State
ಹೆಚ್. ಡಿ. ಕುಮಾರಸ್ವಾಮಿ ಕೇಂದ್ರಮಂತ್ರಿ ಆಗುವ ವಿಚಾರ ನನಗೆ ಗೊತ್ತಿಲ್ಲ: ಹೆಚ್.ಡಿ. ದೇವೆಗೌಡ
ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿ ಆಗುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಮುಂದೆ ಅ ಬಗ್ಗೆ ಚರ್ಚೆ ಆಗಿಲ್ಲ. ಆದರೆ, ಮೋದಿ ಅವರ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿ ಉದೇಶಿಸಿ ಮಾತನಾಡಿದ ಅವರು; ಒಂದು ಬಾರಿ ಸಂಸತ್ ಸದಸ್ಯರಾದವರನ್ನು ಮಂತ್ರಿ ಮಾಡಿದ್ದಾರೆ. ಮೋದಿ ಅವರ ಆಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ. ಹೀಗಾಗಿ ಅವರ ಮನಸ್ಸಿಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಾರಾ? ಇಲ್ಲವಾ? ಎಂದು ಕೇಳಲಾದ ಪ್ರಶ್ನೆಗೂ ಉತ್ತರಿಸಿದ ಅವರು; ನರೇಂದ್ರ ಮೋದಿ ಅವರು ಏನು ಹೇಳ್ತಾರೋ ನೊಡೋಣ. ಅವರ ಮನಸಿನಲ್ಲಿ ಇದೆಯೋ ಗೊತ್ತಿಲ್ಲ. ಮೋದಿ ಅವರು ಹೇಳಿದಂತೆ ಕುಮಾರಸ್ವಾಮಿ ಅವರು ಕೇಳುತ್ತಾರೆ. ಕುಮಾರಸ್ವಾಮಿ ಸ್ಪರ್ಧೆ ಮಾಡುವ ಪರಿಸ್ಥಿತಿ ಬಂದರೆ ನಾವೆಲ್ಲ ಕುಳಿತು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
ಯಾವುದೇ ಕಾರಣಕ್ಕೂ ನಾನು ಲೋಕಸಭೆಗೆ ಸ್ಪರ್ಧೆ ಮಾಡೊದಿಲ್ಲ. 92 ವರ್ಷ ಆಯ್ತು. ರಾಜ್ಯಸಭೆಯ ಅವಧಿ ಇನ್ನು ಎರಡೂವರೆ ವರ್ಷ ಇದೆ. ರಾಜ್ಯಸಭೆಯೇ ಸಾಕು. ಚುನಾವಣೆ ವೇಳೆ ಮೈತ್ರಿಕೂಟದ ಪರವಾಗಿ ಪ್ರಚಾರ ಮಾಡುತ್ತೇನೆ. ನಮ್ಮ ಪಕ್ಷದ ಪರವಾಗಿ ಪ್ರವಾಸ ಮಾಡುತ್ತೇನೆ. ಬಿಜೆಪಿಯವರು ಎಲ್ಲಿಗೆ ಕರೆದರೂ ಹೋಗುತ್ತೇನೆ. ಮಾತನಾಡುವ ಶಕ್ತಿ ಇದೆ, ನನಪಿನ ಶಕ್ತಿ ಇದೆ ಎಂದರು ಮಾಜಿ ಪ್ರಧಾನಿಗಳು.
ಮೋದಿ ಅವರ ವ್ರತಾಚರಣೆ ಬಗ್ಗೆ ಮೆಚ್ಚುಗೆ:
ನರೇಂದ್ರ ಮೋದಿ ಅವರಿಂದ 11 ದಿನಗಳ ವ್ರತಾಚರಣೆ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ ದೇವೇಗೌಡರು; ಮೋದಿ ಅವರು ನಿಷ್ಠೆಯಿಂದ, ಕ್ರಮಬದ್ದತೆಯಿಂದ ಮೋದಿ ವ್ರತಾಚರಣೆ ಮಾಡುತ್ತಿದ್ದಾರೆ. ಸೀತಾಮಾತೆ ಅಪಹರಣ ಮಾಡಿದ ನಾಸಿಕ್ ನಿಂದ ಅವರು ವ್ರತಾಚರಣೆ ಶುರು ಮಾಡಿದ್ದಾರೆ. ಅಲ್ಲಿ ಕರಿರಾಮ ಅಂತ ವಿಗ್ರಹ ಸ್ಥಾಪನೆ ಮಾಡಿದ್ದಾರೆ ಎಂದರು.
