Uncategorized
ಮೋದಿ ಪದಗ್ರಹಣ ವಿಜಯೋತ್ಸವ – ಇಬ್ಬರಿಗೆ ಚೂರಿ ಇರಿತ
ಮಂಗಳೂರು : ಪ್ರಧಾನಿ ಮೋದಿಯವರ ಪದಗ್ರಹಣದ ಹಿನ್ನಲೆಯಲ್ಲಿ ನಡೆದ ವಿಜಯೋತ್ಸವದ ಬಳಿಕ 20-25 ಮಂದಿಯ ತಂಡವೊಂದು ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ರವಿವಾರ ರಾತ್ರಿ ಚೂರಿ ಇರಿದ ಘಟನೆ ನಗರದ ಮುಡಿಪು ಸಮೀಪದ ಬೋಳಿಯಾರು ಎಂಬಲ್ಲಿ ನಡೆದಿದೆ.
ಇನ್ನೋಳಿ ನಿವಾಸಿಗಳಾದ ಹರೀಶ್ (41), ನಂದಕುಮಾರ್ (24 ವರ್ಷ) ಚೂರಿ ಇರಿತಗೊಂಡವರು. ಇನ್ನೋಳಿನಿವಾಸಿ ಕೃಷ್ಣ ಕುಮಾರ್ ಎಂಬವರು ಹಲ್ಲೆಗೊಳಗಾಗಿದ್ದಾರೆ.
ನಿನ್ನೆ ಮೋದಿಯವರು ಪ್ರಧಾನಿಯಾಗಿ ಮೂರನೇ ಬಾರಿ ಪದಗ್ರಹಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬೋಳಿಯಾರುವಿನಲ್ಲಿ ವಿಜಯೋತ್ಸವ ನಡೆದಿತ್ತು. ಈ ವೇಳೆ ಮೂವರು ಬಿಜೆಪಿ ಕಾರ್ಯಕರ್ತರು ಬೊಳಿಯಾರು ಮಸೀದಿಯ ಮುಂಭಾಗ ಘೋಷಣೆಗಳನ್ನು ಕೂಗಿದ್ದರು ಎನ್ನಲಾಗಿದೆ.
ವಿಜಯೋತ್ಸವದ ಬಳಿಕ ಕೆಲ ಬೈಕ್‌ಗಳಲ್ಲಿ 20-25 ಮುಸ್ಲಿಂ ಯುವಕರ ತಂಡ ಅವರನ್ನು ಹಿಂಬಾಲಿಸಿದೆ. ಅವರು ಮಸೀದಿಯಿಂದ 2 ಕಿ.ಮೀ. ಮುಂಭಾಗ ಬಾರ್ ಮುಂದೆ ನಿಂತಿದ್ದರು. ಆಗ ಅವರನ್ನು ಹಿಂಬಾಲಿಸಿಕೊಂಡು ಬಂದ ಮುಸ್ಲಿಂ ಯುವಕರು ಬಾರ್ ಬಳಿಗೆ ಬಂದಿದ್ದಾರೆ. ಈ ವೇಳೆ ಎರಡೂ ತಂಡಗಳ ನಡುವೆ ವಾಗ್ವಾದ ನಡೆದಿದೆ. ಅಲ್ಲಿ ಮುಸ್ಲಿಂ ಯುವಕರ ತಂಡ ಮೂವರನ್ನು ಥಳಿಸಿ, ಇಬ್ಬರಿಗೆ ಚೂರಿಯಿಂದ ಇರಿದಿದೆ. ಇವರಲ್ಲಿ ಒಬ್ಬರು ಅಪಾಯದಿಂದ ಪಾರಾಗಿದ್ದು, ಮತ್ತೊಬ್ಬರು ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ.
ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uncategorized
ಅ.ಭಾ.ಕ.ಸಾ ಸಮ್ಮೇಳನದ ಯಶಸ್ಸಿಗೆ ಕಾರಣರಾದವರಿಗೆ ನಾಳೆ ಅಭಿನಂಧನಾ ಸಮಾರಂಭ : ಸುರೇಶ್ ಕಂಠಿ
ಅ.ಭಾ.ಕ.ಸಾ ಸಮ್ಮೇಳನದ ಯಶಸ್ಸಿಗೆ ಕಾರಣರಾದವರಿಗೆ ನಾಳೆ ಅಭಿನಂಧನಾ ಸಮಾರಂಭ : ಸುರೇಶ್ ಕಂಠಿ
ಮಂಡ್ಯ: ಜಿಲ್ಲೆಯಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿನ ರೂವಾರಿಗಳಿಗೆ ಮಂಡ್ಯ ಜಿಲ್ಲಾ ನಾಗರೀಕ ಅಭಿನಂದನಾ ಸಮಿತಿ, ನೆಲಯೋಗಿ ಸಮಾಜಸೇವಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಸುರೇಶ್‌ಕಂಠಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿನಂದನಾ ಸಮಾರಂಭವು ಜನವರಿ ೨೬ರ ಸಂಜೆ.೦೬ಕ್ಕೆ ನಗರದ ಬಾಲಕರ ಸರ್ಕಾರಿ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಹಿಸಲಿದ್ದು, ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ, ಅಭಿನಂದಿತರನ್ನು ಅಭಿನಂದಿಸುವರು ಎಂದು ಹೇಳಿದರು.
ಅಭಿನಂದಿತರಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಎ.ಬಿ.ರಮೇಶ್‌ಬಾಬು ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ.ಮಂಜು, ಕೆ.ಎಂ.ಉದಯ್, ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ ಸಿಇಓ ಶೇಖ್ ತನ್ವೀರ್ ಆಸಿಫ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಕೇಂದ್ರ ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ, ಸಮ್ಮೇಳನದ ಸಂಚಾಲಕರಾಗಿದ್ದ ಡಾ.ಮೀರಾ ಶಿವಲಿಂಗಯ್ಯ ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿದರು.
ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ರಾಜ್ಯ ಸಂಚಾಲಕ ಕೆ.ಹೆಚ್.ಲವ, ಕಾಂಗ್ರೆಸ್ ಪರಿಶಿಷ್ಠ ಜಾತಿ ರಾಜ್ಯ ಉಪಾಧ್ಯಕ್ಷ ತಿಬ್ಬನಹಳ್ಳಿ ರಮೇಶ್, ಮುಖಂಡ ಮಹದೇವು, ವೀಣಾ ಶಂಕರ್, ಶ್ರೀಧರ್ ಉಪಸ್ಥಿತರಿದ್ದರು.
Uncategorized
ಸಾಯಿ ಶಂಕರ್ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ದಿನಾಚರಣೆ
ಪೊನ್ನಂಪೇಟೆ : ಪೊನ್ನಂಪೇಟೆ ಸಾಯಿ ಶಂಕರ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ದಿನಾಚರಣೆ ನಡೆಸಲಾಯಿತು. ಕ್ರೀಡಾ ದಿನಾಚರಣೆಯ ಅಧ್ಯಕ್ಷತೆಯನ್ನು ಸಾಯಿ ಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷ ಕೊಳೆರ ಝರು ಗಣಪತಿ ವಹಿಸಿದ್ದರು. ನಂತರ ಅಧ್ಯಕ್ಷೀಯ ನುಡಿಯಾಡಿದ ಅವರು, ಕ್ರೀಡೆಗಳು ಸಣ್ಣಪ್ರಾಯದಲ್ಲೇ ಶಾಲಾ ವಾತಾವರಣದಲ್ಲಿ ಮಕ್ಕಳಲ್ಲಿ ಅನ್ಯೂನತೆಯನ್ನು ಬೆಳೆಸಿ ಸಹಕಾರ ಮನೋಭಾವನೆಯನ್ನು ಉಂಟುಮಾಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಾಯಿ ಶಂಕರ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಆಕರ್ಷಕವಾದ ಕವಾಯತ್ತು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವೇದಿಕೆಯಲ್ಲಿ ಸಾಯಿ ಶಂಕರ್ ವಿದ್ಯಾ ಸಂಸ್ಥೆ ಆಡಳಿತ ಅಧಿಕಾರಿ ರಮ್ಯ, ಮುಖ್ಯೋಪಾಧ್ಯಾಯನಿ ನಿವ್ಯ, ರೀನಾ ಉಪಸ್ಥಿತರಿದ್ದರು.
