Connect with us

State

7-9-2024 ರ ಹವಾಮಾನ ಮುನ್ಸೂಚನೆ*

Published

on

ಕರಾವಳಿ ಜಿಲ್ಲೆಗಳಲ್ಲಿ ನಿನ್ನೆ ಹಗಲು ಮೋಡದ ವಾತಾವರಣ ಇತ್ತು. ರಾತ್ರಿ ಸಾಧಾರಣ ಮಳೆಯಾಗಿದೆ.
ಬಂಗಾಳ ಕೊಲ್ಲಿ ಲೋ ಪ್ರೆಷರ್ ನಾಳೆಯಿಂದ ವಾಯುಭಾರಕುಸಿತ ಅಗಿ ಒರಿಸ್ಸಾದ ಸಮೀಪ ಬಂದು ಸೆ 10 ರ ಅಂದಾಜು ಪ. ಬಂಗಾಳದತ್ತ ಹೋಗಿ ದುರ್ಬಲ ಆಗಬಹುದು . ಇದರ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ.
ಇವತ್ತಿನ ಮುನ್ಸೂಚನೆ ಪ್ರಕಾರ ಕಾಸರಗೋಡು ದ.ಕ ಉಡುಪಿ ಉ.ಕ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಎಲ್ಲೆಡೆ ಸಾಧಾರಣ ಮಳೆ ಮುನ್ಸೂಚನೆ ಇದೆ. ಸಂಜೆ – ರಾತ್ರಿ ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು. ಬೆಳ್ತಂಗಡಿ ಸುಳ್ಯ ತಾ ಘಟ್ಟ ಪ್ರದೇಶಗಳಲ್ಲಿ ಮಳೆ ಪ್ರಮಾಣ ಜಾಸ್ತಿ ಇರಬಹುದು .
ಕೊಡಗು ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಮಳೆ ಮುನ್ಸೂಚನೆ ಇದೆ.

*ದಕ್ಷಿಣ ಒಳನಾಡಿನಲ್ಲಿ ಇವತ್ತು ಮಳೆ ಮುನ್ಸೂಚನೆ*
ಬೆಂಗಳೂರು – ಗ್ರಾಮಾಂತರ, ತುಮಕೂರು ಕೋಲಾರ ಮಂಡ್ಯ ರಾಮನಗರ ಹಾಸನ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆ ಮುನ್ಸೂಚನೆ ಇದೆ. ಚಿಕ್ಕಬಳ್ಳಾಪುರ ಬಳ್ಳಾರಿ ಚಿತ್ರದುರ್ಗ ಹಾವೇರಿ ಮೈಸೂರು ಚಾಮರಾಜನಗರ ಮೈಸೂರು ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಣ್ಣ ಮಳೆ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಕಲ್ಬುರ್ಗಿ ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ಇದೆ. ಯಾದಗಿರಿ ರಾಯಚೂರು ಕೊಪ್ಪಳ ಧಾರವಾಡ ಬೆಳಗಾವಿ ಬಿಜಾಪುರ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ತುಂತುರು ಮಳೆ ಸಾಧ್ಯತೆ ಇದೆ.
ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12 ತನಕ ಮಳೆ ಮುಂದುವರಿಯಲಿದ್ದು ಸೆ 13 ರಿಂದ ಮಳೆ ಕಡಿಮೆ ಆಗಬಹುದು. ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನದಲ್ಲಿ ಮಳೆ ಕಡಿಮೆ ಆಗಲಿದೆ.

Continue Reading

Mandya

ಹಾಸ್ಟೆಲ್ ಹಾಗೂ ಹೊರಗುತ್ತಿಗೆ ಸಿಬ್ಬಂದಿಗಳ ಸಮಸ್ಯೆಗಳನ್ನು ಪರಿಹರಿಸದಿದ್ದಲ್ಲಿ ವಿಧಾನಸೌಧದ ಎದುರು ಪ್ರತಿಭಟನೆ

Published

on

ಮಂಡ್ಯ: ಹಾಸ್ಟೆಲ್ ಹಾಗೂ ಹೊರಗುತ್ತಿಗೆ ಸಿಬ್ಬಂದಿಗಳ ಸಮಸ್ಯೆಗಳನ್ನು ಪರಿಹರಿಸದಿದ್ದಲ್ಲಿ ಅಕ್ಟೋಬರ್ ನಲ್ಲಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಅಧ್ಯಕ್ಷ ಭೀಮಶೆಟ್ಟಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಳೆದ 20 ವರ್ಷದಿಂದ ಕಡಿಮೆ ಸಂಬಳಕ್ಕೆ ವಸತಿ ನಿಲಯ ಶಾಲಾ, ಕಾಲೇಜುಗಳಲ್ಲಿ ಅಡಿಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಕಂಪ್ಯೂಟರ್ ಆಪರೇಟರ್, ನರ್ಸ್ ಗಳು ಯಾವುದೇ ಭದ್ರತೆ ಇಲ್ಲದೆ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಗುತ್ತಿಗೆದಾರರು , ವಾರ್ಡನ್ ಗಳು, ತಾಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಹೊರಗುತ್ತಿಗೆ ಸಿಬ್ಬಂದಿಗಳನ್ನು ಶೋಷಣೆ ಮಾಡುತ್ತಿದ್ದಾರೆ. ಸರಿಯಾಗಿ ಸಂಬಳ ವಿತರಿಸುತ್ತಿಲ್ಲ ಎಂದು ದೂರಿದರು.

