Mandya
ಗ್ಯಾರಂಟಿ ಯೋಜನೆ ಮೂಲಕ ಪ್ರತಿ ಮನೆಗೆ 5000 ರೂ: ಸಚಿವ ಚಲುವರಾಯಸ್ವಾಮಿ
ಮಂಡ್ಯ: ಐದು ಗ್ಯಾರಂಟಿಗಳಾದ ಶಕ್ತಿ ಯೋಜನೆ, ಯುವನಿಧಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ರೂ. 5,000 ಹಣ ತಲುಪುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಅವರು ತಾಲ್ಲೂಕಿನ ಕೆರೆಗೋಡು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಂಚ ಗ್ಯಾರಂಟಿಗಳ ಅನುಷ್ಠಾನ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ನಿರ್ವಹಿಸುತ್ತಿದೆ. ರಾಜ್ಯದಲ್ಲಿ ಬಹುತೇಕ ಫಲನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆಗಳು ತಲುಪಿದೆ ಎಂದರು.
ಪಂಚ ಗ್ಯಾರಂಟಿಗಳ ಜೊತೆ ಅಭಿವೃದ್ಧಿ ಕಾಮಗಾರಿಗಳನ್ನು ಸಹ ಕೈಗೊಳ್ಳಲಾಗುತ್ತಿದೆ. ಕೃಷಿ ಇಲಾಖೆಯಿಂದ ನೀಡುವ ಸಬ್ಸಿಡಿಗಳು, ಬಿತ್ತನೆ ಬೀಜ, ರಸಗೊಬ್ಬರ, ಸೇರಿದಂತೆ ವಿವಿಧ ಇಲಾಖೆಯಿಂದ ನೀಡಲಾಗುತ್ತಿರುವ ಸವಲತ್ತು ನಿಲ್ಲಿಸಿಲ್ಲ ಎಂದರು.
ಬೆಳೆ ವಿಮೆ ಯೋಜನೆಯಡಿ ರೈತರಿಗೆ 1,700 ಕೋಟಿ ರೂ ಪಾವತಿಸಲಾಗಿದೆ. ಈ ವರ್ಷ ಮುಂಗಾರು ಬೆಳೆಗೆ ಯಾವುದೇ ತೊಂದರೆ ಇಲ್ಲದಂತೆ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ಪ್ರತಿ ತಾಲೂಕಿನಲ್ಲಿರುವ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಕೊರತೆ ಇಲ್ಲದಂತೆ ಸೌಲಭ್ಯ ಹಾಗೂ ಮಾಹಿತಿ ನೀಡಲು ವ್ಯವಸ್ಥೆ ಮಾಡಲಾಗಿದೆ ಸರ್ಕಾರ ಹಾಗೂ ಇಲಾಖೆಯು ಎಲ್ಲಾ ಸೌಲಭ್ಯಗಳನ್ನು ರೈತರಿಗೆ ತಲುಪಿಸುತಿದ್ದೇವೆ. ನಮ್ಮ ಸರ್ಕಾರ ಯಾವಾಗಲು ರೈತರ ಪರ ಇರುತ್ತದೆ ಎಂದರು.
ಮಂಡ್ಯದ ಕೆರಗೋಡಿನಿಂದ ಕುಣಿಗಲ್ ಕಡೆ ಹೋಗುವ ರಸ್ತೆ ಹಾಗೂ ಚಿಕ್ಕಮಂಡ್ಯದ ಕಾರೆಮನೆ ಗೇಟ್ ಬಳಿ ರಸ್ತೆಯನ್ನು ಅಭಿವೃದ್ದಿ ಮಾಡಲಾಗಿದೆ. ಮಂಡ್ಯ ಜಿಲ್ಲೆಯು ಕೃಷಿ ಪ್ರಧಾನವಾದ ರೈತರ ಜಿಲ್ಲೆಯಾಗಿದ್ದು, ಮಂಡ್ಯದಲ್ಲಿ ಕೃಷಿ ವಿಶ್ವ ವಿದ್ಯಾನಿಲಯವನ್ನು ಆದಷ್ಟು ಬೇಗ ಸ್ಥಾಪಿಸಲಾಗುವುದು. ಹೊಸ ಶುಗರ್ ಫ್ಯಾಕ್ಟರಿಯನ್ನು ಜಿಲ್ಲೆಯಲ್ಲಿ ನಿರ್ಮಿಸಲಾಗುವುದು ಎಂದರು.
