Hassan
ಹಾಸನ : ಮೂರನೇ ದಿನದ ಪುಂಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ
HASSAN-BREAKING
ಹಾಸನ : ಮೂರನೇ ದಿನದ ಪುಂಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ
ಮತ್ತೊಂದು ದೈತ್ಯಾಕಾರದ ನರಹಂತಕ ಕಾಡಾನೆ ಸೆರೆ
ಸೀಗೆ ಹೆಸರಿನ ಒಂಟಿಸಲಗವನ್ನು ಸೆರೆಹಿಡಿದ ಅರಣ್ಯ ಇಲಾಖೆ ತಂಡ
ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹೆತ್ತೂರು ಹೋಬಳಿ ನಿಡಿಗೆರೆ ಪಾರೆಸ್ಟ್‌ನಲ್ಲಿ ಸೆರೆ
ನಿನ್ನೆ ಮಧ್ಯಾಹ್ನ ಏಳು ಕಾಡಾನೆಗಳೊಂದಿಗೆ ಸೆರೆ ಹಿಡಿಯುವ ಕಾರ್ಯಾಚರಣೆ ಆಪರೇಷನ್ ಎಲಿಫೆಂಟ್ ಟೀಂ
ಸೀಗೆ ಕಾಡಾನೆ ಕಾಡಿನೊಳಗೆ ಸೇರಿಕೊಂಡಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು
ಇಂದು ಬೆಳಿಗ್ಗೆಯಿಂದಲೇ ನರಹಂತಕ ಸೀಗೆ ಕಾಡಾನೆಯನ್ನು ಟ್ರ್ಯಾಕ್ ಮಾಡಿದ ಇಟಿಎಫ್ ಸಿಬ್ಬಂದಿ
ನಿಡಿಗೆರೆ ಅರಣ್ಯ ಪ್ರದೇಶದಲ್ಲಿದ್ದ ನರಹಂತಕ ಕಾಡಾನೆ
ಬಿಕ್ಕೋಡು ಬಳಿಯಿರುವ ತಾತ್ಕಾಲಿಕ ಕಾಡಾನೆ ಶಿಬಿರದಿಂದ ಲಾರಿಗಳ ಮೂಲಕ ನಿಡಿಗೆರೆ ಅರಣ್ಯ ಪ್ರದೇಶದಕ್ಕೆ ಸಾಕಾನೆಗಳನ್ನು ಸ್ಥಳಾಂತರ ಮಾಡಿದ ಆಪರೇಷನ್ ಎಲಿಫೆಂಟ್ ಟೀಂ
ಮ.12:20 ಕ್ಕೆ ಅರವಳಿಕೆ ಚುಚ್ಚುಮದ್ದು ನೀಡಿ ವೈದ್ಯರು
ಕಿಲೋಮೀಟರ್‌ಗಟ್ಟಲೆ ಓಡಿ ಮ.12.38 ಕ್ಕೆ ಪ್ರಜ್ಞೆತಪ್ಪಿ ಬಿದ್ದ ಸೀಗೆ
ಕಾಡಾನೆ ಆರೈಕೆ ಮಾಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ
ನಂತರ ನರಹಂತಕ ಕಾಡಾನೆಯನ್ನು ಸ್ಥಳಾಂತರ ಮಾಡಲಿರುವ ಆಪರೇಷನ್ ಎಲಿಫೆಂಟ್ ತಂಡ
ಅಭಿಮನ್ಯು ನೇತೃತ್ವದಲ್ಲಿ ನಡೆದ ಆಪರೇಷನ್ ಸೀಗೆ
ಆಪರೇಷನ್ ಭಾಗಿಯಾಗಿದ್ದ ಸಾಕಾನೆಗಳಾದ ಅಭಿಮನ್ಯು, ಹರ್ಷ, ಪ್ರಶಾಂತ, ಕರ್ನಾಟಕ ಭೀಮ, ಮಹೇಂದ್ರ ಧನಂಜಯ, ಅಶ್ವತ್ಥಾಮ
ಇಬ್ಬರನ್ನು ಬಲಿ ಪಡೆದಿದ್ದ ಸೀಗೆ ಹೆಸರಿನ ಕಾಡಾನೆ
ಹಲವರ ಮೇಲೆ ದಾಳಿ ಮಾಡಿ ಗಾಯಗೊಳಿಸಿ ಆತಂಕ ಸೃಷ್ಟಿಸಿದ್ದ ಸೀಗೆ
ಸೀಗೆ ಸೆರೆಯಿಂದ ನಿಟ್ಟುಸಿರು ಬಿಟ್ಟ ಮಲೆನಾಡು ಭಾಗದ ಜನರು
Hassan
ನಾಳೆ ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿ ಅವರಿಂದ ಸದ್ಯೋಧನ ಪಾದಯಾತ್ರೆ
ವರದಿ: ಸತೀಶ್ ಚಿಕ್ಕಕಣಗಾಲು
ಆಲೂರು: ಶ್ರೀಮದ್ ರಂಭಾಪುರಿ ವೀರಾ ಸಿಂಹಾಸನ ಶಾಖಾ ಶ್ರೀ ಸಂಸ್ಥಾನ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿ (ನಾಳೆ) ಡಿ.14ರಂದು ಸದ್ಯೋಧನ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ ಎಂದು ಶ್ರೀಮಠದಿಂದ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ.
