Deficiency
ಸೆ.25 ರಂದು “ಜನತಾ ದರ್ಶನ” ಕಾರ್ಯಕ್ರಮ

ಹಾಸನ ಸೆ.21 :- “ಜನತಾ ದರ್ಶನ” ಕಾರ್ಯಕ್ರಮವು ರಾಜ್ಯ ಸರ್ಕಾರದ ಬಹುಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರ ಕುಂದುಕೊರತೆ ಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ, ನಿಗಧಿತ ಕಾಲಾವಧಿಯೊಳಗೆ ಸೂಕ್ತ ಪರಿಹಾರವನ್ನು ಒದಗಿಸುವ ಉದ್ದೇಶವನ್ನು ಹೊಂದಿರುತ್ತದೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಜನತಾ ದರ್ಶನ” ಕಾರ್ಯಕ್ರಮ ಕುರಿತು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದ ಸಮಸ್ಯೆಗಳನ್ನು ಕುರಿತು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲನ್ನು ಸಲ್ಲಿಸುತ್ತಿದ್ದು, ಸದರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಸೆ.25 ರಂದು ಏಕಕಾಲದಲ್ಲಿ ಆಯಾ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು “ಜನತಾ ದರ್ಶನ” ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರ ಅಹವಾಲನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವಂತೆ ಆದೇಶಿಸಲಾಗಿರುತ್ತದೆ.
ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲ್ಲೂಕನ್ನು ಆಯ್ಕೆ ಮಾಡಿಕೊಂಡು ತಾಲ್ಲೂಕು ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಆದೇಶವಿದ್ದು, ಈ ನಿಟ್ಟಿನಲ್ಲಿ ಮೊದಲನೆಯ ಜನತಾ ದರ್ಶನ ಕಾರ್ಯಕ್ರಮವನ್ನು ಸೆ. 25 ರಂದು ಬೆಳಗ್ಗೆ 11 ಗಂಟೆಯಿಂದ ಹಾಸನ ನಗರದ ಡೈರಿ ವೃತ್ತ ದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸ್ಥಳದಲ್ಲಿಯೇ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಿದ್ದರೆ ಬಗೆಹರಿಸಲಾಗು ವುದು ಎಂದು ಅವರು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಅನ್ಯ ಕಾರ್ಯನಿಮಿತ್ತ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಪ್ರಚಾರಕ್ಕೆ ಅಗತ್ಯ ಕ್ರಮವಹಿಸುವಂತೆ ಎಲ್ಲಾ ತಹಸೀಲ್ದಾರ್ ರವರಿಗೆ ನಿರ್ದೇಶನ ನೀಡಲಾಗಿರುತ್ತದೆ. ಕಾರ್ಯಕ್ರಮಕ್ಕೆ ಸಂಬಂಧಿಸಿದ ಎಲ್ಲಾ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸಿ ಪತ್ರ ಬರೆಯಲಾಗಿರುತ್ತದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಟಾ ಧಿಕಾರಿ ಭಾಗವಹಿಸಲಿರುವರು. ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಿದ್ದು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಒಂದೇ ಸೂರಿನಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು.
“ಜನತಾ ದರ್ಶನ” ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಸಮಸ್ಯೆಗಳ ಕುರಿತಂತೆ ಅಹವಾಲುಗಳನ್ನು ಸಲ್ಲಿಸಿ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬಹುದಾಗಿರುತ್ತದೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಕುರಿತಂತೆ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಎಂದು ತಿಳಿಸಿದರು.
ಸರ್ಕಾರದ ಆದೇಶದಂತೆ ಸಾರ್ವಜನಿಕರಿಂದ ಸ್ವೀಕೃತವಾಗುವ ಅರ್ಜಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ(IPGRS) ತಂತ್ರಾಂಶದಲ್ಲಿ ದಾಖಲಿಸಿ, ಅರ್ಜಿಗಳನ್ನು ಪರಿಶೀಲಿಸಿ ನಿಗಧಿತ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯಗಳನ್ನು ಒದಗಿಸಲು ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಅವರು ತಿಳಿಸಿದ್ದಾರೆ. ಅಪರ ಜಿಲ್ಲಾಧಿಕಾರಿ ಕೆ. ಟಿ. ಶಾಂತಲಾ ಉಪಸ್ಥಿತರಿದ್ದರು.
