Connect with us

Politics

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣದಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ: ಎಚ್‌.ಕೆ.ಪಾಟೀಲ್‌

Published

on

ಗದಗ: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಜಕೀಯಕ್ಕೆ ಬಳಕೆ ಮಾಡಲು ಸಾಧ್ಯನಾ ಎಂದು ನೋಡಲು ಪ್ರಯತ್ನ ಮಾಡುತ್ತಿದ್ದು, ಈ ವಿಚಾರದಲ್ಲಿ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.

ಗದಗದಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳದ ವಿಚಾರ ವಿಧಾನಸಭೆ ಒಳಗೆ ಚರ್ಚೆಗೆ ಬಂದಿದೆ. ಗೃಹ ಸಚಿವರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಅನಾಮಿಕ ವ್ಯಕ್ತಿ ನ್ಯಾಯಾಲಯದಲ್ಲಿ ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ಹೇಳಿಕೆ ನೀಡಿದ್ದ. ಅದರ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಯಬೇಕಾಗಿತ್ತು. ಆ ತನಿಖೆ ನಡೆದಿದೆ. ತನಿಖೆಯು ಯಾವ ಹಂತದಲ್ಲಿದೆ ಎಂಬ ಕೆಲವು ಭಾಗ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಈ ಬಗ್ಗೆ ಬಹುಶಃ ಸೋಮವಾರ ಇನ್ನು ಹೆಚ್ಚಿನ ಮಾಹಿತಿಯನ್ನು ಗೃಹ ಸಚಿವರು ನೀಡುತ್ತಾರೆ ಎಂದಿದ್ದಾರೆ ಎಂದು ಹೇಳಿದರು.

ಶಾಸನ ಸಭೆಯಲ್ಲಿ ಚರ್ಚೆ ಮಾಡಿದ್ದರಿಂದ ಸೋಮವಾರ ಸರ್ಕಾರ ತನ್ನ ಉತ್ತರ ನೀಡಲಿದೆ. ನಾವು ಧರ್ಮಸ್ಥಳ ಮಂಜುನಾಥನ ಸನ್ನಿಧಾನ ಬಗ್ಗೆ ವಿಶೇಷ ಭಕ್ತಿ, ಗೌರವ, ಅಭಿಮಾನ ಹೊಂದಿದವರು. ಆದ್ದರಿಂದ ಸರ್ಕಾರದ ಬಗ್ಗೆ ಯಾರು ಅನುಮಾನದ ಮಾತುಗಳನ್ನಾಡುತ್ತಿದ್ದಾರೆ. ಅವರು ಕೇವಲ ರಾಜಕೀಯಕ್ಕಾಗಿ ಮಾತನಾಡುತ್ತಿದ್ದಾರೆ. ಇವತ್ತು ಮಾತನಾಡುವವರು 10 ದಿನಗಳ ಹಿಂದೆ ಯಾಕೆ ಮಾತನಾಡಲಿಲ್ಲ? ಸಮಯದ ಉಪಯೋಗ ಮಾಡಿಕೊಂಡು ಏನಾದ್ರು ಮಾಡುವ ಪ್ರಯತ್ನಿಸಿದರೆ ಅದರಿಂದ ಏನು ಲಾಭ ಆಗುವುದಿಲ್ಲ ಎಂದು ಧರ್ಮಸ್ಥಳ ಪ್ರಕರಣ ರಾಜಕೀಯಕ್ಕೆ ಬಳಸಿಕೊಳ್ಳುವವರಿಗೆ ಖಡಕ್ ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ  ಒಳಮೀಸಲಾತಿ ಬಗ್ಗೆ ಮಾತನಾಡಿದ ಅವರು, ಒಳಮೀಸಲಾತಿಗೆ ಸಂಬಂಧಪಟ್ಟಂತೆ ಆ.16 ರಂದು ವಿಶೇಷ ಸಚಿವ ಸಂಪುಟ ಕರೆಯಲಾಗಿತ್ತು. ಆದರೆ ಈ ಬಗ್ಗೆ ಕೆಲವು ಸಚಿವರು, ಸಿಎಂ ಅವರನ್ನು ಭೇಟಿಯಾಗಿ ಕೆಲವು ವಿಚಾರಗಳನ್ನು ಚರ್ಚೆ ಮಾಡ್ತಿದ್ದಾರೆ. ಅದಕ್ಕೆ ಒಂದೆರಡು ದಿನ ಹೆಚ್ಚಿಗೆ ಸಮಯ ತೆಗೆದುಕೊಂಡಿದ್ದಾರೆ. ಆದ್ದರಿಂದ ಆ.19ರಂದು ಸಚಿವ ಸಂಪುಟದ ಸಭೆಯನ್ನು ಕರೆಯಲಾಗಿದೆ. ಅದರೊಳಗೆ ನಾಗಮೋಹನ್‌ದಾಸ್ ವರದಿ ಬಗ್ಗೆ ಅಂತಿಮವಾಗಿ ಚರ್ಚೆ ಹಾಗೂ ನಿರ್ಣಯ ಆಗುತ್ತದೆ ಎಂದು ಹೇಳಿದರು.