ಮೋದಿ ಅವರು ಪುಣ್ಯ ಮಾಡಿಕೊಂಡು ಬಂದಿದ್ದಾರೆ. ನಿಯಮ, ನಿಷ್ಠೆ, ಶಿಸ್ತಿನಿಂದ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಶಾಸ್ತ್ರೋಕ್ತವಾಗಿ ಶ್ರದ್ಧೆಯಿಂದ ಎಲ್ಲಾ ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರೆ. ನಾನು ಕೂಡ ಇಂತಹ ವ್ರತಾಚರಣೆ ಮಾಡಿರಲಿಲ್ಲ. ಮೋದಿಗೆ ಅವರಿಗೆ ದೈವ ಶಕ್ತಿ ಇದೆ ಎಂದು ಹೇಳಿದರು ಮಾಜಿ ಪ್ರಧಾನಿಗಳು.
ನಾನು ಕೂಡ ರಾಮಮಂದಿರ ಕಾರ್ಯಕ್ರಮಕ್ಕೆ ಹೋಗುತ್ತೇನೆ. 99% ನಾನು ಹೋಗುತ್ತೇನೆ. ನನ್ನ ಶ್ರೀಮತಿ ಜೊತೆ ಹೋಗುವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಜನವರಿ 22ರ ಬಳಿಕ ರಾಮಮಂದಿರಕ್ಕೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು; ಸಿದ್ದರಾಮಯ್ಯ ಹೇಳಿಕೆಯನ್ನು ಸ್ವಾಗತ ಮಾಡುತ್ತೇನೆ. ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಪೂಜೆ ಮಾಡಲು ಹೇಳಿದ್ದಾರೆ. ಇದು ಒಳ್ಳೆಯ ವಿಚಾರ. ಸಾಫ್ಟ್ ಹಿಂದುತ್ವವೋ, ಇನ್ನೊಂದೋ ಗೊತ್ತಿಲ್ಲ. ಸಿದ್ದರಾಮಯ್ಯ ರಾಮಮಂದಿರಕ್ಕೆ ಹೋಗುವ ಹೇಳಿಕೆ ಸ್ವಾಗತಾರ್ಹ ಎಂದು ಅವರು ತಿಳಿಸಿದರು.

ಯುವನಿಧಿ ಯೋಜನೆ ಬಗ್ಗೆಯೂ ಮುಕ್ತ ಅಭಿಪ್ರಾಯ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು; ಈ ಯೋಜನೆ ಒಳ್ಳೆಯದು, ಯುವ ಜನರಿಗೆ ಹಣ ಕೊಡಲಿ. ಅದರಲ್ಲಿ ತಪ್ಪೇನೂ ಇಲ್ಲ. ಎಲ್ಲಾ ಯುವಕರಿಗೂ ಹಣ ಕೊಡಲಿ. ಆ ಯುವಜನರು ಕೂಡ ರಾಮ ಮಂದರಕ್ಕೆ ಹೋಗಿ ಬರಲಿ. ಕೂಡಲೇ ಯುವನಿಧಿಯ ಮೊದಲ ಕಂತಿನ ಹಣ ಬಿಡುಗಡೆ ಮಾಡಲಿ ಎಂದು ಹೇಳಿದರು.
