Connect with us

Crime

ಹಣಕಾಸು ಸಂಸ್ಥೆಯಿಂದ ಗ್ರಾಹಕರಿಗೆ ಮೋಸ

Published

on

ಕುಶಾಲನಗರ : ಜಿಲ್ಲೆಯ ಗೋಣಿಕೊಪ್ಪ, ವಿರಾಜಪೇಟೆ ಮತ್ತು ಕುಶಾಲನಗರದಲ್ಲಿ ಮಲಬಾರ್ ಮಲ್ಟಿಸ್ಟೇಟ್ ಆಗ್ರೋ ಕೋ ಅಪರೇಟಿವ್ ಸೊಸೈಟಿ ಲಿಮಿಟೆಡ್ ಹೆಸರಿನಲ್ಲಿ ಕಛೇರಿ ತೆರೆದು ಸುತ್ತಮುತ್ತಲಿನ ಹಲವು ಗ್ರಾಹಕರಿಂದ ಪಿಗ್ಗಿ ಕಲೆಕ್ಷನ್, ಆರ್.ಡಿ. ಹಾಗೂ ಬಾಂಡ್ ಮುಖಾಂತರ ಹಣವನ್ನು ಹೂಡಿಕೆ ಮಾಡಿಸಿಕೊಂಡು ಹಣ ಹಿಂತಿರುಗಿಸದೆ ಕಛೇರಿಯನ್ನು ಮುಚ್ಚಿ ಸಾರ್ವಜನಿಕರಿಗೆ ವಂಚನೆ ಮಾಡಿ ತಲೆಮರೆಸಿಕೊಂಡಿರುವ ಕುರಿತು ಗೋಣಿಕೊಪ್ಪ, ವಿರಾಜಪೇಟೆ ನಗರ ಹಾಗೂ ಕುಶಾಲನಗರ ಟೌನ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣವನ್ನು ದಾಖಲಿಸಲಾಗಿರುತ್ತದೆ.
ಆದ್ದರಿಂದ ಸಾರ್ವಜನಿಕರು ಮಲಬಾರ್ ಮಲ್ಟಿಸ್ಟೇಟ್ ಆಗ್ರೋ ಕೋ ಅಪರೇಟಿವ್ ಸೊಸೈಟಿ ಲಿಮಿಟೆಡ್‌ನಲ್ಲಿ ಹಣವನ್ನು ಹೂಡಿಕೆ ಮಾಡಿ ವಂಚನೆಗೆ ಒಳಗಾಗಿದ್ದಲ್ಲಿ ದಾಖಲಾತಿಗಳೊಂದಿಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಕೋರಲಾಗಿದೆ.


ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ದಂಡಿನಪೇಟೆಯಲ್ಲಿರುವ “ಮಲಬಾರ್ ಮಲ್ಟಿಸ್ಟೇಟ್ ಆಗೋ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್” ಯಲ್ಲಿ ಬೈಲುಕುಪ್ಪೆ ನಿವಾಸಿ ಚಂದ್ರಹಾಸ ಕೆ.ಟಿ (52) ಸದರಿ ಸೂಸೈಟಿಯಲ್ಲಿ ಪಿಗ್ಗಿ ಕಟ್ಟಲು ಪ್ರಾರಂಭಿಸಿ 2024ನೇ ಸಾಲಿನ ಫೆಬ್ರವರಿ ತಿಂಗಳ ವರೆಗೆ ರೂ. 99,500 ಗಳ ಹಣವನ್ನು ಪಿಗ್ಗಿ ಕಟ್ಟಿದ್ದು, ಸದರಿ ಹಣವನ್ನು ಹಣ ಹಿಂತಿರುಗಿಸದೆ ಮಾರ್ಚ್-2024 ನೇ ತಿಂಗಳಿನಿಂದ ಕಛೇರಿಯನ್ನು ಮುಚ್ಚಿರುತ್ತಾರೆ. ಮಲಬಾರ್ ಮಲ್ಟಿ ಸ್ಟೇಟ್ ಆಗೋ ಕೋ-ಅಪರೇಟಿವ್ ಸೊಸೈಟಿ ಲಿಮಿಟೆಡ್‌ ಮುಖ್ಯಸ್ಥರಾದ ರಾಹುಲ್ ಚಕ್ರಪಾಣಿ ಹಾಗೂ ಸಿಇಓ ಆದ ಸನ್ನಿ ಅಬ್ರಹಾಂ & ಇತರರು ಸೇರಿ ವಂಚನೆ ಮಾಡಿರುವ ಕುರಿತು ದೂರು ಸ್ವೀಕರಿಸಿದ್ದು, ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಕಲಂ: 406 420 3/2 34 2.2. 2 : 21. 22. 23 Banning of Unregulated Deposit Scheems Act- 2019 (BUDS Act) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ.

