Chamarajanagar
ಹೆಗ್ಗೋಠಾರ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿಪೂಜೆ
ಚಾಮರಾಜನಗರ: ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಯೋಜನೆಯಡಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಹಾಗೂ ಮಾಜಿ ಸಚಿವರೂ ಆದ ಶಾಸಕ ಡಾ.ಎಚ್.ಸಿ.ಮಹದೇವಪ್ಪ ಅವರು ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ, ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕೆ 50 ಲಕ್ಷ ರೂ. ಅನುದಾನ ನೀಡಲಾಗಿದೆ. ಜಿಲ್ಲೆಯ ಹಲವು ಗ್ರಾಮಗಳಲ್ಲಿ ಸಮುದಾಯ ಭವನಗಳ ಕಾಮಗಾರಿಗಳು ನಿರ್ಮಾಣ ಹಂತದಲ್ಲಿದ್ದು, ಅವುಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು ಎಂದರು.

ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಹಾಗೂ ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಗಂಗಾ ಕಲ್ಯಾಣ, ವಸತಿ ಸಾಲ ಸೇರಿದಂತೆ ಹಲವು ಯೋಜನೆಗಳ ಸೌಲಭ್ಯಗಳನ್ನು ಒದಗಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಶಾಸಕ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ಗಾಂಧಿ ಜಯಂತಿಯ ದಿನದಂದು ಅಂಬೇಡ್ಕರ್ ಭವನದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿರುವುದು ಸಂತಸ ತಂದಿದೆ. ಚಾಮರಾಜನಗರ ಜಿಲ್ಲೆ ಅಭಿವೃದ್ಧಿಯತ್ತ ಸಾಗುತ್ತಿದೆ. ತಾವು ಸಚಿವರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಲಾಗಿದೆ.

ಗ್ರಾಮದ ಜನರು ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿದಾಗ ಮತ್ತಷ್ಟು ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಯೋಗೇಶ್, ಲಿಂಗಣ್ಣ, ನಾಗರಾಜುಮೂರ್ತಿ, ಶಿವಕುಮಾರಸ್ವಾಮಿ, ಎಂ.ಎಸ್.ಮಾದಯ್ಯ, ಎಸ್.ಪಿ.ಕೆ.ಉಮೇಶ್, ಮಹೇಶ್ ಕುದರ್, ಚಿಕ್ಕ ಮಹದೇವ್, ಕಾವೇರಿ ಶಿವಕುಮಾರ್, ಅಶೋಕ್, ಚಿನ್ನಮ್ಮ, ನಾಗರತ್ನ, ಮರಿಯಾಲ ಹುಂಡಿ ಕುಮಾರ್, ದುಂಡು ಮಾದಯ್ಯ, ಬಸುಮರಿ ಸೇರಿದಂತೆ ಗ್ರಾಮದ ಮುಖಂಡರು, ಯಜಮಾನರು ಉಪಸ್ಥಿತರಿದ್ದರು.
Chamarajanagar
ಕೊತ್ತಲವಾಡಿ ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬ*ಲಿ
ಚಾಮರಾಜನಗರ: ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿರುವ ಘಟನೆ ಶುಕ್ರವಾರ ನಡೆದಿದೆ.
ಗ್ರಾಮದ ಮಹೇಶ್ ಎಂಬುವವರಿಗೆ ಸೇರಿದ ಹಸು ಹುಲಿ ದಾಳಿಯಿಂದ ಮೃತಪಟ್ಟಿರುವುದು. ಇವರು ತಮ್ಮ ಜಮೀನಿನಲ್ಲಿ ಮೇಯಲು ಬಿಟ್ಟಿದ್ದಾಗ ಏಕಾಏಕಿ ದಾಳಿ ನಡೆಸಿದ ಹುಲಿ ಹಸವನ್ನು ಸಾಯಿಸಿದೆ.

