Mandya
ಹಣ ಬಿಡುಗಡೆ ಸಮಿತಿ ಸಭೆ
ಮಂಡ್ಯ: ಕರ್ನಾಟಕ ಲೋಕಸಭಾ ಚುನಾವಣೆ – 2024 ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಕ್ಷಿಪ್ರ ಸಂಚಾರಿದಳ (FST) ಮತ್ತು ಸ್ಥಾಯಿ ಕಣ್ಗಾವಲು ತಂಡ(SST), ಪೊಲೀಸ್ ತಂಡದವರು ತಪಾಸಣೆ ನಡೆಸಿದ ಸಂದರ್ಭದಲ್ಲಿ ವಶಪಡಿಸಿಕೊಂಡಿರುವ ಹಣವನ್ನು ರಾಜಕೀಯ ಉದ್ದೇಶಕ್ಕಾಗಿ ಬಳಕೆಯಾಗದೆ ಇರುವ ಬಗ್ಗೆ ಸಂಬಂಧಿಸಿದವರಿಂದ ದಾಖಲಾತಿಗಳನ್ನು ಪಡೆದು ಪರಿಶೀಲಿಸಿ ಖಾತ್ರಿಪಡಿಸಿಕೊಂಡ ನಂತರ ಸಂಬಂಧಿಸಿದ ವ್ಯಕ್ತಿಗಳಿಗೆ ಹಣವನ್ನು ಬಿಡುಗಡೆಗೊಳಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಹಣ ಬಿಡುಗಡೆ ಸಮಿತಿಯ ಅಧ್ಯಕ್ಷರಾದ ಶೇಕ್ ತನ್ವೀರ್ ಆಸಿಫ್ ರವರು ತಿಳಿಸಿದರು.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಣ ಬಿಡುಗಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಿತಿಯ ಮುಂದೆ ಒಟ್ಟು 7 ಪ್ರಕರಣಗಳಿದ್ದು, ಈಗಾಗಲೇ 3 ಪ್ರಕರಣಗಳಿಗೆ ಆದೇಶ ಹೊರಡಿಸಲಾಗಿದೆ ಎಂದರು.
ಇಂದು ಮೇ 3 ರಂದು 4 ಪ್ರಕರಣಗಳಿಗೆ ಸಂಬಂಧಿಸಿದಂತೆ ಹಣ ವಶಪಡಿಸಿಕೊಂಡಿರುವ ವ್ಯಕ್ತಿಗಳಿಗೆ ನೋಟೀಸ್ ಜಾರಿ ಮಾಡಿ ಹಣಕ್ಕೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಸಲ್ಲಿಸಲು ತಿಳಿಸಲಾಗಿತ್ತು. ಅವರು ಸಲ್ಲಿಸುವ ದಾಖಲಾತಿಗಳನ್ನು ಪರಿಶೀಲಿಸಿ ಆದೇಶ ಹೊರಡಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಚಂದ್ರಶೇಖರ್. ಜಿಲ್ಲಾ ಖಜನಾಧಿಕಾರಿ ಸಿದ್ದಲಿಂಗಸ್ವಾಮಿ ಉಪಸ್ಥಿತರಿದ್ದರು.
