Hassan
ಯಾರು ಏನೇ ತಂತ್ರ ಮಾಡಿದರೂ ಮತ್ತೆ ಕುಮಾರಸ್ವಾಮಿ ಸರ್ಕಾರ ಬರೋದು ಖಚಿತ: ಹೆಚ್.ಡಿ. ದೇವೇಗೌಡ ವಿಶ್ವಾಸ
ಹಾಸನ: ಈವರೆಗೂ ನಾನು ಪ್ರಾಮಾಣಿಕವಾಗಿ ನಡೆದುಕೊಂಡಿದ್ದೇನೆ. ಯಾರು ಏನೇ ಕುತ್ರಂತ್ರ ಮಾಡಿದರು ಏನೇ ಹೋರಾಟ ಮಾಡಿದರೂ ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ಸರ್ಕಾರ ಬರೋದು ಖಚಿತ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಭವಿಷ್ಯ ನುಡಿದಿದ್ದಾರೆ.
ತಾಲೂಕಿನ ಕಟ್ಟಾಯ ದಲ್ಲಿ ಇಂದು ನಡೆದ ಜೆಡಿಎಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ೧೯೯೧ರಲ್ಲಿ ಲೋಕಸಭೆ ಗೆ ನಿಂತಾಗ ಎಲ್ಲ ಕಡೆ ದೇವೇಗೌಡರು ಸೋಲುತ್ತಾರೆ ಎಂಬ ಮಾತುಗಳು ಬಂದಾಗ ಜಿಲ್ಲೆಯ ಜನರು ನನಗೆ ೩೩ ಸಾವಿರ ಲೀಡ್ ಕೊಟ್ಟು ಗೆಲ್ಲಿಸಿದ್ದು ನಾನು ಎಂದಿಗೂ ಮರೆಯುವುದಿಲ್ಲ ಕಟ್ಟಾಯ ಹೋಬಳಿ ಒಂದರಲ್ಲೇ ೧೫ ಸಾವಿರ ಲೀಡ್ ಕೊಟ್ಟ ಹಿನ್ನೆಲೆಯಲ್ಲಿ ಲೋಕಸಭೆಗೆ ಹೊಗಿ ಪ್ರಧಾನಿ ಆಗಿದ್ದನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ಸ್ಮರಿಸಿದರು. ಜಿಲ್ಲೆಯಲ್ಲಿ ಕೆಲವರು ಭಾಷಣ ಮಾಡಿದ್ದಾರೆ ಅವರ ಹೆಸರು ನಾನು ಹೇಳುವುದಿಲ್ಲ ಸೊತಿದ್ದವರನ್ನ ಗಂಡಸಿ ಕ್ಷೇತ್ರದಲದಲ್ಲಿ ಬೆಳೆಸಿದ್ದು ರೇವಣ್ಣ. ಇನ್ನೊಬ್ಬರನ್ನು ರಾಜ್ಯಸಭೆ ಮೆಂಬರ್ ಮಾಡಿದೆ. ನಾನು ಅವರ ಮಟ್ಟಕ್ಕೆ ಇಳಿಯುವುದಿಲ್ಲ ಎಂದು ಶಾಸಕ ಶಿವಲಿಂಗೇಗೌಡ ಹಾಗೂ ಎಚ್.ಕೆ ಜವರೇಗೌಡ ಅವರಿಗೆ ಕುಟುಕಿದರು. ತಾನು ಪ್ರಧಾನಿ ಆಗಿದ್ದ ವೇಳೆ ಕಟ್ಟಾಯ ಭಾಗದ ಜನರ ಅನುಕೂಲಕ್ಕೆ ಯಗಚಿ ಜಲಾಶಯ ನಿರ್ಮಾಣ ಮಾಡಿದೆ ಆದರೆ ೧೯೯೧ ರಲ್ಲಿ ನನ್ನನ್ನ ಸೋಲಿಸಿ ಜಿ. ಪುಟ್ಟಸ್ವಾಮಿ ಗೌಡ ಹಾಸನ ಜಿಲ್ಲೆಯ ಸುಮಾರು ೪೫ ಸಾವಿರ ಎಕರೆ ಜಮೀನಿಗೆ ಅನುಕೂಲ ಆಗಬೇಕಿದ್ದ ನೀರನ್ನು ಚಿಕ್ಕಮಗಳೂರಿಗೆ ಕೊಂಡೊಯ್ಯುವ ಕೆಲಸ ಮಾಡಿದ ಹಿನ್ನೆಲೆಯಲ್ಲಿ ಈ ಭಾಗದ ಜನರಿಗೆ ಅನಾನುಕೂಲ ಆಗಿದೆ ಎಂದರು.
