Connect with us

State

GST ನೋಟಿಸ್: ನಗದು ವ್ಯವಹಾರದತ್ತ ಮುಖ ಮಾಡಿದ ವರ್ತಕರು; ಗೊಂದಲಗಳಿಗೆ ತೆರಿಗೆ ಇಲಾಖೆ ಕೊಟ್ಟ ಸ್ಪಷ್ಟನೆ, ಸೂಚನೆಗಳೇನು..?

Published

on

ವರ್ತಕರು ಯಾವುದೇ ರೂಪದಲ್ಲಾಗಲೀ ವಹಿವಾಟು ನಡೆಸಿದ್ದಲ್ಲಿ ಅಂತಹ ವರ್ತಕರಿಂದ ಜಿ.ಎಸ್.ಟಿ ಕಾಯ್ದೆಯಡಿ ಅನ್ವಯಿಸುವ ತೆರಿಗೆಯನ್ನು ತೆಗೆದುಕೊಳ್ಳುತ್ತದೆ.

ಬೆಂಗಳೂರು: ಜಿಎಸ್‌ಟಿ ನೋಟಿಸ್‌ ಬಂದಿದೆ ಎಂಬ ಕಾರಣಕ್ಕೆ ವರ್ತಕರು ಡಿಜಿಟಲ್‌ ಪಾವತಿ ಗೇಟ್‌ ವೇಗಳ ಬಳಕೆ ನಿಲ್ಲಿಸಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯು ಗೊಂದಲಗಳಿಗೆ ಸ್ಪಷ್ಟನೆ ನೀಡಿ, ಕೆಲ ಸೂಚನೆಗಳನ್ನೂ ನೀಡಿದೆ.

ಈ ಸಂಬಂಧ ಪ್ರಕಟಣೆ ನೀಡಿರುವ ಇಲಾಖೆ, ಜಿಎಸ್’ಟಿ ಸಂಬಂಧಿಸಿದ ನಿಯಮಗಳು ಮತ್ತು ಪರಿಹಾರಗಳನ್ನು ವ್ಯಾಪಾರಿಗಳಿಗೆ ಅಧಿಜಾರಿಗಳು ತಿಳಿಸಿ, ತೆರಿಗೆ ವಿನಾಯಿತಿ ಇರುವ ಸರಕು ಮತ್ತು ಸೇವೆಗಳನ್ನು ಹೊರತುಪಡಿಸಿ ತೆರಿಗೆದಾಯಕ ವಹಿವಾಟಿಗೆ ಮಾತ್ರ ಅನ್ವಯಿಸುವ ದರಗಳ ಅನ್ವಯ ತೆರಿಗೆ ವಿಧಿಸುತ್ತಾರೆಂದು ವಾಣಿಜ್ಯ ತೆರಿಗೆ ಇಲಾಖೆ ತಿಳಿಸಿದೆ.

ಸಮಗ್ರ ವಹಿವಾಟಿನಲ್ಲಿ ತೆರಿಗೆ ವಿಧಿಸಬಹುದಾದ ಮತ್ತು ತೆರಿಗೆ ವಿನಾಯಿತಿ ಪಡೆದ ಸರಕು ಮತ್ತು ಸೇವೆಗಳು ಸೇರಿರುತ್ತವೆ. ವರ್ತಕರು ಜಿ.ಎಸ್.ಟಿ. ಅಡಿಯಲ್ಲಿ ಸಾಮಾನ್ಯ ನೋಂದಣಿ ಪಡೆದಿದ್ದೇ ಆದರೆ ತೆರಿಗೆ ಬಾಧ್ಯತೆಯು ತೆರಿಗೆ ವಿಧಿಸಬಹುದಾದ ಸರಕು ಮತ್ತು ಸೇವೆಗಳಿಗೆ ಮಾತ್ರ ಅನ್ವಯವಾಗುತ್ತದೆ. ನೋಂದಾಯಿತ ವರ್ತಕರು ತಾವು ಖರೀದಿಸಿದ ವಸ್ತುಗಳ ಮೇಲೆ ಹೂಡುವಳಿ ತೆರಿಗೆಯನ್ನು ಮಾರಾಟದ ಮೇಲೆ ಪಾವತಿಸಬೇಕಾದ ತೆರಿಗೆಗೆ ಹೊಂದಾಣಿಕೆ ಮಾಡಿಕೊಂಡು ನಿವ್ವಳ ತೆರಿಗೆಯನ್ನು ಪಾವತಿಸಬೇಕು. ಆದುದರಿಂದ ಮೌಲ್ಯವರ್ಧನೆಯ ಮೇಲೆ ಪಾವತಿಸಬೇಕಾದ ತೆರಿಗೆ ಮೊತ್ತವು ಅಲ್ಪ ಪ್ರಮಾಣದಲ್ಲಿರುತ್ತದೆ ಎಂದು ಸ್ಪಷ್ಟಪಡಿಸಿದೆ.

