Connect with us

State

ಇಂತಹ ಗೃಹಲಕ್ಷ್ಮಿಯರಿಗೆ ಸಿಗಲಿದೆ 6,000 ರೂಪಾಯಿ, ಇನ್ನು 2 ಸಾವಿರ ಬಂದಿಲ್ಲ ಅನ್ನೋ ಚಿಂತೆ ಬೇಡ

Published

on

ರಾಜ್ಯ ಕಾಂಗ್ರೆಸ್ ಸರ್ಕಾರ (State Congress government) ಚುನಾವಣೆಗೂ ಮೊದಲು ತನ್ನ ಪ್ರಣಾಳಿಕೆಯಲ್ಲಿ ಹೊರಡಿಸಿರುವ ಪ್ರತಿಯೊಂದು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ

ಇದರಿಂದಾಗಿ ಸರ್ಕಾರಿ ಯೋಜನೆಗಳ ಬಗ್ಗೆ ಜನರಲ್ಲಿ ಭರವಸೆ ಮೂಡಿದೆ ಎನ್ನಬಹುದು, ಜನರ ಅತೀ ನಿರೀಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ (Gruha lakshmi scheme) ಅಡಿಯಲ್ಲಿ ಎರಡು ಕಂತಿನ ಹಣ ಫಲಾನುಭವಿಗಳ ಖಾತೆಗೆ (Bank Account) ಸಂದಾಯವಾಗಿದೆ.

30% ಮಹಿಳೆಯರಿಗೆ ಹಣ ಬಂದಿಲ್ಲ!
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವವರ ಸಂಖ್ಯೆ ಏನು ಕಡಿಮೆ ಇಲ್ಲ, ಅಗಸ್ಟ್ ತಿಂಗಳಿಗಿಂತಲೂ ಮೊದಲೇ ಒಂದು ಕೋಟಿಗೂ ಅಧಿಕ ಮಹಿಳೆಯರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿ ಮೊದಲ ಕಂತಿನ ಹಣ 96 ಲಕ್ಷ ಜನರ ಖಾತೆಗೂ ಹಾಗೂ ಎರಡನೇ ಕಂತಿನ ಹಣ 63 ಲಕ್ಷ ಮಹಿಳೆಯರ ಖಾತೆಗೂ ವರ್ಗಾವಣೆ (DBT) ಮಾಡಲಾಗಿದೆ

ಆದರೆ ಉಳಿದವರು ಖಾತೆಗೆ ಮಾತ್ರ ಇನ್ನೂ ಹಣ ಬಂದಿಲ್ಲ, ಹಾಗಾಗಿ ಸಾಕಷ್ಟು ಮಹಿಳೆಯರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗಾದ್ರೆ ಅರ್ಜಿ ಸಲ್ಲಿಸಿದರು ಕೂಡ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಆಗದೆ ಇರಲು ಕಾರಣವೇನು ಎಂಬುದನ್ನು ನೋಡುವುದಾದರೆ ಮೊದಲನೇದಾಗಿ ಮಹಿಳೆಯರ ಬ್ಯಾಂಕ್ ಖಾತೆಯಲ್ಲಿಯೇ (bank account problem) ಸಮಸ್ಯೆ ಇದೆ

ಕೆಲವರ ಬ್ಯಾಂಕ್ ಖಾತೆ ಆಕ್ಟಿವ್ ಆಗಿಲ್ಲದೆ ಇದ್ದರೆ ಇನ್ನು ಕೆಲವರ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ (Aadhaar seeding) ಆಗಿಲ್ಲ. ಈ ಎಲ್ಲಾ ಬದಲಾವಣೆಗಳನ್ನು ಮಾಡಿಕೊಳ್ಳದೆ ಇದ್ದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಳ್ಳಲು ಸಾಧ್ಯವಿಲ್ಲ.

