Connect with us

Location

ಚುಂಚನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ; ನೂತನ ಅಧ್ಯಕ್ಷರಾಗಿ ಪಿ. ಮಹದೇವಪ್ಪ, ಉಪಾಧ್ಯಕ್ಷರಾಗಿ ಸುಬ್ಬಮ್ಮ ಅವಿರೋಧ ಆಯ್ಕೆ

Published

on

 

ಚುಂಚನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ; ನೂತನ ಅಧ್ಯಕ್ಷರಾಗಿ ಪಿ. ಮಹದೇವಪ್ಪ, ಉಪಾಧ್ಯಕ್ಷರಾಗಿ ಸುಬ್ಬಮ್ಮ ಅವಿರೋಧ ಆಯ್ಕೆ

ನಂಜನಗೂಡು ಜ.24

ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಚುಂಚನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಿ.ಮಹದೇವಪ್ಪ ಉಪಾಧ್ಯಕ್ಷರಾಗಿ ಸುಬ್ಬಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುಂಚನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಬಿಜೆಪಿ ತೆಕ್ಕೆಗೆ ಬಂದಿದೆ. ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು.
ಅಧ್ಯಕ್ಷ ಸ್ಥಾನಕ್ಕೆ ಪಿ. ಮಹದೇವಪ್ಪ, ಉಪಾಧ್ಯಕ್ಷ ಸ್ಥಾನಕ್ಕೆ ಸುಬ್ಬಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬೇರೆ ಯಾರು ನಾಮ ಪತ್ರ ಸಲ್ಲಿಸಿದ ಕಾರಣ, ಅಧ್ಯಕ್ಷರಾಗಿ ಪಿ.ಮಹದೇವಪ್ಪ, ಉಪಾಧ್ಯಕ್ಷರಾಗಿ ಸುಬ್ಬಮ್ಮ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿ ಪ್ರಸಾದ್ ಘೋಷಣೆ ಮಾಡಿದರು.

ಬಳಿಕ ಮಾಜಿ ತಾಪಂ ಉಪಾಧ್ಯಕ್ಷ ಸಿ.ಎಂ ಮಹದೇವಯ್ಯ ಮಾತನಾಡಿ, ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗುಣಮಟ್ಟದ ಹಾಲನ್ನು ಪೂರೈಕೆ ಮಾಡಬೇಕು. ಸಂಘವು ಲಾಭದಾಯಕವಾಗಿ ಮುನ್ನುಗ್ಗುತ್ತಿದೆ. ಹೈನುಗಾರಿಕೆಯಿಂದ ರೈತರು ಆರ್ಥಿಕವಾಗಿ ಸಬಲರಾಗಬೇಕು. ಸಂಘದ ಅಭಿವೃದ್ಧಿಗೆ ಎಲ್ಲಾ ಪದಾಧಿಕಾರಿಗಳು ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

ಮಾಜಿ ಗ್ರಾಪಂ ಅಧ್ಯಕ್ಷ ಸಿ.ನಾಗರಾಜು ಮಾತನಾಡಿ, ಐದು ವರ್ಷದ ಆಡಳಿತದ ಅವಧಿಯಲ್ಲಿ ಸಹಕಾರಿ ಬಂಧುಗಳ ಜೊತೆಯಲ್ಲಿ ಉತ್ತಮ ಬಾಂಧವ್ಯ ಬೆಳಸಿ ಕೊಳ್ಳುವುದರ ಜತೆಯಲ್ಲಿ ಸಂಘದಿಂದ ಬರುವ ಸವಲತ್ತು ದೊರಕಿಸಿ ಕೊಡುವ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಬೇಕು‌. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಘವನ್ನು ಬಲಪಡಿಸಬೇಕು ಎಂದು ಸಲಹೆ ನೀಡಿದರು. ನೂತನ ನಿರ್ದೇಶಕರಾದ ಬಸಪ್ಪ, ಮಹದೇವಪ್ಪ, ಮುದ್ದು ಮಲ್ಲಯ್ಯ, ಸಿದ್ದರಾಜು, ಹೇಮಣ್ಣ, ಸಿದ್ದರಾಜು, ಶಶಿಧರ್, ಭಾಗ್ಯಮ್ಮ ಹಾಜರಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಜಿ.ರವಿಕುಮಾರ್, ಡಿಎಂ ಮಹದೇವ್, ಮಾಜಿ ಗ್ರಾ.ಪಂ ಸದಸ್ಯ ಪುಟ್ಟಪ್ಪ, ಮಾಜಿ ಡೈರಿ ಅಧ್ಯಕ್ಷ ಮುದ್ದಪ್ನ ಸಿದ್ದಪ್ಪ, ಮುಖಂಡರಾದ ಸಿದ್ದರಾಜಪ್ಪ, ಮಾಜಿ ಗ್ರಾಪಂ ಅಧ್ಯಕ್ಷ ಸಿ.ನಾಗರಾಜು, ಸಿ.ಜಿ ಮಂಜು, ಮಹದೇವಪ್ಪ, ಪುಟ್ಟಪ್ಪ , ಮಹದೇವಪ್ಪ, ಸಂಘದ ಕಾರ್ಯದರ್ಶಿ ಮನು ಸೇರಿದಂತೆ ಹಲವರು ಭಾಗವಹಿಸಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್

