Chikmagalur
ಜಿಲ್ಲೆಯಾದ್ಯಂತ ಹರ್ ಘರ್ ತಿರಂಗಾ ಅಭಿಯಾನ
ಚಿಕ್ಕಮಗಳೂರು: ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ಸಂಭ್ರಮವನ್ನು ವೈವಿದ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರುಅವರು ಸೋಮವಾರ ಈ ಬಗ್ಗೆ ಹೇಳಿಕೆ ನೀಡಿರುವ ಅವರು ಈ ಸಂಭ್ರಮದ ಒಂದು ಭಾಗವಾಗಿ ಹರ್ ಘರ್ ತಿರಂಗಾ, ಎಂಬ ಘೋಷ ವಾಕ್ಯದೊಂದಿಗೆ ೨೦೨೪ ರ ಆ.೧೩ ರಿಂದ ೧೫ರ ವರೆಗೆ ದೇಶದ ಪ್ರತಿ ಮನೆ ಮನೆಯಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶ ಭಕ್ತಿ ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಿಗೊಳಿಸಿ ದಾಖಲಿಸುವಂತೆ ಕರೆ ನೀಡಿ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಶಾಲಾ ಕಾಲೇಜುಗಳಲ್ಲಿ ಹರ್ ಘರ್ ತಿರಂಗಾ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಪ್ರಬಂಧ, ಚಿತ್ರಕಲಾ ಶಿಬಿರ, ರಸಪ್ರಶ್ನೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕ ಸಹಕಾರದಿಂದ ಆಗಸ್ಟ್ ೧೩ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ನಗರದ ಕೋಟೆ ಬಡಾವಣೆಯಲ್ಲಿರುವ ಐತಿಹಾಸಿಕ ಸುಗ್ಗಿ ಕಲ್ಲಿನಿಂದ ಜಿಲ್ಲಾಧಿಕಾರಿಗಳ ಕಛೇರಿಯ ನೆನಪಿಂಗಳದವರೆಗೆ ವಾಕಥಾನ್ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಎಲ್ಲಾ ಕಛೇರಿಗಳ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವರು ಎಂದರು.
ಆಗಸ್ಟ್ ೧೪ರಂದು ಬೆಳಿಗ್ಗೆ ೧೦.೦೦ ಗಂಟೆಗೆ ನಗರದ ಕೆ ಎಂ. ರಸ್ತೆಯ ದಂಟರಮಕ್ಕಿಯಿಂದ ಐಡಿಎಸ್‌ಜಿ ಕಾಲೇಜಿನವರೆಗೆ ಐಡಿಎಸ್‌ಜಿ ಕಾಲೇಜಿನ ವಿದ್ಯಾರ್ಥಿಗಳಿಂದ, ಎಐಟಿ ಸರ್ಕಲ್‌ನಿಂದ ಎಐಟಿ ಕಾಲೇಜಿನ ವರೆಗೆ ಎಐಟಿ ಕಾಲೇಜಿನ ವಿದ್ಯಾರ್ಥಿಗಳಿಂದ ತಿರಂಗಾ ಯಾತ್ರೆ ಏರ್ಪಡಿಸಲಾಗುವುದು.
ರಿವರ್, ರ್‍ಯಾಪ್ಪಿಂಗ್‌ನ್ನು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರವಾಸೋದ್ಯಮ ಇಲಾಖೆ ಮೂಲಕ ನಡೆಸಲಾಗುವುದು ಎಂದು ನುಡಿದರು.