ಸರ್ಕಾರದಿಂದಲೂ ಸಮಸ್ಯೆ!
ಇತ್ತೀಚಿಗೆ ಮಾಧ್ಯಮದೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi hebbalkar ) ತಿಳಿಸಿರುವಂತೆ, ಕೆಲವು ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಆಗದೆ ಇರುವುದಕ್ಕೆ ಸರ್ಕಾರದ ಕಡೆಯಿಂದ ಆಗಿರುವ ಲೋಪದೋಷಗಳು ಕೂಡ ಕಾರಣ.

ನಮ್ಮಲ್ಲಿ ಕೆಲವು ಈ ಗವರ್ನೆನ್ಸ್ ಸಮಸ್ಯೆ ಉಂಟಾಗಿದೆ. ತಾಂತ್ರಿಕ ದೋಷಗಳಿಂದಾಗಿ (technical error) ಮಹಿಳೆಯರ ಖಾತೆಯನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಆದರೆ ಸದ್ಯದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೇವೆ ಎಂದು ಸಚಿವೆ ತಿಳಿಸಿದರು.

ಹಾಗಾಗಿ ಮೊದಲ ಕಂತಿನ ಹಣ ಯಾರ ಖಾತೆಗೆ ಬಂದಿಲ್ಲವೋ ಅವರಿಗೆ ನವೆಂಬರ್ 10ರ ಒಳಗೆ ಎರಡು ಖಾತೆಯ ಹಣವನ್ನು ಸೇರಿಸಿ ಜಮಾ (Money Transfer) ಮಾಡಲಾಗುವುದು ಎಂದು ಸರ್ಕಾರ ಭರವಸೆ ನೀಡಿತ್ತು.

ಇಂತಹವರಿಗೆ ಸಿಗಲಿದೆ ಉಚಿತ ಮನೆ, ಸರ್ಕಾರದಿಂದ ಆರನೇ ಗ್ಯಾರಂಟಿ ಯೋಜನೆ ಘೋಷಣೆ

ಪೋಸ್ಟ್ ಆಫೀಸ್ ಖಾತೆ ತೆರೆಯಿರಿ! (Open account in post office)
ಬ್ಯಾಂಕುಗಳಲ್ಲಿ ಅದೆಷ್ಟೋ ಮಹಿಳೆಯರು ಈಕೆ ವೈ ಸಿ ಮಾಡಿಸಿಕೊಳ್ಳಲು ಪ್ರಯತ್ನಿಸಿದರು ಅದು ಸಾಧ್ಯವಾಗುತ್ತಿಲ್ಲ, ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿ ಹಿಂತಿರುಗಿದರೆ ಬ್ಯಾಂಕ್ ಕೆ ವೈ ಸಿ (KYC) ಅಥವಾ ಆಧರಿಸಿ ಮಾಡುವಲ್ಲಿ ವಿಫಲವಾಗಿದೆ.

ಆದರೆ ಯಾರು ಪೋಸ್ಟ್ ಆಫೀಸ್ ಖಾತೆಯನ್ನು ಹೊಂದಿರುತ್ತಾರೋ ಅಂತವರಿಗೆ ಯಾವುದೇ ತೊಂದರೆ ಆಗದೆ ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣವು ಸಂದಾಯವಾಗಿದೆ.

ಮಹಿಳೆಯರು ಪೋಸ್ಟ್ ಆಫೀಸ್ನಲ್ಲಿ ಖಾತೆ ತೆರೆಯುವಂತೆ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ. ಪೋಸ್ಟ್ ಆಫೀಸ್ ನಲ್ಲಿ ಖಾತೆ ಹೊಂದಿದ್ದರೆ ಯಾರಿಗೆ ಈವರಿಗೆ ಹಣ ಸಂದಾಯ ಆಗಿಲ್ಲವೋ ಅವರಿಗೆ ಮೂರು ಕಂತಿನ ಹಣವನ್ನು ಸೇರಿಸಿ ಜಮಾ ಆಗುವ ಸಾಧ್ಯತೆ ಇದೆ. ನಿಜವಾಗಿ ವಿವಿಧ ಮಹಿಳೆಯರ ಖಾತೆಗೆ ನವೆಂಬರ್ ಹತ್ತರ ಒಳಗೆ ಹಣ ಸಂದಾಯ ಆಗುತ್ತದೆಯೋ ಅಥವಾ ಅರ್ಜಿ ಸಲ್ಲಿಸಿದ್ದು ವ್ಯರ್ಥವಾಗುತ್ತದೆಯೋ ಎಂಬುದು ಸದ್ಯದಲ್ಲಿಯೇ ಸ್ಪಷ್ಟವಾಗಲಿದೆ.

