Mysore
ಹರದನಹಳ್ಳಿ ರಮೇಶ್ ಗೆ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರಧಾನ
ಸಾಲಿಗ್ರಾಮ ತಾಲೂಕಿನ ಹರದನಹಳ್ಳಿ ಗ್ರಾಮದ ಸಿವಿಲ್ ಇಂಜಿನಿಯರ್ ಹೆಚ್.ಎನ್.ರಮೇಶ್ ಅವರಿಗೆ ಕನ್ನಡ ಪ್ರಭ ದಿನಪತ್ರಿಕೆ ಹಾಗೂ ಏಷ್ಯಾ ನೆಟ್ ಸುವರ್ಣ ನ್ಯೂಸ್ ಸುದ್ದಿ ವಾಹಿನಿ ಸಂಸ್ಥೆಯು ಇಂಜಿನಿಯರಿಂಗ್ ಕ್ಷೇತ್ರದಲ್ಲಿನ ಸೇವೆಗಾಗಿ ನೀಡುವ “ಎಮಿನೆಂಟ್ ಇಂಜಿನಿಯರ್” ಪ್ರಶಸ್ತಿಯನ್ನು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಪ್ರಧಾನ ಮಾಡಿ ಅಭಿನಂದಿಸಿದರು.
ಬೆಂಗಳೂರಿನ ದಿ ಲಲಿತ್ ಅಶೋಕ ಹೋಟೆಲ್ ನ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ
ಎಚ್.ಎನ್.ರಮೇಶ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡಪ್ರಭ ದಿನಪತ್ರಿಕೆ ಹಾಗೂ ಸುವರ್ಣ ನ್ಯೂಸ್ ಸುದ್ದಿ ವಾಹಿನಿಯ ಪ್ರಧಾನ ಸಂಪಾದಕ ರವಿಹೆಗಡೆ, ಬೆಳಗಾವಿಯ ವಿಶ್ವೇಶ್ವರಯ್ಯ, ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಸ್.ವಿದ್ಯಾಶಂಕರ್, ಚಲನಚಿತ್ರ ನಟ ನೀನಾಸಂ ಸತೀಶ್, ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್, ಹರದನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ನಂದಿನಿ ರಮೇಶ್ ಉಪಸ್ಥಿತರಿದ್ದರು.
ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
Mysore
ನಂಜನಗೂಡು ತಾಲೂಕಿನ ಕಳಲೆ ಕೆ.ಸಿ.ರವಿ ಅವರಿಗೆ ಆರಕ್ಷಕ ಕಲಾರತ್ನ ಪ್ರಶಸ್ತಿ
ನಂಜನಗೂಡು ಆ.10
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ನಂಜನಗೂಡು ತಾಲ್ಲೂಕಿನ ಕಳಲೆ ಗ್ರಾಮದ ಹೆಡ್‌ಕಾನ್‌ಸ್ಟೆಬಲ್ ರವಿ ಕೆ.ಸಿ. ಅವರಿಗೆ ಆರಕ್ಷಕ ಕಲಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರಿನ ಪೊಲೀಸ್ ಕಲಾ ಸಂಗಮ ಹಾಗೂ ನಬಿರೋಶನ್ ಬೋರಗಿ ಸಂಸ್ಥೆ ವತಿಯಿಂದ ಶುಕ್ರವಾರ ಬೆಂಗಳೂರಿನ ಕೆಎಸ್‌ಆರ್‌ಪಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಹೆಡ್‌ಕಾನ್‌ಸ್ಟೆಬಲ್ ರವಿ ಕೆ.ಸಿ.ಕಳಲೆ ಅವರಿಗೆ ಆರಕ್ಷಕ ಕಲಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖಾ, ಎಸಿಪಿ ಎನ್.ಉಮಾರಾಣಿ, ಕಮಾಂಡೆಂಟ್ ಹಂಜಾ ಹುಸೇನ್, ಪೊಲೀಸ್ ಇನ್‌ಸ್ಪೆಕ್ಟರ್ ಕೆ.ವಿಶ್ವನಾಥ್, ನಬಿರೋಷನ್ ಸಂಸ್ಥೆಯ ಸಂಸ್ಥಾಪಕ ಮೌಲಾಲಿ ಈ ಸಂದರ್ಭದಲ್ಲಿ ಹಾಜರಿದ್ದರು.