ಸಾರ್ವಜನಿಕರು ಈ ತಿರಂಗಾ ಅಭಿಯಾನದಲ್ಲಿ ಕೈ ಜೋಡಿಸಿ ತಮ್ಮ ತಮ್ಮ ಮನೆಗಳ ಮೇಲೆ ತಿರಂಗಾ ಧ್ವಜ ಹಾರಿಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು
Chikmagalur
ಜನತೆಯ ಅನುಕೂಲತೆಗೆ ಕೇಂದ್ರ ಯೋಜನೆ ಉಪಯುಕ್ತ: ಪ್ರಾಣೇಶ್
ಚಿಕ್ಕಮಗಳೂರು: ದೇಶದ ಜನಸಾಮಾನ್ಯರ ಅನುಕೂಲತೆಗಾಗಿ ಕೇಂದ್ರ ಸರ್ಕಾರ ಜಾರಿ ಗೊಳಿಸಿರುವ ಸಬ್ಸಿಡಿ ಸಹಿತದ ಸೋಲಾರ್ ಸಿಸ್ಟಂ ಯೋಜನೆ ಪ್ರತಿ ಕುಟುಂಬದ ವಿದ್ಯುತ್ ಶುಲ್ಕ ಕಡಿಮೆಗೊ ಳಿಸಿ ಆರ್ಥಿಕ ಹೊರೆ ಸುಧಾರಿಸಲು ಮಹತ್ತರ ಹೆಜ್ಜೆಯಿಟ್ಟಿದೆ ಎಂದು ವಿಧಾನ ಪರಿಷತ್ ಉಪಸಭಾಪತಿ ಎಂ. ಕೆ.ಪ್ರಾಣೇಶ್ ಹೇಳಿದರು.
ತಾಲ್ಲೂಕಿನ ಅಲ್ಲಂಪುರ ಸಮೀಪ ಖಾಸಗೀ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ಧ ರೂಫ್‌ಟಾಪ್ ಸೋ ಲಾರ್ ಮತ್ತು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕುರಿತಾದ ಕಾರ್ಯಾಗಾ ರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಮೋದಿ ಸರ್ಕಾರದ ಯೋಜನೆ, ಯೋಚನೆಗಳು ಜನಸಾಮಾನ್ಯರ ಏಳಿಗೆಗೆ ಪೂರಕವಾಗಿದೆ. ಅತಿ ಹೆಚ್ಚು ತಾಪಮಾನ ಹೊಂದಿರುವ ದಕ್ಷಿಣ ಕನ್ನಡದಲ್ಲಿ ಅಳವಡಿಸಿ ಯಶಸ್ವಿಗೊಂಡಿರುವ ಪಿಎಂ ಸೂರ್ಯ ಮನೆಗೆ ವಿದ್ಯುತ್ ಯೋಜನೆ ಅತ್ಯಂತ ಹೆಚ್ಚು ಪ್ರಚಲಿತದಲ್ಲಿದ್ದು ಇದೀಗ ಮಲೆನಾಡು ಭಾಗಕ್ಕೆ ಬಂದಿರುವುದು ಹೆಮ್ಮೆಯ ಸಂಗತಿ ಎಂದರು.
ಜಿಲ್ಲೆಯ ಮಲೆನಾಡು ಹಾಗೂ ಬಯಲುಸೀಮೆ ಪ್ರದೇಶದಲ್ಲಿ ಸೋಲಾರ್ ಸಿಸ್ಟಂ ಅಳವಡಿಸಿಕೊಂಡಲ್ಲಿ ವಿದ್ಯುತ್ ಶುಲ್ಕವನ್ನು ಕಡಿಮೆಗೊಳಿಸಿ, ಸಾಕಷ್ಟು ಹಣವನ್ನು ಉಳಿತಾಯ ಮಾಡಬಹುದು. ಆ ನಿಟ್ಟಿನಲ್ಲಿಜನತೆ ಯೋಜನೆಯಿಂದ ವಂಚಿತರಾಗಬಾರದೆಂಬ ದೃಷ್ಟಿಯಿಂದ ದೇಶಾದ್ಯಂತ ಜಾರಿಗೊಳಿಸಿ ದೊಡ್ಡ ಕ್ರಾಂತಿಕಾರಿ ಕೇಂದ್ರ ಸರ್ಕಾರ ಮೂಡಿಸುತ್ತಿದೆ ಎಂದರು.