 

 

Continue Reading
Click to comment

Leave a Reply

Your email address will not be published. Required fields are marked *

State

ಅರ್ಹ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬರುವುದು ಶ್ಲಾಘನೀಯ: ಸಭಾಪತಿ ಬಸವರಾಜ ಹೊರಟ್ಟಿ

Published

on

ಕೆಯುಡಬ್ಲ್ಯೂಜೆ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಕಾರ್ಯಕ್ರಮ

ಬೆಂಗಳೂರು-ಡಿ.1. ಪತ್ರಕರ್ತರು ಸಮಾಜದ ಮತ್ತು ಸರ್ಕಾರದ ಅಂಕು-ಡೊಂಕುಗಳನ್ನು ತಿದ್ದುವವರಾಗಿದ್ದು, ವೃತ್ತಿ ಬದ್ದತೆ ಕಾಪಾಡಿಕೊಳ್ಳಬೇಕು. ಈ ಬಾರಿ
ಸಮರ್ಥ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬಂದಿರುವುದು ನಿಜಕ್ಕೂ ಶ್ಲಾಘನೀಯ ಎಂದು ವಿಧಾನಪರಿಷತ್ ಸಭಾಧ್ಯಕ್ಷರಾದ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟರು.

ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು.

ಇಂದಿನ ಸಮಾಜದಲ್ಲಿ ಪತ್ರಕರ್ತರು ದಿಟ್ಟತನದಿಂದ ಕಾರ್ಯ ನಿರ್ವಹಿಸಬೇಕಾದುದು ಅತ್ಯಗತ್ಯ. ಹಾಗಾಗಿ ಸಮರ್ಥರಿಗೆ ಮನ್ನಣೆ ನೀಡಬೇಕಾದುದು ಎಲ್ಲರ ಕರ್ತವ್ಯ ಎಂದು ಅವರು ಹೇಳಿದರು.

ನಾನು ಸದನಕ್ಕೆ ಬಂದ ಹೊಸದರಲ್ಲಿ ಏನೇನು ತಪ್ಪು ಮಾಡಿದೆ ಎನ್ನುವುದನ್ನು ಹಿರಿಯ ಪತ್ರಕರ್ತರೇ ತಿದ್ದಿ ಹೇಳುತ್ತಿದ್ದರು. ಹಾಗಾಗಿ ಬಹಳ ಕಲಿಯಲು ಸಾಧ್ಯವಾಯಿತು. ವೃತ್ತಿಪರವಾಗಿ ಅಷ್ಟು ಪ್ರಭುದ್ಧತೆ ಹೊಂದಿದ ಪತ್ರಕರ್ತರು ಇದ್ದರು. ಈಗ ಆ ಸಂಖ್ಯೆ ಇಳಿಮುಖವಾಗುತ್ತಿದೆ ಎಂದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮಾತನಾಡಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘವು ವೃತ್ತಿ ಭಾಂದವರ ಬಗ್ಗೆ ತೋರುತ್ತಿರುವ ಕಾಳಜಿಯು ನಿಜಕ್ಕೂ ಸ್ತುತ್ಯಾರ್ಹ. ನಿರಂತರ ಕಾರ್ಯಕ್ರಮ ಮೂಲಕ ಕೆಯುಡಬ್ಲ್ಯೂಜೆ ಹೊಸ ಹೆಜ್ಜೆ ಇಟ್ಟಿರುವುದು ವಿಶೇಷ ಎಂದು ಅಭಿನಂದಿಸಿದರು.