ತಕ್ಷಣವೇ ಘಟನಾಸ್ಥಳದ ಸಮೀಪವಿದ್ದ ರೈತರು ಕಿರುಚಿಕೊಂಡಾಗ ಹಸುವನ್ನು ಬಿಟ್ಟು ಹುಲಿ ಪರಾರಿಯಾಗಿದೆ.ವಿಷಯ ತಿಳಿದು ಘಟನಾಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಗ್ರಾಮಸ್ಥರು ಸ್ಥಳದಲ್ಲಿ ಬೋನ್ ಇರಿಸಿ ಹುಲಿಯನ್ನು ಸೆರೆಹಿಡಿಯಬೇಕು ಹಾಗೂ ಹಸು ಮಾಲೀಕರಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸಿದರು.
Chamarajanagar
ದೇಶಕ್ಕೆ ಮಹಾತ್ಮ ಗಾಂಧೀಜಿ ಕೊಡುಗೆ ಅಪಾರ: ಎಂ.ಎಸ್.ಮಾದಯ್ಯ
ಚಾಮರಾಜನಗರ: ಅ.02:- ದೇಶಕ್ಕೆ ಮಹಾತ್ಮ ಗಾಂಧೀಜಿ ಕೊಡುಗೆ ಅಪಾರ ಎಂದು ಶ್ರೀರಾಮಚಂದ್ರ ವಿದ್ಯಾಸಂಸ್ಥೆಯ ಅಧ್ಯಕ್ಷ ಎಂ.ಎಸ್.ಮಾದಯ್ಯ ತಿಳಿಸಿದರು. ನಗರದ ನ್ಯಾಯಾಲಯ ರಸ್ತೆಯಲ್ಲಿ ಶ್ರೀರಾಮಚಂದ್ರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಬಾಪೂಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಗಾಂಧಿಜೀಯವರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿದ್ದರು. ಗ್ರಾಮಗಳು ಸ್ವಚ್ಛವಾಗಿದ್ದರೆ ನಮ್ಮ ದೇಶ ಸ್ವಚ್ಛವಾಗಿರಲಿದೆ ಎಂಬುದು ಅವರ ಧ್ಯೇಯವಾಗಿತ್ತು. ವಿದ್ಯಾರ್ಥಿಗಳು ಗಾಂಧಿಜೀಯವರ ತತ್ವ, ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು.ಸ0ಸ್ಥೆಯ ಕಾರ್ಯದರ್ಶಿ ರುದ್ರಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಶಾಲೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಗಾಂಧೀಜಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಪರಶಿವಮೂರ್ತಿ, ಸಂಸ್ಥೆಯ ನಿರ್ದೇಶಕ ಮಹೇಶ್, ಶಿಕ್ಷಕರಾದ ರಂಗಸ್ವಾಮಿ, ಕುಮಾರ್, ಯಶ್ ಪಾಲ್, ರತ್ನಮ್ಮ, ಮಂಜುಳ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
Chamarajanagar
ಕಾರು–ಬೈಕ್ ನಡುವೆ ಅಪಘಾ*ತ: ಬೈಕ್ ಸವಾರನಿಗೆ ಗಾಯ
ಗುಂಡ್ಲುಪೇಟೆ: ಅ.02: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕೇರಳ ರಸ್ತೆಯಲ್ಲಿ ನಡೆದಿದೆ.
ತಮಿಳುನಾಡು ಮೂಲದ ಬೈಕ್ ಸವಾರ ಇರಾನ್ ಗಾಯಗೊಂಡ ವ್ಯಕ್ತಿ. ಕೇರಳ ಮೂಲದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಬೈಕ್ ಸಂಪೂರ್ಣ ಜಖಂಗೊಂಡಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಎರಡು ವಾಹನಗಳನ್ನು ವಶಕ್ಕೆ ಪಡೆದು, ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Chikmagalur23 hours agoಫೇಸ್ಬುಕ್ನ ‘ಕೇರಳ ಲಾಟರಿ’ ಜಾಹೀರಾತು ನಂಬಿ ₹4.30 ಲಕ್ಷ ಕಳೆದುಕೊಂಡ ವ್ಯಕ್ತಿ
-
Hassan2 hours agoಗಾಂಧೀಜಿ–ಶಾಸ್ತ್ರಿ ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಿ: ರಘು ಪ್ರೌಢ ಶಾಲೆಯ ಮುಖ್ಯ ಶಿಕ್ಷಕ
-
Hassan20 hours agoಬೈಕ್ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ: ವ್ಯಕ್ತಿ ಸಾ*ವು
-
Hassan23 hours agoಪೌರ ಕಾರ್ಮಿಕರ ಸೇವೆ ಶ್ಲಾಘನೀಯ: ಶಾಸಕ ಸಿಮೆಂಟ್ ಮಂಜು
-
Chikmagalur23 hours agoಕಡೂರಿನಲ್ಲಿ ಮನೆ ಬೀಗ ಮುರಿದು ₹7.06 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ಕಳವು
-
Chikmagalur23 hours agoಮೆಸ್ಕಾಂ ಸಬ್ಸ್ಟೇಷನ್ನಿಂದ ₹31 ಲಕ್ಷ ಮೌಲ್ಯದ ಟ್ರಾನ್ಸ್ಫಾರ್ಮರ್ ಆಯಿಲ್ ಕಳವು
-
Chikmagalur8 hours agoಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕ ಗುಂಡೇಟು: 26 ವರ್ಷದ ಯುವಕ ಸಾ*ವು
-
Hassan4 hours agoಗಾಂಧೀಜಿ, ಶಾಸ್ತ್ರಿ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಶಿವಲಿಂಗೇಗೌಡ