Continue Reading

Politics

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: 3.68 ಲಕ್ಷಕ್ಕೂ ಅಧಿಕ ಅರ್ಜಿಗಳು – ಜಿಲ್ಲಾವಾರು ಅಂಕಿಅಂಶ ಪ್ರಕಟ!!

Published

on

ಕರ್ನಾಟಕ ಪೊಲೀಸ್ ಇಲಾಖೆಯ 3,991 (3,395 + 596 ಹೈದರಾಬಾದ್-ಕರ್ನಾಟಕ ಮೀಸಲು) ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (Civil Police Constable) ಹುದ್ದೆಗಳ ನೇಮಕಾತಿಗೆ ರಾಜ್ಯದಾದ್ಯಂತ ಭಾರೀ ಸ್ಪಂದನೆ ವ್ಯಕ್ತವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಒಟ್ಟು 3,90,715 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅವರಲ್ಲಿ 3,68,858 ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಅಂತಿಮಗೊಳಿಸಿದ್ದಾರೆ.

ಹಲವು ವರ್ಷಗಳ ಬಳಿಕ ನಡೆದ ನೇಮಕಾತಿಗೆ ಉತ್ತಮ ಸ್ಪಂದನೆ:
ಹಲವು ವರ್ಷಗಳ ನಂತರ ದೊಡ್ಡ ಪ್ರಮಾಣದಲ್ಲಿ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯುವಕರಿಂದ ಭಾರೀ ಆಸಕ್ತಿ ವ್ಯಕ್ತವಾಗಿದೆ. ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಒಟ್ಟು 72 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿ ಪ್ರಕ್ರಿಯೆ ಕೈಗೊಂಡಿದ್ದು, ಪೊಲೀಸ್ ನೇಮಕಾತಿಯೂ ಅದರ ಪ್ರಮುಖ ಭಾಗವಾಗಿದೆ. ಇದರಿಂದ ಸ್ಪರ್ಧೆಯ ಮಟ್ಟವೂ ಗಣನೀಯವಾಗಿ ಹೆಚ್ಚಾಗಿದೆ.

ಜಿಲ್ಲಾವಾರು ಅರ್ಜಿ ಸಂಖ್ಯೆ:
ಅಂಕಿಅಂಶಗಳ ಪ್ರಕಾರ ಬೆಂಗಳೂರು ನಗರದಿಂದ ಅತಿ ಹೆಚ್ಚು 2,22,370 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 2,12,037 ಅಭ್ಯರ್ಥಿಗಳು ಶುಲ್ಕ ಪಾವತಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ನಗರ (17,263), ಶಿವಮೊಗ್ಗ (16,072), ಮಂಗಳೂರು ನಗರ (14,118), ಉಡುಪಿ (11,733), ಮಂಡ್ಯ (10,571) ಹಾಗೂ ಕೊಡಗು (10,276) ಜಿಲ್ಲೆಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
ಇನ್ನೊಂದೆಡೆ, ಬಳ್ಳಾರಿ (2,218), ರೈಲ್ವೆ ಘಟಕ, ಬೆಂಗಳೂರು (2,747), ದಾವಣಗೆರೆ (3,311) ಹಾಗೂ ಚಿಕ್ಕಬಳ್ಳಾಪುರ (3,613) ಜಿಲ್ಲೆಗಳಲ್ಲಿ ತುಲನಾತ್ಮಕವಾಗಿ ಕಡಿಮೆ ಅರ್ಜಿಗಳು ದಾಖಲಾಗಿವೆ.