ನಂಜನಗೂಡು ಮಹದೇವಸ್ವಾಮಿ ಪಟೇಲ್.
Mysore
ವಿಜೃಂಭಣೆಯಿಂದ ಜರುಗಿದ ಶ್ರೀ ಶನೇಶ್ವರ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ಶನೇಶ್ವರ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ — ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಪುಷ್ಪಾರ್ಚನೆ
ನಂಜನಗೂಡು: ಆ.10
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಸಮೀಪದಲ್ಲಿರುವ ಕೆ.ಆರ್ ಪುರ ಗ್ರಾಮದ ಎಲಚಿತಳಕಟ್ಟೆ ಬಳಿ ಶ್ರೀ ಶನೇಶ್ವರಸ್ವಾಮಿ ದೇವಾಲಯದಲ್ಲಿ ಶ್ರೀ ಶನೇಶ್ವರ ಸ್ವಾಮಿ ನೂತನ ವಿಗ್ರಹವನ್ನು ಪ್ರತಿಷ್ಠಾಪನಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.
ಕೆ.ಆರ್ ಪುರ ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ಶ್ರೀ ಶಿವಕುಮಾರಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.
ಶ್ರೀ ಗಣಪತಿ ಪೂಜೆ, ನವಗ್ರಹ ಪೂಜೆ, ಹೋಮ-ಹವನ ಮತ್ತು ದೇವತಾ ಕಾರ್ಯ ಮಾಡಿದ ನಂತರ ಶ್ರೀ ಶನೇಶ್ವರ ಸ್ವಾಮಿಯವರ ನೂತನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಿ, ದೇವರಿಗೆ ಅಭಿಷೇಕ ನೆರವೇರಿಸಲಾಯಿತು. ವಿವಿಧ ಬಗೆಯ ಪುಷ್ಪಗಳಿಂದ ಅಲಂಕಾರ ಮಾಡಿ, ಮಹಾ ಮಂಗಳಾರತಿ ಮಾಡಲಾಯಿತು. ನಂಜನಗೂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಪುಷ್ಪಾರ್ಚನೆ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿದರು.
ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಅನ್ನದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ಚೆಸ್ಕಾಂ ಎಇಇ ದೇವರಾಜಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ವೆಂಕಟೇಶ್, ಉಪಾಧ್ಯಕ್ಷ ಆರ್. ಪ್ರಶಾಂತ್ ಕುಮಾರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ್, ಉಪತಹಶೀಲ್ದಾರ್ ಶಿವಕುಮಾರ್, ರಾಜಸ್ವ ನಿರೀಕ್ಷಕರಾದ ಹೆನ್ರಿ ಡಿಸೋಜಾ, ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮೇಲ್ವಿಚಾರಕಿ ಧನಲಕ್ಷ್ಮಿ, ಗ್ರಾ.ಪಂ ಸದಸ್ಯರಾದ ಅಜಂಉಲ್ಲಾಖಾನ್, ನಸರುಲ್ಲಾಖಾನ್, ಮಾದಶೆಟ್ಟಿ, ಜಿ.ಕೆ ಪ್ರಕಾಶ್, ಸಿದ್ದಲಿಂಗಪ್ಪ, ಶ್ರೀ ಶನೇಶ್ವರ ಸ್ವಾಮಿ ದೇವಾಲಯದ ಸುರೇಶಸ್ವಾಮೀಜಿ, ಮುಖಂಡರಾದ ನಾಜೀಮ್ ಉಲ್ಲಾ ಖಾನ್, ಗುರುಪಾದ ಸ್ವಾಮಿ, ಪಿ.ಶಿವಕುಮಾರ್, ನಾಗರಾಜು, ಸೇರಿದಂತೆ ಹಲವರು ಭಾಗವಹಿಸಿದ್ದರು.