Continue Reading

Crime

ವಿಚಾರಣೆಗೆ ಹಾಜರಾದ ಐಕಾನ್‌ ಸ್ಟಾರ್‌ ಅಲ್ಲು ಅರ್ಜುನ್‌: ಯಾಕೆ ಗೊತ್ತಾ?

Published

on

ಹೈದರಾಬಾದ್: ಜಾಮೀನಿನ ಷರತ್ತಿನಂತೆ ಭಾನುವಾರ ಚಿತ್ರನಟ ಅಲ್ಲು ಅರ್ಜುನ್ ಅವರು ಪೊಲೀಸರ ಮುಂದೆ ಹಾಜರಾಗಿದ್ದರು.

ಪುಷ್ಪ 2 ಚಿತ್ರ ರಿಲೀಸ್‌ ಆದ ದಿನ ಚಿತ್ರಮಂದಿರದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಅಲ್ಲು ಅವರು ಹೈದರಾಬಾದ್‍ನ ಪೊಲೀಸರ ಮುಂದೆ ಜಾಮೀನು ವಿಚಾರವಾಗಿ ಹಾಜರಾಗಿದ್ದಾರೆ.

ಪ್ರಕರಣದಲ್ಲಿ ಬಂಧಿತರಾಗಿದ್ದ ಅಲ್ಲು ಅವರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಆ ಸಂದರ್ಭದಲ್ಲಿ ನ್ಯಾಯಾಲಯ ಪ್ರತಿ ಭಾನುವಾರ ಆರೋಪಿ ಪೊಲೀಸರ ಮುಂದೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು. ಇದರ ಜೊತೆಗೆ ಅಲ್ಲು ಅರ್ಜುನ್ ತಮ ವಿಳಾಸ ಬದಲಿಸಬಾರದು ಎಂದು ಸೂಚನೆ ನೀಡಿತ್ತು. ನ್ಯಾಯಾಲಯದ ಆದೇಶದ ಪ್ರಕಾರ ಇಂದು ಅಲ್ಲು ಅರ್ಜುನ್ ಪೊಲೀಸರ ಮುಂದೆ ಹಾಜರಾಗಿ ಸಹಿ ಹಾಕಿದ್ದಾರೆ.

ಡಿಸೆಂಬರ್ 4 ರಂದು ಹೈದರಾಬಾದ್‍ನ ಸಂಧ್ಯಾ ಥಿಯೇಟರ್‍ನಲ್ಲಿ ಪುಷ್ಪ 2 ಪ್ರೀಮಿಯರ್‍ನಲ್ಲಿ ನಟನನ್ನು ನೋಡಲು ಅಭಿಮಾನಿಗಳು ಜಮಾಯಿಸಿದಾಗ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಯಿತು. 35 ವರ್ಷದ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದು, ಅವರ ಎಂಟು ವರ್ಷದ ಮಗ ತೀವ್ರವಾಗಿ ಗಾಯಗೊಂಡಿದ್ದಾನೆ.

ದುರಂತದ ನಂತರ ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಥಿಯೇಟರ್ ಆಡಳಿತದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು. ಮೃತ ಮಹಿಳೆಯ ಕುಟುಂಬದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‍ಎಸ್) ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 13 ರಂದು ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಆದಾಗ್ಯೂ, ತೆಲಂಗಾಣ ಹೈಕೋರ್ಟ್ ಡಿಸೆಂಬರ್ 14 ರಂದು ಅವರಿಗೆ ಮಧ್ಯಂತರ ಜಾಮೀನು ನೀಡಿತು, ಅಲ್ಲು ಅರ್ಜುನ್‌ಗೆ ನೀಡಿರುವ ಜಾಮೀನು ಅವಧಿ ಜನವರಿ 10 ರಂದು ಮುಗಿಯಲಿದೆ.

