Connect with us

Hassan

ಗ್ಯಾರಂಟಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮರು ಅರ್ಜಿ ಸಲ್ಲಿಕೆ ಬೇಡ

Published

on

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಮಹತ್ವದ ಸಿಹಿಸುದ್ದಿ ಸಿಕ್ಕಿದೆ. ಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಸರ್ಕಾರ ನಿರ್ಧರಿಸಿದೆ.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಇಂದು  ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಶುಕ್ರವಾರ ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

ಈ ಸಭೆಯಲ್ಲಿ ಈಗಾಗಲೇ ಯೋಜನೆಗಳ ಪ್ರಯೋಜನ ಪಡೆಯುತ್ತಿರುವ ಫಲಾನುಭವಿಗಳಿಂದ ಹೊಸದಾಗಿ ಅರ್ಜಿ ಪಡೆಯುವ ಬದಲು, ಅವರ ಅರ್ಹತೆಯ ಮರುಪರಿಶೀಲನೆ ನಡೆಸಲು ತೀರ್ಮಾನಿಸಲಾಯಿತು.

ಮರುಪರಿಶೀಲನೆ ಪ್ರಕ್ರಿಯೆಯನ್ನು ಯಾರು ಹಾಗೂ ಹೇಗೆ ನಡೆಸಬೇಕು ಎಂಬುದರ ಬಗ್ಗೆ ಮೂರು ದಿನಗಳೊಳಗೆ ಅಂತಿಮ ರೂಪುರೇಷೆ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಹಾಗೂ ಅನರ್ಹರು ಪಡೆಯುತ್ತಿರುವ ಸೌಲಭ್ಯಗಳಿಗೆ ಮಾತ್ರ ಕಡಿವಾಣ ಹಾಕಬೇಕು ಎಂದು ತಿಳಿಸಲಾಗಿದೆ.

ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಕೆಲವು ಸಮಸ್ಯೆಗಳೂ ಚರ್ಚೆಗೆ ಬಂದವು. ಹಲವಾರು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆಯಾಗುವ ಹಣವು ಸಾಲದ ಖಾತೆಗಳಿಗೆ ವರ್ಗಾವಣೆಯಾಗುತ್ತಿರುವ ಹಿನ್ನೆಲೆಯಲ್ಲಿ, ಖಾತೆ ಬದಲಾಯಿಸಿರುವ ಫಲಾನುಭವಿಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಇದಲ್ಲದೆ, ಮೃತಪಟ್ಟಿರುವ ಕೆಲವು ಫಲಾನುಭವಿಗಳ ಖಾತೆಗಳಿಗೆ ಸಹ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವುದು ಪತ್ತೆಯಾಗಿರುವುದರಿಂದ, ಇಂತಹ ದುರುಪಯೋಗ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಗೃಹಲಕ್ಷ್ಮಿ ಹಣ ಖಾತೆಗೆ ಜಮೆಯಾದ ಕೂಡಲೇ ಫಲಾನುಭವಿಗಳ ಮೊಬೈಲ್‌ಗೆ ವಾಯ್ಸ್ ಮೆಸೇಜ್ ಮೂಲಕ ಮಾಹಿತಿ ನೀಡುವ ವ್ಯವಸ್ಥೆ ಜಾರಿಗೊಳಿಸುವ ಪ್ರಸ್ತಾವನೆಯೂ ಸಭೆಯಲ್ಲಿ ಚರ್ಚೆಯಾಯಿತು.

ಗೃಹಜ್ಯೋತಿ ಯೋಜನೆಯಲ್ಲಿ ಅನುಸರಿಸಿದ್ದ ಮುನ್ನೆಚ್ಚರಿಕಾ ಕ್ರಮಗಳನ್ನು ಇತರ ಗ್ಯಾರಂಟಿ ಯೋಜನೆಗಳಲ್ಲಿಯೂ ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ದುರುಪಯೋಗ ತಡೆಯುವ ಉದ್ದೇಶವನ್ನು ಸರ್ಕಾರ ವ್ಯಕ್ತಪಡಿಸಿದೆ.

