Connect with us

Hassan

ಗ್ರಾಪಂ ಅಧ್ಯಕ್ಷರ ಹೆಸರಿನ ಐಡಿ ಬೇರೆ ಹೆಸರಿನಲ್ಲಿ ಸೃಷ್ಠಿ

Published

on

ನ್ಯಾಯ ಸಿಗದಿದ್ರೆ ಸರಕಾರದ ಮಟ್ಟದಲ್ಲಿ ಹೋರಾಟ: ಗ್ರಾಪಂ ಅಧ್ಯಕ್ಷೆ ಶೋಭ ಎಚ್ಚರಿಕೆ

ಹಾಸನ : ಪಿ.ಎಂ. ವಿಶ್ವಕರ್ಮ ಸ್ವಾ-ಉದ್ಯೋಗ ಯೋಜನೆ ಅಡಿ ಇರುವ ಅಧ್ಯಕ್ಷರ ಹೆಸರನಲ್ಲಿ ಆಗಬೇಕಾದ ಐ.ಡಿ.ಯನ್ನು ಬೇರೆಯವರ ಹೆಸರಿನಲ್ಲಿ ಸೃಷ್ಟಿಸಿದ್ದು, ನಮಗೆ ನ್ಯಾಯ ಸಿಗದಿದ್ದರೆ ಸರಕಾರದ ಮಟ್ಟಕ್ಕೆ ಹೋಗುವುದಾಗಿ ಸಕಲೇಶಪುರ ತಾಲೂಕು ಹಲಸುಲಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭ ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಹಲಸುಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾನು ಪಿ.ಎಂ. ವಿಶ್ವಕರ್ಮ ಸ್ವಾ ಉದ್ಯೋಗ ಯೋಜನೆಯಡಿ ಆಯ್ಕೆ ಮಾಡಲು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಅಧಿಕಾರ ಇರುತ್ತದೆ. ಇದನ್ನು ಬೇರೆಯವರ ಹೆಸರಿನಲ್ಲಿ ಖಾಸಗಿ ಸೈಬರ್‌ನಲ್ಲಿ ನನ್ನ ಹೆಸರಿನಲ್ಲಿ ಐ.ಡಿ.ಯನ್ನು ಸೃಷ್ಟಿಸಿರುತ್ತಾರೆ. ಹಾಗೆ ಇದಕ್ಕೆ ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಪ್ರಶ್ನೆ ಮಾಡಿದಾಗ ಇವರು ನನಗೂ ಅದಕ್ಕೂ ಸಂಬಂಧವಿಲ್ಲವೆನೋ ಎಂದು ಉತ್ತರ ಕೊಡುತ್ತಾರೆ. ನಮ್ಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ನಾವು ಗ್ರಾಮ ಪಂಚಾಯಿತಿ ಅಧ್ಯಕ್ಷರಾದರು ಯಾವುದೇ ಕೆಲಸ ಕಾರ್ಯ ಮಾಡಲು ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡುವುದಿಲ್ಲ. ಹಾಗಾಗಿ ಗ್ರಾಮ ಪಂಚಾಯಿತಿಯಲ್ಲಿ ಕಾಮಗಾರಿಗಳು ದುರುಪಯೋಗ ಮಾಡಿರುವುದು ಕಂಡುಬಂದಿರುತ್ತದೆ. ಹಾಗಾಗಿ ನಾನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಈ ವಿಚಾರವಾಗಿ ಅವರ ಹತ್ತಿರ ಚರ್ಚೆ ಮಾಡಿದರೆ ಅವರು ನಮಗೆ ಹೂಡಾಫೆ ಮಾತುಗಳನ್ನು ಹಾಡುತ್ತಾರೆ ಎಂದು ದೂರಿದರು. ಈ ಐ.ಡಿ. ಕ್ರಿಯೆಟ್ ಆಗಿರುವುದು ಮೇಲ್ನೋಟಕ್ಕೆ ಅವರ ಗಮನಕ್ಕೆ ಬಂದಿರುತ್ತದೆ . ಹಾಗೂ ಗ್ರಾಮ ಪಂಚಾಯಿತಿಯ ಲೇಟರ್ ಫ್ಯಾಡ್‌ನ್ನು ಕೇಳಿದರೆ ಕೋಡುವುದಿಲ್ಲ ಹಾಗೂ ಸಾಮಾನ್ಯ ಸಭೆಯಲ್ಲಿ ನಡೆದಂತೆ ವಿಷಯಗಳನ್ನು ಚರ್ಚೆ ಮಾಡಿದ್ದರು ನಾನು ವೀಡಿಯೋ ಕಾಫಿಯನ್ನು ಕೊಡುವುದಿಲ್ಲ. ಅದರ ಒಬ್ಬ ಜನಪ್ರತಿನಿಧಿಯಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷಳಾಗಿ ನನ್ನ ಗಮನಕ್ಕೆ ಬಾರದೆ ಅನೇಕ ಕೆಲಸ ಕಾರ್ಯಗಳನ್ನು ಮಾಡಿರುತ್ತಾರೆ ಎಂದು ಆರೋಪಿಸಿದರು.

ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರಿಗಳಿಂದ ಗೌರವ ದೊರೆಯುತ್ತಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ನಮ್ಮ ತಾಲ್ಲೂಕು ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಹಾಗೂ ನನ್ನ ಐ.ಡಿ.ಸೃಷ್ಟಿಸಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ತಾಲ್ಲೂಕು ಸಂಬಂಧಪಟ್ಟ ನಗರ ಠಾಣೆಗೆ ದೂರು ನೀಡಿರುತ್ತೇವೆ. ಹಾಗೂ ಮಾನ್ಯ ಜಿಲ್ಲಾಧಿಕಾರಿಗಳಿಗು ದೂರು ನೀಡಿರುತ್ತೇನೆ. ನಮಗೆ ಸುಮಾರು ೧೫ ದಿನಗಳಿಂದ ನನಗೆ ಯಾವುದೇ ತನಿಖೆ ಮಾಡಿ ನಮಗೆ ಏನು ವರದಿ ಕೊಟ್ಟಿರುವುದಿಲ್ಲ. ನ್ಯಾಯ ಸಿಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರದ ಮಟ್ಟಕ್ಕೆ ಹೋಗಲು ಸಿದ್ದನಿರುತ್ತೇನೆ ಎಂದು ತಮ್ಮ ಅಳಲು ತೋಡಿಕೊಂಡರು.

ಪತ್ರಿಕಾಗೋಷ್ಠಿಯಲ್ಲಿ ಗ್ರಾಮದ ಸೌಮ್ಯ, ಚರಣ್, ಲೋಕೇಶ್ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಎಲ್ಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Published

on

ಹಾಸನ : ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ

ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಸಕಲೇಶಪುರ, ಆಲೂರು, ಬೇಲೂರು ಹಾಗೂ ಅರಕಲಗೂಡು ತಾಲ್ಲೂಕಿನ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಣೆ

ಡಿಡಿಪಿಯು ಮಹಾಲಿಂಗಯ್ಯ ಆದೇಶ

ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಉಳಿದ ತಾಲ್ಲೂಕುಗಳಲ್ಲಿ ಹೆಚ್ಚಿನ ಮಳೆಯಾದರೆ ರಜೆ ನೀಡುವ ಬಗ್ಗೆ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸೂಚನೆ

ಡಿಸಿ ಅನುಮತಿ ಪಡೆದು ರಜೆ ಘೋಷಣೆ ಮಾಡಿದ ಡಿಡಿಪಿಯು

Continue Reading

Hassan

ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

Published

on

ಹಾಸನ : ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

ರಾಜೇಶ್ (9) ಸಾವನ್ನಪ್ಪಿದ ಬಾಲಕ

ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಮಾಡಾಳು ಗ್ರಾಮದಲ್ಲಿ ಘಟನೆ

ಗ್ರಾಮದ ಗೌರಮ್ಮ-ನಾಗರಾಜ ದಂಪತಿ ಪುತ್ರ ರಾಜೇಶ್

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮೂರನೇ ತರಗತಿ ವ್ಯಾಸಂಗ ಮಾಡುತ್ತಿದ್ದ ರಾಜೇಶ್