ರಾಜ್ಯ ಸರ್ಕಾರ ನೇರವಾಗಿ ಇಲಾಖೆಯಿಂದ ವೇತನ ಮತ್ತು ನಿವೃತ್ತಿಯವರೆಗೆ ಸೇವಾ ಭದ್ರತೆ ನೀಡಬೇಕು. 10 ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ಎಲ್ಲರನ್ನೂ ತರಬೇಕು .ಮಾಸಿಕ ಕನಿಷ್ಠ ವೇತನ 31,000 ರೂಪಾಯಿ ನೀಡಬೇಕು. ಕಾರ್ಮಿಕ ಕಾನೂನಿನ ಪ್ರಕಾರ ವಾರದ ರಜೆ ಮತ್ತು ಕೆಲಸದ ಸಮಯವನ್ನು ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ಗುತ್ತಿಗೆದಾರರು ಇಎಸ್ಐ ಮತ್ತು ಪಿಎಫ್ ಹಣ ತುಂಬುತ್ತಿಲ್ಲ. ಆದ್ದರಿಂದ ಈ ಬಗ್ಗೆ ಕ್ರಮ ಕೈಗೊಳ್ಳಬೇಕು .ಪ್ರತಿ ತಿಂಗಳು ಐದನೇ ತಾರೀಕು ಸಂಬಳ ನೀಡಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು ಎಂದು ತಾಕೀತು ಮಾಡಿದರು.

ನಿವೃತ್ತಿಯ ನಂತರ ಜೀವನ ನಿರ್ವಹಣೆಗೆ 10 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಖಾಯಂ ನೌಕರರ ಸ್ಥಳಗಳಿಗೆ ಖಾಯಂ ನೌಕರರನ್ನು ವರ್ಗಾವಣೆ ಮಾಡಬೇಕು ಸೇರಿದಂತೆ 21 ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು .ಇಲ್ಲದಿದ್ದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ಸಿಐಟಿಯು ಮಂಡ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ ಮಾತನಾಡಿ,ಹೊರಗುತ್ತಿಗೆ ನೌಕರರ ಹೋರಾಟವನ್ನು ಬೆಂಬಲಿಸುವುದಾಗಿ ತಿಳಿಸಿದರು. ಸಂಬಳವನ್ನು ವಿಳಂಬ ಮಾಡಲಾಗುತ್ತಿದ್ದು ಆಯಾ ತಿಂಗಳ ಐದನೇ ತಾರೀಕಿನೊಳಗೆ ವೇತನ ನೀಡಬೇಕು. ಪಿಎಫ್ ಮತ್ತು ಈ ಎಸ್ ಐ ಹಣವನ್ನು ತುಂಬಬೇಕು. ಈ ಬಗ್ಗೆ ಜಿಲ್ಲಾಡಳಿತ,ಕಾರ್ಮಿಕ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ, ರಾಜ್ಯ ಸಮಿತಿ ಸದಸ್ಯ ಪರಶುರಾಮ, ರಾಜ್ಯ ಜಂಟಿ ಕಾರ್ಯದರ್ಶಿ ಪ್ರದೀಪ್, ಚಿಕ್ಕದೇವಮ್ಮ ಸೇರಿದಂತೆ ಇತರರು‌ ಇದ್ದರು.

Continue Reading

State

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ – ಸಚಿವ ಪ್ರಲ್ಹಾದ ಜೋಶಿ

Published

on

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ ನಡೆಸುವ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ(MP Prahalada Joshi) ಹೇಳಿದರು. ನವದೆಹಲಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಹಗರಣ(Valmiki scam), ಮುಡಾ ಹಗರಣದ(MUDA Scam) ವಿರುದ್ಧ ಬಿಜೆಪಿ ಹೋರಾಟ ನಿಲ್ಲದು ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಹೋರಾಟ ಸರಿ ದಿಕ್ಕಿನಲ್ಲೇ ಇದೆ: ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಸರಿಯಾದ ದಿಕ್ಕಿನಲ್ಲೇ ನಡೆಯುತ್ತಿದೆ. ಪಕ್ಷದೊಳಗೆ ಯಾವುದೇ ಅಪಸ್ವರವಿಲ್ಲ ಎಂದು ಫ್ರತಿಕ್ರಿಯಿಸಿದರು.