ನಂಜನಗೂಡು ಮಹದೇವಸ್ವಾಮಿ ಪಟೇಲ್
Mysore
ಶ್ರೀ ಸಿದ್ದೇಶ್ವರ ಸರ್ವಿಸ್ ಸ್ಟೇಷನ್ ಪೆಟ್ರೋಲ್ ಬಂಕ್ ಅನ್ನು ಉದ್ಘಾಟಿಸಿದ — ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ
ನೂತನ ಶ್ರೀ ಸಿದ್ದೇಶ್ವರ ಸರ್ವಿಸ್ ಸ್ಟೇಷನ್ ಪೆಟ್ರೋಲ್ ಬಂಕ್ ಅನ್ನು ಉದ್ಘಾಟಿಸಿದ — ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ನಂಜನಗೂಡು ಚಾಮರಾಜನಗರ ಮುಖ್ಯರಸ್ತೆಯಲ್ಲಿರುವ ಬಿಜೆಪಿ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡ ಎಸ್. ಮಹದೇವಯ್ಯ ಅವರ ನೂತನ ಶ್ರೀ ಸಿದ್ದೇಶ್ವರ ಸರ್ವಿಸ್ ಸ್ಟೇಷನ್ ಪೆಟ್ರೋಲ್ ಬಂಕ್ ಅನ್ನು ಟೇಪ್ ಕತ್ತರಿಸುವ ಮೂಲಕ ಮಾಜಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು.
ನಂಜನಗೂಡು ಆ.09
ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ನೂತನ ಶ್ರೀ ಸಿದ್ದೇಶ್ವರ ಸರ್ವಿಸ್ ಸ್ಟೇಷನ್ ಪೆಟ್ರೋಲ್ ಬಂಕ್ ಅನ್ನು ಟೇಪ್ ಕತ್ತರಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಉದ್ಘಾಟಿಸಿದರು.
ನಂಜನಗೂಡು ತಾಲೂಕು ದೊಡ್ಡ ಕೌಲಂದೆ ಗ್ರಾಮದ ಚಾಮರಾಜನಗರ ಮತ್ತು ನಂಜನಗೂಡು ಮುಖ್ಯರಸ್ತೆಯಲ್ಲಿರುವ ಬಿಜೆಪಿ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡ ಎಸ್. ಮಹದೇವಯ್ಯ ಅವರ ನೂತನ ಶ್ರೀ ಸಿದ್ದೇಶ್ವರ ಸರ್ವಿಸ್ ಸ್ಟೇಷನ್ ಪೆಟ್ರೋಲ್ ಬಂಕ್ ಅನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪೆಟ್ರೋಲ್ ಹಾಕುವ ಮೂಲಕ ಚಾಲನೆ ನೀಡಿ ಶುಭ ಕೋರಿದರು.
ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ದ್ರುವ ನಾರಾಯಣ್, ನಂಜನಗೂಡು ಮಲ್ಲನ ಮೂಲೆ ಮಠದ ಚನ್ನಬಸವ ಸ್ವಾಮೀಜಿ ರವರು, ದೇವನೂರು ಮಠದ ಸ್ವಾಮೀಜಿ ಇವರುಗಳು ಭಾಗವಹಿಸಿ ಶುಭ ಕೋರಿದರು.
ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂತಿ೯, ಅಶೋಕ್, ವೀರಶೈವ ನಂಜನಗೂಡು ತಾಲೂಕು ಅಧ್ಯಕ್ಷ ಕೆಂಪಣ್ಣ, ಎಸ್.ಮಹದೇವಯ್ಯ, ಕೃಷ್ಣಪ್ಪ ಗೌಡ, ಎನ್. ಸಿ ಬಸವಣ್ಣ, ಮಧುರಾಜ್ ಸೇರಿದಂತೆ ಹಲವಾರು ಮುಖಂಡರು ಇದ್ದರು.
ನಂಜನಗೂಡು ಮಹದೇವಸ್ವಾಮಿ ಪಟೇಲ್.
-
Mysore4 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan4 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.