ಯಾವುದೇ ವ್ಯಾಪಾರಿಗಳು ತಮ್ಮ ವಾರ್ಷಿಕ ವಹಿವಾಟು 1.50 ಕೋಟಿ ರೂ.ಗಿಂತ ಕಡಿಮೆ ಇದ್ದಲ್ಲಿ ಜಿ.ಎಸ್.ಟಿ ಅಡಿ ನೋಂದಣಿಯನ್ನು ಪಡೆದು ರಾಜಿ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಂಡು ವಹಿವಾಟಿನ ಮೇಲೆ ಶೇ 0.5 ಎಸ್.ಜಿ.ಎಸ್.ಟಿ ತೆರಿಗೆಯನ್ನು ಪಾವತಿಸಬಹುದು. ಆದರೆ, ನೋಂದಣಿ ಪಡೆಯದೇ ನೆಡೆಸಿರುವ ವಹಿವಾಟಿಗೆ ರಾಜಿ ತೆರಿಗೆ ಪದ್ಧತಿಯು ಅನ್ವಯಿಸುವುದಿಲ್ಲ ಎಂದು ಹೇಳಿದೆ.

ವಾಣಿಜ್ಯ ತೆರಿಗೆ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಈ ನಿಟ್ಟಿನಲ್ಲಿ ವರ್ತಕರಲ್ಲಿ ಸೂಕ್ತ ಮಾರ್ಗದರ್ಶನ, ಸಹಕಾರ ಹಾಗೂ ಅರಿವು ಮೂಡಿಸಲು ಸೂಚಿಸಲಾಗಿದೆ. ಹಾಗೂ ಹೊಸದಾಗಿ ನೀಡಲಾಗುವ ನೋಂದಣಿಯನ್ನು ತೆರಿಗೆದಾರರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ಸುಸೂತ್ರವಾಗಿ ನೀಡಲು ಸಹ ಸೂಚಿಸಲಾಗಿದೆ ಎಂದು ತಿಳಿಸಿದೆ.