Deficiency
ತೆಂಗಿನ ಬೆಳೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಮತ್ತು ಪ್ರತ್ಯಕ್ಷಿತೆ ಕಾರ್ಯಕ್ರಮ

ಸಾಲಿಗ್ರಾಮ : ತೆಂಗಿನ ಬೆಳೆ ಕೀಟ ನಿಯಂತ್ರಣ ತರಬೇತಿ ತೋಟಗಾರಿಕೆ ಇಲಾಖೆ ಹಾಗು ತೋಟಗಾರಿಕೆ ಮಹಾವಿದ್ಯಾಲಯ ಇವರ ಸಹ ಬಾಗಿತ್ವದಲ್ಲಿ ತೆಂಗಿನ ಬೆಳೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಮತ್ತು ಪ್ರತ್ಯಕ್ಷಿತೆ ಕಾರ್ಯಕ್ರಮ ವನ್ನು ಮಿರ್ಲೆ ಹೋಬಳಿಯ ಎಲೆಮುದ್ದನಹಳ್ಳಿ ಕೊಪ್ಪಲು ಗ್ರಾಮದ ರೈತ ಪುಟ್ಟಸ್ವಾಮಿಗೌಡ ಅವರ ತೆಂಗಿನತೋಟದಲ್ಲಿ ಅಕ್ಟೋಬರ್ 31 ರ ಮಂಗಳವಾರ ಬೆಳ್ಳಿಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಟಿ. ಎಸ್. ಭಾರತಿ ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಡಿ. ರವಿಶಂಕರ್ ನೆರವೇರಿಸಳಲಿದ್ದು, ಮುಖ್ಯ ಅತಿಥಿಗಳಾಗಿ ತೋಟಗಾರಿಕೆ ಉಪ ನಿರ್ದೇಶಕ ಡಾ: ಮಂಜುನಾಥ್ ಅಂಗಡಿ,ಡಾ : ಸುದರ್ಶನ್, ಡಾ : ಮುತ್ತು ರಾಜ್, ಭಾಗವಹಿಸಲಿದ್ದಾರೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೆಂಗಿನ ಬೆಲೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಪಡೆದುಕೊಳ್ಳುವಂತೆ ಕೊರಿದ್ದಾರೆ.
ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
Deficiency
ಅಧಿಕಾರಿಗಳು ಹಣ ಮಾಡೋದು ಒಂದೇ ದಾರಿಯಲ್ಲ ರೈತರ ಜೊತೆ ಸರಿಯಾಗಿ ನಡೆದುಕೊಳ್ಳಬೇಕು

ಹುಣಸೂರು : ಅಧಿಕಾರಿಗಳು ಹಣ ಮಾಡೋದು ಒಂದೇ ದಾರಿಯಲ್ಲ ರೈತರ ಜೊತೆ ಸರಿಯಾಗಿ ನಡೆದುಕೊಳ್ಳಬೇಕು ಎಂದು ಕೆಲವರು ಆರೋಪಿಸಿದರೆ, ಕೆಲವರು ಸಣ್ಣ ಪುಟ್ಟ ರೈತರ ಮೇಲೆ ನಡೆಯುವ ತೊಂದರೆಗಳನ್ನು ಪ್ರಶ್ನೆಸಿದರೆ ಆ ರೈತರಿಗೆ ಅಧಿಕಾರಿಗಳು ಮಾನಸಿಕವಾಗಿ ತೊಂದರೆ ನೀಡುತ್ತಾರೆ ಆದರೆ ಈಗ ರೈತನಿಗೆ ಶೂ ನಲ್ಲಿ ಹೊಡೆಯಲು ಮುಂದಾಗಿರೋ ಅಧಿಕಾರಿಗೆ ಏನು ಕ್ರಮ ಕೈಗೊಳ್ಳಬೇಕು ಎಂದು ರೈತರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಸಭೆಯಲ್ಲಿ ಹೊರಹಾಕಿದ್ದು ಹೀಗೆ.
ಅವರು ಹುಣಸೂರು ತಾಲೂಕಿನ ಚಿಲ್ಕುಂದ ಗ್ರಾಮದ ತಂಬಾಕು ಮಂಡಳಿಯ ರೈತ ಭವನದಲ್ಲಿ ಪ್ಲಾಟ್ ಫಾರಂ ನಂಬರ್ 62ರ ಹರಾಜು ಅಧೀಕ್ಷಕ ಬ್ರಿಜ್ ಭೂಷಣ್ ವಿರುದ್ಧ ರೈತರು ಸೋಮವಾರ ಸಭೆ ಸೇರಿ ಚರ್ಚಿಸಿ ನಿರ್ಣಯ ಕೈಗೊಂಡು ತಂಬಾಕು ಮಂಡಳಿಯ ಅಧಿಕಾರಿ ಒಬ್ಬ ತಂಬಾಕು ರೈತನಿಗೆ ಶೂ ನಿಂದ ಹೊಡೆಯಲು ಮುಂದಾಗಿರುವುದು ರೈತ ಕುಲಕ್ಕೆ ಅವಮಾನ ಆ ಅಧಿಕಾರಿಯನ್ನು ಕರ್ನಾಟಕ ರಾಜ್ಯದಿಂದ ವರ್ಗಾವಣೆ ಮಾಡಬೇಕು, ಹಾಗೂ ಆತ ಸಭೆಯಲ್ಲಿ ಕ್ಷಮೆ ಕೇಳಬೇಕು ಜೊತೆಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳು ವಿಚಾರಣೆ ಕೈಗೊಳ್ಳಬೇಕು ಎಂದು ಸಭೆಯಲ್ಲಿ ತೀರ್ಮಾನ ಕೈಗೊಂಡು ಈ ನಿರ್ಣಯವನ್ನು ಸಭೆಯಲ್ಲಿ ಸರ್ವ ಸದಸ್ಯರಿಂದ ಒಪ್ಪಿಗೆ ಪಡೆದ ಗೊಬ್ಬರ ಕಮಿಟಿಯ ಅಧ್ಯಕ್ಷ ಅಣ್ಣೂರು ಕಾಳೇಗೌಡ ಈ ನಿರ್ಣಯವನ್ನು ಓದಿ ತಿಳಿಸಿದರು.