ಅಭ್ಯರ್ಥಿಗಳಿಗೆ ಸಲಹೆ:
ಅರ್ಜಿ ಸಲ್ಲಿಕೆ ಪೂರ್ಣಗೊಂಡಿರುವುದರಿಂದ ಅಭ್ಯರ್ಥಿಗಳು ಈಗ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆಗೆ ಅಗತ್ಯ ಸಿದ್ಧತೆ ಆರಂಭಿಸುವುದು ಸೂಕ್ತ. ಸ್ಪರ್ಧೆ ಹೆಚ್ಚಿರುವುದರಿಂದ ನಿಯಮಿತ ಅಭ್ಯಾಸ, ಹಿಂದಿನ ಪ್ರಶ್ನೆಪತ್ರಿಕೆಗಳ ಅಧ್ಯಯನ ಮತ್ತು ದೈಹಿಕ ಸಾಮರ್ಥ್ಯ ವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಗಳನ್ನು ನಿರಂತರವಾಗಿ ಗಮನಿಸಿ, ಪರೀಕ್ಷೆಯ ವೇಳಾಪಟ್ಟಿ, ಪ್ರವೇಶ ಪತ್ರ ಹಾಗೂ ಇತರೆ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಪರಿಶೀಲಿಸಬೇಕು. ಉತ್ತಮ ಸಿದ್ಧತೆಯೊಂದಿಗೆ ಪರೀಕ್ಷೆಯನ್ನು ಎದುರಿಸಿದರೆ ಪೊಲೀಸ್ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯುವ ಅವಕಾಶ ಹೆಚ್ಚಾಗಲಿದೆ.

Continue Reading

Politics

ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರ: ಕೇಂದ್ರಕ್ಕೆ ಪತ್ರ, ರೈತರಿಗೆ ತ್ವರಿತ ಪರಿಹಾರಕ್ಕೆ ಮನವಿ

Published

on

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಕುರಿತು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಶೇ.42 ಹಾಗೂ ಜುಲೈ ತಿಂಗಳಲ್ಲಿ ಶೇ.34 ಮಳೆಯ ಕೊರತೆ ದಾಖಲಾಗಿರುವುದಾಗಿ ಹೇಳಿದರು. ಮಳೆಯ ಅಭಾವದಿಂದ ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಬಿತ್ತನೆಯಾದ ಬೆಳೆಗಳಲ್ಲಿ ಸುಮಾರು ಶೇ.80ರಷ್ಟು ಹಾನಿಯಾಗಿದೆ ಎಂದು ತಿಳಿಸಿದರು.

ಜಲಾಶಯಗಳ ಒಳಹರಿವು ಹಾಗೂ ಅಂತರ್ಜಲ ಮಟ್ಟವೂ ನಿರಂತರವಾಗಿ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಬಿಕ್ಕಟ್ಟಿನ ಆತಂಕ ಎದುರಾಗುವ ಸಾಧ್ಯತೆಯಿದೆ ಎಂದು ಅವರು ಎಚ್ಚರಿಸಿದರು.

ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದ್ದು, ಬರ ಪರಿಸ್ಥಿತಿಯ ಸಮಗ್ರ ಮೌಲ್ಯಮಾಪನ ನಡೆಸಿ ರೈತರಿಗೆ ಶೀಘ್ರ ಪರಿಹಾರ ಒದಗಿಸುವಂತೆ ಮನವಿ ಮಾಡಲಾಗಿದೆ ಎಂದು ಸಚಿವರು ಹೇಳಿದರು.

