Hassan
ಹಾಸನ ಬ್ರಿಲಿಯಂಟ್ ಪಿಯು ಕಾಲೇಜಿಗೆ ದಶಮಾನೋತ್ಸವದ ಸಂಭ್ರಮ
ಹಾಸನ : ಪಟ್ಟಣದ ಬ್ರಿಲಿಯಂಟ್ ಪಿಯು ಕಾಲೇಜಿನ ದಶಮಾನೋತ್ಸವ ಕಾರ್ಯಕ್ರಮವನ್ನು ಜ.10 ರಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಾದೀಶರಾದಂತಹ ಗೌರವನ್ವಿತ ನ್ಯಾಯ ಮೂರ್ತಿ ಶ್ರೀ ಎನ್. ಸಂತೋಷ್ ಹೆಗ್ಡೆ ಅವರು ವಹಿಸಲಿದ್ದಾರೆ. ಹಾಗೂ ಹಾಸನ ಶಾಸಕರಾದ ಶ್ರೀ ಹೆಚ್.ಪಿ. ಸ್ವರೂಪ್ ಪ್ರಕಾಶ್ ಕಾರ್ಯಕ್ರಮ ಉದ್ಘಾತಿಸಲಿದ್ದು.

ಮುಖ್ಯ ಅಥಿತಿಗಳಾಗಿ ಶ್ರೀ ಸಿ.ಎಂ. ಮಹಾಲಿಂಗಯ್ಯ ಉಪನಿದೀಶಕರು ಪಿಯು ಮಂಡಳಿ ಹಾಸನ, ಡಾ. ಗುರುಬಸವರಾಜ ಯಲಗಚ್ಚಿನ್ ಸಹಾಯಕ ಉಪನ್ಯಾಸಕರು ಆಯುರ್ವೇದ ಔಷಧ ವಿಭಾಗ ಧರ್ಮಸ್ಥಳ ಆಯುರ್ವೇದ ಆಸ್ಪತ್ರೆ ಹಾಸನ, ಶ್ರೀ ಬಿ.ಹೆಚ್. ಸುರೇಶ್ ಅಧ್ಯಕ್ಷರು, ಆಡಳಿತ ಸುಧಾರಣ ಸಲಹಾ ವೇದಿಕೆ ಬೆಂಗಳೂರು ಮತ್ತು ಇನ್ನಿತರರು ಉಪಸ್ಥಿತರಿರುವರು.
Hassan
ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಾಫಿ ಕಳ್ಳತನ
50 ಕೆಜಿ ಕಾಫಿಗೆ ಬರೋಬ್ಬರಿ 30000 ದರ ಹೆಚ್ಚಳ ಹಿನ್ನೆಲೆ,
ಮಲೆನಾಡಿನಲ್ಲಿ ಹೆಚ್ಚಾಗುತ್ತಿದ್ದಾರೆ ಕಾಫಿ ಕಳ್ಳರು,
*ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಗಿಡದಲ್ಲಿದ್ದ ಕಾಫಿಯನ್ನು ಕಳ್ಳತನ ಮಾಡುತ್ತಾರೆ ಖದೀಮರು*
ವಾಹನದಲ್ಲಿ ಬರ್ತಾರೆ ಸಿಕ್ಕಸಿಕ್ಕ ಕಡೆ ಕಾಫಿ ದೋಚಿ ಹೊರಡುವ ಕಳ್ಳರು,
ಸುದೀಪ್ ಹಾಗೂ ಮಧು ಎಂಬುವರ ಕಾಫಿ ತೋಟದಲ್ಲಿ ಗಿಡದಲ್ಲಿದ್ದ ಕಾಫಿಯನ್ನೇ ಕಳ್ಳತನ ಮಾಡಿದ ಚಾಲಾಕಿ ಕಳ್ಳರು,
ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಳ್ಳತನ ಮಾಡಿರೋ ಕಾಫಿ ಕಳ್ಳರು,
ಬೇಲೂರು ತಾಲೂಕು, ಚಿನ್ನೇನಹಳ್ಳಿ ಗ್ರಾಮದಲ್ಲಿ ಘಟನೆ,
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿನ್ನೇನಹಳ್ಳಿ ಗ್ರಾಮ,
ಒಂದು ಎಕರೆ ಎರಡು ಎಕರೆ ಇರೋ ತೋಟವನ್ನೇ ಟಾರ್ಗೆಟ್ ಮಾಡಿರುವ ಕಾಫಿ ಕಳ್ಳರು,
ಗಿಡದಲ್ಲಿದ್ದ ಕಾಫಿಯನ್ನು ಬಿಡುತ್ತಿಲ್ಲ ಕದೀಮರು
Hassan
MLA ಸಿಮೆಂಟ್ ಮಂಜು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್: ಕಾನೂನು ಕ್ರಮಕ್ಕೆ ಆಗ್ರಹ