ಪಕ್ಷದ ವೇದಿಕೆಯಲ್ಲೇ ಹೋರಾಟ: ಬಿಜೆಪಿ ಹೋರಾಟಕ್ಕೆ ಮೊದಲನೇ ಪಾದಯಾತ್ರೆ, ಎರಡನೇ ಪಾದಯಾತ್ರೆ ಎನ್ನಬೇಕಿಲ್ಲ. ಪಕ್ಷದೊಳಗೆ ಎಲ್ಲರೂ ಕೂಡಿಯೇ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಮತ್ತು ಗೃಹ ಸಚಿವರು ಸೇರಿದಂತೆ ನಾಯಕರೆಲ್ಲ ಸೇರಿ ಮತ್ತೊಂದು ಸುತ್ತಿನ ಹೋರಾಟದ ಬಗ್ಗೆ ನಿರ್ಧರಿಸಲಿದ್ದಾರೆ. ರಾಜ್ಯದ ಎಲ್ಲಾ ನಾಯಕರ ಮುಂದಾಳತ್ವದಲ್ಲೇ ನಡೆಯುತ್ತದೆ ಮತ್ತೊಂದು ಪಾದಯಾತ್ರೆ ಎಂದು ಜೋಶಿ ತಿಳಿಸಿದರು.

HDK ಅಕ್ರಮ ಎಸಗಿದ್ದರೆ 8 ವರ್ಷ ಏಕೆ ಸುಮ್ಮನಿದ್ರು?: ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಕ್ರಮ ಎಸಗಿದ್ದರೆ ಕಾಂಗ್ರೆಸ್ ತಾನು ಅಧಿಕಾರದಲ್ಲಿದ್ದ 8 ವರ್ಷ ಏನು ಕತ್ತೆ ಕಾಯುತ್ತಿತ್ತಾ? ಎಂದು ಪ್ರಶ್ನಿಸಿದರು ಪ್ರಲ್ಹಾದ ಜೋಶಿ.

ಕುಮಾರಸ್ವಾಮಿ ಅವರ ಕೇಸ್ ಇದ್ದುದು 2005-06ರಲ್ಲಿ. 2013ರಿಂದ 18ರವರೆಗೆ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಇದ್ದರು. ಅವಗೇಕೆ ಸುಮ್ಮನಿದ್ದರು? ಅಲ್ಲದೇ, 20018ರಲ್ಲಿ ಕುಮಾರಸ್ವಾಮಿ ಅವರ ಕೈ ಕಾಲು ಹಿಡಿದು ಮೊದಲು ಸರ್ಕಾರ ರಚಿಸಿದ್ದೂ ಇವರೇ. ಆಗಿನ ಒಂದೂವರೆ ವರ್ಷದ ಅಡಳಿತದಲ್ಲೂ ಸುಮ್ಮನಿದ್ದರು. 2024ರ ಒಂದೂವರೆ ವರ್ಷದ ಆಡಳಿತದಲ್ಲಿ ಸಹ ಮೌನ ತಾಳಿದರು. ಈಗ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡುತ್ತಲೇ ಆರೋಪದಲ್ಲಿ ತೊಡಗಿದ್ದಾರೆ ಎಂದು ಜೋಶಿ ಹರಿ ಹಾಯ್ದರು.

ಬ್ಲಾಕ್ ಮೇಲ್ ತಂತ್ರ: ಛಲವಾದಿ ನಾರಾಯಣಸ್ವಾಮಿ ಅವರ ಮೇಲಿನ ಆರೋಪ 2004ರದ್ದು, ಮುರುಗೇಶ ನಿರಾಣಿ ಮೇಲಿನ ಆರೋಪ 2008ರದ್ದು. ಕಾಂಗ್ರೆಸ್ ನವರು ಈಗ ಏಕೆ ಮುನ್ನಲೆಗೆ ತರುತ್ತಿದ್ದಾರೆ? ಐದು ಬ್ಲಾಕ್ ಮೇಲ್ ತಂತ್ರವಲ್ಲವೇ? ಎಂದು ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ಮಾಡಿದರು.