Continue Reading

Politics

ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್; PIL ವಜಾ

Published

on

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರ ವಿಭಾಗೀಯ ಪೀಠ ಈ ಮಹತ್ವದ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಭೂಸ್ವಾಧೀನಕ್ಕೂ ಮುನ್ನ ಸಾಮಾಜಿಕ ಪರಿಣಾಮ ಅಧ್ಯಯನ ನಡೆಸಿಲ್ಲ, ಪುನರ್ವಸತಿ ಕ್ರಮಗಳನ್ನು ಕೈಗೊಂಡಿಲ್ಲ ಹಾಗೂ ಸರ್ಕಾರ ಕೃಷಿ ಭೂಮಿಯನ್ನು ರಿಯಲ್ ಎಸ್ಟೇಟ್ ಉದ್ದೇಶಕ್ಕೆ ಬಳಸುತ್ತಿದೆ ಎಂದು ವಾದಿಸಿದರು. ರೈತರು ಕೃಷಿ ಮುಂದುವರಿಸಲು ಬಯಸಿದ್ದು, ಯೋಜನೆಗೆ ಅಗತ್ಯವಿರುವ ಜನರ ಒಪ್ಪಿಗೆ ಪಡೆಯಲಾಗಿಲ್ಲ ಎಂಬ ಆಕ್ಷೇಪವನ್ನೂ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಯಾವ ನಿರ್ದಿಷ್ಟ ಕಾನೂನು ಅಥವಾ ಕಾನೂನುಬದ್ಧ ನಿಯಮ ಉಲ್ಲಂಘನೆಯಾಗಿದೆ ಎಂಬುದನ್ನು ಸ್ಪಷ್ಟಪಡಿಸುವಂತೆ ಕೇಳಿತು. ಯೋಜನೆಯ ಉದ್ದೇಶ ಅಥವಾ ಮೆರಿಟ್‌ ಆಧರಿಸಿ ನ್ಯಾಯಾಲಯ ತೀರ್ಪು ನೀಡುವುದಿಲ್ಲ; ಕಾನೂನು ಉಲ್ಲಂಘನೆಯ ಸ್ಪಷ್ಟ ಆಧಾರ ಇರಬೇಕು ಎಂದು ಪೀಠ ತಿಳಿಸಿತು.

ಅರ್ಜಿದಾರರ ಪರದಿಂದ ಅಂತಹ ಉಲ್ಲಂಘನೆಯನ್ನು ಸಮರ್ಪಕವಾಗಿ ತೋರಿಸಲಾಗದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿತು.

ಅರ್ಜಿಯಲ್ಲಿ, ಬಿಡದಿ ಸಮೀಪ 516 ಎಕರೆ ಭೂಸ್ವಾಧೀನಕ್ಕೆ ಸಂಬಂಧಿಸಿದ ಜೂನ್ 13ರಂದು ಹೊರಡಿಸಿದ್ದ ಅಂತಿಮ ಅಧಿಸೂಚನೆಯನ್ನು ರದ್ದುಪಡಿಸಬೇಕು, ಕೃಷಿಭೂಮಿಯನ್ನು ಉಳಿಸಿ ಯೋಜನೆಯನ್ನು ಉತ್ತರ ಕರ್ನಾಟಕದ ಹಿಂದುಳಿದ ಅಥವಾ ಕೈಗಾರಿಕಾ ಭೂ ಬ್ಯಾಂಕ್ ಇರುವ ಪ್ರದೇಶಗಳಿಗೆ ಸ್ಥಳಾಂತರಿಸಲು ತಜ್ಞರ ಸಮಿತಿ ರಚಿಸಬೇಕು ಹಾಗೂ ಅಲ್ಲಿಯವರೆಗೆ ಭೂಸ್ವಾಧೀನ ಮತ್ತು ಟೆಂಡರ್ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ನೀಡಬೇಕು ಎಂದು ಕೋರಲಾಗಿತ್ತು.

Continue Reading

Trending

error: Content is protected !!