ಈ ಭಾಗಕ್ಕೆ ಕಾರ್ಖಾನೆ ತರಬೇಕು ಎಂದು ಇಲ್ಲಿಯ ಕೆಲವರು ಸಲಹೆ ನೀಡಿದ್ದಾರೆ. ಇನ್ನು ಎರಡೂವರೆ ವರ್ಷ ರಾಜ್ಯಸಭೆ ಸದಸ್ಯ ಆಗಿರುತ್ತೇನೆ ನನ್ನ ಅವಧಿಯ ಒಳಗೆ ಈ ಭಾಗದಲ್ಲಿ ಕಾರ್ಖಾನೆ ಸ್ಥಾಪಿಸಿ ಸ್ಥಳೀಯರಿಗೆ ನೆರವು ನೀಡುತ್ತೇನೆ ಎಂದು ಭರವಸೆ ನೀಡಿದರು.
ಕಾವೇರಿ ನೀರಿಗಾಗಿ ಹೋರಾಡಿದ್ದೇನೆ, ಹೇಮಾವತಿ ನೀರನ್ನ ನಾವು ಬಳಸಬಾರದು ಅಂತ ಆದೇಶ ಮಾಡ್ತಾರೆ. ರಾಜ್ಯದಲ್ಲಿ ಅಧಿಕಾರದ ದರ್ಪ ಮಿತಿಮೀರಿದೆ. ಮೂರು ಸಲ ಬಂದು ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸ್ಥಿನಿ ಎಂದು ಸಿ.ಎಂ ಹೇಳಿದ್ದಾರೆ ಆದರೆ ೧೯೯೧ರಲ್ಲಿ ಹೇಗೆ ನನ್ನನ್ನು ಗೆಲ್ಲಿಸಿದ್ದಿರೋ ಅದೇ ರೀತಿ ಈಗ ಪ್ರಜ್ವಲ್ ಕೈ ಹಿಡಿಯಬೇಕು ಎಂದು ಮನವಿ ಮಾಡಿದರು. ಎನ್.ಡಿ.ಎ. ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತನಾಡಿ, ಕಷ್ಟಕಾಲದಲ್ಲಿ ಕಟ್ಟಾಯ ಭಾಗದ ಜನ ನಮ್ಮ ಕೈಹಿಡಿದಿದ್ದಾರೆ. ಕಟ್ಟಾಯ ಭಾಗದಲ್ಲಿ ೧೦ ವರ್ಷದ ಹಿಂದೆ ಹೇಗಿತ್ತು ಈಗ ಹೇಗಿದೆ ಎಂಬುದನ್ನು ಎಲ್ಲರೂ ಗಮನಿಸಬೇಕು. ಈ ಹಿಂದೆ ಕಟ್ಟಾಯ ಕಾಂಗ್ರೆಸ್ ಕೋಟೆಯಾಗಿತ್ತು. ಆದರೆ ಯಾವ ಕೆಲಸಗಳು ಆಗಲಿಲ್ಲ ಆದರೆ ಇವತ್ತು ಜೆಡಿಎಸ್ ಭದ್ರಕೋಟೆಯಾಗಿದೆ. ಯಾವ ಹಂತದಲ್ಲಿ ಅಭಿವೃದ್ಧಿ ಮಾಡಿದ್ದೇವೆ ಎಂಬುದನ್ನು ಜನ ತಿಳಿಯಬೇಕಿದೆ ಎಂದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎಲ್ಲಾ ಅವಧಿಯಲ್ಲಿ ಕೂಡ ಬರಗಾಲ ಬರುತ್ತದೆ, ಕಳೆದ ೧೧ ತಿಂಗಳಲ್ಲಿ ಜಿಲ್ಲೆಯ ಎಲ್ಲಾ ಕೆರೆಗಳು ಬತ್ತಿವೆ. ಇದರ ಜೊತೆಗೆ ಸರಿಯಾದ ಸಮಯಕ್ಕೆ ವಿದ್ಯುತ್ ನೀಡದೆ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ರೈತರ ಮೇಲೆ ದ್ವೇಶ ಸಾಧಿಸುತ್ತಿದೆ. ಅಧಿಕಾರಕ್ಕೆ ಬರೊ ಮೊದಲು ಗ್ಯಾರಂಟಿ ಘೋಷಿಸುವಾಗ ಎಲ್ಲರಿಗೂ ಫ್ರೀ ಎಂದ್ರು. ಅಗಲೇ ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ವರ್ಗಕ್ಕೂ ಫ್ರಿ ಕೊಟ್ಡಿರೋದು ಕೇವಲ ಬರಗಾಲ ಮಾತ್ರ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಗೆ ರೈತರ ಮೇಲೆ ಕೋಪವಿದೆ. ವಿದ್ಯುತ್ ಸಮಸ್ಯೆ ಮಿತಿಮೀರಿದೆ. ಟಿಸಿ ಕೊಡೋಕೆ ಇವರಿಂದ ಆಗ್ತಿಲ್ಲ. ನಾಲ್ಕು ಗಂಟೆ ಭಾಷಣ ಮಾಡಿದ್ರು ಬಜೆಟ್ ನಲ್ಲಿ ರೈತರಿಗೆ ಒಂದು ರೂಪಾಯಿ ಸಹ ಬಿಡುಗಡೆ ಮಾಡಲಿಲ್ಲ. ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ೩೦೦ ಕೋಟಿ ರೂ.