ಸಂಸ್ಥೆಯ ಶಿಕ್ಷಕಿ ಮಾಲಾ ಸ್ವಾಗತಿಸಿ ಬಿ .ಇಡಿ ಕಾಲೇಜಿನ ಪ್ರಾಂಶುಪಾಲ ಪಿ.ಎ ನಾರಾಯಣ ವಂದಿಸಿದರು. ಸಂಸ್ಥೆಯ ಶಿಕ್ಷಕಿ ಭವಾನಿ ಮತ್ತು ರೇಷ್ಮಾ ನಿರೂಪಿಸಿದರು.
Uncategorized
ಅಕ್ರಮ ಬಾಂಗ್ಲಾ ವಲಸಿಗರು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಠವಾಗುವ ಸಾಧ್ಯತೆ: ಕವನ್ ಗೌಡ
ಹಾಸನ: ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿ ಹೆಚ್ಚಾಗಿದ್ದು ಮುಂದಿನ ದಿನಗಳಲ್ಲಿ ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಇದು ಪ್ರತಿಕೂಲ ಪರಿಣಾಮ ಬೀರಲಿದೆ. ಕೂಡಲೇ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು ಎಂದು ವಕೀಲ ಕವನ್ ಗೌಡ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತಾಡಿದ ಅವರು, ಆಲೂರು, ಸಕಲೇಶಪುರ, ಬೇಲೂರು ಸೇರಿದಂತೆ ಮಲೆನಾಡಿನ ವಿವಿದೆಡೆ ಕೂಲಿ ಕಾರ್ಮಿಕರ ಹೆಸರಿನಲ್ಲಿ ಬಂದು ಇಲ್ಲೇ ಬಾಡಿಗೆ ಮನೆ ಪಡೆದು ವ್ಯಾಪಾರ ವಹಿವಾಟುಗಳನ್ನು ಪಡೆದುಕೊಂಡು ಹಂತಃ ಹಂತವಾಗಿ ಆಧಾರ್ ಕಾರ್ಡ್, ಓಟರ್ ಐಡಿ ಪಡೆದು ಭಾರತ ದೇಶದ ಪ್ರಜೆಯಾಗಿ ಇಲ್ಲೇ ನೆಲೆಸುವ ತಂತ್ರಗಾರಿಕೆ ನಡೆಯುತ್ತಿದೆ. ಕಾನೂನು ಪ್ರಕಾರ ವಿದೇಶಿಗರಿಗೆ ಭಾರತ ದೇಶದಲ್ಲಿ ನೆಲೆಸಲು ಅವಕಾಶ ಇಲ್ಲ, ಆದರೂ ನುಸುಳು ಕೋರರು ಈಗಾಗಲೇ ಒಳ ನುಸುಳಿದ್ದಾರೆ, ಈ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಅಕ್ರಮ ಬಾಂಗ್ಲಾ ವಲಸಿಗರನ್ನು ಗುರುತಿಸಿ ಅವರ ಬಗ್ಗೆ ತನಿಖೆ ನಡೆಸಿ ಅಗತ್ಯ ದಾಖಲೆಗಳು ಇಲ್ಲದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಇಲ್ಲವಾದರೆ ದೇಶಿಯರಿಗೆ ಮುಂದಿನ ದಿನಗಳಲ್ಲಿ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದರು.