ಎನರ್ಜಿ ಸೋಲಾರ್ ಸಂಸ್ಥೆ ನಿರ್ದೇಶಕ ಸೂರಜ್‌ಶೆಟ್ಟಿ ಮಾತನಾಡಿ ಕೇಂದ್ರದ ಯೋಜನೆಯಲ್ಲಿ ೧೦೦ ಯುನಿಟ್‌ಗೆ ೩೦ ಸಾವಿರ, ೨೦೦ ಯುನಿಟ್ ಬಳಕೆಗೆ ೬೦ ಸಾವಿರ ಹಾಗೂ ೩೦೦ ಯುನಿಟ್ ಬಳಕೆದಾರರಿಗೆ ೭೮ ಸಾವಿರ ಸಬ್ಸಿಡಿ ಹಣವು ಯಾವುದೇ ಏಜೆಂಟರಿಲ್ಲದ ನೇರವಾಗಿ ತಿಂಗಳಾಂತ್ಯದೊಳಗೆ ಗ್ರಾಹಕರ ಖಾತೆಗೆ ಜಮಾವಣೆಗೊಳ್ಳಲಿದೆ ಎಂದು ತಿಳಿಸಿದರು.
ಸೋಲಾರ್ ಸಿಸ್ಟಂನಲ್ಲಿ ಭಾರತ ಸರ್ಕಾರ ಅತ್ಯಂತ ದೊಡ್ಡ ಹೆಜ್ಜೆಯಿಟ್ಟು ಮೊದಲ ಸ್ಥಾನದಲ್ಲಿದೆ. ಅಭಿ ವೃದ್ದಿಗೊಂಡ ದೇಶದ ಬದಲಾಗಿ, ಬಡತನ ರೇಖೆಯಲ್ಲಿರುವ ದೇಶಗಳೊಂದಿಗೆ ಸೋಲಾರ್ ಎನರ್ಜಿ ಉ ತ್ಪಾದಿಸಲು ಜೊತೆಗೂಡಿ ಕಾರ್ಯನಿರ್ವಹಿಸುತ್ತಿದೆ. ೨೦೧೪ರಲ್ಲಿ ಪ್ರಾರಂಭಗೊಂಡ ಈ ಯೋಜನೆ ಪ್ರಸಕ್ತ ಸಾ ಲಿನಲ್ಲಿ ದೊಡ್ಡಮಟ್ಟಿನಲ್ಲಿ ಬೆಳವಣಿಗೆ ಹೊಂದುತ್ತಿದೆ ಎಂದರು.
ಕೆಲವರು ಕರಾವಳಿ ಪ್ರದೇಶ ಹೆಚ್ಚು ಉಷ್ಣಾಂಶ ಕೂಡಿರುವ ಕಾರಣ ಎನರ್ಜಿ ಸೋಲಾರ್ ಉಪಯು ಕ್ತ. ಆದರೆ ಮಲೆನಾಡಿನಲ್ಲಿ ಸಾಧ್ಯವಿಲ್ಲ ಎಂಬ ಅನುಮಾನವಿದೆ. ಈ ಸೋಲಾರ್‌ನ ವಿಶೆಷ್ಟವೆಂದರೆ ಕಡಿಮೆ ಬೆಳಕಿನಲ್ಲಿ ಹೆಚ್ಚು ಕೆಲಸ ನಿರ್ವಹಿಸುವ ಸಾಮರ್ಥ್ಯ ಹೊಂದಿರುವ ಕಾರಣ ಮಲೆನಾಡಿನ ಅನೇಕ ಭಾಗಗಳಲ್ಲಿ ಅಳವಡಿಸಿಕೊಂಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ, ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಕನ್ನಾಯಿಲಾಲ್ ಗೋಪಾಲಿ, ಸಿವಿಲ್ ಇಂಜಿನಿಯರ್ ಅಧ್ಯಕ್ಷ ಜಿ.ರಮೇಶ್, ರಾಜ್ಯ ಎಲೆಕ್ಟ್ರೀಕಲ್ ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಹರೀಶ್, ಸಾಮಿಲ್ ಮಾಲೀಕರ ಸಂಘದ ಅಧ್ಯಕ್ಷ ಸುರೇಂದ್ರ ಶೆಟ್ಟಿ, ಹೋಂಸ್ಟ್ರೇ ಅಸೋಸಿಯೇಷನ್ ಅಧ್ಯಕ್ಷ ಎನ್.