ವೆಚ್ಚದಲ್ಲಿ ಕಟ್ಟಾಯ ಭಾಗದಲ್ಲಿ ರಸ್ತೆ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾವ ಮುಖ ಇಟ್ಗೊಂಡು ಓಟು ಕೇಳ್ತಾರೆ. ಹಾಸನ ಅಭಿವೃದ್ಧಿ ಗೆ ಒಂದು ರೂಪಾಯಿ ಕೊಡಲಾಗದವರಿಗೆ ಯಾಕೆ ಓಟು ಕೊಡಬೇಕು ಎಂದು ಪ್ರಶ್ನಿಸಿದರು. ೨೦೧೮ರಲ್ಲಿ ಬರಗಾಲ ಆವರಿಸಿತ್ತು ಆಗ ಕುಮಾರಸ್ವಾಮಿ ರೈತರ ಕಣ್ಣಿರು ಒರೆಸಲು ೫೦ ಸಾವಿರ ರೂ. ಸಾಲ ಮನ್ನಾ ಮಾಡಿದರು. ಆದರೆ ಕಾಂಗ್ರೆಸ್ ಸರ್ಕಾರ ರೈತರಿಗೆ ಮಾರಕವಾದ ನೀತಿ ಅನುಸರಿಸುತ್ತಿದೆ ಆದುದರಿಂದ ಫಲವತ್ತಾದ ಜಮೀನಿನಲ್ಲಿ ಬೆಳೆಯುವ ಕಾಂಗ್ರೆಸ್ ಗಿಡ ಕಿತ್ತು ಹಾಕುವಂತೆ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಕೆಲಸ ಮಾಡಬೇಕು ಎಂದರು.
ಸಭೆಯಲ್ಲಿ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣ, ಎಚ್.ಕೆ. ಕುಮಾರಸ್ವಾಮಿ ಜೆಡಿಎಸ್ ಮುಖಂಡರಾದ ಕೆ.ಎಂ. ರಾಜೇಗೌಡ, ಬಿ.ವಿ. ಕರೀಗೌಡ, ಎಸ್. ದ್ಯಾವೆಗೌಡ, ರಂಗಶಟ್ಟಿ, ಮೊಸಳೆ ಹೊಸಳ್ಳಿ ಚಂದ್ರಣ್ಣ, ಕಾರ್ಲೆ ಇಂದ್ರೇಶ್, ನಾರಾಯಣಗೌಡ, ಮಾಯೆಗೌಡ, ಎಸ್.ಕೆ. ಕುಮಾರ್, ರುದ್ರಪ್ಪ ಇತರರು ಭಾಗವಹಿಸಿದ್ದರು
Hassan
ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ – ಮಾರ್ಗಮಧ್ಯೆ ಸಿಲುಕಿದ್ದ ಐದು ರೈಲುಗಳು
ಹಾಸನ : ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಎರಡು ರೈಲು
ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮೂರು ರೈಲು
ಮಧ್ಯರಾತ್ರಿಯಿಂದ ಪರದಾಡಿದ ಪ್ರಯಾಣಿಕರು
ಸಕಲೇಶಪುರ, ಆಲೂರು ಹಾಗೂ ಹಾಸನ ರೈಲು ನಿಲ್ದಾಣಗಳಲ್ಲಿ ನಿಂತಿರುವ ರೈಲುಗಳಿದ್ದ ಪ್ರಯಾಣಿಕರಿಗೆ ತಿಂಡಿ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದ ರೈಲ್ವೆ ಇಲಾಖೆ ಅಧಿಕಾರಿಗಳು
ಪ್ರಯಾಣಿಕರು ಬೆಂಗಳೂರು, ಮಂಗಳೂರಿಗೆ ತೆರಳಲು ಬಸ್ ವ್ಯವಸ್ಥೆ ಕಲ್ಪಿಸಿದ ರೈಲ್ವೆ ಇಲಾಖೆ ಅಧಿಕಾರಿಗಳು
ಬಸ್, ಕಾರುಗಳಲ್ಲಿ ತೆರಳುತ್ತಿರುವ ಸಾವಿರಾರು ಪ್ರಯಾಣಿಕರು
ಇನ್ನೂ ರೈಲ್ವೆ ನಿಲ್ದಾಣದಲ್ಲೇ ಇರುವ ನೂರಾರು ಪ್ರಯಾಣಿಕರು
ಬಸ್‌ಗಾಗಿ ಕಾದು ನಿಂತಿರುವ ಪ್ರಯಾಣಿಕರು
ಮತ್ತೊಂದೆಡೆ ಬಿರುಸಿನಿಂದ ನಡೆಯುತ್ತಿರುವ ಮಣ್ಣು ತೆರವು ಕಾರ್ಯಾಚರಣೆ
Hassan
ಮಂಗಳೂರು ಹಾಸನ ರೈಲ್ವೇ ಟ್ರ್ಯಾಕ್ ಮೇಲೆ ಗುಡ್ಡ ಕುಸಿತ – ಪ್ರಯಾಣಿಕರ ಪರದಾಟ
ಆಲೂರು: ಮಂಗಳೂರು-ಹಾಸನ ಮಾರ್ಗದ ಸಕಲೇಶಪುರ ತಾಲೂಕು ಬಾಳ್ಳುಪೇಟೆ ಬಳಿ ರೈಲ್ವೆ ಹಳಿ ಮೇಲೆ ಶುಕ್ರವಾರ ರಾತ್ರಿ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದು ರೈಲು ಪ್ರಯಾಣ ಸ್ಥಗಿತಗೊಂಡಿದ್ದು ಆಲೂರು ರೈಲು ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ.
ಭೂಕುಸಿತಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಪ್ರಯಾಣ ಆರಂಭಿಸಿದ್ದ ಆರು ರೈಲುಗಳನ್ನು ಸಕಲೇಶಪುರ, ಯಡಕುಮರಿ, ಶಿರವಾಗಿಲು, ಆಲೂರು ಸೇರಿ ಆರು ನಿಲ್ದಾಣಗಳಲ್ಲಿ ನಿಲ್ಲಿಸಲಾಗಿದೆ.
ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ರೈಲಿನಲ್ಲಿ ಕುಳಿತಿರುವ ಸಾವಿರಾರು ಪ್ರಯಾಣಿಕರು ಮಧ್ಯರಾತ್ರಿಯಿಂದ ಪ್ರಯಾಣದ ಅನಿಶ್ಚಿತತೆಗೆ ಸಿಲುಕಿ ಪರದಾಡುತ್ತಿದ್ದಾರೆ. ಪರ್ಯಾಯ ವಾಹನ ವ್ಯವಸ್ಥೆ ಮಾಡುವಂತೆ ಅವರು ಒತ್ತಾಯಿಸುತ್ತಿದ್ದಾರೆ.
ಆಲೂರು ರಾಧಮ್ಮ ಜನಸ್ಪಂದನ ಸಂಸ್ಥೆಯ ಅಧ್ಯಕ್ಷ ಹೇಮಂತ್ ಕುಮಾರ್ ಪ್ರಯಾಣಿಕರಿಗೆ ನೀರು ಹಾಗೂ ಬಿಸ್ಕೆಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ರೈಲ್ವೆ ಇಲಾಖೆ ಮಾಹಿತಿ ಪ್ರಕಾರ ಸದ್ಯ ರೈಲ್ವೆ ಇಲಾಖೆ ಕಾರ್ಮಿಕರು ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
Hassan
ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತ
HASSAN-BREAKING
ಹಾಸನ : ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತ
ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಕುಸಿದಿರುವ ಮಣ್ಣು
ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ಭೂಕುಸಿತ
ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತ
ಸಕಲೇಶಪುರ ತಾಲ್ಲೂಕಿನ, ಬಾಳ್ಳುಪೇಟೆ ಬಳಿ ರೈಲ್ವೆ ಹಳಿ ಮೇಲೆ ಕುಸಿದಿರುವ ಮಣ್ಣು
ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತ
ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಆರು ಕಡೆ ನಿಂತಿರುವ ಆರು ರೈಲುಗಳು
ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರ ಪರದಾಟ
ರೈಲಿನಲ್ಲಿ ಕುಳಿತಿರುವ ಸಾವಿರಾರು ಪ್ರಯಾಣಿಕರು
ಮಧ್ಯರಾತ್ರಿಯಿಂದ ನಿಂತಿರುವ ರೈಲುಗಳ ಸಂಚಾರ
ಸಕಲೇಶಪುರ, ಯಡಕುಮಾರಿ, ಶಿರವಾಗಲು, ಆಲೂರು ಸೇರಿ ಆರು ಕಡೆ ನಿಂತಿರುವ ಆರು ರೈಲುಗಳು
ಪರ್ಯಾಯ ವಾಹನ ವ್ಯವಸ್ಥೆ ಮಾಡುವಂತೆ ಒತ್ತಾಯ
ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿರುವ ರೈಲ್ವೆ ಇಲಾಖೆ ಕಾರ್ಮಿಕರು
-
Mysore4 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan4 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.