ಡಿ.14ರ ಭಾನುವಾರ ಬೆಳಿಗ್ಗೆ 09.30 ಗಂಟೆಗೆ ಕಾರ್ಜುವಳ್ಳಿ ಕುಡಿಗೆಯಲ್ಲಿ ಪಂಚಾಚಾರ್ಯ ಧ್ವಜಾರೋಹಣ ನೆರವೇರಿಸಿ ನಂತರ ಶಿವಾಚಾರ್ಯರ ಪಾದಯಾತ್ರೆ ಪ್ರಾರಂಭಿಸಲಾಗುವುದು. ಪಾದಯಾತ್ರೆಯ ಮಾರ್ಗಮಧ್ಯೆ ಭಕ್ತರಿಗೆ ರುದ್ರಾಕ್ಷ, ವಿಭೂತಿ ಧಾರಣೆ, ಶ್ರೀ ಸಿದ್ಧಾಂತ ಶಿಖಾಮಣಿ ಗ್ರಂಥ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರ ವಿತರಣೆ ಮಾಡಲಾಗುವುದು.

ನಂತರ 11.00 ಗಂಟೆಗೆ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಮುಂದೆ ಪಾದಯಾತ್ರೆ ಮಂಗಲವಾಗುವುದು. ಆನಂತರ ಶ್ರೀವೀರಭದ್ರ ಸ್ವಾಮಿ ದೇವಸ್ಥಾನದ ಬಳಿ ಪ್ರಸಾದ ವಿನಿಯೋಗವಿರುತ್ತದೆ. ಶ್ರೀ ಮಠವನ್ನು ತಲುಪಲು ಸಹಾಯಕ್ಕಾಗಿ ಗೂಗಲ್ ಮ್ಯಾಪ್ ಅನ್ನು ಹಾಗೂ ಲೊಕೇಶನ್ ಸಹ ಕಳುಹಿಸಲಾಗಿದೆ. ಶ್ರೀಮಠದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ನೆರವೇರಿಸಿ ಕೊಡುವುದರ ಜೊತೆಗೆ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಲಾಗಿದೆ.
