National - International
ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಕ್ರಿಕೆಟ್ ಟೂರ್ನಿಯಿಂದ ಹೊರಬಿದ್ದಿದ್ದಾರೆ

ಕೋಲ್ಕತ್ತ : ಪಾದದ ಗಾಯದಿಂದಾಗಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ವಿಶ್ವಕಪ್ ಕ್ರಿಕೆಟ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಕನ್ನಡಿಗ, ವೇಗಿ ಪ್ರಸಿದ್ಧ ಕೃಷ್ಣ ಅವರಿಗೆ ತಂಡಕ್ಕೆ ಸೇರ್ಪಡೆ ಮಾಡಲಾಗಿದೆ.
ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಅವರ ಕಾಲು ಉಳುಕಿ ಗಾಯವಾಗಿತ್ತು. ಆದರೆ, ನಂತರ ಚಿಕಿತ್ಸೆಯಲ್ಲಿ ಅವರು ಪೂರ್ಣ ಚೇತರಿಸಿಕೊಂಡಿಲ್ಲ. ಪಾದದಲ್ಲಿ ಉರಿಯೂತ ಕಡಿಮೆಯಾಗದ ಕಾರಣ ಅವರಿಗೆ ದೀರ್ಘ ವಿಶ್ರಾಂತಿಗಾಗಿ ವೈದ್ಯರು ಸಲಹೆ ನೀಡಿದ್ದಾರೆ.
17 ಏಕದಿನ ಪಂದ್ಯಗಳನ್ನು ಆಡಿರುವ ಪ್ರಸಿದ್ಧ ಅವರನ್ನು ತಂಡಕ್ಕೆ ಸೇರಿಸಲಾಗಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
‘ಈ ಪರಿಸ್ಥಿತಿಯನ್ನು ಅರಗಿಸಿಕೊಳ್ಳುವುದು ಬಹಳ ಕಷ್ಟವಾಗುತ್ತಿದೆ. ವಿಶ್ವಕಪ್ ಟೂರ್ನಿಯಿಂದ ಹೊರಗುಳಿಯುವುದರಿಂದ ಮನಸ್ಸಿಗೆ ಬಹಳ ನೋವಾಗಿದೆ. ಆದರೆ ನಮ್ಮ ತಂಡದ ಗೆಲುವಿಗಾಗಿ ಸದಾ ಆಶಿಸುತ್ತೇನೆ. ತಂಡದ ಎಲ್ಲರೂ ನನ್ನ ಮೇಲೆ ತೋರಿರುವ ಪ್ರೀತಿ, ವಿಶ್ವಾಸ ಮತ್ತು ಸ್ನೇಹ ಅಮೂಲ್ಯವಾದದ್ದು. ಅವರೆಲ್ಲರಿಗೂ ಕೃತಜ್ಞತೆಗಳು’ ಎಂದು ಹಾರ್ದಿಕ್ ‘ಎಕ್ಸ್’ ಖಾತೆಯಲ್ಲಿ ಸಂದೇಶ ಹಾಕಿದ್ದಾರೆ.
National - International
ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಯೋಧನ ವಶಕ್ಕೆ ಪಡೆದ ಪಾಕ್

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಇತ್ತ ಎರಡು ದೇಶಗಳ ನಡುವೆ ಎನ್‌ಕೌಂಟರ್ ಕೂಡಾ ನಡೆಯುತ್ತಿದ್ದು, ಈ ನಡುವೆ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನ ಬಂಧಿಸಿದೆ.
ಪಂಜಾಬ್ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧನನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದಾರೆ.
ಅವರ ಬಿಡುಗಡೆಗಾಗಿ ಎರಡೂ ದೇಶಗಳ ಸೇನಾ ಪಡೆಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
National - International
ಪಹಲ್ಗಾಮ್ ದಾಳಿ; ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ವೀರ ಯೋಧ ಹುತಾತ್ಮ

ಜಮ್ಮು ಕಾಶ್ಮೀರ: ಪಹಲ್ಗಾಮ್‌ನ ನರಮೇಧಕ್ಕೆ ಪ್ರತಿಯಾಗಿ ಜಮ್ಮು ಮತ್ತು ಕಾಶ್ಮೀರದ ಉದ್ಧಮ್‌ಪುರ ಜಿಲ್ಲೆಯ ದುಡು-ಬಸಂತ್‌ಗರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರೊಂದಿಗೆ ನಡೆಸುತ್ತಿರುವ ಎನ್‌ಕೌಂಟರ್‌ನಲ್ಲಿ ಸೇನಾ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಹುತಾತ್ಮ ಯೋಧನನ್ನು ಗಣ್ಯ 6 PARA (ವಿಶೇಷ ಪಡೆ) ಘಟಕದ ಹವಾಲ್ದಾರ್ ಜಂತು ಅಲಿ ಶೇಖ್ ಎಂದು ಗುರುತಿಸಲಾಗಿದೆ.
https://x.com/Whiteknight_IA/status/1915290204535210424
ಪಹಲ್ಗಾಮ್‌ನ ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಗಳು ಸಾವನ್ನಪ್ಪಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದರೆಡು ದಿನಗಳಲ್ಲಿ ನಡೆಯುತ್ತಿರುವ ಮೂರನೇ ಎನ್‌ಕೌಂಟರ್ ಇದಾಗಿದೆ.
ಶಂಕಿತರು ಅಡಗಿದ್ದ ಸ್ಥಳದಲ್ಲಿ ಭದ್ರತಾ ಪಡೆಗಳು ಜಮಾಯಿಸುತ್ತಿದ್ದಂತೆಯೇ, ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ್ದು, ಎನ್ ಕೌಂಟರ್ ಆರಂಭವಾಗಿದೆ ಎಂದು ಅವರು ಮಾಹಿತಿ ಲಭ್ಯವಾಗಿದೆ.
National - International
ದಾಳಿ ನಡೆಸಿದ ಉಗ್ರರಿಗೆ ಊಹೆಗೂ ಮೀರಿದ ಶಿಕ್ಷೆ ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ

ಪಾಟ್ನಾ: ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಭಾರತೀಯರ ಮೇಲೆ ದಾಳಿ ನಡೆಸಿದ ಉಗ್ರರಿಗೆ ಹಾಗೂ ಸಂಚು ರೂಪಿಸಿದವರಿಗೆ ಊಹೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಸಂದೇಶ ನೀಡಿದ್ದಾರೆ.
ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ–ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (DAY–NRLM) ಕಾರ್ಯಕ್ರಮದಲ್ಲಿ ಇಂದು(ಏಪ್ರಿಲ್.24) ಉಗ್ರರಿಗೆ ಎಚ್ಚರಿಕೆ ನೀಡಿದರು.
ಪೆಹಲ್ಗಾಮ್ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಮೋದಿ ಭಾಷಣ ಆರಂಭಿಸಿದ ಅವರು, ಇಂದು ಬಿಹಾರದ ನೆಲದಲ್ಲಿ ನಿಂತು ನಾನು ಇಡೀ ಜಗತ್ತಿಗೆ ಹೇಳುತ್ತೇನೆ. ನಮ್ಮ ಕೇಂದ್ರ ಸರ್ಕಾರವೂ ಈ ದೇಶದ ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಗುರುತಿಸಿ, ಪತ್ತೆ ಮಾಡಿ ಶಿಕ್ಷಿಸುತ್ತದೆ ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್.22 ರಂದು ಭಯೋತ್ಪಾದಕರು ಅಮಾಯಕ ನಾಗರಿಕರನ್ನು ಹತ್ಯೆ ಮಾಡಿರುವುದಕ್ಕೆ ಇಡೀ ರಾಷ್ಟ್ರವೇ ದುಃಖಿತವಾಗಿದೆ. ಈ ಭಯೋತ್ಪಾದಕರು ಹಾಗೂ ಈ ದಾಳಿಗೆ ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ದೊಡ್ಡ ಶಿಕ್ಷೆ ಸಿಗುತ್ತದೆ ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. ಅಲ್ಲದೇ 140 ಕೋಟಿ ಭಾರತೀಯರ ಇಚ್ಛಾಶಕ್ತಿಯಂತೆ ನಮ್ಮ ಸರ್ಕಾರ, ಭಯೋತ್ಪಾದನೆ ಮಾಸ್ಟರ್‌ಗಳ ಬೆನ್ನು ಮುರಿಯಲಿದೆ ಎಂದು ಹೇಳಿದರು.
ಈ ಸಂಕಲ್ಪದಲ್ಲಿ ಇಡೀ ರಾಷ್ಟ್ರವು ಒಂದಾಗಿದೆ. ಮಾನವೀಯತೆಯನ್ನು ನಂಬುವ ಪ್ರತಿಯೊಬ್ಬರೂ ನಮ್ಮೊಂದಿಗಿದ್ದಾರೆ. ವಿವಿಧ ದೇಶಗಳ ಜನರಿಗೆ ಮತ್ತು ಅವರ ನಾಯಕರು ನಮ್ಮೊಂದಿಗೆ ನಿಂತಿದ್ದಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದರು.
-
Mysore12 hours ago
ಅರಣ್ಯ ಇಲಾಖೆಯ ವಾಚರ್ ಆತ್ಮಹ*ತ್ಯೆ
-
Mysore14 hours ago
ನಂಜನಗೂಡಿನ ಸಬ್ ರಿಜಿಸ್ಟರ್ ಕಛೇರಿಗೆ ಬೀಗ: ಲೋಕಾಯುಕ್ತ ದಾಳಿ
-
National - International7 hours ago
ಪಹಲ್ಗಾಮ್ ದಾಳಿ; ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ವೀರ ಯೋಧ ಹುತಾತ್ಮ
-
State10 hours ago
ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ
-
National - International8 hours ago
ದಾಳಿ ನಡೆಸಿದ ಉಗ್ರರಿಗೆ ಊಹೆಗೂ ಮೀರಿದ ಶಿಕ್ಷೆ ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ
-
Kodagu22 hours ago
ಕೊಂಗಾಣದಲ್ಲಿ ಕಣ್ಣನೂರಿನ ಕೋಲಿಯಾ ಆಸ್ಪತ್ರೆಯ ಮಾಲೀಕನ ಕೊ*ಲೆ
-
Kodagu12 hours ago
ಜಿಲ್ಲಾ ಮಟ್ಟದ ಜ್ಞಾನಜ್ಯೋತಿ ಕಾರುಣ್ಯ ಕಾರ್ಯಕ್ರಮ
-
Chamarajanagar10 hours ago
ಚಾಮರಾಜನಗರ: ಮಲೆ ಮಹದೇಶ್ವರ ಸ್ವಾಮಿ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್