ನಾಲ್ಕು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್

ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಶ್

ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಹಿಮ್ಸ್‌ಗೆ ದಾಖಲಾಗಿದ್ದ ರಾಜೇಶ್

ಚಿಕಿತ್ಸೆ ಫಲಕಾರಿಯಾಗದೆ ಇಂದು ರಾಜೇಶ್ ಸಾವು

Continue Reading

Hassan

2 ತಿಂಗಳ ಮಗುವಿಗೆ ಅನಾರೋಗ್ಯ ಬೇಸೆತ್ತ ಅಪ್ಪ ಆತ್ಮಹತ್ಯೆಗೆ ಯತ್ನ

Published

on

ಹಾಸನ: ಮಗುವಿನ ಆರೋಗ್ಯವು ಸುಧಾರಿಸದೇ ದಿನೆ ದಿನೆ ಹೆಚ್ಚಾದ ಹಿನ್ನಲೆಯಲ್ಲಿ ಮನಸ್ಸಿಗೆ ನೋವುಂಟು ಮಾಡಿದ ಹಿನ್ನಲೆಯಲ್ಲಿ ಏನು ಮಾಡುವುದು ಎಂಬುದು ತೋಚದೇ ಹಾಸನ ಜಿಲ್ಲಾ ಸರಕಾರಿ ಆಸ್ಪತ್ರೆ ಕಟ್ಟಡದ ಮೇಲೆ ಹೋಗಿ ತುದಿಯಲ್ಲಿ ನಿಂತು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿ ಕೊನೆಗೆ ಆಸ್ಪತ್ರೆ ಸಿಬ್ಬಂದಿಗಳು ಆತನ ಮನವೊಲಿಸುವಲ್ಲಿ ಯಶಸ್ವಿಯಾಗಿ ಬದುಕಿಸಿದ ಘಟನೆ ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಬೇಲೂರು ತಾಲ್ಲೂಕಿನ ಹಳೆಬೀಡು ಸಮೀಪದ ಬಸವರಾಯನಪುರ ಗ್ರಾಮದ ಗಂಗಸ್ವಾಮಿ ಎಂಬುವರ ಎರಡು ತಿಂಗಳ ಮಗುವಿನ ಅನಾರೋಗ್ಯವು ಹೆಚ್ಚಾಗುತ್ತಿರುವ ಬಗ್ಗೆ ತಿಳಿದು ಬೇಸರದಿಂದ ಆತ್ಮಹತ್ಯೆ ಯತ್ನಿಸಿರುವುದಾಗಿ ಹೇಳಲಾಗಿದೆ. ಮಗುವಿನ ಅನಾರೋಗ್ಯದಿಂದ ತಂದೆ ಮನನೊಂದಿದ್ದು, ಹಾಸನದ ಜಿಲ್ಲಾ ಹಿಮ್ಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ಮೇಲೇರಿ ಸಾಯುವ ಹೈಡ್ರಾಮ ಮಾಡಲಾಗಿದೆ. ಕಟ್ಟಡದ ಐದನೇ ಮಹಡಿಯ ತುದಿಯಲ್ಲಿ ನಿಂತು ಆತ್ಮಹತ್ಯೆ ಬೆದರಿಕೆ ಹೊಡ್ಡಿದ್ದು,

ಮಗುವಿನ ಅರೋಗ್ಯ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಈ ಆತ್ಮಹತ್ಯೆ ಯತ್ನ ಮಾಡಲಾಗಿದೆ ಎನ್ನಲಾಗಿದೆ. ಆಸ್ಪತ್ರೆ ಸಿಬ್ಬಂದಿಯ ಸಮಯ ಪ್ರಜ್ಞೆ ಯಿಂದ ಅನಾಹುತ ತಪ್ಪಿದಂತಾಗಿದೆ. ಗಂಗಸ್ವಾಮಿಯನ್ನ ಆಸ್ಪತ್ರೆ ಕಟ್ಟಡದಿಂದ ಕೆಳಗಿಳಿಸಿ ನಂತರ ಪೊಲಿಸ್ ಠಾಣೆಗೆ ಆಸ್ಪತ್ರೆ ಸಿಬ್ಬಂದಿಗಳು ಕರೆದುಕೊಂಡು ಹೋಗಿದ್ದಾರೆ. ಈ ದೃಶ್ಯವನ್ನು ರಸ್ತೆಯಲ್ಲಿ ಸಾರ್ವಜನಿಕರು ನೋಡಿದ್ದು, ವಿಡಿಯೋ ಸೆರೆ ಹಿಡಿದಿದ್ದಾರೆ.

Continue Reading

Trending

error: Content is protected !!