ಈಗಾಗಲೇ ರಾಜ್ಯದಲ್ಲಿ 98,915 ವರ್ತಕರು ರಾಜಿ ತೆರಿಗೆ ಪದ್ಧತಿಯಡಿ ನೋಂದಣಿ ಪಡೆದು ವ್ಯಾಪಾರ ನಡೆಸುತ್ತಿರುತ್ತಾರೆ. ಈಗಾಗಲೇ ವಾರ್ಷಿಕ ವಹಿವಾಟು 40 ರೂ. ಲಕ್ಷಗಳು (ಸರಕುಗಳ ಪೂರೈಕೆದಾರರು), 20 ಲಕ್ಷಗಳು ರೂ‌. (ಸೇವೆಗಳ ಪೂರೈಕೆದಾರರು) ಮೀರಿರುವ ನೋಂದಣಿ ಪಡೆಯದೇ ಇರುವ ವರ್ತಕರಿಗೆ ನೋಟೀಸ್ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ನೋಂದಾಯಿತ ವರ್ತಕರು ಇನ್ನು ಮುಂದೆ ರಾಜಿ ತೆರಿಗೆ ಪದ್ಧತಿಯಡಿ ಶೇ.1 ರಂತೆ ತೆರಿಗೆ ಪಾವತಿಸುವುದು ಕಷ್ಟಕರವಾಗಲಾರದು. ಈಗಾಗಲೇ ಶೇ. 90 ರಷ್ಟು ವರ್ತಕರು ರಾಜಿ ತೆರಿಗೆ ಪದ್ಧತಿಯಡಿ ತೆರಿಗೆ ಪಾವತಿಸುತ್ತಿರುವುದರಿಂದ ಉಳಿಕೆ ಶೇ. 10 ರಷ್ಟು ವರ್ತಕರು ತೆರಿಗೆ ಪಾವತಿಸದಿರುವುದು ತರವಲ್ಲ. ಜಿಎಸ್‌ಟಿ ಕಾಯ್ದೆಯು ಇಂತಹ ತಾರತಮ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ನೋಟೀಸ್ ನೀಡಿದ ಬೆನ್ನಲ್ಲೇ ಕೆಲವು ವರ್ತಕರು ಯು.ಪಿ.ಐ ಮೂಲಕ ಹಣಪಡೆಯುವುದನ್ನು ನಿಲ್ಲಿಸಿ, ಗ್ರಾಹಕರಿಂದ ನಗದು ರೂಪದಲ್ಲಿ ಹಣ ಸ್ವೀಕರಿಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ವರ್ತಕರು ತಾವು ಮಾಡಿದ ವಹಿವಾಟಿನ ಪ್ರತಿಫಲವನ್ನು ಯಾವುದೇ ರೂಪದಲ್ಲಿ ಪಡೆದಿದ್ದರೂ ಜಿ.ಎಸ್.ಟಿ. ತೆರಿಗೆ ಅನ್ವಯವಾಗುತ್ತದೆ.

ಯುಪಿಐ ಈ ರೀತಿ ಪ್ರತಿಫಲ ಪಡೆಯುವ ಒಂದು ಮಾರ್ಗ ಮಾತ್ರ. ವರ್ತಕರು ಯಾವುದೇ ರೂಪದಲ್ಲಾಗಲೀ ವಹಿವಾಟು ನಡೆಸಿದ್ದಲ್ಲಿ ಅಂತಹ ವರ್ತಕರಿಂದ ಜಿ.ಎಸ್.ಟಿ ಕಾಯ್ದೆಯಡಿ ಅನ್ವಯಿಸುವ ತೆರಿಗೆಯನ್ನು ತೆಗೆದುಕೊಳ್ಳುತ್ತದೆ. ಸಂಗ್ರಹಿಸಲು ಇಲಾಖೆಯು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ.

 

Continue Reading

State

ಸಚಿವ ಸಂಪುಟ ಪುನಾರಚನೆ: ಹೆಚ್ಚುವರಿ ಜವಾಬ್ದಾರಿ ನೀಡುವಂತೆ ಈಶ್ವರ್‌ ಖಂಡ್ರೆ ಮನವಿ

Published

on

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಾಳೆ ಸಂಜೆ ನಡೆಯಲಿದ್ದು, ನೂತನ ಮುಖ್ಯಮಂತ್ರಿ ಆಯ್ಕೆ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಹಾಗೂ ಸಚಿವ ಸಂಪುಟ ಪುನಾರಚನೆ ಕುರಿತು ಮಹತ್ವದ ಚರ್ಚೆಗಳು ನಡೆಯಲಿವೆ.

ಈ ಹಿನ್ನೆಲೆಯಲ್ಲಿ ಹೊಸ ಸಂಪುಟದಲ್ಲಿ ಸ್ಥಾನ ಪಡೆಯಲು ಶಾಸಕರ ನಡುವೆ ಲಾಬಿ ಚುರುಕುಗೊಂಡಿದೆ. ಸಚಿವ ಸಂಪುಟ ಪುನಾರಚನೆ ಕುರಿತು ಹಲವು ಹೆಸರುಗಳು ಚರ್ಚೆಯಲ್ಲಿವೆ.

