Connect with us

Politics

ರಾಜ್ಯಪಾಲರು v/s ಸರ್ಕಾರ ಮತ್ತೆ ಸಂಘರ್ಷ: ಸಹಿ ಹಾಕದೇ ರಾಷ್ಟ್ರಪತಿ ಅಂಗಳಕ್ಕೆ ದ್ವೇಷ ಭಾಷಣ ಬಿಲ್

Published

on

ಬೆಂಗಳೂರು: ರಾಜ್ಯಪಾಲರು v/s ಸರ್ಕಾರ ನಡುವೆ ಸಂಘರ್ಷ ಪುನಃ ಶುರುವಾಗಿದ್ದು, ಸರ್ಕಾರದ ದ್ವೇಷ ಭಾಷಣ ಬಿಲ್ ಗೆ ರಾಜ್ಯಪಾಲರು ಕೊಕ್ಕೆ ಹಾಕಿದ್ದು, ಸಹಿ ಹಾಕದೇ ಮಸೂದೆಯನ್ನು  ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಗೆ ಅಂಗಳಕ್ಕೆ ಕಳಿಸಿದ್ದಾರೆ. ಈ ಮೂಲಕ ಮತ್ತೆ ಸರ್ಕಾರ- ರಾಜ್ಯಪಾಲರ ಮಧ್ಯೆ ವಾರ್ ಶುರುವಾಗಿದೆ.

ಬೆಳಗಾವಿ ಅಧಿವೇಶನದಲ್ಲಿ  ಪಾಸ್ ಆಗಿದ್ದ ದ್ವೇಷ ಭಾಷಣ ಬಿಲ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಕೊಕ್ಕೆ ಹಾಕಿದ್ದಾರೆ. ಬಿಲ್‌ಗೆ ಸಹಿ ಹಾಕದೇ ರಾಷ್ಟ್ರಪತಿಗಳ ಅಂಗಳಕ್ಕೆ ಮಸೂದೆ ರವಾನೆ ಮಾಡಿದ್ದಾರೆ. ದ್ವೇಷ ಭಾಷಣದ ವ್ಯಾಖ್ಯಾನವೇ ಮಸೂದೆಯಲ್ಲಿ ಅಸ್ಪಷ್ಟವಾಗಿದೆ. ಮಸೂದೆಗೆ ಒಪ್ಪಿಗೆ ಕೊಡದಂತೆ 40ಕ್ಕೂ ಹೆಚ್ಚು ಮನವಿ ಬಂದಿರೋ ಬಗ್ಗೆ ರಾಜ್ಯಪಾಲರು ಉಲ್ಲೇಖ ಮಾಡಿ ರಾಷ್ಟ್ರಪತಿ ಅಂಗಳಕ್ಕೆ ರವಾನಿಸಿದ್ದಾರೆ.

