Connect with us

Politics

ಎಸ್‌ಐಆರ್ ಎದುರಿಸಲು ಸರ್ಕಾರ ಸಜ್ಜು: ಎಂ.ಬಿ ಪಾಟೀಲ್

Published

on

ವಿಜಯಪುರ:   ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಸಂಬಂಧ ರಾಜ್ಯ ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್‌  ತಿಳಿಸಿದ್ದಾರೆ.

ವಿಜಯಪುರದಲ್ಲಿ ಇಂದು   ಈ ಕುರಿತು ಮಾಧ್ಯಮಗಳೊಂದಿಗೆ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌  ಸೇರಿದಂತೆ ಎಲ್ಲಾ ಸಚಿವರೂ ಎಸ್‌ಐಆರ್‌ನ್ನು ಎದುರಿಸಲು ಸಿದ್ಧರಾಗಿದ್ದಾರೆ ಎಂದು ಹೇಳಿದರು. ಈ ವಿಷಯವಾಗಿ ಹಲವು ಸಭೆಗಳು ನಡೆದಿದ್ದು, ರಾಜ್ಯದ ಜನರಿಗೆ ಯಾವುದೇ ಅನ್ಯಾಯವಾಗದಂತೆ ಸರ್ಕಾರ ಗಮನ ವಹಿಸುತ್ತಿದೆ ಎಂದು ತಿಳಿಸಿದ್ದಾರೆ.

ಅದೇ ವೇಳೆ, ಎಸ್‌ಐಆರ್ ಕುರಿತಾಗಿ ಸರ್ಕಾರ ಈಗಾಗಲೇ ಮಾನಿಟರಿಂಗ್ ಮಾಡುತ್ತಿದೆ ಹಾಗೂ ಎಲ್ಲಾ ರೀತಿಯಲ್ಲೂ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ಘೋಷಿಸಿರುವ ಮೂರನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಜೂನ್ 20ರಿಂದ Karnatakaದಲ್ಲಿ ಆರಂಭವಾಗಲಿದೆ.

Continue Reading

Politics

ಹರ್ಮನ್‌ಪ್ರೀತ್ ಕೌರ್‌ಗೆ ಪದ್ಮಶ್ರೀ ಗೌರವ

Published

on

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ 2026ರ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 66 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನಿಸಿದರು.

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಅವರ ಪತ್ನಿ ಹೇಮ ಮಾಲಿನಿ ಸ್ವೀಕರಿಸಿದರು.

ಪ್ರಸಿದ್ಧ ಪಿಟೀಲು ವಾದಕಿ ಎನ್.ರಾಜಮ್ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಲಭಿಸಿತು. ಮಾಜಿ ರಾಜ್ಯಪಾಲ  ಗವ್ ಭಗತ್ ಸಿಂಗ್ ಕೋಶ್ಯಾರಿ ಹಾಗೂ ಖ್ಯಾತ ಬ್ಯಾಂಕರ್ ಉದಯ್ ಕೋಟಕ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಟ ಪ್ರೊಸೆನ್‌ಜಿತ್ ಚಟರ್ಜಿ ಅವರಿಗೂ ಪದ್ಮಶ್ರೀ ಗೌರವ ದೊರೆಯಿತು.

ಈ ವರ್ಷ ಒಟ್ಟು 131 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅದರಲ್ಲಿ 5 ಪದ್ಮ ವಿಭೂಷಣ, 13 ಪದ್ಮ ಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳಿವೆ. ಮೊದಲ ಹಂತದಲ್ಲಿ ಇಂದು 2 ಪದ್ಮ ವಿಭೂಷಣ, 6 ಪದ್ಮ ಭೂಷಣ ಹಾಗೂ 58 ಪದ್ಮಶ್ರೀ ಪ್ರಶಸ್ತಿಗಳನ್ನು ವಿತರಿಸಲಾಯಿತು. ಉಳಿದ ಪ್ರಶಸ್ತಿಗಳನ್ನು ಎರಡನೇ ಹಂತದಲ್ಲಿ ಪ್ರದಾನ ಮಾಡಲಾಗುತ್ತದೆ.

Continue Reading

Politics

ಕರ್ನಾಟಕ ರಾಜ್ಯಸಭೆ ಚುನಾವಣೆ: ಜೂನ್‌. 18ಕ್ಕೆ ಮತದಾನ

Published

on

ನವದೆಹಲಿ: ಕರ್ನಾಟಕ ಸೇರಿದಂತೆ ದೇಶದ ಹತ್ತು ರಾಜ್ಯಗಳಲ್ಲಿ ತೆರವಾಗಲಿರುವ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ. ಕರ್ನಾಟಕದ ನಾಲ್ಕು ಸ್ಥಾನಗಳಿಗೆ ಜೂನ್‌ 18ರಂದು ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದಿಂದ ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಪ್ರಧಾನಿ ಎಚ್.ಡಿ.ದೇವೇಗೌಡ,  ಈರಣ್ಣ ಕಡಾಡಿ ಹಾಗೂ ನಾರಾಯಣ  ಅವರ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಚುನಾವಣಾ ವೇಳಾಪಟ್ಟಿ