Hassan
ರೋಟರಿ ಬೆಂಗಳೂರು ದಕ್ಷಿಣದಿಂದ MCE ಕಾಲೇಜಿನ 51 ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ
ಹಾಸನ: ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ರೋಟರಿ ಬೆಂಗಳೂರು ದಕ್ಷಿಣ ವತಿಯಿಂದ 7ನೇ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಕಾಲೇಜು ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಒಟ್ಟು 51 ವಿದ್ಯಾರ್ಥಿಗಳಿಗೆ ವಾರ್ಷಿಕ ಶುಲ್ಕದ ಆಧಾರದಲ್ಲಿ 15 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಬೆಂಗಳೂರು ದಕ್ಷಿಣ ಜಿಲ್ಲೆಯ ಸದಸ್ಯರೂ ಹಾಗೂ ವಿದ್ಯುತ್ ನಿಗಮದ ಕಾರ್ಯಪಾಲಕ ಇಂಜಿನಿಯರ್ ಸುಮಂತ್ ಮಾತನಾಡಿ, ಸಾಮಾಜಿಕ ಸೇವೆಯ ಮನೋಭಾವನೆ ಪ್ರತಿಯೊಬ್ಬರಲ್ಲೂ ಇರಬೇಕು. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದು ನಮ್ಮ ಕರ್ತವ್ಯ. ವಿದ್ಯಾರ್ಥಿ ವೇತನ ಪಡೆದವರು ಇದರ ಸದುಪಯೋಗ ಪಡೆದು ಮುಂದಿನ ದಿನಗಳಲ್ಲಿ ತಮ್ಮ ವೃತ್ತಿಜೀವನ ಆರಂಭಿಸಿದ ಬಳಿಕ ಸಮಾಜಕ್ಕೆ ಮರಳಿ ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ರೋಟರಿ ಬೆಂಗಳೂರು ದಕ್ಷಿಣದ ಮಾಜಿ ಅಧ್ಯಕ್ಷ ಚಂದ್ರಶೇಖರ್ ಸಾಚ್ವಿ ಮಾತನಾಡಿ, ಮೊದಲು ಬೆಂಗಳೂರು ನಗರಕ್ಕೆ ಸೀಮಿತವಾಗಿದ್ದ ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ಈಗ ಗ್ರಾಮಾಂತರ ಪ್ರದೇಶಗಳ ಇಂಜಿನಿಯರಿಂಗ್ ಕಾಲೇಜುಗಳಿಗೂ ವಿಸ್ತರಿಸಲಾಗಿದೆ. ಕಳೆದ ಏಳು ವರ್ಷಗಳಿಂದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆಯುತ್ತಿರುವುದು ಸಂತಸದ ವಿಷಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಆರ್.ಟಿ. ದ್ಯಾವೆಗೌಡ ಮಾತನಾಡಿ, ರೋಟರಿ ಬೆಂಗಳೂರು ದಕ್ಷಿಣ ಸಂಸ್ಥೆಯು ನಿರಂತರವಾಗಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಹಕಾರ ನೀಡುತ್ತಿದ್ದು, ಇದರಿಂದ ಅನೇಕ ಬಡ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗುತ್ತಿದೆ ಎಂದರು.
ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಚೌಡುವಳ್ಳಿ ಜಗದೀಶ್ ಮಾತನಾಡಿ, ಹಣವಿರುವವರಿಂದ ಸಂಪನ್ಮೂಲ ಸಂಗ್ರಹಿಸಿ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಗೆ ನೆರವಾಗುತ್ತಿರುವ ರೋಟರಿ ಸಂಸ್ಥೆಯ ಸೇವೆ ಶ್ಲಾಘನೀಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ವೇತನವನ್ನು ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಹಾಸನದ ಉದ್ಯಮಿ ಹಾಗೂ ಕಾಲೇಜಿನ ಹಳೆಯ ವಿದ್ಯಾರ್ಥಿ ಗೋವರ್ಧನ್ ಕುಮಾರ್, ರೋಟರಿ ಸಂಸ್ಥೆಯ ಅಧ್ಯಕ್ಷ ಶಿವರಾಮ್, ಹಾರನಹಳ್ಳಿ ಉನ್ನತ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಿ.ಬಿ. ಹೇಮಂತ್ ಕುಮಾರ್, ಮಲೆನಾಡು ಇಂಟರ್‌ನ್ಯಾಷನಲ್ ಶಾಲೆಯ ಉಪಾಧ್ಯಕ್ಷ ಬಿ.ಆರ್. ರಾಜಶೇಖರ್, ಎವಿಕೆ ಪಿಯು ಕಾಲೇಜಿನ ಉಪಾಧ್ಯಕ್ಷ ನಾಗರಾಜ್ ಜೈನ್, ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಸುರೇಶ್, ಶಾಂತಿಗ್ರಾಮ ಶಂಕರ್, ಕಾರ್ಯಕ್ರಮ ಸಂಯೋಜಕರಾದ ಡಾ. ಜೀವನ್, ಪ್ರಾಧ್ಯಾಪಕಿ ದಿವ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Hassan
ಡಿ.22 ರಿಂದ 24ರವರೆಗೂ ಹಳೇಬೀಡಿನಲ್ಲಿ ಶಾಂತಲಾ ಮಹೋತ್ಸವ: ಕೆ.ಎಸ್.ಲಿಂಗೇಶ್
ಹಾಸನ: ಇದೇ ಡಿ.22 ಮತ್ತು 23 ರಂದು ಬೇಲೂರು ತಾಲೂಕು ಹಳೇಬೀಡಿನ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಶಾಂತಲಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ಎಸ್.ಲಿಂಗೇಶ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ದಿನ ಮಂಗಳವಾರ ಸಂಜೆ 4 ಗಂಟೆಗೆ ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಮೆರವಣಿಗೆ ಅಂಬೇಡ್ಕರ್ ವೃತ್ತದಿಂದ ಹೊಯ್ಸಳೇಶ್ವರ ವೃತ್ತದವರೆಗೆ ನಡೆಯಲಿದೆ ಎಂದರು.