Continue Reading
Click to comment

Leave a Reply

Your email address will not be published. Required fields are marked *

Mysore

ಏ. 26 ಮತ್ತು ಏ.27 ರಂದು ಎಂಎಲ್ಎ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ -2025

Published

on

ನಂಜನಗೂಡು: ಏ.24 ವರದಿ ಮಹದೇವಸ್ವಾಮಿ ಪಟೇಲ್

ಏ. 26 ಮತ್ತು ಏ.27 ರಂದು ನಂಜನಗೂಡಿನಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಎಂಎಲ್ಎ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ -2025 ನಡೆಸಲಾಗುತ್ತಿದೆ ಎಂದು ಪಂದ್ಯಾವಳಿಯ ವ್ಯವಸ್ಥಾಪಕ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕ ಎಂ.ಡಿ ಬಾಲರಾಜು ಗೋಷ್ಠಿಯಲ್ಲಿ ಹೇಳಿದರು.

ನಂಜನಗೂಡು ತಾಲೂಕು ಪತ್ರಕರ್ತ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರ ಹುಟ್ಟು ಹಬ್ಬದ ಅಂಗವಾಗಿ ಇದೇ ಮೊಟ್ಟ ಮೊದಲ ಬಾರಿಗೆ ನಂಜನಗೂಡಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಏ.26 ಮತ್ತು 27 ರಂದು ಎಂಎಲ್ಎ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿದೆ.

