Connect with us

Chamarajanagar

ಸಾಲಗಾರರಿಗೆ ಕಿರುಕುಳ ನೀಡಿದರೇ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಶಿಲ್ಪಾನಾಗ್‌

Published

on

ಚಾಮರಾಜನಗರ: ಜಿಲ್ಲೆಯ ಯಾವುದೇ ಭಾಗದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳು, ಲೇವಾದೇವಿದಾರರು, ಇತರೆ ವ್ಯಕ್ತಿಗಳು, ಸಂಸ್ಥೆಗಳಿಂದ ಸಾಲಗಾರರಿಗೆ ಕಿರುಕುಳ ನೀಡುವುದು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಎಚ್ಚರಿಕೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು, ಆರ್.ಬಿ.ಐ ಪ್ರತಿನಿಧಿ ಹಾಗೂ ಲೀಡ್ ಬ್ಯಾಂಕ್ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಲ ನೀಡುವ ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್.ಬಿ.ಐ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಸಾಲಗಾರರು ಅಥವಾ ಅವರ ಕುಟುಂಬದ ಸದಸ್ಯರ ಮೇಲೆ ಸಾಲ ವಸೂಲಾತಿಗಾಗಿ ವಿನಾಕಾರಣ ಒತ್ತಡ ತರುವಂತಿಲ್ಲ. ಸಾಲ ಪಡೆದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಅವಮಾನಿಸುವುದು, ಹಿಂಸೆ ನೀಡುವಂತಿಲ್ಲ. ಸಾಲಗಾರರ ಸ್ವಾಧೀನದಲ್ಲಿರುವ ವಸ್ತುಗಳು, ಆಸ್ತಿಗಳ ಬಳಕೆಗೆ ಅಡ್ಡಿಪಡಿಸಬಾರದು ಎಂದು ಸೂಚನೆ ನೀಡಿದರು.

ಸಾಲ ವಸೂಲಿ ಮಾಡಲು ಯಾವುದೇ ಬಲವಂತದ ಕ್ರಮಗಳನ್ನು ಅನುಸರಿಸಬಾರದು. ಸಾಲ ವಸೂಲಿಗಾಗಿ ಹೊರ ವ್ಯಕ್ತಿಗಳು, ಅಪರಾಧ ಹಿನ್ನಲೆ ಹೊಂದಿರುವವರನ್ನು ಬಳಸಿ ಬೆದರಿಕೆ ಹಾಕಬಾರದು. ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಲೇವಾದೇವಿದಾರರು ನೀಡುತ್ತಿರುವ ಕಿರುಕುಳದಿಂದ ಸಾಲಗಾರರನ್ನು ರಕ್ಷಿಸಲು ಸರ್ಕಾರದಿಂದ ಹೊರಡಿಸಲಾಗುವ ಹೊಸ ಆಜ್ಞೆ ಹಾಗೂ ಆದೇಶಗಳನ್ನು ನಿರೀಕ್ಷಿಸಲಾಗಿದೆ. ಇದರಂತೆ ಕಿರುಕುಳ ನೀಡುವ ಮೈಕ್ರೊ ಫೈನಾನ್ಸ್ ಕಂಪನಿಗಳ ವಿರುದ್ದ ಕ್ರಮವಹಿಸಲಿದ್ದೇವೆ ಎಂದರು.