ಆ ನಂತರ ಸ್ಥಳೀಯ ಕಲಾವಿದರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿ ಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಖ್ಯಾತ ಮಿಮಿಕ್ರಿ ಕಲಾವಿದ ಗೋಪಿ ಅವರಿಂದ ಹಾಸ್ಯ ವೈಭವ ಹಮ್ಮಿಕೊಳ್ಳಲಾಗಿದೆ. ಪೌರಾಣಿಕ ನಾಟಕ ಪ್ರದರ್ಶನ ಜೊತೆಗೆ ಪುಸ್ತಕ ಬಿಡುಗಡೆ ಸಹ ಇರಲಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ, ಹಳೇಬೀಡು ಗ್ರಾಪಂ, ಹೊಯ್ಸಳೇಶ್ವರ ಪ್ರವಾಸೋದ್ಯಮ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಹಳೇಬೀಡು ಕಸಾಪ, ಸ್ತ್ರೀ ಶಕ್ತಿ ಸಹಾಯ ಸಂಘಗಳು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಹಾಗೂ ಸ್ಥಳೀಯ ಮುಖಂಡರು ಮಹೋತ್ಸವದ ಆಯೋಜಕರಾಗಿದ್ದಾರೆ ಎಂದರು.

ಡಿ.23 ರಂದು ಆಳ್ವಾಸ್ ಪ್ರತಿಷ್ಠಾನ ಮೂಡಬಿದಿರೆ ಇವರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ. ಕಲಾತ್ಮಕ ಯೋಗ, ಶಾಸ್ತ್ರೀಯ ನೃತ್ಯ-ಅಷ್ಟಲಕ್ಷ್ಮಿ,ಆಂಧ್ರದ ಜನಪದ ಬಂಜಾರ ನೃತ್ಯ, ಬಡಗುತಿಟ್ಟು ಯಕ್ಷಗಾನ-ಶಂಕರಾರ್ಧ ಶರೀರಿಣಿ, ಮಣಿಪುರಿ ಸ್ಟಿಕ್ ಡ್ಯಾನ್ಸ್, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಲ್ಲಕಂಬ ಹಾಗೂ ರೋಪ್ ಕಸರತ್ತು, ಸೃಜನಾತ್ಮಕ ನೃತ್ಯ, ಕಥಕ್ ನೃತ್ಯ- ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ಯಕ್ಷಗಾನ ಶ್ರೀರಾಮ ಪಟ್ಟಾಭಿಷೇಕ, ಬೊಂಬೆ ವಿನೋದಾವಳಿ ಸಾಂಸ್ಕೃತಿಕ ವೈಭವದ ವಿಶೇಷತೆ ಎಂದು ಹೇಳಿದರು.
13 ವರ್ಷಗಳ ಹಿಂದೆ ಹಳೇಬೀಡಿನಲ್ಲಿ ಹೊಯ್ಸಳೋತ್ಸವ ನಡೆದಿತ್ತು. ಅಲ್ಲಿಂದ ಇಲ್ಲಿಯವರೆಗೆ ನಡೆದಿಲ್ಲ. ಹೊಯ್ಸಳೋತ್ಸವದ ಕೊರಗು ನೀಗಿಸಿ, ಸ್ಥಳೀಯ ಹಾಗೂ ಸುತ್ತಮುತ್ತಲ ಜನರಿಗೆ ಮನರಂಜನೆ ನೀಡಲು ಶಾಂತಲಾ ಮಹೋತ್ಸವ ನಡೆಸಲಾಗುತ್ತಿದೆ ಎಂದರು.