ಸಕಲೇಶಪುರ: ಆಲೂರು, ಕಟ್ಟಾಯ -ಸಕಲೇಶಪುರ,ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿರುವ ವಿರುದ್ಧ ಕಾನೂನು ಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಹಾಸನ ಜಿಲ್ಲಾಡಳಿತದ ವತಿಯಿಂದ ಶನಿವಾರದಂದು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಶಾಸಕರು ಅಧಿಕಾರಿಗಳು ಆಗಮಿಸಿದ್ದರು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ಸಿಮೆಂಟ್ ಮಂಜು ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡಿದ್ದರು. ಈ ಭಾಷಣದ ತುಣುಕನ್ನು Hassan News ಹಾಸನ್ ನ್ಯೂಸ್ ಫೇಸ್ಬುಕ್ ಪೇಜ್ ನಲ್ಲಿ ಬಿತ್ತರಿಸಲಾಗಿತ್ತು. ಸದರಿ ಪೇಜ್ ನಲ್ಲಿ vasanth kumar ಎಂಬ ಹೆಸರಿನ ಫೇಸ್ ಬುಕ್ ಖಾತೆಯುಳ್ಳ ವ್ಯಕ್ತಿಯು ಶಾಸಕರ ವಿರುದ್ಧ “ಸಿಮೆಂಟ್ ಮಂಜಣ್ಣ ಹುಟ್ಟು ಕಳ್ಳನ್ ಮಗ” ಎಂದು ಕಾಮೆಂಟ್ ಮಾಡಿದ್ದು ಈ ರೀತಿಯ ಕಾಮೆಂಟ್ ನಿಂದ ಶಾಸಕರ ಘನತೆಗೆ ಧಕ್ಕೆ ಯಾವುದರ ಜೊತೆಗೆ ಕ್ಷೇತ್ರದ ಜನತೆಗೆ ಹಾಗೂ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಗೆ ನೋವುಂಟು ಮಾಡಿದ್ದು ಕಾಮೆಂಟ್ ಮಾಡಿದ ವ್ಯಕ್ತಿಯನ್ನು ಪತ್ತೆ ಮಾಡಿ ಬಂಧಿಸಿ ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಗರ ಠಾಣೆಗೆ ಬಾಳ್ಳುಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ. ಎಸ್. ಶಿವಕುಮಾರ್ ದೂರು ನೀಡಿದ್ದಾರೆ.
ಈ ಸಂದರ್ಭದಲ್ಲಿ ಬೆಳಗೋಡು ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್, ಮುಖಂಡರಾದ ನವೀನ್ ಶೆಟ್ಟಿ. ಕಿಟ್ಟಿ ಪುಟ್ಟರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
Hassan
ದೆಹಲಿ ನೋಟಿಸ್, ಕಾರ್ಟಿಯರ್ ವಾಚ್ ವಿವಾದದ ಬಗ್ಗೆ ಆತ್ಮವಿಶ್ವಾಸದ ನಿಲುವು ಘೋಷಿಸಿದ ಡಿಸಿಎಂ ಡಿಕೆಶಿ
ಹಾಸನ: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ ಪ್ರಕರಣದಲ್ಲಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯವಿರಲಿಲ್ಲ. ನಮಗೆ ಕಿರುಕುಳ ನೀಡಲು ಈ ಸಮನ್ಸ್ ನೀಡಲಾಗಿದೆ. ಇದು ಸರಿಯಲ್ಲ, ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಹಾಸನದಲ್ಲಿ ಇಂದು ಈ ಕುರಿತು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ವಿಭಾಗದ ದೆಹಲಿ ಪೊಲೀಸರು ಸಮನ್ಸ್ ನೀಡಿರುವ ಬಗ್ಗೆ ಕೇಳಿದಾಗ, “ಇದು ನಮಗೆ ಆಘಾತ ತಂದಿದೆ. ನನಗೆ ಹಾಗೂ ಸಹೋದರ ಸುರೇಶ್ ಅವರಿಗೆ ನೋಟೀಸ್ ನೀಡುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈ ಹಿಂದೆ ಇಡಿ ನಮಗೆ ಸಮನ್ಸ್ ನೀಡಿತ್ತು ಎಂದರು.