ವಲಸಿಗರು ಈಗಾಗಲೇ ಬಾಡಿಗೆ ಮನೆ ಪಡೆದುಕೊಂಡು ಕರಾರು ಪತ್ರ ಪಡೆದುಕೊಂಡು ಹಂತ ಹಂತವಾಗಿ ಭಾರತೀಯ ಪ್ರಜೆಯಾಗಿ ಉಳಿಯುವ ಒಳಸಂಚು ನಡೆದಿದೆ, ಇದನ್ನು ನಿರ್ಲಕ್ಷ್ಯ ಮಾಡುವುದು ಬೇಡ ಮುಂದಿನ ದಿನಗಳಲ್ಲಿ ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಅಕ್ರಮ ಬಾಂಗ್ಲಾ ವಲಸಿಗರು ಕಂಟಕ ವಾಗಲಿದ್ದಾರೆ ಈ ಬಗ್ಗೆ ಎಚ್ಚರ ಅಗತ್ಯವಾಗಿದೆ ಎಂದು ಹೇಳಿದರು.
ಈ ವಿಚಾರವಾಗಿ ಕಾಫಿ ಬೆಳೆಗಾರರು ಹಾಗೂ ಪೊಲೀಸ್ ಇಲಾಖೆಯ ಬಹುದೊಡ್ಡ ಜವಾಬ್ದಾರಿ ಇದೆ, ಆರಂಭದಲ್ಲಿಯೆ ಮುಂದಾಗಬಹುದಾದ ಅನಾಹುತಗಳಿಗೆ ಕಡಿವಾಣ ಹಾಕದಿದ್ದರೆ. ಭಾರತೀಯ ಪ್ರಜೆಗಳಿಗೆ ಸಮಸ್ಯೆ ಅಗಳಿವೆ ಜೊತೆಗೆ ದೇಶೀಯ ಪ್ರಜೆಗಳ ಹಕ್ಕು ಬಾಧ್ಯತೆಗಳನ್ನು ಕಿತ್ತುಕೊಳ್ಳುವ ಸ್ಥಿತಿ ನಿರ್ಮಾಣವಾಗಲಿದೆ. ಕೊಡಗು ಜಿಲ್ಲೆಯಲ್ಲಿ ಕೂಡ ಇದೆ ರೀತಿಯ ಸಮಸ್ಯೆ ಉಂಟಾದಾಗ ಅಲ್ಲಿನ ಎಸ್ಪಿ ಎಚ್ಚೆತ್ತುಕೊಂಡು ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಅದೇ ರೀತಿ ಹಾಸನಲ್ಲಿ ಕೂಡ ಸ್ಥಳೀಯ ಪೊಲೀಸ್ ಠಾಣೆ ಹಂತದಲ್ಲಿ ಅವರ ದಾಖಲೆ ಪರಿಶೀಲನೆ ಮಾಡುವ ಕೆಲಸಗಳು ಆಗಬೇಕಿದೆ ಎಂದು ಸಲಹೆ ನೀಡಿದರು.
-
Mysore22 hours ago
ನಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ದೇನು?
-
Education23 hours ago
Free Coaching : ಮಾಸಿಕ 5,000ರೂ. ಜೊತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ಸರ್ಕಾರದಿಂದ ಉಚಿತ ತರಬೇತಿ
-
Cinema23 hours ago
ಬಿಗ್ಬಾಸ್ ಸೀಸನ್ 11: ಮೀಸಲಾತಿ ಮೂಲಕ ಹನುಮಂತು ಫೈನಲ್ಸ್ ತಲುಪಿದ್ದಾರೆ ಎಂದ ನಟಿ ಹಂಸ
-
Mysore7 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Kodagu8 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Chamarajanagar23 hours ago
ಗಿರಿಜನರು ಸಮಾಜದ ಮುಖ್ಯವಾಹಿನಿಗೆ ಬಂದು ಮೌಲ್ಯಯುತ ಬದುಕನ್ನು ಕಟ್ಟಿಕೊಳ್ಳಬೇಕು: ಟಿ ಹಿರಲಾಲ್
-
Kodagu8 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Kodagu6 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