ಮೈಕ್ರೊ ಫೈನಾನ್ಸ್ ಕಂಪನಿ ಕಿರುಕುಳ ಕುರಿತ ದೂರು ಸಲ್ಲಿಸಲು ಸಹಾಯವಾಣಿ ತೆರೆಯಲಾಗಿದೆ. ನೊಂದಣಿ ಪರವಾನಗಿ ಹೊಂದಿರುವವರು ಹಾಗೂ ಇಲ್ಲದಿರುವ ಎಲ್ಲ ಮೈಕ್ರೋ ಫೈನಾನ್ಸ್ ಕಂಪನಿಗಳು, ಲೇವಾದೇವಿದಾರರು ಇತರೆ ಸಾಲ ನೀಡುವವರ ಮೇಲೆ ನಿಗಾವಹಿಸಿದ್ದೇವೆ. ಎಲ್ಲ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಜಿಲ್ಲೆಯ ಎಲ್ಲಿಯೇ ಆಗಲಿ ಸಾಲಗಾರರಿಗೆ ಅನಾವಶ್ಯಕವಾಗಿ ತೊಂದರೆ ನೀಡುವವರ ವಿರುದ್ದ ಕ್ರಮ ವಹಿಸುತ್ತೇವೆ. ಕಂಪನಿಗಳು ನಿಯಮಾವಳಿ, ಮಾರ್ಗಸೂಚಿ ಉಲ್ಲಂಘನೆ ಮಾಡಬಾರದು ಎಂದು ಜಿಲ್ಲಾಧಿಕಾರಿಯವರು ಕಟುನಿಟ್ಟಿನ ಸೂಚನೆ ನೀಡಿದರು.

ಆರ್.ಬಿ.ಐ ನಿಯಮಗಳ ಪ್ರಕಾರ ನೀಡಲಾಗುವ ಸಾಲದ ಮೊತ್ತ, ವಿಧಿಸಿರುವ ಬಡ್ಡಿದರ, ಮಾಸಿಕ ಕಂತುಗಳು ಸೇರಿದಂತೆ ಎಲ್ಲ ವಿವರಗಳನ್ನು ಸ್ಥಳೀಯ ಭಾಷೆಯಲ್ಲಿ ಸಾಲ ಪಡೆದವರಿಗೆ ವಿವರಿಸಬೇಕು. ಪಾರದರ್ಶಕವಾಗಿ ಪ್ರಕ್ರಿಯೆ ಇರಬೇಕು. ಜಿಲ್ಲೆಯಲ್ಲಿ ವ್ಯಾಪಕವಾಗಿ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಿದ್ದೇವೆ. ಗ್ರಾಮ ಸಭೆಗಳಲ್ಲೂ ಜಾಗೃತಿ ಶಿಬಿರ ಹಮ್ಮಿಕೊಳ್ಳಲು ಸೂಚನೆ ನೀಡಿದ್ದೇವೆ. ಇಂತಹ ಕಾರ್ಯಕ್ರಮಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು ಭಾಗವಹಿಸಿ ಜನರಿಗೆ ವಾಸ್ತವ ಅಂಶಗಳನ್ನು ಮನವರಿಕೆ ಮಾಡಿಕೊಡಬೇಕೆಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಮಾತನಾಡಿ, ಸಾಲಗಾರರಿಗೆ ಶೋಷಣೆ ಮಾಡುವಂತಿಲ್ಲ. ಸಾಲ ಕಟ್ಟುವ ಸಾಮಥ್ರ್ಯವಿಲ್ಲದಿದ್ದರೂ ಲಾಭವನ್ನಷ್ಟೇ ಕೇಂದ್ರಕರಿಸಿ ಸಾಲ ನೀಡಿ ಬಳಿಕ ಬಲವಂತದ ವಸೂಲಿಗೆ ಫೈನಾನ್ಸ್ ಕಂಪನಿಗಳು ಮುಂದಾಗಬಾರದು. ಸಾಲ ನೀಡುವ ಮುನ್ನ ಸಾಲಗಾರರ ದುಡಿಮೆ ಆದಾಯವನ್ನು ನೋಡಬೇಕು. ಸಾಲ ಪಡೆದುಕೊಂಡವರಿಗೆ ಕಿರುಕುಳ, ಅವಮಾನ, ನಿಂದನೆ ಮಾಡುವುದನ್ನು ಸಹಿಸುವುದಿಲ್ಲ. ಕಿರುಕುಳಕ್ಕೆ ಸಂಬಂಧಿಸಿದ ದೂರುಗಳು ಬಂದರೆ ನಿಯಮಾನುಸಾರ ಪ್ರಕರಣ ದಾಖಲು ಮಾಡಿ ತ್ವರಿತವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಆರ್.ಬಿ.ಐ ನ ಲೀಡ್ ಜಿಲ್ಲಾ ಅಧಿಕಾರಿ ವಿಜಯಶ್ರೀ ಮಾತನಾಡಿ, ಮೈಕ್ರೊ ಫೈನಾನ್ಸ್ ಕಂಪನಿಗಳು 3 ಲಕ್ಷಕ್ಕಿಂತ ಕಡಿಮೆ ಆದಾಯ ಇರುವವರಿಗೆ ಸಾಲ ನೀಡಬೇಕಿದೆ. ಸಾಲ ಮರುಪಾವತಿಸುವ ಸಾಮಥ್ರ್ಯಕ್ಕೆ ಅನುಗುಣವಾಗಿ ಸಾಲ ವಿತರಿಸಬೇಕು. ನಿಯಮಾವಳಿಗಳ ಪ್ರಕಾರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಸಾಲಗಾರರ ಮನೆಯ ಬಳಿ ತೆರಳಬೇಕು. ನಿಗದಿತ ವೇಳೆಯ ನಂತರ ಸಾಲ ವಸೂಲಿ ಮಾಡುವಂತಿಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಉಪವಿಭಾಗಾಧಿಕಾರಿ ಬಿ.ಆರ್. ಮಹೇಶ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎಂ.ಎನ್. ಸುರೇಖ, ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Continue Reading