ರಾಷ್ಟ್ರಪತಿಗಳಿಗೆ ಬಿಲ್ ವರ್ಗಾವಣೆ ಮಾಡೋದಕ್ಕೆ ರಾಜ್ಯಪಾಲರು 29 ಕಾರಣಗಳನ್ನು ನೀಡಿದ್ದಾರೆ. ಈ ಬಿಲ್ ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆ ಎಂದು ಉಲ್ಲೇಖಿಸಿದ್ದಾರೆ.
ಬಿಲ್ ವಾಪಸ್‌ಗೆ ರಾಜ್ಯಪಾಲರು ನೀಡಿದ ಮುಖ್ಯ ಕಾರಣಗಳೇನು? 
1. ದ್ವೇಷ ಭಾಷಣದ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ.
2. ಅರ್ಥಪೂರ್ಣ ಸಮಾಲೋಚನೆ ಮಾಡದೇ ಅಂಗೀಕಾರ.
3. ಮಸೂದೆ ಸಂಬಂಧ ಕೆಲವು ಕಾನೂನು ತೊಡಕುಗಳಿವೆ.
4. ಮಿತಿಮೀರಿದ ಮತ್ತು ಭಯಾನಕ ಪರಿಣಾಮಗಳನ್ನು ಬೀರಲಿವೆ.
5. ಅಭಿವ್ಯಕ್ತಿ ಸ್ವಾತಂತ್ರ್ಯ, ಮೂಲಭೂತ ಹಕ್ಕನ್ನು ಕಸಿಯುವ ಮುನ್ಸೂಚನೆ.
6. ಈ ಮಸೂದೆಯು ಉದ್ದೇಶಕ್ಕಿಂತ ಪರಿಣಾಮಕ್ಕೆ ಆದ್ಯತೆ ನೀಡಿರುತ್ತದೆ.
7. ಸತ್ಯವನ್ನು ಮಾತಾಡಿದ್ರೂ, ಬೌದ್ಧಿಕ ಟೀಕೆ ಮಾಡಿದ್ರೂ ಬಂಧಿಸಬಹುದಾಗಿದೆ.
8. ಅಭಿವ್ಯಕ್ತಿ ಸ್ವಾತಂತ್ರ‍್ಯದ ರಕ್ಷಣೆ ಒಬ್ಬ ವ್ಯಕ್ತಿ, ಸಮುದಾಯಕ್ಕೆ ಸೀಮಿತವಾಗಿರಬಾರದು.
9. ಇಡೀ ಸಮಾಜದ ಸಾಮೂಹಿಕ ಹಕ್ಕಾಗಿರಬೇಕು.
10. ಅಧಿಕಾರಿಗಳು ತೀರ್ಮಾನಿಸಿದರೆ ಯಾವುದೇ ಕಾರ್ಯಕ್ರಮ ನಿಷೇಧಿಸಬಹುದು.
11. ಮಸೂದೆಯಲ್ಲಿರುವ ಈ ಕ್ರಮ ಸರಿಯಲ್ಲ ಎಂದು ಕಾರಣವನ್ನು ಉಲ್ಲೇಖಿಸಿದ ರಾಜ್ಯಪಾಲರು ದ್ವೇಷ ಭಾಷಣ ಬಿಲ್ ಅನ್ನು ಸಹಿ ಮಾಡದೇ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಗೆ ರವಾನೆ ಮಾಡಿದ್ದಾರೆ.
ರಾಜ್ಯಪಾಲ ನಡೆಗೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕರು ರಾಜ್ಯಪಾಲರ ನಡೆ ವಿರೋಧ ಮಾಡಿದರೆ, ಬಿಜೆಪಿ ನಾಯಕರು ಸಮರ್ಥನೆ ಮಾಡಿಕೊಂಡಿದ್ದಾರೆ. ದ್ವೇಷ ಭಾಷಣ ನಾವು ಮಾಡೋದು ತಪ್ಪೇ ನೀವು ಮಾಡೋದು ತಪ್ಪೇ, ಅದಕ್ಕೆ ಬಿಲ್ ತಂದ್ದೀವಿ. ದ್ವೇಷ ಭಾಷಣ ಪಿತಾಮಹರು ರಾಜ್ಯದಲ್ಲಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಕುಟುಕಿದರೆ, ನೇರವಾಗಿ ಒಂದು ವರ್ಗವನ್ನು ಕಾನೂನಿನಲ್ಲಿ ಸಿಲುಕಿಸಲು ಬಿಲ್ ತಂದಿದ್ದರು. ಇದಕ್ಕೆ ನಾವು ವಿರೋಧಿಸಿದ್ದೀವಿ. ಹೀಗಾಗಿ ರಾಜ್ಯಪಾಲರು ದ್ವೇಷ ಭಾಷಣ ಬಿಲ್ ರಾಷ್ಟ್ರಪತಿಗಳಿಗೆ ಕಳಿಸಿದ್ದಾರೆ, ವಿಮರ್ಶೆ ಮಾಡಿ ಎಂದು ಹೇಳಿದ್ದಾರೆಂದು ಬಿಜೆಪಿ ಹೇಳುತ್ತಿದೆ. ದ್ವೇಷ ಭಾಷಣ ಬಿಲ್ ಬಗ್ಗೆ ಅನೇಕ ಗೊಂದಲ ಇದೆ ಎಂದು ಕಾರಣ ನೀಡಿ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಬಿಲ್ ರವಾನಿಸಿದ್ದಾರೆ.

Politics

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಸ್ನೇಹಿತರು, ಸಂಬಂಧಿಗಳ ಭೇಟಿಗೆ ಕೋರ್ಟ್ ಅನುಮತಿ

Published

on

ಬೆಂಗಳೂರು: ಜೈಲಿನಲ್ಲಿ ಸ್ನೇಹಿತರು ಹಾಗೂ ಸಂಬಂಧಿಗಳನ್ನು ಭೇಟಿಯಾಗಲು ಅನುಮತಿ ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಭಾಗಶಃ ಪುರಸ್ಕರಿಸಿದೆ.