  • ನಾಮಪತ್ರ ಸಲ್ಲಿಕೆ ಕೊನೆಯ ದಿನಾಂಕ: ಜೂನ್‌ 8
  • ನಾಮಪತ್ರ ಪರಿಶೀಲನೆ: ಜೂನ್‌ 9
  • ನಾಮಪತ್ರ ಹಿಂಪಡೆಯಲು ಕೊನೆಯ ದಿನ: ಜೂನ್‌ 11
  • ಮತದಾನ ಮತ್ತು ಫಲಿತಾಂಶ: ಜೂನ್‌ 18

ಪ್ರಸ್ತುತ ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್‌ಗೆ ಮೂರು ಸ್ಥಾನಗಳು ಹಾಗೂ ಬಿಜೆಪಿಗೆ ಒಂದು ಸ್ಥಾನ ಸಿಗುವ ಸಾಧ್ಯತೆ ಇದೆ.

ಕಾಂಗ್ರೆಸ್ ಪಾಲಿನ ಮೂರು ಸ್ಥಾನಗಳಲ್ಲಿ ಒಂದಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮರುನಾಮನಿರ್ದೇಶನ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಉಳಿದ ಎರಡು ಸ್ಥಾನಗಳಿಗೆ ಪಕ್ಷದೊಳಗಿನ ಹಲವು ನಾಯಕರು ಪೈಪೋಟಿಯಲ್ಲಿ ಇದ್ದಾರೆ.

ಇನ್ನೊಂದೆಡೆ, ಬಿಜೆಪಿ ಪಾಲಿನ ಒಂದು ಸ್ಥಾನಕ್ಕೆ ಜೆಡಿಎಸ್ ಕೂಡ ಆಸಕ್ತಿ ತೋರಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ಬಗ್ಗೆ ಬಿಜೆಪಿ–ಜೆಡಿಎಸ್ ಮೈತ್ರಿ ವಲಯದಲ್ಲಿ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.

Continue Reading

Politics

ಗೃಹಲಕ್ಷ್ಮಿ ಹಣ ಬಾಕಿ| ಹೈಕೋರ್ಟ್ ಮೆಟ್ಟಿಲೇರಿದ ಮಹಿಳೆಯರು: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ

Published

on

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ   ಯೋಜನೆಯಡಿ ಹಲವು ತಿಂಗಳಿಂದ ಹಣ ಜಮೆಯಾಗಿಲ್ಲ ಎಂದು ಆರೋಪಿಸಿ ಬೆಂಗಳೂರಿನ ಇಬ್ಬರು ಮಹಿಳೆಯರು ಹೈಕೋರ್ಟ್‌   ಮೊರೆ ಹೋಗಿದ್ದಾರೆ.

ಬಸವೇಶ್ವರ ನಗರದ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಜಿ.ಡಿ. ಪವಿತ್ರಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿ, ಬಾಕಿ ಉಳಿದಿರುವ ಎಲ್ಲಾ ಕಂತುಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ.

ಅರ್ಜಿದಾರರ ಪರ ವಕೀಲರು, 2025ರ ಫೆಬ್ರವರಿಯಿಂದ 2026ರ ಮೇ ತಿಂಗಳವರೆಗೆ ಯಾವುದೇ ಹಣ ಖಾತೆಗೆ ಜಮೆಯಾಗಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಇದೇ ಸಮಸ್ಯೆ ರಾಜ್ಯದ ಲಕ್ಷಾಂತರ ಫಲಾನುಭವಿಗಳಿಗೂ ಎದುರಾಗಿದೆ ಎಂದು ಅವರು ವಾದಿಸಿದರು.

ಸರ್ಕಾರ ಪ್ರತೀ ಬಜೆಟ್‌ನಲ್ಲಿ ಯೋಜನೆಗೆ ಸಾವಿರಾರು ಕೋಟಿ ರೂಪಾಯಿ ಮೀಸಲಿಡುತ್ತಿದ್ದರೂ, ಫಲಾನುಭವಿಗಳಿಗೆ ಹಣ ತಲುಪುತ್ತಿಲ್ಲ. ಹಾಗಾದರೆ ಮೀಸಲಿಟ್ಟ ಹಣ ಎಲ್ಲಿಗೆ ಹೋಗುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ಪ್ರಶ್ನಿಸಿದರು. ಬಾಕಿ ಇರುವ ಎಲ್ಲಾ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲು ಆದೇಶಿಸಬೇಕೆಂದು ಮನವಿ ಮಾಡಿದರು.

ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸುರಜ್‌ ಗೋವಿಂದರಾಜು ಮತ್ತು ಕೆ. ಮನ್ಮಥ ರಾವ್  ಅವರ ವಿಭಾಗೀಯ ಪೀಠವು ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಯೋಜನೆ ಅನುಷ್ಠಾನದಲ್ಲಿ ಆಗಿರುವ ವಿಳಂಬದ ಕುರಿತು ಸ್ಪಷ್ಟನೆ ನೀಡುವಂತೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದೂಡಲಾಗಿದೆ.

Continue Reading

Trending

error: Content is protected !!