಿತು.

ನಗರದ ಕರ್ಣಂಗೇರಿಯ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ದೇವಾಲಯದ ಧರ್ಮದರ್ಶಿ ಗೋವಿಂದಸ್ವಾಮಿ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ, ಪುಸ್ತಕಕ್ಕೆ ಹೆಚ್ಚು ಜನಮನ್ನಣೆ ದೊರಕಲಿ ಎಂದು ಶುಭ ಹಾರೈಸಿದರು.

ನಂತರ ಮಾತನಾಡಿದ ಲೇಖಕ ಬಾಳೆಯಡ ಕಿಶನ್ ಪೂವಯ್ಯ ಅವರು ಸಮಾಜದಲ್ಲಿನ ಭ್ರಷ್ಟಾಚಾರ, ಆಡಳಿತಗಳ ನ್ಯೂನತೆ, ಪ್ರಕೃತಿ ನಾಶ, ಪ್ರವಾಸೋದ್ಯಮದ ಅನಾಹುತಗಳು, ಮೂಢನಂಬಿಕೆಗಳು ಸೇರಿದಂತೆ ವಿಭಿನ್ನ ವಿಚಾರಧಾರೆಗಳನ್ನು ಪುಸ್ತಕದ ರೂಪದಲ್ಲಿ ಹೊರ ತರಲಾಗಿದೆ ಎಂದರು.
ಜನರು ನನ್ನ ಬರವಣಿಗೆಯನ್ನು ಮೆಚ್ಚಿಕೊಂಡಿದ್ದಾರೆ, ಆದರೆ ಜೀವನದಲ್ಲಿ ಅಳವಡಿಕೊಂಡಿಲ್ಲ. ಪ್ರತಿಯೊಬ್ಬರು ಪುಸ್ತಕಗಳನ್ನು ಓದಬೇಕು ಮತ್ತು ಅದರಲ್ಲಿರುವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಸಿರ ಕೊಡಗನ್ನು ಕೊಡಗಾಗಿ ಉಳಿಸಿಕೊಳ್ಳಲು ಪಣತೊಡಬೇಕು ಎಂದು ಕರೆ ನೀಡಿದರು.


ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ಹಾಗೂ ಕಿಶನ್ ಪೂವಯ್ಯ ಅವರ ಪತ್ನಿ ಬಾಳೆಯಡ ಸವಿತಾ ಪೂವಯ್ಯ ಅವರು ಮಾತನಾಡಿ, ಪುಸ್ತಕದಲ್ಲಿ ಸಾಮಾಜಿಕ ಚಿಂತನೆಯೊಂದಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈಗಾಗಲೇ ಪ್ರಕಟಗೊಂಡಿರುವ ಲೇಖನಗಳನ್ನು ಜನ ಮೆಚ್ಚಿಕೊಂಡಿದ್ದು, ಓದುಗರಿಂದ ಹಲವು ಪತ್ರಗಳು ಬಂದಿವೆ. ’ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಪುಸ್ತಕ ಈ ಲೇಖನಗಳ ಸಂಗ್ರಹವಾಗಿದೆ ಎಂದರು.

ಪ್ರತಿಯೊಬ್ಬರು ಪುಸ್ತಕವನ್ನು ಓದುವ ಮೂಲಕ ಸಮಾಜಿಕ ಕಳಕಳಿ ತೋರಬೇಕು ಹಾಗೂ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕೆಂದು ಕರೆ ನೀಡಿದರು.
ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಮಾತನಾಡಿ, ಒಂದು ಕಾಲದಲ್ಲಿ ಕೊಡಗು ಸಾಹಿತ್ಯ ಕ್ಷೇತ್ರದಲ್ಲಿ ಹಿಂದುಳಿದ ಜಿಲ್ಲೆ ಎಂಬ ಅಪಕೀರ್ತಿಗೆ ಒಳಗಾಗಿತ್ತು ಎಂಬ ಮಾತು ಹಿರಿಯರ ಬಾಯಿಂದ ಕೇಳಿದ್ದೇವೆ. ಇದನ್ನೊಂದು ಸವಾಲಾಗಿ ಸ್ವೀಕರಿಸಿ ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕೃತಿ, ಸಾಹಿತ್ಯದ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ 2013ರಲ್ಲಿ ಸಮಾನ ಮನಸ್ಕ ಯುವಕ, ಯುವತಿಯರು ಸೇರಿ ಕೊಡವ ಮಕ್ಕಡ ಕೂಟ ಎಂಬ ಸಂಘಟನೆಯನ್ನು ರಚಿಸಲಾಯಿತು. ನಂತರ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿಸಿಕೊಂಡು ಸಾಹತ್ಯ ಕ್ಷೇತ್ರದ ಬೆಳವಣಿಗೆಗೆ ಹೆಚ್ಚು ಒತ್ತು ನೀಡಲಾಯಿತು ಎಂದು ತಿಳಿಸಿದರು.

ದುಬಾರಿ ವೆಚ್ಚವನ್ನು ಭರಿಸಿ ಪುಸ್ತಕ ಪ್ರಕಟಿಸುವುದು ತುಂಬಾ ಕಷ್ಟದ ಕಾರ್ಯವಾಗಿದೆ. ಆದರೂ ದಾನಿಗಳ ಸಹಕಾರದಿಂದ ಇಲ್ಲಿಯವರೆಗೆ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಅನೇಕ ಕೃತಿಗಳನ್ನು ಬಿಡುಗಡೆ ಮಾಡಲಾಗಿದೆ. ಇದೀಗ 118ನೇ ಪುಸ್ತಕವಾಗಿ ’ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಯನ್ನು ಬಿಡುಗಡೆಗೊಳಿಸಲಾಗಿದೆ ಎಂದರು.