ಜೈಲು ಕೈಪಿಡಿಯ ನಿಯಮಗಳಿಗೆ ಅನುಗುಣವಾಗಿ ಭೇಟಿಗೆ ಅವಕಾಶ ನೀಡುವಂತೆ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕರಿಗೆ ಕೋರ್ಟ್ ಸೂಚನೆ ನೀಡಿದೆ. ಒಂದು ವೇಳೆ ಭೇಟಿಗೆ ಅನುಮತಿ ನಿರಾಕರಿಸಿದರೆ, ಅದರ ಕಾರಣವನ್ನು ಪ್ರಜ್ವಲ್ ರೇವಣ್ಣ ಅವರಿಗೆ ತಿಳಿಸುವಂತೆ ಆದೇಶಿಸಲಾಗಿದೆ.

ಕೆ.ಆರ್. ನಗರದಲ್ಲಿ ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಶಿಕ್ಷೆ ಹಾಗೂ ಜಾಮೀನು ಸಂಬಂಧ ಅವರು ಸುಪ್ರೀಂ ಕೋರ್ಟ್ ಮೊರೆ ಹೋದರೂ ಈವರೆಗೆ ಯಾವುದೇ ಪರಿಹಾರ ದೊರೆತಿಲ್ಲ.

ಇತ್ತೀಚೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ, ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಅಜ್ಜಿಯನ್ನು ನೆನೆದು ಭಾವುಕರಾಗಿದ್ದಾರೆ ಎನ್ನಲಾಗಿದ್ದು, ಅಂತ್ಯಕ್ರಿಯೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಿಸಿದ್ದಾರೆ ಎಂದು ವರದಿಯಾಗಿದೆ.

Continue Reading

Politics

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: 3.68 ಲಕ್ಷಕ್ಕೂ ಅಧಿಕ ಅರ್ಜಿಗಳು – ಜಿಲ್ಲಾವಾರು ಅಂಕಿಅಂಶ ಪ್ರಕಟ!!

Published

on

ಕರ್ನಾಟಕ ಪೊಲೀಸ್ ಇಲಾಖೆಯ 3,991 (3,395 + 596 ಹೈದರಾಬಾದ್-ಕರ್ನಾಟಕ ಮೀಸಲು) ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (Civil Police Constable) ಹುದ್ದೆಗಳ ನೇಮಕಾತಿಗೆ ರಾಜ್ಯದಾದ್ಯಂತ ಭಾರೀ ಸ್ಪಂದನೆ ವ್ಯಕ್ತವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಒಟ್ಟು 3,90,715 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅವರಲ್ಲಿ 3,68,858 ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಅಂತಿಮಗೊಳಿಸಿದ್ದಾರೆ.

ಹಲವು ವರ್ಷಗಳ ಬಳಿಕ ನಡೆದ ನೇಮಕಾತಿಗೆ ಉತ್ತಮ ಸ್ಪಂದನೆ:
ಹಲವು ವರ್ಷಗಳ ನಂತರ ದೊಡ್ಡ ಪ್ರಮಾಣದಲ್ಲಿ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯುವಕರಿಂದ ಭಾರೀ ಆಸಕ್ತಿ ವ್ಯಕ್ತವಾಗಿದೆ. ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಒಟ್ಟು 72 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿ ಪ್ರಕ್ರಿಯೆ ಕೈಗೊಂಡಿದ್ದು, ಪೊಲೀಸ್ ನೇಮಕಾತಿಯೂ ಅದರ ಪ್ರಮುಖ ಭಾಗವಾಗಿದೆ. ಇದರಿಂದ ಸ್ಪರ್ಧೆಯ ಮಟ್ಟವೂ ಗಣನೀಯವಾಗಿ ಹೆಚ್ಚಾಗಿದೆ.

