State
‘ಗೃಹಲಕ್ಷ್ಮೀ’ ಹಣ ಬಾರದವರಿಗೆ ಮಹತ್ವದ ಸುದ್ದಿ- ಮನೆಬಾಗಿಲಿಗೇ ಬರ್ತಾರೆ ಅಂಗನವಾಡಿ ಕಾರ್ಯಕರ್ತೆಯರು, ಬೇಗ ಈ ದಾಖಲೆ ರೆಡಿ ಮಾಡಿ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಕೂಡ ಒಂದಾಗಿದ್ದು, ಈಗಾಗಲೇ ಕೆಲವು ಮಹಿಳೆಯರ ಖಾತೆಗೆ ಹಣ ಜಮಾ ಆಗಿದ್ದು, ಇನ್ನೂ ಕೆಲವರ ಅಕೌಂಟ್ಗೆ ಜಮೆ ಆಗಿಲ್ಲ. ಈ ಹಿನ್ನಲೆ ರಾಜ್ಯಾದ್ಯಂತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಗೃಹಲಕ್ಷ್ಮೀ ಯೋಜನೆ (Gruhalakshmi scheme) ಹಣ ಜಮೆ ಮಾಡಲು ತಾಂತ್ರಿಕ ಸಮಸ್ಯೆಗಳು ಅಡ್ಡಿಯಾಗಿದ್ದು, ಇದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ಸುಧಾರಣ ಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ.
ರಾಜ್ಯದ ಎಲ್ಲಾ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಕಚೇರಿಯಿಂದಲೇ ಯೋಜನೆ ಹಣ ಬಿಡುಗಡೆಯ ಮಾಡಲು ತಯಾರಿ ನಡೆಸುತ್ತಿದೆ. ಇದರ ಜೊತೆಗೆ,ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯು ಅಂಗನವಾಡಿ ಕಾರ‍್ಯಕರ್ತೆಯರನ್ನು ಮನೆ ಭೇಟಿಗೆ ಸೂಚನೆ ನೀಡಿದ್ದು, ಈ ಮೂಲಕ ಫಲಾನುಭವಿಗಳಿಗೆ ಯೋಜನೆ ಹಣ ತಲುಪಿಸಲು ರಾಜ್ಯ ಸರ್ಕಾರ ಯೋಜನೆ ಹಾಕಿಕೊಂಡಿದೆ.ರಾಜ್ಯ ಸರಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಗೃಹಲಕ್ಷ್ಮೀ ಯೋಜನೆ ಹಣವನ್ನು ಫಲಾನುಭವಿಗಳಿಗೆ ಪ್ರತಿ ತಿಂಗಳ 20 ತಾರೀಖಿನೊಳಗೆ ಹಣ ವರ್ಗಾವಣೆ ಮಾಡಲು ಸೂಚಿಸಿದೆ.
ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ತಾಂತ್ರಿಕ ಸಮಸ್ಯೆಯಿಂದ ಯೋಜನೆಯ ಹಣ ತಲುಪಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ‍್ಯಕರ್ತೆಯರಿಗೆ ಇಲಾಖೆ ಜವಾಬ್ದಾರಿ ನೀಡಿದೆ. ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿನ ಅಂಗನವಾಡಿ ಕಾರ‍್ಯಕರ್ತೆಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮನೆಗೆ ಭೇಟಿ ಫಲಾನುಭವಿಗಳಿಗೆ ಗೃಹಲಲಕ್ಷ್ಮೀ ಯೋಜನೆ ಕುರಿತು ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ, ಅರ್ಹರಿಗೆ ಯೋಜನೆಯ ಹಣ ಬಾರದಿದ್ದರೆ, ಆಗಿರುವ ಸಮಸ್ಯೆಯನ್ನು ಬಗೆಹರಿಸಲು ತಿಳಿಸಲಾಗಿದೆ.
State
ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?

Cochin Shipyard Recruitment – ಮಿನಿರತ್ನ ಕಂಪನಿಯಾಗಿರುವ ಕೋಚಿನ್ ಶಿಪ್ ಯಾರ್ಡ್ ನಲ್ಲಿ ವಿವಿಧ 70 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೇವಲ ಒಂದು ದಿನ ಮಾತ್ರ ಬಾಕಿ ಇದೆ.
ಹಾಗಿದ್ದರೆ ಈ ನೇಮಕಾತಿಯಲ್ಲಿ ಯಾವ ಯಾವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬ ಇತ್ಯಾದಿ ಮಾಹಿತಿ ಇಲ್ಲಿದೆ..
ಯಾವ ಯಾವ ಹುದ್ದೆಗಳು ಖಾಲಿ ಇವೆ?
• Scaffolder ಹುದ್ದೆಗಳು – 11
• Semi Skilled Rigger – 59 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು?
• Scaffolder ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸಾಗಿದ್ದು ಅದರ ಜೊತೆಗೆ ಸಂಬಂಧಪಟ್ಟ ಕೆಲಸದಲ್ಲಿ 2 ವರ್ಷದ ಅನುಭವ ಹೊಂದಿರಬೇಕು.
• Semi Skilled Rigger ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 4ನೇ ತರಗತಿ ಪಾಸಾಗಿದ್ದು ಅದರ ಜೊತೆಗೆ ಸಂಬಂಧಪಟ್ಟ ಕೆಲಸದಲ್ಲಿ 3 ವರ್ಷದ ಅನುಭವ ಹೊಂದಿರಬೇಕು.
ವಯೋಮಿತಿ ಅರ್ಹತೆ – ಗರಿಷ್ಠ 45 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ ಎಷ್ಟು ಇರಲಿದೆ?
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹22,100 ಸಂಬಳದ ಜೊತೆಗೆ ಹೆಚ್ಚಿನ ಕೆಲಸಕ್ಕೆ ಮಾಸಿಕ ₹5,530 ರೂ. ಪಡೆಯುವ ಅವಕಾಶವಿದೆ.
ಅರ್ಜಿ ಶುಲ್ಕ – 200ರೂ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 28 ಮಾರ್ಚ್ 2025
ಅರ್ಜಿ ಸಲ್ಲಿಸುವ ವಿಧಾನ : ಅರ್ಹತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಕೊಚ್ಚಿನ್ ಶಿಪ್ ಯಾರ್ಡ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿರಿ.
ಅಧಿಕೃತ ಜಾಲತಾಣ – https://cochinshipyard.in/careerdetail/career_locations/672
State
ಎಚ್‌ಡಿ ಕುಮಾರಸ್ವಾಮಿ ಭೇಟಿ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಫಸ್ಟ್ ರಿಯಾಕ್ಷನ್