ಏ.26 ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಕ್ರಿಕೆಟ್ ಪಂದ್ಯಾವಳಿಯನ್ನು ಹೆಚ್.ಡಿ ಕೋಟೆ ಶಾಸಕರಾದ ಅನಿಲ್ ಚಿಕ್ಕಮಾದು ರವರು ಉದ್ಘಾಟನೆ ಮಾಡಲಿದ್ದಾರೆ. ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಗುಂಡ್ಲುಪೇಟೆ ಶಾಸಕರಾದ ಗಣೇಶ್ ಪ್ರಸಾದ್ ಘನ ಉಪಸ್ಥಿತಿಯಲ್ಲಿದ್ದಾರೆ. ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮಾರುತಿ ರವರು ಉಪಸ್ಥಿತಿಯಲ್ಲಿರುತ್ತಾರೆ. ಏ.27 ರಂದು ಸಮಾರೋಪ ಸಮಾರಂಭವನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನೀಲ್ ಬೋಸ್ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ದರ್ಶನ್ ಧ್ರುವನಾರಾಯಣ್ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯರವರು ಘನ ಉಪಸ್ಥಿತಿಯಲ್ಲಿದ್ದಾರೆ. ಉಪಸ್ಥಿತಿಯಲ್ಲಿ ನಗರಸಭಾ ಉಪಾಧ್ಯಕ್ಷರಾದ ರಿಯಾನ ಬಾನು, ಪ್ರಥಮ ದರ್ಜೆ ಗುತ್ತಿಗೆದಾರರಾದ ಯು.ಎನ್ ಪದ್ಮನಾಭರಾವ್ ಸೇರಿದಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕ್ರಿಕೆಟ್ ಪಂದ್ಯಾವಳಿಯಲ್ಲಿ ಸರ್ಕಾರಿ ನೌಕರರು ಮತ್ತು ಜನಪ್ರತಿನಿಧಿಗಳ ಜೊತೆ ಕ್ರೀಡೆಯನ್ನು ನಡೆಸಲಾಗುತ್ತದೆ. ಅವರ ಜೊತೆಗೆ ಪತ್ರಕರ್ತರು ಮತ್ತು ವಕೀಲರನ್ನು ಭಾಗವಹಿಸುವಂತೆ ಶಾಸಕರು ತಿಳಿಸಿದ್ದಾರೆ. ಈಗಾಗಲೇ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸುಮಾರು 10 ತಂಡಗಳು ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ. ಪ್ರಥಮ ಬಹುಮಾನವಾಗಿ 50 ಸಾವಿರ ನಗದು, ಆಕರ್ಷಕ ಟ್ರೋಪಿ, ಮೆಡಲ್ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುತ್ತದೆ. ದ್ವಿತೀಯ ಬಹುಮಾನವಾಗಿ 25 ಸಾವಿರ ನಗದು, ಆಕರ್ಷಕ ಟ್ರೋಪಿ, ಮೆಡಲ್ ಮತ್ತು ಪ್ರಶಸ್ತಿ ವಿತರಣೆ ಮಾಡಲಾಗುತ್ತದೆ. ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುತ್ತಿರುವ ಸರ್ಕಾರಿ ನೌಕರರು ಮಾನಸಿಕವಾಗಿ ದೈಹಿಕವಾಗಿ ಸದೃಢರಾಗಲು ಈ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಇದರಿಂದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಸ್ನೇಹ ಬಾಂಧವ್ಯ ಮತ್ತು ಸಹೋದರತೆ ಬೆಸೆಯುವ ಒಂದು ವಿನೂತನವಾದ ಕಾರ್ಯಕ್ರಮವಾಗಿದೆ ಕ್ರಿಕೆಟ್ ಪಂದ್ಯಾವಳಿಗೆ ಕ್ರೀಡಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಎಂ.ಡಿ ಬಾಲರಾಜು, ಕವಲಂದೆ ರಾಹುಲ್, ಮಾಜಿ ಗ್ರಾಪಂ ಸದಸ್ಯ ಮುಳ್ಳೂರು ಮಹದೇವಸ್ವಾಮಿ, ಹೆಡತಲೆ ರಾಜು, ಮುಳ್ಳೂರು ಸುರೇಶ್ ಹಾಜರಿದ್ದರು

Continue Reading

Hassan

ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

Published

on

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಸುಖ ಶಾಂತಿ ಸಿಗುವ ಸ್ಥಳವೇ ದೇವಸ್ಥಾನ.ಆ ಭಾವವೇ ದೇವರು. ಶುದ್ಧ ಮನಸ್ಸು, ಅತ್ಯುತ್ತಮ ಕಾಯಕ ಸ್ವರ್ಗ ಸೃಷ್ಟಿಸುವ ಎರಡು ಮಾರ್ಗಗಳು. ಈ ದೇವಸ್ಥಾನ ಸ್ವರ್ಗಾನುಭವ ಕಲ್ಪಿಸುವ ಶಕ್ತಿ ಸ್ಥಾನ ಎಂದು ಮಾಜಿ ಶಾಸಕ ಹೆಚ್. ಕೆ ಕುಮಾರಸ್ವಾಮಿ ಹೇಳಿದರು.

ತಾಲೂಕಿನ ದೊಡ್ಡಕಣಗಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕವಳಿಕೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿ, ಮೌಲ್ಯಯುತ ಬದುಕು ನಮ್ಮದಾಗಿಸಿಕೊಂಡು, ಸಮಾಜದೆಡೆಯಲ್ಲಿ ಅರ್ಥಪೂರ್ಣ ಹೆಜ್ಜೆ ನಮ್ಮದಾದಲ್ಲಿ ಸುಂದರ ಜೀವನ ನಮ್ಮದಾಗುವದು. ಈ ಕಾರ್ಯಸಿದ್ದಿ ಆಂಜನೇಯ ಭಕ್ತರ ಅತೀ ದೊಡ್ಡ ಶಕ್ತಿ ದೇವ ಎನ್ನುವದಕ್ಕೆ ಇಲ್ಲಿ ಕೂಡಿ, ಸಂಭ್ರಮಿಸುತ್ತಿರುವ ಅಸಂಖ್ಯಾತ ಭಕ್ತರೇ ಸಾಕ್ಷಿಯಾಗಿದ್ದು ಇಲ್ಲಿ ಜರುಗುವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಇಲ್ಲಿಯ ಭಕ್ತರ ಉದ್ಧರಿಸಿ ನಾಡು ದೇಶ ಮತ್ತಷ್ಟು ಸಂಪನ್ನಗೊಳಿಸಲಿ ಎಂದು ಶುಭ ಹಾರೈಸಿದರು.