ಜಿಲ್ಲಾವಾರು ಅರ್ಜಿ ಸಂಖ್ಯೆ:
ಅಂಕಿಅಂಶಗಳ ಪ್ರಕಾರ ಬೆಂಗಳೂರು ನಗರದಿಂದ ಅತಿ ಹೆಚ್ಚು 2,22,370 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 2,12,037 ಅಭ್ಯರ್ಥಿಗಳು ಶುಲ್ಕ ಪಾವತಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ನಗರ (17,263), ಶಿವಮೊಗ್ಗ (16,072), ಮಂಗಳೂರು ನಗರ (14,118), ಉಡುಪಿ (11,733), ಮಂಡ್ಯ (10,571) ಹಾಗೂ ಕೊಡಗು (10,276) ಜಿಲ್ಲೆಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
ಇನ್ನೊಂದೆಡೆ, ಬಳ್ಳಾರಿ (2,218), ರೈಲ್ವೆ ಘಟಕ, ಬೆಂಗಳೂರು (2,747), ದಾವಣಗೆರೆ (3,311) ಹಾಗೂ ಚಿಕ್ಕಬಳ್ಳಾಪುರ (3,613) ಜಿಲ್ಲೆಗಳಲ್ಲಿ ತುಲನಾತ್ಮಕವಾಗಿ ಕಡಿಮೆ ಅರ್ಜಿಗಳು ದಾಖಲಾಗಿವೆ.

ಅಭ್ಯರ್ಥಿಗಳಿಗೆ ಸಲಹೆ:
ಅರ್ಜಿ ಸಲ್ಲಿಕೆ ಪೂರ್ಣಗೊಂಡಿರುವುದರಿಂದ ಅಭ್ಯರ್ಥಿಗಳು ಈಗ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆಗೆ ಅಗತ್ಯ ಸಿದ್ಧತೆ ಆರಂಭಿಸುವುದು ಸೂಕ್ತ. ಸ್ಪರ್ಧೆ ಹೆಚ್ಚಿರುವುದರಿಂದ ನಿಯಮಿತ ಅಭ್ಯಾಸ, ಹಿಂದಿನ ಪ್ರಶ್ನೆಪತ್ರಿಕೆಗಳ ಅಧ್ಯಯನ ಮತ್ತು ದೈಹಿಕ ಸಾಮರ್ಥ್ಯ ವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಗಳನ್ನು ನಿರಂತರವಾಗಿ ಗಮನಿಸಿ, ಪರೀಕ್ಷೆಯ ವೇಳಾಪಟ್ಟಿ, ಪ್ರವೇಶ ಪತ್ರ ಹಾಗೂ ಇತರೆ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಪರಿಶೀಲಿಸಬೇಕು. ಉತ್ತಮ ಸಿದ್ಧತೆಯೊಂದಿಗೆ ಪರೀಕ್ಷೆಯನ್ನು ಎದುರಿಸಿದರೆ ಪೊಲೀಸ್ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯುವ ಅವಕಾಶ ಹೆಚ್ಚಾಗಲಿದೆ.

Continue Reading

Politics

ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರ: ಕೇಂದ್ರಕ್ಕೆ ಪತ್ರ, ರೈತರಿಗೆ ತ್ವರಿತ ಪರಿಹಾರಕ್ಕೆ ಮನವಿ

Published

on

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಕುರಿತು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಶೇ.42 ಹಾಗೂ ಜುಲೈ ತಿಂಗಳಲ್ಲಿ ಶೇ.34 ಮಳೆಯ ಕೊರತೆ ದಾಖಲಾಗಿರುವುದಾಗಿ ಹೇಳಿದರು. ಮಳೆಯ ಅಭಾವದಿಂದ ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಬಿತ್ತನೆಯಾದ ಬೆಳೆಗಳಲ್ಲಿ ಸುಮಾರು ಶೇ.80ರಷ್ಟು ಹಾನಿಯಾಗಿದೆ ಎಂದು ತಿಳಿಸಿದರು.

ಜಲಾಶಯಗಳ ಒಳಹರಿವು ಹಾಗೂ ಅಂತರ್ಜಲ ಮಟ್ಟವೂ ನಿರಂತರವಾಗಿ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಬಿಕ್ಕಟ್ಟಿನ ಆತಂಕ ಎದುರಾಗುವ ಸಾಧ್ಯತೆಯಿದೆ ಎಂದು ಅವರು ಎಚ್ಚರಿಸಿದರು.

ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದ್ದು, ಬರ ಪರಿಸ್ಥಿತಿಯ ಸಮಗ್ರ ಮೌಲ್ಯಮಾಪನ ನಡೆಸಿ ರೈತರಿಗೆ ಶೀಘ್ರ ಪರಿಹಾರ ಒದಗಿಸುವಂತೆ ಮನವಿ ಮಾಡಲಾಗಿದೆ ಎಂದು ಸಚಿವರು ಹೇಳಿದರು.

Continue Reading

Trending

error: Content is protected !!