Chamarajanagar

ಮೆಕ್ಕೆಜೋಳ ಖರೀದಿಸಲು ನೊಂದಣಿ ಕೇಂದ್ರ ಕಾರ್ಯಾರಂಭ

Published

on

ಚಾಮರಾಜನಗರ: ಕರ್ನಾಟಕ ಹಾಲು ಮಹಾಮಂಡಳಿಯು (ಕೆಎಂಎಫ್) ರೈತರಿಂದ ನೇರವಾಗಿ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ಮೂಲಕ ಮೆಕ್ಕೆಜೋಳ ಖರೀದಿಸುತ್ತಿದ್ದು, ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (ಚಾಮುಲ್) ಸಹಕಾರ ಸಂಘಗಳ ಮೂಲಕವೂ ಖರೀದಿ ಕೇಂದ್ರ ತೆರೆಯಲಾಗಿದೆ.

ಚಾಮರಾಜನಗರದ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ನಿಯಮಿತವು ಕರ್ನಾಟಕ ಹಾಲು ಮಹಾಮಂಡಳಿಯ (ಕೆಎಂಎಫ್) ಒಡೆತನದ ಪಶು ಆಹಾರ ಘಟಕಗಳಿಗೆ ಪಶು ಆಹಾರ ಉತ್ಪಾದನೆಗೆ ಅವಶ್ಯವಿರುವ ಮೆಕ್ಕೆಜೋಳವನ್ನು ರಾಜ್ಯ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‍ಗೆ 2,400 ರೂ. ಗಳಂತೆ (ಮೂಲ ಬೆಲೆ, ಎರಡು ಗೋಣಿಚೀಲದ ಮೊತ್ತ ಮತ್ತು ಸಾಗಾಣಿಕೆ ಮೊತ್ತ ಸೇರಿದಂತೆ) ಗುಣಮಟ್ಟ ನಿಬಂಧನೆಗೊಳಪಟ್ಟು ರೈತರಿಂದ ನೇರವಾಗಿ ಖರೀದಿಸಲು ತೀರ್ಮಾನವಾಗಿರುತ್ತದೆ.