ಜಿಲ್ಲಾ ಬಿಜೆಪಿ ಮಹಿಳಾ ಮುಖಂಡರಾದ ಪ್ರತಿಭಾ ಮಂಜುನಾಥ್ ಮಾತನಾಡಿ, ಎಲ್ಲಿ ನಿಸ್ವಾರ್ಥತೆ ಇರುತ್ತದೋ ಅಲ್ಲಿ ಶಕ್ತಿ ಇರುತ್ತದೆ. ಆ ಶಕ್ತಿಯೇ ದೇವರು.ಕವಳಿಕೆರೆ ಗ್ರಾಮದಲ್ಲಿ ಆಂಜನೇಯ ಸ್ವಾಮಿ ಲೋಕಾರ್ಪಣೆಗೊಂಡಿರುವುದು ಇಲ್ಲಿಯ ಜನರ ಪರಿಶುದ್ಧ ಭಾವನೆಗಳ ಸಂಕೇತವಾಗಿದೆ.. ಈ ದೇವಸ್ಥಾನ ನಿರ್ಮಿಸಲು ಕಾರಣರಾದವರನ್ನು ಸ್ಮರಣೆ ಮಾಡಬೇಕು

ಶಾಸಕ ಸಿಮೆಂಟ್ ಮಂಜು ಪತ್ನಿ ಪ್ರತಿಭಾ ಮಂಜುನಾಥ್, ಕಾಂಗ್ರೆಸ್ ಮುಖಂಡ ಮುರಳಿಮೋಹನ್ ಸೇರಿದಂತೆ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ರೇಣುಕಧರ್ಮ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಿರಿಯಣ್ಣಗೌಡ, ಸದಸ್ಯೆ ಸುಧಾ ನಾಗೇಂದ್ರ, ತೀರ್ಥೇಶ್, ಹಿರಿಯ ಮುಖಂಡ ಪಟೇಲ್ ಹೀರೇಗೌಡ, ಮತ್ತು ದೇವಸ್ಥಾನ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Continue Reading

Chamarajanagar

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿ.ಎಂ ಘೋಷಣೆ

Published

on

ಮಲೈ ಮಹದೇಶ್ವರ ಲಾಡು ಪ್ರಸಾದಕ್ಕೂ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆಗೆ ಸಭೆ ನಿರ್ಣಯ

ಮಲೈ ಮಹದೇಶ್ವರ ಬೆಟ್ಟ .ಏಪ್ರಿಲ್ 24: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು…

*ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು.

*ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ ಎ.ಇ.ಇ ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.

*ಹಿಂದಿನ‌ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು.

*ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.

*ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

*ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ.

*ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.

ಸಭೆಯಲ್ಲಿ ಪಶು ಸಂಗೋಪನೆ,ರೇಷ್ಮೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್,ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ,
ಸಾಲೂರು ಶ್ರೀಗಳಾದ ಶಾಂತಮಲ್ಲಿಕಾರ್ಜುನ ಸ್ವಾಮಿ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ,ಎ.ಆರ್.ಕೃಷ್ಣ ಮೂರ್ತಿ,ಎಂ.ಆರ್.ಮಂಜುನಾಥ್,ಡಾ.ಡಿ.ತಿಮ್ಮಯ್ಯ,ಉನ್ನತ ಅಧಿಕಾರಿಗಳಾದ ಬಿ.ಬಿ.ಕಾವೇರಿ,ಜಿಲ್ಲಾಧಿಕಾರಿ ಶಿಲ್ಪಾ ನಾಗ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕಧಿಕಾರಿಗಳಾದ ಮೋನಾ ರೋತ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಬಿ.ಟಿ.ಕವಿತಾ,ಪ್ರಾಧಿಕಾರದ ಸದಸ್ಯರು,ಇನ್ನಿತರ ಗಣ್ಯರು,ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Trending

error: Content is protected !!