Mandya
ನಕಲಿ ಜನನ ಮತ್ತು ಮರಣ ಪತ್ರ ನೀಡಿವವರ ವಿರುದ್ಧ ಕ್ರಮ: ಡಾ.ಕುಮಾರ
ಮಂಡ್ಯ : ಜಿಲ್ಲೆಯಲ್ಲಿ ನಕಲಿ ಜನನ ಮತ್ತು ಮರಣ ಪತ್ರ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಜನನ ಮತ್ತು ಮರಣ ಸಮನ್ವ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಬೆಳೆ ಕಟಾವು ಪ್ರಯೋಗ ಹಾಗೂ ಕೃಷಿ ಅಂಕಿ ಅಂಶ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನನ ಮತ್ತು ಮರಣ ವನ್ನು ನೊಂದಣಿ ಮಾಡಲು ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಗಳಿಗೆ ಅಧಿಕಾರಿಯನ್ನು ನೀಡಲಾಗಿದೆ. ಜನನ ಹಾಗೂ ಮರಣ ಸಂಭವಿಸಿದ 30 ದಿನಗಳೊಳಗಾಗಿ ಜನನ ಮತ್ತು ಮರಣ ಪತ್ರ ಮಾಡಿಸಿಕೊಳತಕ್ಕದ್ದು. ಇಲ್ಲವಾದಲ್ಲಿ 30 ದಿನಗಳು ಮೀರಿದರೆ ತಹಶೀಲ್ದಾರ್ ಬಳಿ ತೆರಳಬೇಕು. 1 ವರ್ಷ ಮೀರಿದರೆ ಕೋರ್ಟ್ ನ ಮೂಲಕ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಬೇಕಾಗಿರುತ್ತದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶದ ಜನರಿಗೆ ಜನನ ಮತ್ತು ಮರಣ ಪ್ರಮಾಣ ಪತ್ರದ ಕುರಿತು ಅರಿವು ಇರುವುದಿಲ್ಲ. ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ಇದರ ಕುರಿತಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ಜನನ ಪತ್ರ ನೀಡಲು ಆಸ್ಪತ್ರೆಗಳಲ್ಲಿ ವಿಳಂಬವಾಗುತ್ತಿದೆ. ಸದರಿ ವರ್ಷ ಜಿಲ್ಲೆಯಲ್ಲಿ 1 ವರ್ಷ ಮೇಲ್ಪಟ್ಟ 30 ಮಕ್ಕಳಿಗೆ ಜನನ ಪ್ರಮಾಣ ಪತ್ರ ನೊಂದಣಿ ಆಗಿಲ್ಲ. ಯಾವುದೇ ಕಾರಣಕ್ಕೂ ಜನನ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗಬಾರದು, ಜನನ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಮಗುವಿನ ತಂದೆ ತಾಯಿ ಹೆಸರು ಹಾಗೂ ವಿಳಾಸವನ್ನು ಖಾತ್ರಿ ಪಡಿಸಿಕೊಂಡು ನೊಂದಣಿ ಮಾಡಬೇಕು ಎಂದು ಸೂಚಿಸಿದರು.
ಜನನ ಮತ್ತು ಮರಣ ಸಂಭವಿಸಿದ 30 ದಿನಗಳೊಳಗಾಗಿ ಪ್ರಮಾಣ ಪತ್ರ ಪಡೆಯುವಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯ ಮೂಲಕ ಜನರಿಗೆ ಜಾಗೃತಿ ಮೂಡಿಸಿ ಎಂದರು.
ಹೆಚ್ಚು ಇಳುವರಿ ಕೊಡುವ ನೂತನ ತಳಿಗಳ ಕುರಿತು ರೈತರಿಗೆ ಅರಿವು ಮೂಡಿಸಿ
ಜಿಲ್ಲೆಯ ರೈತರು ಸಾಂಪ್ರದಾಯಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದಾರೆ. ಸಾಂಪ್ರದಾಯಕ ಬೆಳೆ ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಕುಸಿಯುತ್ತದೆ. ರೈತರು ಮಿಶ್ರ ಬೆಳೆ ಮತ್ತು ಪರ್ಯಾಯ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಿಶ್ರಬೆಳೆ ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ. ರೈತರಿಗೆ ತೋಟಗಾರಿಕಾ ಬೆಳೆಗಳನ್ನು ಬೆಳೆಯಲು ಅರಿವು ಮೂಡಿಸಿ ಎಂದು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ನಡೆಸಲಾಗಿದೆ. ಕೆಲವು ಪ್ರದೇಶಗಳಲ್ಲಿ ಬೆಳೆ ಸಮೀಕ್ಷೆಯ ಮಾಹಿತಿಯನ್ನು ತಪ್ಪಾಗಿ ನಮೂದಿಸಲಾಗಿದೆ. ಅಧಿಕಾರಿಗಳು ಸಭೆ ನಡೆಸಿ ತಪ್ಪಾಗಿರುವ ಮಾಹಿತಿಯನ್ನು ತತ್ರಾಂಶದಿಂದ ತೆಗೆದುಹಾಕಿ. ಹಾಗೂ ಬೆಳೆ ಸಮೀಕ್ಷೆಯಲ್ಲಿ ತಪ್ಪು ಮಾಹಿತಿ ಸಲ್ಲಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಬೆಳೆ ಕಟಾವಿಗೆ ಸೂಕ್ತ ದರ ನಿಗಧಿ
ಭತ್ತ ಮತ್ತು ರಾಗಿ ಬೆಳೆ ಕಟಾವಿನ ವಿಚಾರದಲ್ಲಿ ದಲ್ಲಾಳಿಗಳು ಮನಸ್ಸು ಇಚ್ಛೆ ಧರ ನಿಗದಿ ಪಡಿಸಿ ರೈತರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಿ ಭತ್ತ ಮತ್ತು ರಾಗಿ ಕಟಾವಿಗೆ ಸೂಕ್ತ ದರ ನಿಗದಿಪಡಿಸಬೇಕು. ನಿಗದಿಪಡಿಸಿದ ದರಕ್ಕಿಂತ ಹೆಚ್ಚು ದರ ವಿಧಿಸುವ ಬೇಳೆ ಕಟಾವು ಯಂತ್ರಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ಅಪರ ಪೊಲೀಸ್ ಅಧಿಕ ತಿಮ್ಮಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ರೂಪಶ್ರೀ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ಡಿ 10 ಶ್ರೀರಂಗಪಟ್ಟಣ ಸೇರಿದಂತೆ ವಿವಿದೆಡೆ ವಿದ್ಯುತ್ ಕಡಿತ
ಶ್ರೀರಂಗಪಟ್ಟಣ : 66/11ಕೆವಿ ವಿದ್ಯುತ್ ಉಪ-ವಿತರಣ ಕೇಂದ್ರದ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ನಾಳಿದ್ದು(ಡಿ.10) ಶ್ರೀರಂಗಪಟ್ಟಣ ಸೇರಿದಂತೆ ವಿವಿದೆಡೆ ವಿದ್ಯುತ್ ಕಡಿತಗೊಳಿಸುವುದಾಗಿ ಎಇಇ ಮಂಜುನಾಥ್ ಪ್ರಸಾದ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಶ್ರೀರಂಗಪಟ್ಟಣ, ಗಂಜಾಂ, ಮಂಡ್ಯ ವಾಟರ್ ಸಪ್ಲೆ, ಪಾಂಡವಪುರ ವಾಟರ್ ಸಪ್ಲೆ, ನಗುವನಹಳ್ಳಿ, ಬೆಳವಾಡಿ, ಬೊಮ್ಮೂರು ಅಗ್ರಹಾರ, ಕಿರಂಗೂರು, ಕೆ.ಶೆಟ್ಟಹಳ್ಳಿ, ಶ್ರೀನಿವಾಸ ಅಗ್ರಹಾರ, ಚಂದಗಾಲು, ದರಸಗುಪ್ಪೆ, ಚಿಂದಗಿರಿಕೊಪ್ಪಲು ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಿಗೆ ಅಂದು ಬೆ.10 ರಿಂದ ಸಂಜೆ 06 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಾಯವಾಗುವುದಾಗಿ ಅವರು ತಿಳಿಸಿದ್ದಾರೆ.
Mandya
ಆಸ್ಪತ್ರೆಗೆ ಡಿಸಿ ಭೇಟಿ : ಅಪಘಾತಕ್ಕೀಡಾಗಿರುವ ಪ್ರಯಾಣಿಕರ ಆರೋಗ್ಯ ವಿಚಾರಣೆ
ಮಂಡ್ಯ: ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೇಟಿ ನೀಡಿ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಆರೋಗ್ಯ ವಿಚಾರಿಸಿದರು.