Continue Reading

Crime

ಜೆಡಿಎಸ್‌ ಮುಖಂಡನ ಬರ್ಬರ ಹ*ತ್ಯೆ: ಕೊ*ಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು

Published

on

ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಜೆಡಿಎಸ್ ಮುಖಂಡನನ್ನ ಮುಗಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತಮ್ಮನಾಯಕಹಳ್ಳಿಯ ಗೇಟ್ ಬಳಿ ನಡೆದಿದೆ.

ಜೆಡಿಎಸ್ ಪಕ್ಷದ ಮುಖಂಡ ವೆಂಕಟೇಶ್ (52) ಪ್ರಾಣ ಬಿಟ್ಟವರು. ತಮ್ಮನಾಯಕನಹಳ್ಳಿ ಗೇಟ್​ನಿಂದ ವೆಂಕಟೇಶ್​ ತನ್ನ ಸ್ವಗ್ರಾಮ ತಮ್ಮನಾಯಕನಹಳ್ಳಿ ನಿವಾಸಕ್ಕೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಬಂದು ಅಡ್ಡಗಟ್ಟಿ ಕೂಡಲೇ ಮಚ್ಚು ಲಾಂಗುಗಳಿಂದ ಮನಸೋ ಇಚ್ಚೆ ದಾಳಿ ಮಾಡಿದ್ದಾರೆ. ಅಲ್ಲದೇ ಕೈಗೆ ಲಾಂಗ್​ಗಳಿಂದ ಹೊಡೆದಿದ್ದರಿಂದ ಕಟ್ ಆಗಿದೆ. ವೆಂಕಟೇಶ್​ ಮೇಲೆ ಭೀಕರವಾಗಿ ದಾಳಿ ಮಾಡಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ರಸ್ತೆಯಲ್ಲೇ ರಕ್ತದ ಮಡುವಿನಲ್ಲೇ ಬಿದ್ದ ವೆಂಕಟೇಶ್ ಪ್ರಾಣ ಬಿಟ್ಟಿದ್ದಾರೆ. ಇನ್ನು ಈ ಘಟನೆ ಏಕೆ ನಡೆದಿದೆ, ಯಾರು ಮಾಡಿದ್ದಾರೆ, ದಾಳಿ ಮಾಡಿದವರು ಯಾರು ಎಂಬುವ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಎಸ್​ಪಿ ಕುಶಲ್ ಚೌಕ್ಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ಶ್ವಾನದಳದ ಸಿಬ್ಬಂದಿ ಹಾಗೂ ಬೆರಳಚ್ಚು ತಜ್ಞರು ಆಗಮಿಸಿದ್ದು ಸ್ಥಳದಲ್ಲಿ ಎಲ್ಲ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಇತ್ತ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ವೆಂಕಟೇಶ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Continue Reading

Crime

ಲೋಕಾಯುಕ್ತ ಎಂದು ಪುರಸಭೆ ರೆವಿನ್ಯೂ ಆಫೀಸರನ್ನೇ ವಂಚಿಸಲು ಹೋದ ಖದೀಮ ಅಂದರ್

Published

on

ಉಳ್ಳಾಲ: ಲೋಕಾಯುಕ್ತ ಎಂದು ಸೋಮೇಶ್ವರ ಪುರಸಭೆ ರೆವಿನ್ಯೂ ಆಫೀಸರನ್ನೇ ವಂಚಿಸಲು ಹೋದ ಖದೀಮನೋರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ರಾಜ್ಯದ ಸತ್ಯಸಾಯಿ ಜಿಲ್ಲೆಯ ಕದಿರಿ ತಾಲೂಕಿನ ಓ.ಡಿ.ಸಿ ಮಂಡಲ್, ವೆಂಕಟಾಪುರಂ ಪಂಚಾಯತ್, ನಲ್ಲಗುಟ್ಲಪಲ್ಲಿ ಗ್ರಾಮದ ನಿವಾಸಿ
ಧನಂಜಯ ರೆಡ್ಡಿ ತೋಟ ಬಂಧಿತ ಆರೋಪಿ.