ಇದಕ್ಕೂ ಮುನ್ನ ರೈತ ದಿನಾಚರಣೆ ನಡೆಯಲಿದೆ. ನಂತರ ಸಾಂಸ್ಕೃತಿಕ ವೈಭವ, ವಸ್ತು ಪ್ರದರ್ಶನ ಇರಲಿದೆ. ಇದಕ್ಕಾಗಿ ಜನರನ್ನು ಕರೆ ತರಲು ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಹಳೇಬೀಡು ಪುಷ್ಪಗಿರಿ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್ ಮಹೋತ್ಸವ ಉದ್ಘಾಟಿಸಲಿದ್ದಾರೆ. ಇದಕ್ಕಾಗಿ ಸುಮಾರು 15 ಲಕ್ಷ ರೂ. ಖರ್ಚಾಗುತ್ತಿದ್ದು, ಪಕ್ಷಾತೀತವಾಗಿ ಎಲ್ಲ ಪಕ್ಷಗಳವರು ಭರಿಸಿದ್ದೇವೆ ಎಂದರು.

ಕಾಂಗ್ರೆಸ್ ಮುಖಂಡರಾದ ಗ್ರಾನೈಟ್ ರಾಜಶೇಖರ್, ವೈ.ಎನ್.ಕೃಷ್ಣೇಗೌಡ, ಜಿಲ್ಲಾಧ್ಯಕ್ಷ ಈ.ಹೆಚ್.ಲಕ್ಷ್ಮಣ್, ಬಿಜೆಪಿ ಮುಖಂಡ ಕೊರಟಿಕೆರೆ ಪ್ರಕಾಶ ಮೊದಲಾದವರು ಹಾಜರಿರುವರು ಎಂದರು. ಸುದ್ದಿಗೋಷ್ಟಿಯಲ್ಲಿ ಸಮಿತಿ ಸೊಪ್ಪಿನಹಳ್ಳಿ ಶಿವಣ್ಣ, ಶಿವಕುಮಾರ್, ಡಾ.ಎಂ.ಸಿ.ಕುಮಾರ್, ಶಂಕರ್‌ನಾಗ್, ಭಾನುಪ್ರಕಾಶ್ ಇದ್ದರು.
-
Hassan15 hours agoಒಳ್ಳೆಯ ಕೆಲಸ ಬ್ಯಾಂಕ್ ಠೇವಣಿಯಂತೆ; ಸಮಯ ಬಂದಾಗ ಫಲ ನೀಡುತ್ತದೆ: ರವಿಕುಮಾರ್ ಬಲ್ಲೇನಹಳ್ಳಿ
-
Kodagu15 hours agoಅನಧಿಕೃತ ಹೋಸ್ಟೇಗಳಿಗೆ ಕಡಿವಾಣ ನಿಟ್ಟಿನಲ್ಲಿ ವಾರ್ಡ್ವಾರ್ ಸಮಿತಿ ರಚನೆ: 15 ದಿನಗಳೊಳಗೆ ಪೊಲೀಸರಿಂದ ದಲ್ಲಾಳಿಗಳ ವಿರುದ್ದ ಕ್ರಮ
-
Hassan22 hours agoಟಿಕೆಟ್ ಪರಿಶೀಲನೆ ವೇಳೆ ಭೀಕರ ಅಪಘಾತ: ಲಾರಿ ಗುದ್ದಿ KSRTC ಟಿಕೆಟ್ ತನಿಖಾಧಿಕಾರಿ ಸ್ಥಳದಲ್ಲೇ ಸಾ*ವು
-
State11 hours agoರಾಹುಲ್, ಖರ್ಗೆ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಹೈಕಮಾಂಡೇ: ಬಿ.ವೈ.ವಿಜಯೇಂದ್ರ
-
State15 hours agoಡಾ.ಜಿ.ಪರಮೇಶ್ವರ್ ಈ ರಾಜ್ಯದ ಸಿಎಂ ಆಗಲಿ ಎಂಬುದು ನನ್ನ ವೈಯಕ್ತಿಕ ಆಸೆ: ವಿ.ಸೋಮಣ್ಣ
-
Mandya14 hours agoವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಆರೋಪ : ದೂರು ದಾಖಲು
-
Hassan13 hours agoರೋಟರಿ ಬೆಂಗಳೂರು ದಕ್ಷಿಣದಿಂದ MCE ಕಾಲೇಜಿನ 51 ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ
-
Kodagu13 hours agoಫೀ.ಮಾ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘದ ಸಭೆ : ಸುಸಜ್ಜಿತ ಫೈರಿಂಗ್ ರೇಂಜನ್ನು ನಿರ್ಮಾಣ ಮಾಡಲು ನಿರ್ಧಾರ