Continue Reading

State

ಡೆಂಗ್ಯೂ ಸಾಂಕ್ರಾಮಿಕ ರೋಗ: ರಾಜ್ಯ ಸರ್ಕಾರ ಘೋಷಣೆ

Published

on

ಡೆಂಗ್ಯೂ ಜ್ವರವನ್ನು(Dengue Fever) ಸಾಂಕ್ರಾಮಿಕ ರೋಗ(Pendamic) ಎಂದು ಘೋಷಿಸಿರುವ ರಾಜ್ಯ ಸರ್ಕಾರ(State Govt), ಡೆಂಗ್ಯೂ ನಿಯಂತ್ರಣ ವಿಚಾರವಾಗಿ ಸಾರ್ವಜನಿಕರನ್ನ ಎಚ್ಚರಗೊಳಿಸುವ ಪ್ರಯತ್ನಕ್ಕೆ ಕೈಹಾಕಿದೆ. ಈ ಕುರಿತಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ(Health Minister) ದಿನೇಶ್ ಗುಂಡೂರಾವ್(Dinesh Gundu Rao) ಡೆಂಗ್ಯೂ ಸಾಂಕ್ರಾಮಿಕ ರೋಗವನ್ನಾಗಿ ಘೋಷಿಸುವುದರ ಜೊತೆಗೆ ಡೆಂಗ್ಯೂ ನಿಯಂತ್ರಣ ಮಾರ್ಗಸೂಚಿಗಳನ್ನ ಪಾಲಿಸದವರಿಗೆ ದಂಡ ಕೂಡ ಹಾಕಲಾಗುವುದು ಎಂದರು.

ಇದರಿಂದ ಆರೋಗ್ಯ ಇಲಾಖೆಗೆ ಡೆಂಗ್ಯೂ ಸಳ್ಳೆ ಉತ್ಪತ್ತಿ ತಾಣಗಳನ್ನ ಹತೋಟಿಗೆ ತರುವ ನಿಟ್ಟಿನಲ್ಲಿ ಕಾನೂನಿನ ಅಸ್ತ್ರ ಬಳಸಬಹುದಾಗಿದೆ. ಈ ಹಿಂದೆ ಬೆಂಗಳೂರು ಮತ್ತು ಮಂಗಳೂರು ಬಿಟ್ಟರೆ ರಾಜ್ಯದ ಬೇರೆ ಪ್ರದೇಶಗಳಲ್ಲಿ ಕಾನೂನಿನ ರೀತಿ ಕ್ರಮ ಕೈಗೊಳ್ಳಲು ಅವಕಾಶ ಇರಲಿಲ್ಲ ಎಂದರು.

ಡೆಂಗ್ಯೂ ಮಾರ್ಗಸೂಚಿಗಳನ್ನ ಪಾಲಿಸದಿದ್ದರೆ, ಗ್ರಾಮೀಣ ಪ್ರದೇಶದ ಮನೆಗಳಿಗೆ 200 ರೂ. ಹಾಗೂ ನಗರ ಪ್ರದೇಶಗಳಲ್ಲಿ 400 ರೂಪಾಯಿ ದಂಡ ವಿಧಿಸಲಾಗುವುದು. ಅಲ್ಲದೇ ಶಾಲಾ ಕಾಲೇಜು, ಹೊಟೆಲ್, ಲಾಡ್ಜ್, ರೆಸಾರ್ಟ್ ಗಳು ಸೇರಿದಂತೆ ವಾಣಿಜ್ಯ ಸಂಘ, ಸಂಸ್ಥೆಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ 500 ಹಾಗೂ ನಗರ ಪ್ರದೇಶಗಳಲ್ಲಿ 1000 ರೂ. ದಂಡ ನಿಗದಿಪಡಿಸಲಾಗಿದ್ದು, ಕಟ್ಟಡ ನಿರ್ಮಾಣ, ಹೊರಾಂಗಣ ಸ್ಥಳಗಳಲ್ಲಿ ಗ್ರಾಮೀಣ ಪ್ರದೇಶಗಳಿಗೆ 1000 ರೂ. ಹಾಗೂ ನಗರ ಪ್ರದೇಶಗಳಲ್ಲಿ 2000 ರೂ. ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

 


ಈಡಿಸ್ ಸೊಳ್ಳೆಗಳ ಲಾರ್ವಾ ಉತ್ಪತ್ತಿಗೆ ಅನುಕೂಲವಾಗುವಂತೆ ನೀರು ಸಂಗ್ರಹಣೆಯಾಗಬಾರದು. ಈ ನಿಟ್ಟಿನಲ್ಲಿ ಎಲ್ಲರು ಎಚ್ಚರಿಕೆ ವಹಿಸುವುದು ಮುಖ್ಯ. ದಂಡ ವಿಧಿಸುವುದಕ್ಕಿಂತ ಜನರು ಡೆಂಗ್ಯೂ ವಿಚಾರದಲ್ಲಿ ಜವಾಬ್ದಾರಿಯುತವಾಗಿ ಮುನ್ನೆಚ್ಚರಿಕೆ ವಹಿಸಲಿ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಈ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ. ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನಿಯಮ ಜಾರಿಗೊಳಿಸುವ ಅಧಿಕಾರ ನೀಡಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Continue Reading

Trending

error: Content is protected !!