ಪತ್ರಿಕಾ ವಿತರಕರನ್ನೂ ಸರ್ಕಾರ ಈ ಬಾರಿ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ.
ಅಪಘಾತದಲ್ಲಿ ಮೃತಪಟ್ಟವರಿಗೆ ಮತ್ತು ಆಸ್ಪತ್ರೆಗೆ ಸೇರಿದವರಿಗೆ ನೆರವು ನೀಡುವ ಯೋಜನೆ ಜಾರಿಗೆ ತರಲಾಗಿದೆ. ವಿತರಕರನ್ನು ಗುರುತಿಸುವ ಕಾರ್ಯವು ಇನ್ನೂ ಮುಂದುವರಿಯಲಿದೆ ಎಂದು ಅವರು ಹೇಳಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತರಾದ ಮಾಯಾ ಶರ್ಮಾ
ಮಾತನಾಡಿ, ಪತ್ರಕರ್ತರು ಯಾವ ಪಕ್ಷಕ್ಕೂ ಮತ್ತು ಯಾವ ಪಂಥಕ್ಕೂ ಸೇರಿದವರಲ್ಲ. ಸದಾ ನಿಸ್ಪಕ್ಷಪಾತವಾಗಿ ಕೆಲಸ ಮಾಡುವ ಮೂಲಕ ವೃತ್ತಿ ಬದ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಸುದ್ದಿಮನೆಯ ಹಿರಿಯ ಸುಬ್ಬು ಹೊಲೆಯಾರ್ ಮಾತನಾಡಿ, ವೃತ್ತಿಪರವಾದ ಕೆಯುಡಬ್ಲ್ಯೂಜೆ ಸಂಸ್ಥೆಯಲ್ಲಿ ನನಗೆ ಗೌರವಿಸುತ್ತಿರುವುದು ಅಭಿಮಾನದ ಸಂಗತಿ ಎಂದರು. ಡಾ.ಅಂಬೇಡ್ಕರ್ ಆಶಯಗಳು ಸಂವಿಧಾನಬದ್ದವಾಗಿ ಶೋಷಿತ ಸಮುದಾಯಗಳಿಗೆ ನಿಜ ಅರ್ಥದಲ್ಲಿ ತಲುಪಬೇಕು ಎಂದರು.

ಹಿರಿಯ ಪತ್ರಕರ್ತ ರಫೀಕ್ ಭಂಡಾರಿ, ಪತ್ರಿಕಾ ವಿತರಕರಾದ ಜವರಪ್ಪ ಮೈಸೂರುರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಸಭಾಪತಿಗಳ ವಿಶೇಷಾಧಿಕಾರಿ ಡಾ. ಮಹೇಶ್ ವಾಳ್ವೇಕರ್ , ವಿಧಾನಸಭಾಧ್ಯಕ್ಷರ ಮಾಧ್ಯಮ ಸಂಯೋಜಕರಾದ ಜ್ಞಾನಶೇಖರ್ ಅವರನ್ನೂ ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ
ಮಾತನಾಡಿ, ಕಾರ್ಯನಿರತ ಪತ್ರಕರ್ತರ ಸಂಘವು ಸದಾ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಸದಾ ಬದ್ಧವಾಗಿ ಕೆಲಸ ಮಾಡುತ್ತದೆ. ವೃತ್ತಿ ಬಾಂಧವರನ್ನು ಕೆಯುಡಬ್ಲ್ಯೂಜೆ ಅಂಗಳದಲ್ಲಿ ಸನ್ಮಾನಿಸತ್ತಿರುವುದು ಅಭಿಮಾನದ ಸಂಗತಿ ಎಂದರು.