ಜಿಲ್ಲೆಯ ಕೊನೆಯ ಭಾಗದ ಬೆಳೆಗಳಿಗೂ ನೀರು ತಲುಪಿಸುವ ಉದ್ದೇಶದಿಂದ ವಿ.ಸಿ.ನಾಲೆ ಆಧುನೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಜೂನ್ 8 ರಿಂದ ಮೊದಲು ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ನಾಲೆಗಳಿಗೆ ನೀರು ಒದಗಿಸಲಾಗಿವುದು ಎಂದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣ ಭಾಗದ 27,000 ಆಸ್ತಿಗಳಿಗೆ ಈ ಸ್ವತ್ತು ಮಾಡುವ ಕೆಲಸ ನಿರ್ವಹಿಸಿರುತ್ತಾರೆ. ಮೊದಲು ವರ್ಷಕ್ಕೆ 500 ರಿಂದ 1000 ಮಾತ್ರ ಮಾಡುತ್ತಿದ್ದರು, ಈಗ 27,000 ಮಾಡಿರುವುದು ಉತ್ತಮ ಸಾಧನೆ ಎಂದರು..
ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ ರವಿಕುಮಾರ್ ಅವರು ಮಂಡ್ಯದ ಕೇಂದ್ರ ಸ್ಥಾನದಲ್ಲಿದ್ದಾರೆ. ಇವರು ಜಿಲ್ಲೆಯ ಯುವಕರು, ಮಹಿಳೆಯರು, ಜನಸಾಮಾನ್ಯರ ಸಂಪರ್ಕದಲ್ಲಿದ್ದುಕೊಂಡು ಸರ್ಕಾರದ ಸಹಕಾರದೊಂದಿಗೆ ಮಂಡ್ಯ ಕ್ಷೇತ್ರದಲ್ಲಿ ಉತ್ತಮ ಬದಲಾವಣೆಯನ್ನು ತರಲು ಶ್ರಮಿಸುತ್ತಿದ್ದಾರೆ. ಅವರಿಗೆ ನಿಮ್ಮೆಲ್ಲರ ಸಹಕಾರ, ಪ್ರೀತಿ, ವಿಶ್ವಾಸ ಮುಖ್ಯವಾಗಿದೆ ಎಂದರು.
ಜನಸಾಮಾನ್ಯರು ಜನಸ್ಪಂದನ ಕಾರ್ಯಕ್ರಮದಲ್ಲಿ ಸಲ್ಲಿಸುವ ಅರ್ಜಿಗಳ ಮೇಲೆ ನಿಮ್ಮ ಮೊಬೈಲ್ ಸಂಖ್ಯೆಯನ್ನು ಬರೆದು ಸಲ್ಲಿಸಿ. ಯಾವುದಾದರೂ ಕಾನೂನು ಬಾಹಿರವಾಗುವ ಅರ್ಜಿಯನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಿ, ಒಂದು ತಿಂಗಳೊಳಗೆ ನಿಮ್ಮ ಸಮಸ್ಯೆಯನ್ನು ಪರಿಹರಿಸುವ ಕೆಲಸವನ್ನು ಮಾಡಲಾಗುವುದು. ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳಿದ್ದು, ನಿಮ್ಮ ಸಮಸ್ಯೆಯನ್ನು ಪರಿಹರಿಸಲು ವಿಶೇಷ ಪಾತ್ರ ವಹಿಸುತ್ತಾರೆ. ದಯಮಾಡಿ ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.
ಕಳೆದ ಸಾಲಿನಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ನ್ಯಾಯಾಲಯದಲ್ಲಿದ್ದ ಸುಮಾರು 10,600 ಪ್ರಕರಣಗಳಲ್ಲಿ 1,300 ಪ್ರಕರಣಗಳನ್ನು
ಇತ್ಯರ್ಥ ಪಡಿಸಲಾಗಿದೆ ಎಂದರು.
ಮಂಡ್ಯ ಶಾಸಕರಾದ ಪಿ.ರವಿಕುಮಾರ್ ಗೌಡ ಮಾತನಾಡಿ, ಕೆರಗೋಡಿನಲ್ಲಿರುವ ಪಂಚಲಿಂಗೇಶ್ವರ ಸಮುದಾಯ ಭವನದ ನಿರ್ಮಾಣವು ಬಹಳ ವರ್ಷಗಳಿಂದ ಅರ್ಧಕ್ಕೆ ನಿಂತಿದ್ದು, ಶೀಘ್ರದಲ್ಲೇ ಅದನ್ನು ಪೂರ್ಣಗೊಳಿಸಲಾಗುವುದು. ಜೊತೆಗೆ ಅಂಬೇಡ್ಕರ್ ಭವನದ ನಿರ್ಮಾಣಕ್ಕೆ ಸರ್ಕಾರವು ಅನುದಾನ ನೀಡಲಿದ್ದು ಶೀಘ್ರದಲ್ಲೇ ನಿರ್ಮಿಸಲಾಗುವುದು ಎಂದರು.