ಹಾಸನದಿಂದ ಪ್ರಜ್ವಲ್ ಸ್ಪರ್ಧೆ:
ಪ್ರಜ್ವಲ್ ರೇವಣ್ಣ ಅವರು ಹಾಸನದಿಂದ ಮತ್ತೆ ಸ್ಪರ್ಧೆ ಮಾಡುತ್ತಾರಾ? ಎನ್ನುವ ಮಾಧ್ಯಮಗಳ ಪ್ರಶ್ನೆಗೆ; ಈ ಬಗ್ಗೆ ನಿಮಗೆ ಅನುಮಾನ ಏಕೆ? ಪ್ರಜ್ವಲ್ ಗೆ ಮೋದಿ ಅವರು ಆಶೀರ್ವಾದ ಮಾಡ್ತಾರೆ. ಕುಮಾರಸ್ವಾಮಿ ಕೂಡಾ ಆಶೀರ್ವಾದ ಮಾಡ್ತಾರೆ. ನಾನು ಕೂಡಾ ಆಶೀರ್ವಾದ ಮಾಡಿದ್ದೀನಿ ಎಂದರು.
ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೆಗೌಡ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್. ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ ಹಾಜರಿದ್ದರು.

Special
ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್: 25 ಲಕ್ಷ ರೂ.ವರೆಗೆ ಸುಲಭ ಸಾಲ
ವೈಯಕ್ತಿಕ ಅಗತ್ಯಗಳಿಗೆ ತಕ್ಷಣ ಹಣದ ಅವಶ್ಯಕತೆ ಇರುವವರಿಗೆ ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್ ಉತ್ತಮ ಆಯ್ಕೆಯಾಗಿ ಪರಿಣಮಿಸಿದೆ. ಕಡಿಮೆ ಬಡ್ಡಿ, ಸರಳ ದಾಖಲೆಗಳು ಹಾಗೂ ವೇಗವಾದ ಅನುಮೋದನೆಯೊಂದಿಗೆ ಈ ಸಾಲವನ್ನು ಪ್ರತಿಯೊಬ್ಬರು ಸುಲಭವಾಗಿ ಪಡೆಯಬಹುದು.
ಯೋಜನೆಯ ಪ್ರಮುಖ ವೈಶಿಷ್ಟ್ಯಗಳು
•25 ಲಕ್ಷ ರೂ.ವರೆಗೆ ಸಾಲ ಪಡೆಯಬಹುದು.
•ಕಡಿಮೆ ಬಡ್ಡಿದರ
•ಕಡಿಮೆ ದಾಖಲೆಗಳ ಪರಿಶೀಲನೆಯ ನಂತರ ಬೇಗನೆ ಸಾಲ ಬಿಡುಗಡೆಯಾಗುತ್ತದೆ.
•ನಿಮ್ಮ ಮಾಸಿಕ ಆದಾಯದ ಮೇಲೆ ಆಧರಿಸಿ ಪಾವತಿ ಅವಧಿಯನ್ನು ಆರಿಸಿಕೊಳ್ಳಲು ಅವಕಾಶವಿದೆ.
ಯಾರು ಅರ್ಹರು?
•ನಿಯಮಿತ ಆದಾಯವಿರುವ ನಾಗರಿಕರು
•ಉದ್ಯೋಗಸ್ತರು, ಸ್ವಯಂ ಉದ್ಯೋಗಿಗಳು ಹಾಗೂ ವ್ಯವಹಾರಿಗಳು
•ಮಾನ್ಯ ಗುರುತಿನ ದಾಖಲೆ ಮತ್ತು ಬ್ಯಾಂಕ್ ಸ್ಟೇಟ್ಮೆಂಟ್ ನೀಡಬಲ್ಲವರು

ಅರ್ಜಿ ಪ್ರಕ್ರಿಯೆ:
•ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಆನ್‌ಲೈನ್ ಅರ್ಜಿ ಫಾರ್ಮ್ ಭರ್ತಿ ಮಾಡಿ.
•ಅಗತ್ಯ KYC ದಾಖಲೆಗಳನ್ನು ಅಪ್‌ಲೋಡ್ ಮಾಡಿ.
•ಬ್ಯಾಂಕ್ 24–48 ಗಂಟೆಗಳಲ್ಲಿ ಪರಿಶೀಲನೆ ಮಾಡುತ್ತದೆ.ಬೇಕಾದರೆ ಹತ್ತಿರದ ಶಾಖೆಗೆ ದಾಖಲೆ ದೃಢೀಕರಣಕ್ಕೆ ಭೇಟಿ ಮಾಡಬಹುದು.