ಅದರಂತೆ ಜಿಲ್ಲೆಯ ರೈತರಿಂದ ಕರ್ನಾಟಕ ಹಾಲು ಮಹಾಮಂಡಳಿಯ ಹಾಸನ ಪಶು ಆಹಾರ ಘಟಕಕ್ಕೆ ನಿಗದಿಪಡಿಸಿದ ದರದಲ್ಲಿ ಮೆಕ್ಕೆಜೋಳ ಖರೀದಿಸಲು ಪ್ರಕ್ರಿಯೆ ಆರಂಭವಾಗಿರುತ್ತದೆ. ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿ ಹಾಗೂ ಒಕ್ಕೂಟದ ನಿಯೋಜಿತ ಅಧಿಕಾರಿಗಳ ಸಮನ್ವಯದೊಂದಿಗೆ ಎನ್‍ಇಎಂಎಲ್ ಸಂಸ್ಥೆ ಅಭಿವೃದ್ಧಿಪಡಿಸಿದ ಇ-ಸಂವೃದ್ಧಿ ಹಾಗೂ ಸರ್ಕಾರದ ಫ್ರೂಟ್ಸ್ ತಂತ್ರಾಂಶದ ಮೂಲಕ ನೋಂದಣಿ ಮಾಡಿ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿ ನಂತರ ಖರೀದಿಸಲಾಗುವುದು.

ಮೆಕ್ಕೆಜೋಳ ಬೆಳೆದು ಬೆಳೆ ಸಮೀಕ್ಷೆಯಲ್ಲಿ ಮೆಕ್ಕೆಜೋಳ ಬೆಳೆ ಎಂದು ಆರ್.ಟಿ.ಸಿ ವಾರು ನಮೂದಾಗಿರುವ ರೈತರು ಮಾತ್ರ ಯೋಜನೆಗೆ ಅರ್ಹರಾಗಿರುತ್ತಾರೆ. ಯೋಜನೆಯಡಿ ಎಕರೆಗೆ 12 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಮೆಕ್ಕೆಜೋಳವನ್ನು ಮಾತ್ರ ಖರೀದಿಸಲಾಗುವುದು. ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಡಿಬಿಟಿ ಮೂಲಕ ಹಣ ಪಾವತಿಸಲಾಗುವುದು.

ಮೆಕ್ಕೆಜೋಳ ಮಾರಾಟ ಮಾಡಲು ಆಸಕ್ತ ರೈತರು ಚಾಮರಾಜನಗರದ ಜಿಲ್ಲಾ ಹಾಲು ಒಕ್ಕೂಟದ ವ್ಯಾಪ್ತಿಯ ತಾಲೂಕು ಉಪ ಕಚೇರಿಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಚಾಮುಲ್ ಮೊ.ಸಂ. 6366824213, ಚಾಮರಾಜನಗರ ಮತ್ತು ಯಳಂದೂರು ಮೊ.ಸಂ. 9945828993, ಗುಂಡ್ಲುಪೇಟೆ ಮೊ.ಸಂ. 9606098335, ಹನೂರು ಮೊ.ಸಂ 9740576484, ಕೊಳ್ಳೇಗಾಲ ಮೊ.ಸಂ. 6366824224 ಸಂಪರ್ಕಿಸುವಂತೆ ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ರಾಜ್‍ಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

Continue Reading

Chamarajanagar

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

Published

on

ಚಾಮರಾಜನಗರ: ತಾಲೂಕಿನ ನಾಗವಳ್ಳಿ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಂಪ್ಯೂಟರ್, ಆರ್ಟ್ ಮತ್ತು ಕ್ರಾಫ್ಟ್, ನೃತ್ಯ ಮತ್ತು ಸಂಗೀತ ಹಾಗೂ ಇಂಗ್ಲೀಷ್ ವಿಷಯಕ್ಕೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಡಿ.7 ರಿಂದ ಡಿ.11ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ವಿದ್ಯಾರ್ಹತೆ ಉಳ್ಳವರು ತಮ್ಮ ಸ್ವ ವಿವರದೊಂದಿಗೆ ನೇರವಾಗಿ ಶಾಲೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 8310434085, 9886824852, 9036375844 ಸಂಪರ್ಕಿಸಬಹುದೆಂದು ನಾಗವಳ್ಳಿ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Chamarajanagar