ಸಮಾರಂಭದಲ್ಲಿ ರಾಜ್ಯ ಸಂಘದ ಕಾರ್ಯದರ್ಶಿ ನಿಂಗಪ್ಪ ಚಾವಡಿ,
ಹಿರಿಯ ಪತ್ರಕರ್ತರಾದ ಈಶ್ವರ ದೈತೋಟ, ಶೇಷಚಂದ್ರಿಕಾ, ಡಿ. ಉಮಾಪತಿ, ಪತ್ರಿಕಾ ವಿತರಕರಒಕ್ಕೂಟದ ಅಧ್ಯಕ್ಷ ಶಂಭುಲಿಂಗ, ರಾಜ್ಯ ಸಮಿತಿ ಸದಸ್ಯರಾದ ಎನ್.ರವಿಕುಮಾರ್, ಕೆ.ಆರ್.ದೇವರಾಜ್, ಕೋಲಾರದ ವಿ.ಮುನಿರಾಜು, ನಗರ ಘಟಕದ ಪದಾಧಿಕಾರಿಗಳು, ಹಿರಿಯ ಪತ್ರಕರ್ತೆ ಶಮಂತಾ, ಶಶಿಕಲಾ ಸೇರಿದಂತೆ ಹಿರಿಯ ಪತ್ರಕರ್ತರು ಮತ್ತು ಬೆಂಗಳೂರು ನಗರ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರೂ ಹಾಜಾರಿದ್ದರು.

ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಸ್ವಾಗತಿಸಿದರು, ಕೊನೆಯಲ್ಲಿ ರಾಜ್ಯ ಖಜಾಂಚಿ ವಾಸುದೇವ ಹೊಳ್ಳ ವಂದಿಸಿದರು

Continue Reading

State

‘ಗೃಹಲಕ್ಷ್ಮೀ’ ಹಣ ಬಾರದವರಿಗೆ ಮಹತ್ವದ ಸುದ್ದಿ- ಮನೆಬಾಗಿಲಿಗೇ ಬರ್ತಾರೆ ಅಂಗನವಾಡಿ ಕಾರ್ಯಕರ್ತೆಯರು, ಬೇಗ ಈ ದಾಖಲೆ ರೆಡಿ ಮಾಡಿ

Published

on

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಕೂಡ ಒಂದಾಗಿದ್ದು, ಈಗಾಗಲೇ ಕೆಲವು ಮಹಿಳೆಯರ ಖಾತೆಗೆ ಹಣ ಜಮಾ ಆಗಿದ್ದು, ಇನ್ನೂ ಕೆಲವರ ಅಕೌಂಟ್ಗೆ ಜಮೆ ಆಗಿಲ್ಲ. ಈ ಹಿನ್ನಲೆ ರಾಜ್ಯಾದ್ಯಂತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಗೃಹಲಕ್ಷ್ಮೀ ಯೋಜನೆ (Gruhalakshmi scheme) ಹಣ ಜಮೆ ಮಾಡಲು ತಾಂತ್ರಿಕ ಸಮಸ್ಯೆಗಳು ಅಡ್ಡಿಯಾಗಿದ್ದು, ಇದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ಸುಧಾರಣ ಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ.

ರಾಜ್ಯದ ಎಲ್ಲಾ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಕಚೇರಿಯಿಂದಲೇ ಯೋಜನೆ ಹಣ ಬಿಡುಗಡೆಯ ಮಾಡಲು ತಯಾರಿ ನಡೆಸುತ್ತಿದೆ. ಇದರ ಜೊತೆಗೆ,ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯು ಅಂಗನವಾಡಿ ಕಾರ‍್ಯಕರ್ತೆಯರನ್ನು ಮನೆ ಭೇಟಿಗೆ ಸೂಚನೆ ನೀಡಿದ್ದು, ಈ ಮೂಲಕ ಫಲಾನುಭವಿಗಳಿಗೆ ಯೋಜನೆ ಹಣ ತಲುಪಿಸಲು ರಾಜ್ಯ ಸರ್ಕಾರ ಯೋಜನೆ ಹಾಕಿಕೊಂಡಿದೆ.ರಾಜ್ಯ ಸರಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಗೃಹಲಕ್ಷ್ಮೀ ಯೋಜನೆ ಹಣವನ್ನು ಫಲಾನುಭವಿಗಳಿಗೆ ಪ್ರತಿ ತಿಂಗಳ 20 ತಾರೀಖಿನೊಳಗೆ ಹಣ ವರ್ಗಾವಣೆ ಮಾಡಲು ಸೂಚಿಸಿದೆ.

ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ತಾಂತ್ರಿಕ ಸಮಸ್ಯೆಯಿಂದ ಯೋಜನೆಯ ಹಣ ತಲುಪಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ‍್ಯಕರ್ತೆಯರಿಗೆ ಇಲಾಖೆ ಜವಾಬ್ದಾರಿ ನೀಡಿದೆ. ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿನ ಅಂಗನವಾಡಿ ಕಾರ‍್ಯಕರ್ತೆಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮನೆಗೆ ಭೇಟಿ ಫಲಾನುಭವಿಗಳಿಗೆ ಗೃಹಲಲಕ್ಷ್ಮೀ ಯೋಜನೆ ಕುರಿತು ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ, ಅರ್ಹರಿಗೆ ಯೋಜನೆಯ ಹಣ ಬಾರದಿದ್ದರೆ, ಆಗಿರುವ ಸಮಸ್ಯೆಯನ್ನು ಬಗೆಹರಿಸಲು ತಿಳಿಸಲಾಗಿದೆ.

Continue Reading

State

ಪಂಚಭೂತಗಳಲ್ಲಿ ಕ್ಯಾ| ಪ್ರಾಂಜಲ್‌ ಲೀನ

Published

on

ಮೂರು ದಿನಗಳ ಹಿಂದೆ ಜಮ್ಮು- ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಕಾಳಗದಲ್ಲಿ ಹುತಾತ್ಮರಾದ ಕ್ಯಾ| ಪ್ರಾಂಜಲ್‌
ಅವರು ಇಂದು ಪಂಚಭೂತಗಳಲ್ಲಿ ಲೀನರಾದರು. ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿ ಬೆಂಗಳೂರಿನ ಎಚ್‌ಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋತ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ. ಜಾರ್ಜ್‌, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಸಹಿತ ಗಣ್ಯರು ಉಪಸ್ಥಿತರಿದ್ದು ಅಂತಿಮ ಗೌರವ ನಮನ ಸಲ್ಲಿಸಿದರು. ಎಚ್‌ಎಎಲ್‌ ಏರ್‌ಪೋರ್ಟ್‌ಗೆ ಆಗಮಿಸಿದ ಸಂದರ್ಭ ಪಾರ್ಥಿವ ಶರೀರಕ್ಕೆ ಅಲ್ಲಿ ಮಿಲಿಟರಿ ಗೌರವ ಸಲ್ಲಿಸಲಾಯಿತು. ಕ್ಯಾ| ಪ್ರಾಂಜಲ್‌ ಅವರ ತಂದೆ ಎಂ. ವೆಂಕಟೇಶ್‌, ತಾಯಿ ಅನುರಾಧಾ, ಪತ್ನಿ ಅದಿತಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್‌ಚಂದ್‌ ಗೆಹೊÉàಟ್‌ ಗೌರವ ಅರ್ಪಿಸಿದರು. ಬಳಿಕ ಜಿಗಣಿಯ ಸ್ವಗೃಹಕ್ಕೆ ಪ್ರಾಂಜಲ್‌ ಪಾರ್ಥಿವ ಶರೀರವನ್ನು ತರಲಾಯಿತು. . ಇಂದು ಬೆಳಗ್ಗೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿ ಪಾರ್ಥಿವ ಶರೀರವನ್ನು ಸೇನಾ ವಾಹನದಲ್ಲಿ ಮೆರವಣಿಗೆ ಮೂಲಕ ತಂದು ಭಾರತೀಯ ಸೇನೆ ಮತ್ತು ಕರ್ನಾಟಕ ಪೊಲೀಸ್ ಇಲಾಖೆಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮಸುಂದರ ಪಾಳ್ಯದ ವಿದ್ಯುತ್ ಚಿತಾಗಾರದಲ್ಲಿ ಕಣ್ಣೀರಿನ ಭಾವಪೂರ್ಣ ವಿದಾಯ ಸಲ್ಲಿಸಲಾಯಿತು.

Continue Reading

Trending

error: Content is protected !!