5 ಕೋಟಿ ರೂ ವೆಚ್ಚದಲ್ಲಿ ಕೆರೆಗಳ ಅಭಿವೃದ್ಧಿಯ ಟೆಂಡರ್ ಪ್ರಕ್ರಿಯೆ ಮುಗಿದ ತಕ್ಷಣ ಕೆರೆಯ ಅಭಿವೃದ್ದಿ ಕಾಮಗಾರಿ ಮಾಡಲಾಗುವುದು. ಕೆರಗೋಡಿನಲ್ಲಿ ಬಸ್ ನಿಲ್ದಾಣವನ್ನು ಕಟ್ಟಲು ಸದ್ಯಕ್ಕೆ ಸ್ಥಳದ ಕೊರತೆ ಇದೆ. ಸ್ಥಳದ ಹುಡುಕಾಟ ನಡೆಯುತ್ತಿದ್ದು, ಸ್ಥಳವು ನಿಗಧಿಯಾದ ತಕ್ಷಣ ಬಸ್ ನಿಲ್ದಾಣವನ್ನು ಕಟ್ಟಲಾಗುವುದು ಎಂದರು.
ವಸತಿ ರಹಿತರ ಅತೀ ಹೆಚ್ಚು ಅರ್ಜಿಗಳು ಸ್ವೀಕೃತವಾಗಿದ್ದು, 50 ಸೈಟುಗಳನ್ನು ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ 5 ಎಕರೆ ಸರ್ಕಾರಿ ಜಾಗವನ್ನು ಹುಡುಕಿ ಕೆರಗೋಡು ಪಂಚಾಯಿತಿಯಡಿಯಲ್ಲಿ ಬರುವ ವಸತಿ ಹಾಗೂ ನಿವೇಶನ ರಹಿತರಿಗೆ ಸರ್ಕಾರದ ವತಿಯಿಂದ ಸೈಟುಗಳನ್ನು ನೀಡಲಾಗುವುದು ಎಂದರು.
ಈ ಹಿಂದೆ ಬಸರಾಳು ಮತ್ತು ಕೀಲಾರದಲ್ಲಿ ನಡೆದ ಜನಸ್ಪಂದನದಲ್ಲಿ ಬಂದಂತಹ ಶೇ.95 ರಷ್ಟು ಅರ್ಜಿಗಳನ್ನು ಕೇವಲ 1 ತಿಂಗಳೊಳಗೆ ವಿಲೇವಾರಿ ಮಾಡಲಾಗಿದೆ. ಹಾಗೆಯೇ ಈ ಕಾರ್ಯಕ್ರಮದಲ್ಲೂ ಬರುವ ಅರ್ಜಿಗಳನ್ನು ಪಡೆದು ನಿಮ್ಮ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ಒದಗಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಬಿರಾದರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ ರೂಪ*
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ
ರೂಪ*
ಶ್ರೀರಂಗಪಟ್ಟಣ : ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆಯನ್ನ ಆಚರಿಸಲಾಗುತ್ತಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಎಂ.ಡಿ ರೂಪ ಹೇಳಿದರು.
ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ, ತಾಲೂಕು ಆಡಳಿತ ಹಾಗೂ ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ನಡೆದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ೨೦೧೧ ರಿಂದ ಪ್ರತಿ ವರ್ಷ ಜ. ೨೫ ರಂದು ದೇಶಾದ್ಯಂತ ರಾಷ್ಟೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಹೊಸ ಮತದಾರರನ್ನು ಸೆಳೆಯುವ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.
ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್. ಮಹದೇವಪ್ಪ ಮಾತನಾಡಿ, ಭಾರತದ ಚುನಾವಣಾ ಆಯೋಗದ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಭಾರತದಲ್ಲಿ ಶಾಸಕಾಂಗದ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. “ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ತಿಳುವಳಿಕೆ ನೀಡಲು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನ್ಯಾಯಾಧೀಶರಾದ ಹರೀಶ್‌ಕುಮಾರ್, ಹನುಮಂತ ರಾಯಪ್ಪ, ತಹಸೀಲ್ದಾರ್ ಪರಶುರಾಮ್ ಸತ್ತಿಗೆರಿ, ಬಿಇಒ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ನೌಕರರು, ಕಾಲೇಜು ವಿದ್ಯಾರ್ಥಿಗಳು ಇದ್ದರು.
Mandya
ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು
Mandya
ಜ.29 ರಂದು ನಬಾರ್ಡ್ ನೀತಿ ವಿರೋಧಿಸಿ ಪ್ರತಿಭಟನೆ
ಮಂಡ್ಯ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜನವರಿ ೨೯ರ ಬೆಳಿಗ್ಗೆ ೧೧ಗಂಟೆಗೆ ಬೆಂಗೂರಿನ ರಿಸರ್ವ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಕಾರ ಕಳೆದ ಮೂರು ವರ್ಷದಿಂದ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಿಲೇ ಬಂದಿದ್ದು, ಕಳೆದ ವರ್ಷ ರಾಜ್ಯಕ್ಕೆ ೫೬೦೦ ಕೋಟಿ ನೀಡಲಾಗಿದ್ದ ಸಾಲ ಪ್ರಸಕ್ತ ವರ್ಷಕ್ಕೆ ೨೩೪೦ಕ್ಕೆ ಇಳಿಸಿದೆ ಎಂದು ಆರೋಪಿಸಿದರು.
ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು ಶೇ.೫೮ರಷ್ಟು ತಗ್ಗಿಸುವ ಮೂಲಕ ರಾಜ್ಯದ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿದೆ. ರೈತರು ಹೆಚ್ಚು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಿ, ಖಾಸಗಿ ಸಾಲದ ಸುಳಿಗೆ ಸಿಲುಕೊಂಡು ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇದರಿಂದ ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ಅವರ ಕಿರುಕುಳದಿಂದ ಗ್ರಾಮೀನ ಪ್ರದೇಶದ ಮಹಿಳೆಯರು ಹಾಗೂ ಇತರೆ ದುಡಿಯುವ ವರ್ಗ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿಯೂ ಮಹಿಳೆ ಆತ್ಮಹತ್ಯೆಗೆ ಶರಣಾದ ಪ್ರಕರಣ ನಡೆದಿದ್ದು, ಇದಕ್ಕೆ ಕೇಂದ್ರ ಸರ್ಕಾರದ ನಡೆಯೇ ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ರೈತರು, ಸ್ವ ಸಹಾಯ ಸಂಘಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ಭಾಗವಹಿಸುವಂತೆ ಕರೆ ನೀಡಿದರು.
ಗೋಷ್ಠಿಯಲ್ಲಿ ಬೋರಾಪುರ ಶಂಕರೇಗೌಡ, ಲಿಂಗಪ್ಪಾಜಿ, ಅಣ್ಣಯ್ಯ, ವಿ.ಸಿ.ಉಮೇಶ್, ವಿಜಿಕುಮಾರ್, ಮಂಜು ಇತರರಿದ್ದರು.
-
Mysore18 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Mysore16 hours ago
ಲೋಕಾಯುಕ್ತ ಸರ್ಕಾರದ ಕೈಗೊಂಬೆ: ಸಿಎಂ ಕ್ಲೀನ್ ಚೀಟ್ಗೆ ಹಳ್ಳಿಹಕ್ಕಿ ಪ್ರತಿಕ್ರಿಯೆ
-
Kodagu20 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Kodagu17 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ
-
Kodagu20 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Kodagu15 hours ago
ಬೆಂಗಳೂರು ಒಕ್ಕಲಿಗ ಸಂಘದ ಸಹಯೋಗದೊಂದಿಗೆ ಪ್ರತಿಭಟನೆ ಸಿದ್ದತೆ
-
Hassan14 hours ago
ಈ ಸಲದ ಗಣರಾಜ್ಯೋತ್ಸವ ಸನ್ಮಾನಕ್ಕೆ ಅಪರೂಪದ ವೈದ್ಯ ಡಾ.ನಿತಿನ್ ಆಯ್ಕೆ
-
Mysore15 hours ago
ಸುತ್ತೂರು ಜಾತ್ರಾ ಮಹೋತ್ಸದಂದು ಹಸೆಮಣೆ ಏರಲಿದ್ದಾರೆ 155 ಜೋಡಿಗಳು