ಆರ್.ತೇಜಸ್ವಿ, ಬಾರ್ & ರೆಸ್ಟೋರೆಂಟ್ ಅಸೋಸಿಯೇಷನ್ ಅಧ್ಯಕ್ಷ ಜಯಂತ್‌ಪೈ, ಹೆಚ್‌ಇಎಫ್ ಅಧ್ಯಕ್ಷ ಹೆಚ್.ಪಿ.ಲಕ್ಷ್ಮೀಶ ಉಪಸ್ಥಿತರಿದ್ದರು. ಸೀತರಾಮಭರಣ್ಯ ನಿರೂಪಿಸಿದ ರು. ಸುಮಂತ್ ಸ್ವಾಗತಿಸಿದರು. ಪ್ರದೀಪ್ ವಂದಿಸಿದರು.
Chikmagalur
ತೊಟ್ಟಿಲು ತೂಗುವ ಕೈಗಳು ದೇಶವನ್ನು ರಕ್ಷಿಸಬಹುದು: ಚಂದ್ರಶೇಖರ್ ಮುರೊಳ್ಳಿ
ವರದಿ: ಎಂ.ಪಿ.ಪ್ರದೀಪ್ ಹೆಬ್ಬಾರ್, ಜಯಪುರ
ಜಯಪುರ: ಸುಂದರವಾದ ಕಾರ್ಯಕ್ರಮ ನಡೆಸಲು ಕಲಾವಿದರು, ಕಲಾಭಿಮಾನಿಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯವಶ್ಯಕ. ಇವರೆಲ್ಲರ ಸಹಕಾರದಿಂದ ಉತ್ತಮ ಕಾರ್ಯಕ್ರಮಗಳನ್ನು ಮಾಡುತ್ತೇವೆ. ಇದಕ್ಕೆ ಯಾವ ಮೇಲಿನವರ ಒಪ್ಪಿಗೆ ಹಾಗೂ ಮುಲಾಜು ಅವಶ್ಯಕತೆ ಇರುವುದಿಲ್ಲ ಎಂದು ಮೇಗುಂದ ಹೋಬಳಿ ಘಟಕ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಮುರೊಳ್ಳಿ ಹೇಳಿದರು.
ಕನ್ನಡ ಜಾನಪದ ಸಾಹಿತ್ಯ ಪರಿಷತ್ ಮಹಿಳಾ ಘಟಕ ಹಾಗೂ ಕನ್ನಡ ಜಾನಪದ ಸಾಹಿತ್ಯ ಪರಿಷತ್ ಮೇಗುಂದ ಹೋಬಳಿ ಘಟಕದ ವತಿಯಿಂದ ಆಯೋಜಿಸಲಾದ ಸಂಕ್ರಾಂತಿ ಜಾನಪದ ಸುಗ್ಗಿ ಸಂಭ್ರಮ ಕಾರ್ಯಕ್ರಮವು ಶುಕ್ರವಾರ ಮೇಗೂರು ಗಿರಿಜನ ಆಶ್ರಮ ಶಾಲೆಯಲ್ಲಿ ನಡೆದಿದ್ದು, ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ ಸರ್ಕಾರಿ ಶಾಲೆಯಲ್ಲಿ ಒಳ್ಳೆಯ ಶಿಕ್ಷಣ ನೀಡುತ್ತಾರೆ, ಎಲ್ಲರೂ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಎಂದು ಹೇಳಿದರು.
ಕೊಪ್ಪ ತಾಲೂಕು ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಶ್ರೀನಿಧಿ ದಿನೇಶ್ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡುತ್ತಾ ತೊಟ್ಟಿಲು ತೂಗುವ ಕೈಗಳು ದೇಶವನ್ನು ರಕ್ಷಿಸಬಹುದು, ಆದ್ದರಿಂದ ಮಹಿಳೆಯರು ಮನಸು ಮಾಡಿದರೆ ದೇಶವನ್ನೇ ಮುನ್ನಡೆಸಬಹುದು ಎಂದರು.
ಮೇಗುಂದ ಹೋಬಳಿ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಅನ್ನಪೂರ್ಣ ರತ್ನಾಕರ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಜಾನಪದದ ಅರಿವು ಮೂಡಿಸುವ ಉದ್ದೇಶ ಈ ಕಾರ್ಯಕ್ರಮವಾಗಿದೆ. ಜಾನಪದ ಎನ್ನುವುದು ಕಲೆಯಲ್ಲ, ನಮ್ಮ ಸಂಸ್ಕೃತಿ. ನಾವು ದಿನನಿತ್ಯ ಹಾಕುವ ರಂಗೋಲಿಯಿಂದ ಹಿಡಿದು ದೇವರ ಪೂಜೆ ಎಲ್ಲವೂ ಜಾನಪದ ಸಂಸ್ಕೃತಿಯಾಗಿದೆ. ಸರ್ಕಾರಿ ಶಾಲೆಯ ಶಿಕ್ಷಕರು ಯಾವುದೇ ಭೇದಭಾವವಿಲ್ಲದೆ ಎಲ್ಲ ಮಕ್ಕಳನ್ನು ಒಂದೇ ರೀತಿ ನೋಡಿಕೊಳ್ಳುತ್ತಾರೆ. ಸರ್ಕಾರಿ ಶಾಲೆಯಲ್ಲಿ ನುರಿತ ಶಿಕ್ಷಕರು ಇರುವುದರಿಂದ, ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂದರು.
ಮೇಗುಂದ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯದರ್ಶಿ ಶಾಂತಕುಮಾರ್ ಜೈನ್ ಮಾತನಾಡಿ ಶಿಲೆ ಹೆಚ್ಚು ಪೆಟ್ಟು ತಿಂದರೆ ದೇವರ ವಿಗ್ರಹವಾಗುತ್ತದೆ, ಕಮ್ಮಿ ಪೆಟ್ಟು ತಿಂದ ಶಿಲೆಯು ಮೆಟ್ಟಿಲಾಗುತ್ತದೆ. ಜೀವನದಲ್ಲಿ ಹೆಚ್ಚು ಕಷ್ಟ ಪಟ್ಟವರು, ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಗಳಾಗಿದ್ದಾರೆ. ಶಿಕ್ಷಕ ಹಾಗೂ ಆರಕ್ಷಕ ಸಮಾಜ ರಕ್ಷಣೆಯನ್ನು ಮಾಡುತ್ತಾರೆ. ಶಿಕ್ಷಕ ಶಿಕ್ಷಣ ನೀಡಿ ಉತ್ತಮ ಪ್ರಜೆಯನ್ನಾಗಿ ಮಾಡಿದರೆ, ತಪ್ಪು ಮಾಡಿದವರಿಗೆ ಶಿಕ್ಷೆ ನೀಡಿ ಆರಕ್ಷಕರು ಉತ್ತಮ ಪ್ರಜೆಗಳನ್ನು ಸೃಷ್ಟಿಸುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಜನಮಿತ್ರ ವರದಿಗಾರರಾದ ಪ್ರದೀಪ್ ಹೆಬ್ಬಾರ್, ಈದಿನ.com ನಾ ಗಿರಿಜಾ, ಸೆಕ್ಸ್ ಫೋನ್ ವಾಜಕರಾದ ಆಶಿಶ್ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು. ಬೈರೇದೇವರು,ಅತ್ತಿಕುಳಿ, ಮೇಗೂರು, ಶಾಂತಿಗ್ರಾಮ ಶಾಲೆಯ ಮುಖ್ಯೋಪಾಧ್ಯಾಯರನ್ನು ಅಭಿನಂದಿಸಲಾಯಿತು.