•ದಾಖಲೆಗಳು ಸರಿಯಾಗಿದ್ದರೆ ಸಾಲ ಮಂಜೂರಾತಿ. ಮಂಜೂರಾದ ನಂತರ ಸಾಲ ಮೊತ್ತ ಖಾತೆಗೆ ಜಮಾ
ಅಗತ್ಯ ದಾಖಲೆಗಳು
•ಆಧಾರ್ / ಪಾನ್ ಕಾರ್ಡ್
•ಆದಾಯ ಪ್ರಮಾಣ
•6 ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
•ಪಾಸ್‌ಪೋರ್ಟ್ ಗಾತ್ರದ ಫೋಟೋ
•ಪೂರ್ಣಗೊಂಡ ಸಾಲ ಅರ್ಜಿ ನಮೂನೆ

ಅಧಿಕೃತ ವೆಬ್‌ಸೈಟ್: Karnataka Bank https://share.google/Sdx236NRFLScWpmGm
ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್ ಕಡಿಮೆ ಷರತ್ತುಗಳು, ಬೇಗ ಅನುಮೋದನೆ ಮತ್ತು ಸುಲಭ ಪಾವತಿ ವ್ಯವಸ್ಥೆಯಿಂದ ಸಾಮಾನ್ಯ ಜನರಿಗೆ ತುಂಬಾ ಅನುಕೂಲಕರ. ದೊಡ್ಡ ಮೊತ್ತದ ಸಾಲವನ್ನು ತೊಂದರೆ ಇಲ್ಲದೆ, ಕಡಿಮೆ ಸಮಯದಲ್ಲಿ ಪಡೆಯಲು ಇದು ವಿಶ್ವಾಸಾರ್ಹ ಆಯ್ಕೆ.
State
ರಾಹುಲ್, ಖರ್ಗೆ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಹೈಕಮಾಂಡೇ: ಬಿ.ವೈ.ವಿಜಯೇಂದ್ರ
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಅವರ ತಂದೆ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ಹಾಗಾದರೆ ಲೋಕಸಭೆ ವಿಪಕ್ಷ ನಾಯಕ ರಾಹುಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಇಂದು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿಎಂ ಕುರ್ಚಿಗೆ ಪೈಪೋಟಿ ನಡೆಯುತ್ತಿದೆ. ಸದ್ಯದಲ್ಲಿ ಈ ಸಮಸ್ಯೆ ಬಗೆಹರಿಯುವುದಿಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡುತ್ತೀರಿ? ಸಾಧ್ಯವಾದರೆ ಇದನ್ನು ಮುಂದೂಡಿ ಎಂದು ತಿಳಿಸಿದ್ದೆ. ಅಲ್ಲದೇ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ನಾಡಿನ ಕೃಷಿಕರು, ರೈತರ, ಬಡವರ, ನೇಕಾರರ ಸಮಸ್ಯೆ ಸೇರಿ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕೆಂದು ಸಿಎಂ ಸಿದ್ದರಾಮಯ್ಯನವರಿಗೆ ಅಧಿವೇಶನ ಪ್ರಾರಂಭಕ್ಕೂ ಮೊದಲೇ ಗಮನ ಸೆಳೆದಿದ್ದೆ ಎಂದು ತಿಳಿಸಿದ್ದಾರೆ.

ರಾಜ್ಯದ ಸಿಎಂ ವಿಚಾರದಲ್ಲಿ ಪೈಪೋಟಿ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಹೇಳುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಬಂದಾಗ ಒಂದು ರೀತಿ ನಿಸ್ಸಹಾಯಕರಾಗಿ ಮಾತನಾಡಿದ್ದಾಗಿ ಗಮನ ಸೆಳೆದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಹೇಳಿದ್ದಾರೆ.
ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ಬಳಿಕವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು. ಆದರೆ ಆಡಳಿತ ಪಕ್ಷ ಮತ್ತು ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸುವ ಮತ್ತು ಸಮಸ್ಯೆಗೆ ಸ್ಪಂದಿಸಬೇಕೆಂಬ ವ್ಯವಧಾನವೂ ಇಲ್ಲದೇ ಇರುವುದು ನಿಜವಾಗಲೂ ದುರ್ದೈವ ಎಂದು ವ್ಯಂಗ್ಯ ಮಾಡಿದ್ದಾರೆ.

ರಾಜ್ಯದಲ್ಲಿ 54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಮೆಕ್ಕೆಜೋಳ ಬೆಳೆಗಾರರು ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯಿಸುತ್ತಿದ್ದಾರೆ. ಕೇಂದ್ರ ಸರ್ಕಾರ 2,400 ರೂ. ಬೆಂಬಲ ಬೆಲೆ ನಿಗದಿಪಡಿಸಿದರೂ ಸೂಕ್ತ ಸಮಯದಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಿಲ್ಲ. ರೈತರು ಮೆಕ್ಕೆಜೋಳವನ್ನು 1,700- 1,600 ರೂ.ಗೆ ದಲ್ಲಾಳಿಗಳಿಗೆ, ಮಧ್ಯವರ್ತಿಗಳಿಗೆ ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ. ಬೆಳೆ ಪರಿಹಾರವನ್ನು ಘೋಷಿಸಿ 3 ತಿಂಗಳಾದರೂ ಸಮರ್ಪಕವಾಗಿ ಕೊಟ್ಟಿಲ್ಲ. ಭೀಕರ ಮಳೆಯಿಂದ ರಾಜ್ಯದಲ್ಲಿ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿವೆ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ, ಭ್ರಷ್ಟಾಚಾರ ಮಿತಿ ಮೀರಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಎರಡು ವರ್ಷಗಳಿಂದ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಒಬ್ಬರಿಗೆ ಒಬ್ಬರು ಕತ್ತಿ ಮಸೆಯುತ್ತಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದ ಮೇಲೆ ಆಗುತ್ತಿದೆ. ಮುಖ್ಯಮಂತ್ರಿಗಳ ವಿಚಾರ ಕಾಂಗ್ರೆಸ್ಸಿನ ಆಂತರಿಕ ವಿಚಾರವಲ್ಲ, ಅವರು ರಾಜ್ಯಕ್ಕೆ ಮುಖ್ಯಮಂತ್ರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
State
ನಾಳೆ ದೆಹಲಿಯಲ್ಲಿ ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ರಾಜ್ಯದ ಸಿಎಂ ಡಿಸಿಎಂ ಭಾಗಿ
ಬೆಂಗಳೂರು: ನಾಳೆ ದೆಹಲಿಯಲ್ಲಿ ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದು, ರಾಜ್ಯದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ.
ಡಿನ್ನರ್, ಬ್ರೇಕ್ಫಾಸ್ಟ್ ನಂತರ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯತ್ತ ಮುಖಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಈಗಾಗಲೇ ದೆಹಲಿಗೆ ಹಾರಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಅಲ್ಲದೇ ನಾಳೆ ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ನೆಪದಲ್ಲಿ ಇಬ್ಬರು ನಾಯಕರನ್ನು ದೆಹಲಿ ಕರೆಸಿಕೊಂಡರಾ ಎಂಬ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ.

ದೇಶದ ಅನೇಕ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ವೋಟ್ ಚೋರಿ ನಡೆದಿದೆ ಅಂತಾ ಕಾಂಗ್ರೆಸ್ ಸಮರ ಸಾರಿದೆ. ಇದೀಗ ಎರಡನೇ ಹಂತದ ವೋಟ್ ಚೋರಿ ಅಭಿಯಾನಕ್ಕೆ ಸಿದ್ಧತೆ ಮಾಡಿಕೊಂಡಿದೆ. ನಾಳೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಅಭಿಯಾನ ನಡೆಯಲಿದೆ. ಹೀಗಾಗಿ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.