ನಾವು ಮೊದಲಿನಿಂದಲೂ ಇಡಿ ತನಿಖೆಗೆ ಸಹಕಾರ ನೀಡಿ ಎಲ್ಲಾ ದಾಖಲೆಗಳನ್ನು ಒದಗಿಸಿದ್ದೇವೆ. ಇದು ನಮ್ಮ ಪಕ್ಷದ ಸಂಸ್ಥೆ, ಕಾಂಗ್ರೆಸಿಗರಾಗಿ ಆ ಸಂಸ್ಥೆಗೆ ಬೆಂಬಲ ನೀಡಲು ದೇಣಿಗೆ ನೀಡುವುದರಲ್ಲಿ ತಪ್ಪಿಲ್ಲ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಈ ಸಂಸ್ಥೆ ಕಷ್ಟಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್ ಗಳಿಂದ ನೆರವು ನೀಡಿದ್ದು, ನನ್ನಂತೆ ಅನೇಕರು ದೇಣಿಗೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಇಡಿ ಚಾರ್ಜ್ ಶೀಟ್ ಹಾಕಿದ್ದು, ಅದರಲ್ಲಿ ನಮ್ಮ ಹೆಸರನ್ನು ಸೇರಿಸಿರಲಿಲ್ಲ. ನಮ್ಮ ಬಳಿ ಹೇಳಿಕೆ ಪಡೆದು, ಬಿಟ್ಟಿದ್ದರು. ಹೀಗಿರುವಾಗ ದೆಹಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಮ್ಮ ಎಲ್ಲಾ ವ್ಯವಹಾರ ಪಾರದರ್ಶಕವಾಗಿದೆ. ನಾವು ನ್ಯಾಯಲಯದಲ್ಲಿ ಹೋರಾಟ ಮುಂದುವರೆಸುತ್ತೇವೆ. ನಾವು ಸರಿಯಾಗಿ ತೆರಿಗೆ ಕಟ್ಟಿದ್ದು, ನಮ್ಮ ಹಣವನ್ನು ನಾವು ಇಷ್ಟಪಡುವ ಯಾರಿಗೆ ಬೇಕಾದರೂ ನೀಡಬಹುದು” ಎಂದು ಹೇಳಿದರು.

ನನ್ನ ವಿರುದ್ಧ ಪಿಎಎಲ್ಎ ಪ್ರಕರಣ ದಾಖಲಿಸಿ, ಆರೋಪ ಪಟ್ಟಿ ಸಲ್ಲಿಸಿದ್ದರು. ಇಷ್ಟಾದ ಮೇಲೂ ಯಾವ ಕಾರಣಕ್ಕೆ ಸಮನ್ಸ್ ನೀಡಿದ್ದಾರೆ? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ನೀಡುವುದು, ಗೊಂದಲ ಮೂಡಿಸುವುದು ಇದರ ಉದ್ದೇಶ ” ಎಂದು ತಿಳಿಸಿದರು.
ನನ್ನನ್ನು ಬೆದರಿಸುವ ಪ್ರಯತ್ನ ಮಾಡಿದರೆ, ನಾನು ಬಗ್ಗುವುದಿಲ್ಲ
“ನನಗೆ ಶುಕ್ರವಾರ ನೋಟೀಸ್ ಸಿಕ್ಕಿದ್ದು, ಇದನ್ನು ವಕೀಲರ ಜತೆ ಚರ್ಚೆ ಮಾಡುತ್ತೇನೆ. ನನ್ನ ಸಹೋದರ ಕೂಡ ಸಂಸದನಾಗಿದ್ದಾಗ ಈ ಸಂಸ್ಥೆಗೆ ದೇಣಿಗೆ ನೀಡಿದ್ದ. ದೆಹಲಿ ಪೊಲೀಸರು ಡಿ.19 ರ ಒಳಗೆ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ. ನಾನು ಸಮಯ ನೋಡಿಕೊಂಡು ಒಂದು ದಿನ ಹೋಗಿ, ಅವರ ನೋಟೀಸ್ ಗೆ ಯಾವ ರೀತಿ ಉತ್ತರ ನೀಡಬೇಕೋ ನೀಡುತ್ತೇನೆ. ಅವರು ನನ್ನನ್ನು ಬೆದರಿಸುವ ಪ್ರಯತ್ನ ಮಾಡಿದರೆ ನಾನು ಬಗ್ಗುವುದಿಲ್ಲ” ಎಂದು ಹೇಳಿದರು
-
Mysore24 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
-
Kodagu23 hours agoಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್ಸಿ
-
Mysore23 hours agoಪಠ್ಯದಿಂದ ಡಾ.ಅಂಬೇಡ್ಕರ್ ಹೊರಗಿಡುವ ಹುನ್ನಾರ: ಪ್ರೊ.ಪ್ರಸನ್ನಕುಮಾರ್ ಕೆರಗೋಡು ಶಂಕೆ
-
Chamarajanagar23 hours agoಕಠಿಣ ಶ್ರಮದಿಂದ ಗೆಲುವು ಖಚಿತ: ಡಾ. ಶಾಂತರಾಜು
-
Mandya24 hours agoಡಿ.7 ರಂದು ದೆಹಲಿಯಲ್ಲಿ ಕುವೆಂಪು ಅವರ ಸಾಧನೆ ಮತ್ತು ಕೊಡುಗೆ ವಿಚಾರ ಸಂಕಿರಣ: ಎಚ್.ಕೆ.ರಾಮು
-
Kodagu24 hours agoಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಶಾಸಕ ಪೊನ್ನಣ್ಣ ಭೇಟಿ
-
Hassan23 hours agoಕ್ರೀಡೆಯು ಪರಿಪೂರ್ಣ ವ್ಯಕ್ತಿತ್ವಕ್ಕೆ ನಾಂದಿಯಾಗಬಲ್ಲದು : ಡಾ. ಅಕ್ಷಯ್ ಎಸ್. ಗೌಡ.
-
Mysore23 hours agoಕಳಲೆ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ್