ಗುಡ್ಡೆತೋಟ ಗ್ರಾಮ ಪಂಚಾಯಿತಿ ಸದಸ್ಯ ಯಡಗುಂದ ವಾಸು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೃಪಾಲ ಅರೆಹಳ್ಳ, ಭಾಗ್ಯ ಚಂದ್ರಶೇಖರ್, ರೇವಣ್ಣ, ಮಹೇಶ್, ಪುಷ್ಪ ಇದ್ದರು.
Chikmagalur
ಸಮಾಜದಲ್ಲಿ ಹೆಣ್ಣಿನ ಸ್ಥಿತಿಗತಿ ಸುಧಾರಿಸಬೇಕು: ವಿ. ಹನುಮಂತಪ್ಪ
ಚಿಕ್ಕಮಗಳೂರು: ಹೆಣ್ಣು ಸಮಾಜದ ಕಣ್ಣಾಗಿ ಎಲ್ಲಾ ಕ್ಷೇತ್ರದಲ್ಲೂ ಮುಖ್ಯ ವಾಹಿನಿಯಲ್ಲಿರುವುದು ದೊಡ್ಡ ಹೆಮ್ಮೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಂತ ಜೋಸೆಫರ ಬಾಲಕಿಯರ ಪ್ರೌಢಶಾಲೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಸಂತ ಜೋಸೆಫರ ಬಾಲಕಿಯರ ಪ್ರೌಢಶಾಲೆಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣು ಸಮಾಜದ ಕಣ್ಣು, ಬದುಕಿನ ಎಲ್ಲಾ ಸವಾಲು ಎದುರಿಸುವ ಗಟ್ಟಿತನ ಆಕೆಯಲ್ಲಿದೆ. ಸಮಾಜದಲ್ಲಿ ಮಹಿಳೆಯರ ಸ್ಥಿತಿಗತಿ ಸುಧಾರಣೆಗೆ ದಿಟ್ಟ ಹೆಜ್ಜೆ ಇಡಬೇಕು. ಎಲ್ಲಾ ಕಷ್ಟದ ದಿನಗಳನ್ನು ಎದುರಿಸಿ ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಛಾಪು ಮೂಡಿಸುವ ಮಹಿಳೆಯರ ಸ್ಥೈರ್ಯದ ವಿವರಣೆಗೆ ಬೇರೆ ಪದಗಳು ಬೇಕಿಲ್ಲ. ಮಗಳಾಗಿ, ಪತ್ನಿಯಾಗಿ, ತಾಯಿಯಾಗಿ, ಸ್ನೇಹಿತೆಯಾಗಿ ಎಲ್ಲಾ ಸಂಬಂಧಗಳನ್ನು ತುಂಬುವ ಮಹಿಳೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಒಂದು ದಿನ ಮೀಸಲಿರಿಸಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳು, ಮಹಿಳೆಯರ ಮೇಲೆ ನಿರಂತರವಾಗಿ ಶೋಷಣೆ, ದೌರ್ಜನ್ಯಗಳು ನಡೆಯುತ್ತಿವೆ. ಇದನ್ನು ತಡೆಯಲು ಜಾಗೃತಿ ಮೂಡಿಸುವ ಅಗತ್ಯವಿದೆ. ಈ ದಿನಾಚರಣೆ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಂದ ಅವರು. ಮನೆಗಳಲ್ಲೇ ಹೆಣ್ಣು – ಗಂಡು ಎಂಬ ತಾರತಮ್ಯ ಕಾಣುತ್ತೇವೆ. ಹೆಣ್ಣು ಭ್ರೂಣ ಹತ್ಯೆಯಂತಹ ಘಟನೆಗಳಿಂದಾಗಿ ಮಹಿಳೆಯರ ನಶಿಸುವಿಕೆಗೆ ಕಾರಣವಾಗಿದೆ. ಹೆಣ್ಣು ಮಕ್ಕಳ ಸಂರಕ್ಷಣೆಗಾಗಿ ಹಲವಾರು ಕಾನೂನುಗಳು ಜಾರಿಗೆ ಬಂದಿದೆ. ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರದಲ್ಲಿ ತಮ್ಮನ್ನು ತಾವು ಗುರುತಿಸಿ ಕೊಂಡಿದ್ದು. ಪುರುಷರಿಗಿಂತ ಅವರು ಯಾವುದರಲ್ಲೂ ಕಡಿಮೆಯಿಲ್ಲ ಎಂಬುದನ್ನು ಇಡೀ ದೇಶಕ್ಕೆ ತೋರಿಸಿ ಕೊಟ್ಟಿರುವ ಉದಾಹರಣೆಗಳಿವೆ.
ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆಗಾಗಿ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ. ಉಚಿತ ಶಿಕ್ಷಣ, ಬೇಟಿ ಬಚಾವೋ-ಬೇಟಿ ಪಡಾವೋ ಮುಂತಾದ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಕಾರ್ಯಕ್ರಮದಲ್ಲಿ ಸಂತ ಜೋಸೆಫರ ಕಾನ್ವೆಂಟ್ ಬಾಲಕಿಯರ ಪ್ರೌಢಶಾಲೆ ಸಹಶಿಕ್ಷಕರು ವಿನ್ಸೆಂಟ್ ಮಾರ್ಟಿಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ ಸಿ., ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೂಪಕುಮಾರಿ ಜೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಲೋಕೇಶ್ವರಪ್ಪ ಪಿ., ಜಿಲ್ಲಾ ಮಹಿಳಾ ಮಕ್ಕಳ ಅಭಿವೃದ್ದಿ ಅಧಿಕಾರಿ ಸಂತೋಷ್ ಡಿ, ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮೊದಲು ನಗರದ ತಹಸೀಲ್ದಾರ್ ಕಛೇರಿಯಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಕರ ಮಾಂತೇಶ್ ಬಜೇಂತ್ರಿ ಅವರು ಜಾಥಾಕ್ಕೆ ಹಸಿರು ನಿಶಾನೆ ತೋರಿಸಿದರು.
-
Mysore23 hours ago
ನಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ದೇನು?
-
Education24 hours ago
Free Coaching : ಮಾಸಿಕ 5,000ರೂ. ಜೊತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ಸರ್ಕಾರದಿಂದ ಉಚಿತ ತರಬೇತಿ
-
Mysore8 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Kodagu9 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Kodagu9 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Mysore6 hours ago
ಲೋಕಾಯುಕ್ತ ಸರ್ಕಾರದ ಕೈಗೊಂಬೆ: ಸಿಎಂ ಕ್ಲೀನ್ ಚೀಟ್ಗೆ ಹಳ್ಳಿಹಕ್ಕಿ ಪ್ರತಿಕ್ರಿಯೆ
-
Kodagu7 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ
-
State23 hours ago
ಬೆಂಗಳೂರು ಅರಮನೆ ಮೈದಾನದ ಜಾಗಕ್ಕೆ ಟಿ.ಡಿ.ಆರ್ ವಿತರಿಸುವುದು ರಾಜ್ಯದ ಹಿತಾಸಕ್ತಿಗೆ ಪ್ರತಿಕೂಲ: ಎಚ್.ಕೆ ಪಾಟೀಲ