2024ರ ಎಪ್ರಿಲ್ 6ರಂದು ಸೋಮೇಶ್ವರ ಪುರಸಭೆ ರೆವಿನ್ಯೂ ಆಫೀಸರ್ ಪುರುಷೋತ್ತಮ ಅವರ ಮೊಬೈಲ್‌ಗೆ ಅಪರಿಚಿತನಿಂದ ವಾಟ್ಸ್ಆ್ಯಪ್ ಕರೆ ಬಂದಿದೆ. ಅತ್ತಕಡೆಯಿಂದ ಮಾತನಾಡಿದ ಅಪರಿಚಿತ ‘ತಾನು ಲೋಕಾಯುಕ್ತದಿಂದ ಮಾತನಾಡುತ್ತಿದ್ದೇನೆ‌. ತಮ್ಮ ಮೇಲೆ ಆರೋಪ ಬಂದಿದೆ. ನಮ್ಮ ಟೆಕ್ನಿಕಲ್ ಆಫೀಸರ್ ನಿಮ್ಮ ಆಫೀಸಿಗೆ ಬರುವ ಮೊದಲು ಅದನ್ನು ಸರಿ ಮಾಡುವುದಾದರೆ ಮಾಡುವ’ ಎಂದು, ‘ಹಣ ನೀಡುವಂತೆ’ ತಿಳಿಸಿದ್ದಾನೆ. ‘ಇಲ್ಲವಾದಲ್ಲಿ ತೊಂದರೆ ಮಾಡುವುದಾಗಿ’ ಬೆದರಿಕೆ ಹಾಕಿದ್ದಾನೆ.

ಆತ ಕರೆ ಮಾಡಿರುವ ಮೊಬೈಲ್ ಸಂಖ್ಯೆಯನ್ನು ಟ್ರೂಕಾಲರ್‌ನಲ್ಲಿ ಪರೀಶೀಲಿಸಿದಾಗ ಡಿ.ಪ್ರಭಾಕರ ಲೋಕಾಯುಕ್ತ ಪಿ.ಐ ಎಂದು ಬಂದಿದೆ. ಈ ಬಗ್ಗೆ ಪುರುಷೋತ್ತಮ ಅವರು ಕರ್ನಾಟಕ ಲೋಕಾಯುಕ್ತ ಮಂಗಳೂರು ಇಲ್ಲಿನ ಅಧಿಕಾರಿಗಳಲ್ಲಿ ಕರೆ ಮಾಡಿ ವಿಚಾರಿಸಿದ್ದಾರೆ. ಆಗ ಅಂತಹ ಹೆಸರಿನ ಯಾವುದೇ ಅಧಿಕಾರಿ/ಸಿಬ್ಬಂದಿ ಇರುವುದಿಲ್ಲವಾಗಿ ತಿಳಿದು ಬಂದಿದೆ. ಅಲ್ಲದೆ ಪುರುಷೋತ್ತಮ ಅವರ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಕಿ ಲಿಲ್ಲಿ ನಾಯರ್ ಹಾಗೂ ಹಿರಿಯ ಆರೋಗ್ಯ ನಿರೀಕ್ಷಕ ಕೃಷ್ಣ ಆರ್. ಅವರಿಗೂ ಇದೇ ರೀತಿ ಬೆದರಿಕೆ ಒಡ್ಡಿದ್ದಾನೆ. ಆದ್ದರಿಂದ ಕರೆ ಮಾಡಿರುವ ಅಪರಿಚಿತ ಮೋಸದಿಂದ ಹಣ ಮಾಡುವ ಉದ್ದೇಶದಿಂದ ಕರ್ನಾಟಕ ಲೋಕಾಯುಕ್ತ ಎಂದು ನಟಿಸಿದ್ದಾನೆ ಎಂದು ದೂರು ದಾಖಲಿಸಲಾಗಿತ್ತು‌. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿತನು ಇದೇ ರೀತಿಯ ಕೃತ್ಯ ಎಸಗಿದ ಬಗ್ಗೆ ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪೊಲೀಸ್ ಠಾಣೆ ಹಾಗೂ ಹೈದರಾಬಾದ್‌ನ ಶಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ ತಿಳಿದು ಬಂದಿರುತ್ತದೆ.

Continue Reading

Trending

error: Content is protected !!