ಈ ಮಧ್ಯೆ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಹೆಚ್ಚುವರಿ ಜವಾಬ್ದಾರಿ ನೀಡುವಂತೆ ಮನವಿ ಮಾಡಿದ್ದಾರೆ. ಅವರು ತಮ್ಮ ಇಲಾಖೆಯಲ್ಲಿ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿರುವುದಾಗಿ ಹೇಳಿದ್ದು, ತಮ್ಮ ಕಾರ್ಯದಿಂದ ತೃಪ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ. ತಮ್ಮ ಕೆಲಸದ ಬಗ್ಗೆ ಹೈಕಮಾಂಡ್‌ಗೆ ಮಾಹಿತಿ ಇದೆ ಎಂದು ಅವರು ಹೇಳಿದ್ದಾರೆ.

ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಸಂಪುಟದಲ್ಲಿ ಲಿಂಗಾಯತ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Continue Reading

State

ಸಿಎಂ ಬದಲಾವಣೆ ಚರ್ಚೆ ನಡುವೆ ಆರ್. ಅಶೋಕ್ ತೀವ್ರ ಟೀಕೆ

Published

on

ಉತ್ತರಕನ್ನಡ:  ರಾಜ್ಯದಲ್ಲಿ ಸಂಭವಿಸಿರುವ ದಿಢೀರ್ ರಾಜಕೀಯ ಬೆಳವಣಿಗೆಗಳು ಮತ್ತು ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳ ನಡುವೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌  ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ಉತ್ತರಕನ್ನಡದಲ್ಲಿ ಇಂದು ಈ ಕುರಿತು  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೂ ರಾಜ್ಯದ ಆಡಳಿತ ಅಥವಾ ಅಭಿವೃದ್ಧಿ ಕಾರ್ಯಗಳಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಹೇಳಿದರು. “ಹೋದ್ಯಾ ಪಿಶಾಚಿ ಅಂದರೆ ಬಂದ್ಯಾ ಗವಾಕ್ಷಿ” ಎಂಬ ವ್ಯಂಗ್ಯವನ್ನು ಬಳಸುತ್ತಾ ಅವರು ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದರು.

ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್‌ ಬರುತ್ತಾರೆ ಎಂಬ ರಾಜಕೀಯ ಚರ್ಚೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ನಾಯಕತ್ವ ಬದಲಾವಣೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಮತ್ತು ಮುಂದೆಯೂ ಆಗುವ ಸಾಧ್ಯತೆ ಕಡಿಮೆ ಎಂದು ಹೇಳಿದರು.

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಪಕ್ಷಗಳ ಟೀಕೆಗಳು ಹೆಚ್ಚಾಗುತ್ತಿವೆ.

Continue Reading

State

ಡಿ.ಕೆ. ಶಿವಕುಮಾರ್ ಸಿಎಂ ಚರ್ಚೆ: ದೇವೇಗೌಡರ ಮನೆಗೆ ಸೂತಕದ ಛಾಯೆ ಎಂದು ಚಲುವರಾಯಸ್ವಾಮಿ ವ್ಯಂಗ್ಯ

Published

on

ಬೆಂಗಳೂರು: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ಚರ್ಚೆ ಕೇಳಿಬಂದ ನಂತರ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ ಎಂದು ಎನ್.ಚಲುವರಾಯಸ್ವಾಮಿ ವ್ಯಂಗ್ಯ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು,   ಒಕ್ಕಲಿಗ ಸಮುದಾಯದಲ್ಲಿನ ನಾಯಕತ್ವದ ವಿಚಾರವನ್ನು ಉಲ್ಲೇಖಿಸಿದ ಅವರು, ಡಿಕೆ ಶಿವಕುಮಾರ್ ಎಲ್ಲ ಸಮುದಾಯಗಳ ವಿಶ್ವಾಸ ಗಳಿಸಿದ್ದಾರೆ ಎಂದು ಹೇಳಿದ್ದಾರೆ.

ಅವರು ಮತ್ತೊಂದು ಹೇಳಿಕೆಯಲ್ಲಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತಾರೆ, ರಾಜ್ಯಸಭೆಗೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದಿದ್ದಾರೆ.

Continue Reading

Trending

error: Content is protected !!