ಆರೋಗ್ಯಕ್ಕೆ ಮೊಲದ ಆದ್ಯತೆ ನೀಡಿ: ಕಾಗಲವಾಡಿ ಚಂದ್ರು ಸಲಹೆ

Published

on

ಚಾಮರಾಜನಗರ: ರೋಟರಿ ಸಂಸ್ಥೆ ವತಿಯಿಂದ ನಗರದಲ್ಲಿ ಇಂದು ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.

ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ ರೋಟರಿ ಸಂಸ್ಥೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಅರವಿಂದ ಕಣ್ಣಿನ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ 300 ಮಂದಿ ತಪಾಸಣೆ ಮಾಡಿಸಿಕೊಂಡರು. 170 ಮಂದಿ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಅವರನ್ನು ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಶಿಬಿರದಲ್ಲಿ ವ್ಯವಸ್ಥೆ ಮಾಡಲಾಯಿತು.

ರೋಟರಿ ಸಂಸ್ಥೆ ಅಧ್ಯಕ್ಷ ಕಾಗಲವಾಡಿ ಚಂದ್ರು ಮಾತನಾಡಿ, ಆರೋಗ್ಯಕ್ಕೆ ಮೊಲದ ಆಧ್ಯತೆ ನೀಡಬೇಕು. ಪಂಚೇಂದ್ರಿಯಗಳಲ್ಲಿ ಕಣ್ಣು ಪ್ರಮುಖವಾದ ಅಂಗವಾಗಿದೆ. ಕಣ್ಣುಗಳನ್ನು ರಕ್ಷಿಸಿಕೊಳ್ಳವುದರ ಮೂಲಕ ಅಂಧತ್ವ ನಿವಾರಣೆ ಮಾಡಿಕೊಳ್ಳಬೇಕಿದೆ ಎಂದರು.

ರೋಟರಿ ಸಂಸ್ಥೆಯು ಪ್ರತಿ ತಿಂಗಳು ಮೊದಲನೆಯ ಭಾನುವಾರ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಅಯೋಜಿಸುತ್ತಿದ್ದು, ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದದ್ದು ತುಂಬಾ ಸಂತಸವಾಗಿದೆ ಎಂದರು. ಈ ಶಿಬಿರದಲ್ಲಿ ಇಬ್ಬರು ವಿದ್ಯಾರ್ಥಿಗಳಾದ ಚಂದ್ರಶೇಖರ್, ಧನುಷ್ ಅವರಿಗೆ ಕನ್ನಡಕ ವಿತರಿಸಲಾಯಿತು.

ರೋಟರಿ ಸಂಸ್ಥಾಪಕ ಸದಸ್ಯರಾದ ಶ್ರೀನಿವಾಸಶೆಟ್ಟಿ, ಕೆ.ಎಂ.ಮಹಾದೇವಸ್ವಾಮಿ, ಸುರಬಿ ನಾಗರಾಜು, ಪ್ರಭಾಕರ್, ಸಿ.ಎ.ನಾರಾಯಣ್, ಸುರೇಶ್, ಅಂಕಶೆಟ್ಟಿ, ಎಲ್.ನಾಗರಾಜು, ಎ.ಶ್ರೀನಿವಾಸನ್, ರೂಪೇಶ್, ಮಹಾದೇವಸ್ವಾಮಿ, ಅಬ್ದುಲ್ ಅಜೀಜ್ ದೀನಾ, ರಾಜುವರ್ಗೀಸ್, ಡಾ.ಪರಮೇಶ್ವರಪ್ಪ, ಸವಿತಾ,
ಪಿಆರ್‌ಒ ವಿಜಯಕಾಂತ್ ಇತರರು ಹಾಜರಿದ್ದರು.

Continue Reading

Trending

error: Content is protected !!