ಈ ನಿರ್ಣಯದ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಲು ಆರ್.ಎಂ. ಓ ಲಕ್ಷ್ಮಣ್ ರಾವ್ ರವರಿಗೆ ನೀಡಿದರು. ಕಾರ್ಯಕ್ರಮದಲ್ಲಿ ತಂಬಾಕು ಮಂಡಳಿಯ ಉಪಾಧ್ಯಕ್ಷ ಬಸವರಾಜಪ್ಪ, ಸದಸ್ಯರಾದ ವಿಕ್ರಂ ಗೌಡ ,ದಿನೇಶ್ , ಗೊಬ್ಬರ ಕಮಿಟಿಯ ಉಪಾಧ್ಯಕ್ಷ ಮಂಜುನಾಥ್ ಕೆರೆಗೋಡು, ಕಾರ್ಯದರ್ಶಿ ಮರಿಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಡಿಎಸ್ಎಸ್ ಸಂಚಾಲಕ ರಾಮಕೃಷ್ಣ ಅತ್ತಿಕುಪ್ಪೆ, ಪ್ರಭಾಕರ್, ಮೋದೂರು ಶಿವಣ್ಣ, ದೇವರಾಜ್, ಉಂಡವಾಡಿ ಚಂದ್ರೇಗೌಡ, ರವಿಕುಮಾರ್, ನವೀನ್, ಅಗ್ರಹಾರ ರಾಮೇಗೌಡ ಸೇರಿದಂತೆ ಸಾವಿರಾರು ರೈತರು ಭಾಗವಹಿಸಿದ್ದರು.
Chikmagalur
ಧಾರಾಕಾರ ಮಳೆಗೆ ಎರಡು ಮನೆಗಳಿಗೆ ಹಾನಿ

ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ಪಶ್ಚಿಮ ಘಟಕ್ಕೆ ಹೊಂದಿಕೊಂಡಂತೆ ಇರುವ ಮಲೆನಾಡಿನ ಪ್ರದೇಶಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮೂಡಿಗೆರೆ ತಾಲೂಕಿನಲ್ಲಿ ಎರಡು ಮನೆಗಳು ಕುಸಿದಿವೆ. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಚಿನ್ನಿಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣಜೂರು ಗ್ರಾಮದಲ್ಲಿ ದಿನೇಶ್ ಎಂಬುವವರು ಮನೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಕುಸಿದಿದೆ. ಹಾಗೆಯೇ ಬಾಳೂರು ಹೋಬಳಿ ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗೂರು ಗ್ರಾಮದಲ್ಲಿ ಮನೆಯೊಂದು ಕುಸಿದಿದೆ.
ಮೇಗೂರು ಗ್ರಾಮದ ರಾಮಯ್ಯ ಎಂಬುವವರ ಮನೆ ಮಳೆಯಿಂದಾಗಿ ಕುಸಿದು ಬಿದ್ದಿದೆ. ಮನೆಯ ಗೋಡೆ ಮತ್ತು ಮೇಲ್ಚಾವಣಿ ಬಹುತೇಕ ಕುಸಿದು ಬಿದ್ದಿದೆ. ಈ ಸಮಯದಲ್ಲಿ ಮನೆಯವರು ಒಳಗಡೆಯೇ ಇದ್ದರು ಎಂದು ತಿಳಿದುಬಂದಿದ್ದು. ಮನೆಯವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಕಂದಾಯ ಮತ್ತು ಗ್ರಾಮ
ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅವರ ಮನೆಗೆ ತಾತ್ಕಾಲಿಕ ರಕ್ಷಣೆಗಾಗಿ ಟಾರ್ಪಲ್ ಹೊದಿಸಲು ವ್ಯವಸ್ಥೆ ಮಾಡಿದ್ದು. ಕುಟುಂಬದವರನ್ನು ಪಕ್ಕದ ಮನೆಗೆ ಸ್ಥಳಾಂತರಿಸಲಾಗಿದೆ.
-
Mandya23 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State20 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Kodagu24 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan23 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan21 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
State20 hours ago
16ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
-
State22 hours ago
ಕೇರಳದಲ್ಲಿ ಜೂ.17ರವರೆಗೂ ವ್ಯಾಪಕ ಮಳೆ: ರಾಜ್ಯದ ಮೀನುಗಾರರಿಗೆ ಐಎಂಡಿ ಎಚ್ಚರಿಕೆ
-
Kodagu24 hours ago
ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