ಬಾಳೆಯಡ ಕಿಶನ್ ಪೂವಯ್ಯ ಅವರು ಕೇವಲ ವಕೀಲಿ ವೃತ್ತಿಯಲ್ಲಿ ಮಾತ್ರ ಪರಿಣಿತರಲ್ಲ, ತಮ್ಮ ಮೊನಚಾದ ಬರಹಗಳ ಮೂಲಕ ಸಮಾಜದ ಅಂಕುಡೊಂಕುಗಳ ಮೇಲೆ ಬೆಳಕು ಚೆಲ್ಲಿದ್ದಾರೆ. ಯಾರ ಮನಸ್ಸಿಗೂ ನೋವಾಗದ ರೀತಿಯಲ್ಲಿ ಪ್ರಸ್ತುತದ ಪರಿಸ್ಥಿತಿಯನ್ನು ಪುಸ್ತಕದಲ್ಲಿ ವಿವರಿಸಿದ್ದಾರೆ. ಮುಂದಿನ ಭವಿಷ್ಯದ ಯುವ ಪೀಳಿಗೆಯ ಮೇಲೆ ಬೀರುವ ದುಷ್ಪರಿಣಾಮ, ಕೊಡಗಿನ ಆಸ್ತಿಯೇ ಆಗಿರುವ ಪ್ರಕೃತಿಯ ವಿನಾಶ ಸೇರಿದಂತೆ ಹಲವು ವಿಚಾರಗಳನ್ನು ಪುಸ್ತಕದಲ್ಲಿ ಮನಮುಟ್ಟುವಂತೆ ವಿವರಿಸಿದ್ದಾರೆ ಎಂದು ಬೊಳ್ಳಜಿರ ಬಿ.ಅಯ್ಯಪ್ಪ ಹೇಳಿದರು.

ಕಿಶನ್ ಪೂವಯ್ಯ ಅವರು ತಂದೆ ಬಾಳೆಯಡ ಚರ್ಮಣ್ಣ, ಶ್ರೀ ರಾಜರಾಜೇಶ್ವರಿ ದೇವಾಲಯ ಸಮಿತಿಯ ಟ್ರಸ್ಟಿ ದೇವರಾಜು (ಮಣಿ), ಪ್ರಮುಖರಾದ ಪಕ್ತಿ, ಸತೀಶ್, ಕಿರಣ್ ಕುಮಾರ್, ಪ್ರಧಾನ ಅರ್ಚಕ ಶ್ರೀನಿವಾಸ್ ಸ್ವಾಮಿ, ರಾಜರಾಜೇಶ್ವರಿ ವಿದ್ಯಾಲಯದ ಕಾರ್ಯದರ್ಶಿ ದಾಕ್ಷಾಯಿಣಿ ವಾಸುದೇವ್, ಭಕ್ತರಾದ ಸೂದನ ಹರೀಶ್, ಮೊಟ್ಟೇರ ಹೇಮಾವತಿ, ನೆರವಂಡ ಉಷಾ ಮತ್ತಿತರರು ಉಪಸ್ಥಿತರಿದ್ದರು.

Continue Reading

Kodagu

ಕಾಸರಗೋಡು: ಪರೋಟ ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತ್ಯು

Published

on

ಕಾಸರಗೋಡು: ಪರೋಟ ಗಂಟಲಲ್ಲಿ ಸಿಲುಕಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬದಿಯಡ್ಕದಲ್ಲಿ ನಡೆದಿರುವುದಾಗಿ ತಿಳಿದುವಾಸ ವಿರುವ ಬಂದಿದೆ.

ಬದಿಯಡ್ಕ ಚುಳ್ಳಿಕ್ಕಾನ ನಿವಾಸಿ, ಸದ್ಯ ಬಾರಡ್ಕದಲ್ಲಿ ವಾಸವಿರುವ ವಿನ್ಸೆಂಟ್ ಕ್ರಾಸ್ತಾ(52) ಮೃತಪಟ್ಟವರು.

ವಿನ್ಸೆಂಟ್ ಅವರು ಮನೆ ಸಮೀಪದ ಗೂಡಂಗಡಿಯಲ್ಲಿ ಆಮ್ಲೆಟ್ ಸೇವಿಸುತ್ತಿದ್ದರು‌. ಈ ವೇಳೆ ಪರೋಟ ಚೂರು ಗಂಟಲಲ್ಲಿ ಸಿಲುಕಿ ಒದ್ದಾಡಿದ್ದಾರೆ. ತಕ್ಷಣ ಅವರನ್ನು ಕುಂಬಳೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿರುವುದಾಗಿ ವೈದ್ಯರು ತಿಳಿಸಿದರು.

ಬೇಳ ಕಟ್ಟತ್ತಂಗಡಿ ಎಂಬಲ್ಲಿ ವೆಲ್ಡಿಂಗ್ ಶಾಪ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಿನ್ಸೆಂಟ್ ಕ್ರಾಸ್ತಾ ಅವಿವಾಹಿತರಾಗಿದ್ದರು. ಈ ಬಗ್ಗೆ ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿ ಅಸಹಜ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

Trending

error: Content is protected !!