ನವದೆಹಲಿ: ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ಭಾರೀ ಕೋಲಾಹಲ ಎದ್ದಿದ್ದು, ಇದೀಗ ಸಚಿವ ಸತೀಶ್ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಎಚ್.ಡಿ.ಕುಮಾರಸ್ವಾಮಿ ಅವರನ್ನು ಯಾವ ಕಾರಣಕ್ಕೆ ಭೇಟಿ ಮಾಡಿದ್ದೆ ಎಂಬುದರ ಬಗ್ಗೆ ಹೈಕಮಾಂಡ್ ನಾಯಕರಿಗೆ ಹೇಳಿದ್ದೇನೆ. ಎಚ್‌ಡಿಕೆ ಭೇಟಿ ಕುರಿತು ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲ ಅವರಿಗೂ ಮಾಹಿತಿ ನೀಡಿದ್ದೇನೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಎಚ್‌ಡಿಕೆ ಭೇಟಿ ಮಾಡಿದ್ದ ಬಗ್ಗೆ ನಾಳೆ ಎಲ್ಲವನ್ನೂ ಸಂಪೂರ್ಣವಾಗಿ ಹೇಳುತ್ತೇನೆ ಎಂದರು.
State
ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು: ಎಂಎಲ್‌ಸಿ ರಾಜೇಂದ್ರ ಹೊಸ ಬಾಂಬ್

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ. ಸಚಿವರು ಕೂಡ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ನನ್ನ ಮೇಲೆ ಹನಿಟ್ರ್ಯಾಪ್ ಆಗಿಲ್ಲ. ದೂರವಾಣಿ ಕರೆ ಮೂಲಕ ಯತ್ನ ನಡೆಯುತ್ತಾ ಇತ್ತು ಎಂದರು.
ನವೆಂಬರ್.16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕಲು ಸ್ವಲ್ಪ ಜನ ಬಂದಿದ್ದರು. ಆ ವೇಳೆ ನನ್ನನ್ನು ಹತ್ಯೆ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳಿದರು.
ಈ ಬಗ್ಗೆ ನನ್ನ ಆಪ್ತರ ಮೂಲಕ ಆಡಿಯೋ ಸಿಕ್ಕಿತು. ಆಡಿಯೋದಲ್ಲಿ 5 ಲಕ್ಷ ಸುಪಾರಿ ನೀಡಿದ್ರು. ಮೂರು ಜನ ಹತ್ಯೆ ಮಾಡಲು ಪ್ರಯತ್ನಿಸಿದ್ದರು ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ಸಿಐಡಿಗೆ ಹೋಗಿದೆ. ಪೊಲೀಸರು ರಾಜಣ್ಣ ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಮನೆ ಕೆಲಸದವರ ಹೇಳಿಕೆಯನ್ನು ಸಹ ಪಡೆದಿದ್ದಾರೆ. ಈ ಪ್ರಕರಣದ ನಾಯಕ ಯಾರು ಎಂದು ಗೊತ್ತಾಗುತ್ತಿಲ್ಲ. ನಾನು ಯಾರ ಹೆಸರನ್ನು ಕೂಡ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.
-
Hassan23 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
Chamarajanagar21 hours ago
ಗುಂಡ್ಲುಪೇಟೆ ಪಟ್ಟಣದ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಜಯಕುಮಾರ್ ಅಧಿಕಾರ ಸ್ವೀಕಾರ
-
Kodagu22 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan22 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ
-
Mysore21 hours ago
ಜಿಡಿ ಹರೀಶ್ಗೌಡ ಸಹಕಾರ ಸಂಘದ ಭ್ರಷ್ಟಾಚಾರ ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ: ಎಚ್.ಪಿ.ಮಂಜುನಾಥ್
-
Mysore21 hours ago
ನಂಜನಗೂಡು ದೊಡ್ಡ ಜಾತ್ರೆ: ಭಕ್ತರಿಗೆ ಸೂಕ್ತ ಸೌಲಭ್ಯ ಒದಗಿಸುವಂತೆ ದರ್ಶನ್ ಧ್ರುವ ಸೂಚನೆ
-
State18 hours ago
ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?
-
State24 hours ago
Nation First, Party next, Self last: ಯತ್ನಾಳ್ ಹೀಗೇಳಿದ್ದೇಕೆ?