Continue Reading

Hassan

ಜನಸ್ನೇಹಿ ಪೊಲೀಸ್ ಸಿದ್ದೇಶ್‌ಗೆ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರ: ಕರ್ತವ್ಯನಿಷ್ಠೆ, ಜನಸೇವೆ–ಕಾನೂನು ಸುವ್ಯವಸ್ಥೆಯಲ್ಲಿ ಗಮನಾರ್ಹ ಸೇವೆ

Published

on

ಅರಸೀಕೆರೆ: ಅರಸೀಕೆರೆ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಜನಸ್ನೇಹಿ ಪೊಲೀಸ್ ಸಿಬ್ಬಂದಿ ಶ್ರೀ ಸಿದ್ದೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಸಾರ್ವಜನಿಕರು, ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು, ಸ್ನೇಹಿತರು ಹಾಗೂ ಅಭಿಮಾನಿಗಳು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕತೆ, ಶಿಸ್ತು ಮತ್ತು ನಿಷ್ಠೆಯಿಂದ ನಿರ್ವಹಿಸುತ್ತಿರುವ ಸಿದ್ದೇಶ್ ಅವರು ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಅವರ ಸರಳ ವ್ಯಕ್ತಿತ್ವ ಹಾಗೂ ಸೇವಾ ಮನೋಭಾವದಿಂದ ಅವರು ನಗರದ ಜನರ ವಿಶ್ವಾಸ ಗಳಿಸಿದ್ದು, ಜನಸ್ನೇಹಿ ಪೊಲೀಸ್ ಸಿಬ್ಬಂದಿಯಾಗಿ ಗುರುತಿಸಿಕೊಂಡಿದ್ದಾರೆ.

ನಗರದಲ್ಲಿ ನಡೆಯುವ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಗತ್ಯ ಮಾಹಿತಿಯನ್ನು ಮುಂಚಿತವಾಗಿಯೇ ಸಂಗ್ರಹಿಸಿ ಪೊಲೀಸ್ ಇಲಾಖೆಗೆ ರವಾನಿಸುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಅವರು ವಿಶೇಷ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು, ಸಾರ್ವಜನಿಕರಲ್ಲಿ ಶಾಂತಿ ಮತ್ತು ಸೌಹಾರ್ದದ ವಾತಾವರಣ ನಿರ್ಮಿಸುವುದು ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ಗಮನಾರ್ಹವಾಗಿದೆ.

ಸಾರ್ವಜನಿಕರೊಂದಿಗೆ ಸ್ನೇಹಪರವಾಗಿ ವರ್ತಿಸುವ ಗುಣ, ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ ಪರಿಹಾರಕ್ಕೆ ಪ್ರಯತ್ನಿಸುವ ಮನೋಭಾವ ಮತ್ತು ಕರ್ತವ್ಯದ ಮೇಲಿನ ಬದ್ಧತೆಯಿಂದ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಇಲಾಖೆಯ ಘನತೆ ಹೆಚ್ಚಿಸುವ ರೀತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿದ್ದೇಶ್ ಅವರು ಯುವ ಪೊಲೀಸ್ ಸಿಬ್ಬಂದಿಗೆ ಮಾದರಿಯಾಗಿದ್ದಾರೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ನಗರದ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವಲ್ಲಿ ಹಗಲಿರುಳು ಶ್ರಮಿಸುತ್ತಿರುವ ಅವರ ಸೇವೆಯನ್ನು ವಿವಿಧ ಸಂಘ–ಸಂಸ್ಥೆಗಳು ಹಾಗೂ ನಾಗರಿಕರು ಪ್ರಶಂಸಿಸಿದ್ದು, ಮುಂದಿನ ದಿನಗಳಲ್ಲಿಯೂ ಇದೇ ಸೇವಾ ಮನೋಭಾವದೊಂದಿಗೆ ಇನ್ನಷ್ಟು ಉನ್ನತ ಸ್ಥಾನಗಳನ್ನು ಅಲಂಕರಿಸಲಿ ಎಂದು ಹಾರೈಸಿದ್ದಾರೆ

Continue Reading

Hassan

ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ; ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ

Published

on

ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರು ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಪಂಚಭೂತಗಳಲ್ಲಿ ಲೀನರಾದರು.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಸಮೀಪದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಾವಿರಾರು ಜನರ ಕಂಬನಿಯ ನಡುವೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿತು.

ರಾಜಕೀಯದಿಂದ ಸದಾ ದೂರವಿದ್ದರೂ ದೇವೇಗೌಡ ಕುಟುಂಬದ ಬೆನ್ನೆಲುಬಾಗಿ ಗುರುತಿಸಿಕೊಂಡಿದ್ದ ಚೆನ್ನಮ್ಮ ಅವರ ಅಗಲಿಕೆ ರಾಜ್ಯದ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಶೋಕದ ಛಾಯೆ ಮೂಡಿಸಿತು. ಅಂತಿಮ ದರ್ಶನಕ್ಕಾಗಿ ವಿವಿಧ ಪಕ್ಷಗಳ ನಾಯಕರು, ಸ್ವಾಮೀಜಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಆಗಮಿಸಿ ಗೌರವ ನಮನ ಸಲ್ಲಿಸಿದರು.

ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ:

ಗಣ್ಯರು ಪುಷ್ಪನಮನ ಸಲ್ಲಿಸಿದ ಬಳಿಕ ಪೊಲೀಸ್ ಪಡೆ ಮೂರು ಸುತ್ತು ಕುಶಾಲತೋಪು ಸಿಡಿಸಿ ಸರ್ಕಾರಿ ಗೌರವ ವಂದನೆ ಸಲ್ಲಿಸಿತು. ರಾಷ್ಟ್ರಗೀತೆ ಮೊಳಗಿದ ಬಳಿಕ ಎರಡು ನಿಮಿಷ ಮೌನಾಚರಣೆ ನಡೆಸಲಾಯಿತು. ನಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಷ್ಟ್ರಧ್ವಜವನ್ನು ದೇವೇಗೌಡರ ಕುಟುಂಬಕ್ಕೆ ಹಸ್ತಾಂತರಿಸಿದರು.

ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕಾಲಿಗೆ ನಮಸ್ಕರಿಸಿ ಗೌರವ ಸಲ್ಲಿಸಿದ ದೃಶ್ಯ ಗಮನ ಸೆಳೆಯಿತು.

ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ:

ಸರ್ಕಾರಿ ಗೌರವಗಳ ಬಳಿಕ ಕುಟುಂಬ ಸದಸ್ಯರು ಹಾಗೂ ಅರ್ಚಕರ ಸಮ್ಮುಖದಲ್ಲಿ ಅಂತಿಮ ಪೂಜಾ ವಿಧಿವಿಧಾನಗಳು ನೆರವೇರಿದವು. ವೇದಘೋಷ, ಸ್ತೋತ್ರ ಪಠಣಗಳ ನಡುವೆ ಪಾರ್ಥಿವ ಶರೀರವನ್ನು ಪಲ್ಲಕ್ಕಿಯಲ್ಲಿ ಮೂರು ಸುತ್ತು ಮೆರವಣಿಗೆ ನಡೆಸಲಾಯಿತು.

ಬಳಿಕ ಹಿರಿಯ ಪುತ್ರ ಎಚ್.ಡಿ. ರಮೇಶ್ ಅವರು ಸಂಪ್ರದಾಯದಂತೆ ಅಂತ್ಯಕ್ರಿಯೆಯ ವಿಧಿವಿಧಾನ ನೆರವೇರಿಸಿದರು. ಗಂಗಾಜಲ ಸಿಂಪಡಿಸಿ ಸ್ಥಳವನ್ನು ಶುದ್ಧೀಕರಿಸಿದ ನಂತರ ಪಾರ್ಥಿವ ಶರೀರವನ್ನು ಸಮಾಧಿಗೆ ಇಳಿಸಿ ಅಂತಿಮ ಸಂಸ್ಕಾರ ನಡೆಸಲಾಯಿತು.

ರಾಜಕೀಯ, ಧಾರ್ಮಿಕ ಗಣ್ಯರ ಉಪಸ್ಥಿತಿ:

ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಲು ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್,  ಪ್ರಹ್ಲಾದ್‌ ಜೋಶಿ , ವಿ. ಸೋಮಣ್ಣ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಶ್ರೇಯಸ್‌ ಎಂ. ಪಟೇಲ್‌, ಡಾ.ಕೆ.ಸುಧಾಕರ್‌, ಬಿ.ವೈ.ರಾಘವೇಂದ್ರ , ಡಾ.ಸಿ.ಎನ್‌.ಮಂಜುನಾಥ್‌, ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಚಿವರಾದ ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್‌, ಹಾಸನ ಜಿಲ್ಲಾಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ಎನ್‌.ಚಲುವರಾಯಸ್ವಾಮಿ, ಜಮೀರ್‌ ಅಹಮದ್‌ ಖಾನ್‌, ಸುರೇಶ್‌ ಬಾಬು, ,  ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಐಜಿಪಿ ಡಾ. ಸಲೀಂ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ಸ್ವಾಮೀಜಿ, ಜಿಲ್ಲಾಧಿಕಾರಿ ಕೆ.ಎಸ್‌.ಲತಾಕುಮಾರಿ, ಸಿ.ಎಸ್‌.ಪುಟ್ಟರಾಜು, ಮಾಜಿ ಶಾಸಕ ಸಾ.ರಾ.ಮಹೇಶ್‌, ಎಚ್‌.ಆಂಜನೇಯ, ಮಾಜಿ ಸಚಿವರಾದ, ಗೋಪಾಲಯ್ಯ, ರಾಮಣ್ಣ, ಎಚ್‌.ಕೆ.ಕುಮಾರಸ್ವಾಮಿ, ಶಾಸಕರಾದ ಎ.ಮಂಜು, ಟಿ.ಡಿ.ರಾಜೇಗೌಡ, ಎಚ್.ಕೆ.ಸುರೇಶ್‌, ಸಿಮೆಂಟ್‌ ಮಂಜು, ಡಾ.ರಂಗನಾಥ್‌, ಸುರೇಶ್‌ ಗೌಡ, ಭೋಜೇಗೌಡ, ಜಿ.ಡಿ.ಹರೀಶ್‌ ಗೌಡ, ಸಿ.ಎನ್‌.ಕೃಷ್ಣೇಗೌಡ, ಕೆ.ಹರೀಶ್‌ ಗೌಡ, ಮುನಿರತ್ನ, ಗಣಿಗ ರವಿ, ಸ್ವರೂಪ್‌ ಪ್ರಕಾಶ್‌, ಶರವಣ, ಮಾಜಿ ಸಂಸದ ಪ್ರತಾಪ್‌ ಸಿಂಹ ವಿವಿಧ ಪಕ್ಷಗಳ ಜನಪ್ರತಿನಿಧಿಗಳು, ಸ್ವಾಮೀಜಿಗಳು ಸೇರಿದಂತೆ ಹಲವು ಸಚಿವರು, ಸಂಸದರು, ಶಾಸಕರು ಹಾಗೂ ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಅದೇ ರೀತಿ ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ನಂಜಾವಧೂತ ಶ್ರೀ, ರಂಭಾಪುರಿ ಶ್ರೀ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.

Continue Reading

Hassan

ಬೂತ್ ಮಟ್ಟದಲ್ಲಿ ಬಿಜೆಪಿ ಸಂಘಟನೆಗೆ ಒತ್ತು ನೀಡಿ: ಬಿ.ವೈ. ವಿಜಯೇಂದ್ರ ಕರೆ

Published

on

ಅರಸೀಕೆರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲು ಪ್ರತಿ ಹಳ್ಳಿ ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ನೇರವಾಗಿ ಭೇಟಿ ಮಾಡಿ ಸಮಾಲೋಚನೆ ನಡೆಸುವಂತೆ ಕರೆ ನೀಡಿದರು.

ಶಿವಮೊಗ್ಗಕ್ಕೆ ತೆರಳುವ ವೇಳೆ ಅರಸೀಕೆರೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಗಳಲ್ಲಿ ಯುವ ನಾಯಕತ್ವಕ್ಕೆ ಹೆಚ್ಚಿನ ಆದ್ಯತೆ ಸಿಗಲಿದ್ದು, ದೇಶದ ಭವಿಷ್ಯ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ ಎಂದರು.

ಪಕ್ಷದ ಮುಖಂಡರು ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ, ಬೂತ್ ಮಟ್ಟದಲ್ಲಿ ಸಂಘಟನೆಗೆ ಒತ್ತು ನೀಡಬೇಕು. ಕಾರ್ಯಕರ್ತರೇ ಪಕ್ಷದ ಬೆನ್ನೆಲುಬಾಗಿರುವುದರಿಂದ ಜನಸಾಮಾನ್ಯರ ಧ್ವನಿಯಾಗಿ ಪಕ್ಷದ ಬೇರುಗಳನ್ನು ಗಟ್ಟಿಗೊಳಿಸುವ ಕೆಲಸ ಮಾಡಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಅರಸೀಕೆರೆ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ ಯಾದಪುರ್, ಬಿಜೆಪಿ ಮುಖಂಡರಾದ ಚೇತನ್ ಜೈನ್, ಶ್ರೀಧರ್, ಪುರುಷೋತ್ತಮ್, ರಂಗನಾಥ್, ರವಿಕುಮಾರ್, ರಾಜೇಶ್ ಸೇರಿದಂತೆ ಹಲವು ಯುವ ಮುಖಂಡರು ಉಪಸ್ಥಿತರಿದ್ದರು.

Continue Reading

Trending

error: Content is protected !!