ಈ ವೇಳೆ ಮಂಡ್ಯ ನಾಯಕರ ಟೀಂ ದಿಲ್ಲಿ ಯಾತ್ರೆ ಕೈಗೊಂಡಿದೆ. ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ತಂಡ ದೆಹಲಿಗೆ ತೆರಳುವ ಯೋಜನೆ ಇತ್ತು. ಆದರೆ ಅನಾರೋಗ್ಯದ ಕಾರಣ ಚಲುವರಾಯಸ್ವಾಮಿ ದೆಹಲಿಗೆ ಹೋಗುತ್ತಿಲ್ಲ. ಉಳಿದಂತೆ ಶಾಸಕರುಗಳಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ ದೆಹಲಿಗೆ ತೆರಳಿದ್ದಾರೆ.

ಮಂಡ್ಯ ಶಾಸಕ ದೆಹಲಿ ಪ್ರವಾಸದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ನನ್ನ ಜೊತೆ ಯಾರೂ ದೆಹಲಿಗೆ ಬರುತ್ತಿಲ್ಲ. ಅವರವರ ಕ್ಷೇತ್ರದವರ ಜೊತೆ ಹೋಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ವೋಟ್ ಚೋರಿ ಬಗ್ಗೆ ಕಿಡಿಕಾರಿದ ಎಂಎಲ್ಸಿ ಸಲೀಂ ಅಹ್ಮದ್, ಇದು ವೋಟ್ ಚೋರಿ ಅಲ್ಲ, ಬಿಜೆಪಿ ಹಾಗೂ ಎಲೆಕ್ಷನ್ ಕಮಿಷನ್ನಿಂದ ಡಕಾಯಿತಿ ಅಂದಿದ್ದಾರೆ.
-
Hassan1 hour agoಬೈರಾಪುರ-ಚನ್ನಪುರ- ಮಗ್ಗೆ ರಸ್ತೆ ತಾತ್ಕಾಲಿಕ ಬಂದ್: ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಸೂಚನೆ
-
Special3 hours agoಕರ್ನಾಟಕ ಕುಕ್ಕುಟ ಸಂಜೀವಿನಿ ಯೋಜನೆ: ಮಹಿಳೆಯರಿಗೆ ಉಚಿತ ಕೋಳಿ ಮರಿ, ಶೆಡ್ ನಿರ್ಮಾಣಕ್ಕೆ ಭರ್ಜರಿ ಸಹಾಯಧನ
-
Hassan21 hours agoಒಳ್ಳೆಯ ಕೆಲಸ ಬ್ಯಾಂಕ್ ಠೇವಣಿಯಂತೆ; ಸಮಯ ಬಂದಾಗ ಫಲ ನೀಡುತ್ತದೆ: ರವಿಕುಮಾರ್ ಬಲ್ಲೇನಹಳ್ಳಿ
-
State16 hours agoರಾಹುಲ್, ಖರ್ಗೆ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಹೈಕಮಾಂಡೇ: ಬಿ.ವೈ.ವಿಜಯೇಂದ್ರ
-
Hassan19 hours agoರೋಟರಿ ಬೆಂಗಳೂರು ದಕ್ಷಿಣದಿಂದ MCE ಕಾಲೇಜಿನ 51 ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ
-
Mandya19 hours agoವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಆರೋಪ : ದೂರು ದಾಖಲು
-
Kodagu20 hours agoಅನಧಿಕೃತ ಹೋಸ್ಟೇಗಳಿಗೆ ಕಡಿವಾಣ ನಿಟ್ಟಿನಲ್ಲಿ ವಾರ್ಡ್ವಾರ್ ಸಮಿತಿ ರಚನೆ: 15 ದಿನಗಳೊಳಗೆ ಪೊಲೀಸರಿಂದ ದಲ್ಲಾಳಿಗಳ ವಿರುದ್ದ ಕ್ರಮ
-
State21 hours agoಡಾ.ಜಿ.ಪರಮೇಶ್ವರ್ ಈ ರಾಜ್ಯದ ಸಿಎಂ ಆಗಲಿ ಎಂಬುದು ನನ್ನ ವೈಯಕ್ತಿಕ ಆಸೆ: ವಿ.ಸೋಮಣ್ಣ