ಮದ್ದೂರು ತಾಲ್ಲೂಕಿನ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 275 ರ ಮದ್ದೂರು ತಾಲೂಕು ಅಗರಲಿಂಗನ ದೊಡ್ಡಿ ಸರ್ವಿಸ್ ರೋಡ್ ಬಳಿ ಅಮ್ಮ ಟೂರ್ಸ್ ಅಂಡ್ ಟ್ರಾವೆಲ್ಸ್ ರವರ ಮಾಲೀಕತ್ವದ ಸಂಖ್ಯೆ: KA51/EC/1665 ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ಸಿನ ಎಡಭಾಗಕ್ಕೆ ಮುಗುಚಿ ಬಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದರು.

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದು, ಗಾಯಗೊಂಡ 25 ಪ್ರಯಾಣಿಕರನ್ನು ಕೂಡಲೇ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇಲ್ಲಿಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸದರಿ ಬಸ್ಸು ಶಿಂಷಾ ಬ್ಲಫ್ ಬಳಿ ಇರುವ ದಂಡಿ ಮಾರಮ್ಮನ ದೇವಸ್ಥಾನ ದಿಂದ ಕೆ ಪಿ ಅಗ್ರಹಾರ ಬೆಂಗಳೂರು ಇಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ.
ಜಿಲ್ಲಾಧಿಕಾರಿಗಳು ಮಿಮ್ಸ್ ಸಂಸ್ಥೆಗೆ ಭೇಟಿ ನೀಡಿ ಸದರಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಗಾಗಿ ದಾಖಲಾಗಿರುವ ಪ್ರಯಾಣಿಕರ ಆರೋಗ್ಯದ ಸ್ಥಿತಿಗತಿಗಳ ಬಗ್ಗೆ ವಿಚಾರಿಸಿದರು. ಜೊತೆಗೆ ಸೂಕ್ತ ಹಾಗೂ ಉತ್ತಮ ಮಟ್ಟದ ಔಷಧೋಪಚಾರಗಳನ್ನು ತುರ್ತಾಗಿ ಮಾಡುವಂತೆ ವೈದ್ಯಾಧಿಕಾರಿಗಳಿಗೆ ತಿಳಿಸಿದರು.
-
Mysore21 hours agoಉದ್ಯಮಿ ಅಪಹರಿಸಿ ಕೋಟಿ ರೂ.ಗಳಿಗೆ ಡಿಮ್ಯಾಂಡ್: ನಾಲ್ವರ ಬಂಧನ
-
Mandya5 hours agoಡಿ 10 ಶ್ರೀರಂಗಪಟ್ಟಣ ಸೇರಿದಂತೆ ವಿವಿದೆಡೆ ವಿದ್ಯುತ್ ಕಡಿತ
-
Special20 hours agoಮಹಿಳೆಯರಿಗೆ ದೊಡ್ಡ ಅವಕಾಶ! ಅಂಗನವಾಡಿಯ 571 ಹುದ್ದೆಗಳಿಗೆ ಅರ್ಜಿ ಅಹ್ವಾನ.
-
Hassan23 hours agoHKS PUC ಕಾಲೇಜಿನಲ್ಲಿ ಜರುಗಿದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ಸಮಾರೋಪ ಸಮಾರಂಭ
-
Hassan56 minutes agoಜಿಲ್ಲಾ ಮಟ್ಟದ ಅಂತರಶಾಲಾ ಚೆಸ್ ಸ್ಪರ್ಧೆ ಯಶಸ್ವಿ
-
Kodagu2 hours agoಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆ : ಗಾಯತ್ರಿ ನರಸಿಂಹ
-
Mysore7 hours agoಡಾ.ಬಿ.ಆರ್. ಅಂಬೇಡ್ಕರ್ 69ನೇ ಮಹಾ ಪರಿನಿಬ್ಬಾಣ ದಿನ: ಸೇವಾ ಕಾರ್ಯದೊಂದಿಗೆ ಗೌರವ ನಮನ
-
Kodagu36 minutes agoಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರಿಗೆ ವಿಮೆ ಸೌಲಭ್ಯ
