Connect with us

Politics

ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ – ಹೆಚ್ ಡಿ ಕೆ

Published

on

ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಶ್ರೀ @CTRavi_BJP ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ.

ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು. ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವುದು ಕಳವಳಕಾರಿ.

ಮೀಸಲಾತಿಗಾಗಿ ಪಂಚಮಸಾಲಿ ಮುಖಂಡರು ಸುವರ್ಣಸೌಧದ ಮುಂದೆ ಪ್ರತಿಭಟಿಸಿದ್ದಕ್ಕೆ ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಿ ಪೌರುಷ ಮೆರೆದಿತ್ತು @INCKarnataka ಸರಕಾರ. ಅಂದು ಪೊಲೀಸರ ಪ್ರತಾಪ ಹೇಳತೀರದು. ಗೇಟಿನಲ್ಲಿಯೇ ತಡೆದು ಆ ಪಂಚಮಸಾಲಿ ಜನರಿಗೆ ರಕ್ತ ಬರುವಂತೆ ಲಾಠಿ ಬೀಸಿದ ಪೊಲೀಸರೇ.., ಈ ಗೂಂಡಾಗಳು ಸುವರ್ಣಸೌಧದೊಳಕ್ಕೆ ಹೇಗೆ ಬಂದರು? ಅಥವಾ… ಅವರೇ ನಿಮ್ಮ ಕಣ್ತಪ್ಪಿಸಿ ಒಳ ನುಸಳಿದರೋ ಅಥವಾ ಸರಕಾರವೇ ಷಡ್ಯಂತ್ರ ಮಾಡಿ ಒಳ ನುಗ್ಗಿಸಿತೋ? ಇಲ್ಲವೇ ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ?

ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್’ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ.

ಆ ಗೌರವಾನ್ವಿತ ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ.

ಸುವರ್ಣಸೌಧಕ್ಕೆ ನುಗ್ಗಿದ ಗೂಂಡಾಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ರೌಡಿಪಟ್ಟಿ ತೆರೆಯಬೇಕು. ಸಮಾಜದ ಶಾಂತಿಗೆ ಬೆದರಿಕೆಯಾಗಿರುವ ಆ ಕಿಡಿಗೇಡಿಗಳನ್ನು ಸುವರ್ಣಸೌಧ, ವಿಧಾನಸೌಧದಿಂದ ಶಾಶ್ವತವಾಗಿ ನಿರ್ಬಂಧಿಸಬೇಕು.

ಪೊಲೀಸರೇ.., ಇಡೀ ಪ್ರಕರಣದ ಬಗ್ಗೆ ನೀವು ಉತ್ತರಿಸಬೇಕಾಗುತ್ತದೆ. ಇಡೀ ರಾತ್ರಿ ಸಿ.ಟಿ.ರವಿ ಅವರನ್ನು ಪೊಲೀಸ್ ಜೀಪಿನಲ್ಲಿ ಸುತ್ತಿಸುತ್ತೀರಿ ಎಂದರೆ, ಇದಕ್ಕೆ ಯಾರ ಫರ್ಮಾನು ಕಾರಣ? ಈ ಗೂಂಡಾಗಳ ಗ್ಯಾಂಗ್ ಲೀಡರ್ ಯಾರು? ನಿಮಗೆ ಎಲ್ಲಾ ಮಾಹಿತಿ ಇರುತ್ತದೆ, ನೀವೂ ಸತ್ಯ ಹೇಳಬೇಕಾಗುತ್ತದೆ.
#ಬೆಳಗಾವಿ

Continue Reading

Politics

Published

on

ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.

ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ.

Continue Reading

Politics

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

Published

on

ಬೆಂಗಳೂರು

“ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ. ಮಾಧ್ಯಮಗಳ ಮುಖಾಂತರ ಯಾರಾದರೂ ಹುದ್ದೆ ಕೇಳುತ್ತಾರೆಯೇ? ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ” ಎಂದರು.

“ಪಕ್ಷದ ವಿಚಾರದ ವಿಚಾರವಾಗಿ ಯಾವುದೇ ಬೆಳವಣಿಗೆ ಇದ್ದರೂ ನಾನೇ ಮಾಧ್ಯಮಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ. ಈಗ ನಮ್ಮ ಪಕ್ಷ ಸಂಘಟನೆ ಮಾಡಿ, ಪಕ್ಷ ಉಳಿಸಿ, ಬೆಳೆಸುವ ಕೆಲಸ ಮಾಡಬೇಕು. ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕು ಎಂದು ನಮ್ಮ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ. ಯಾವುದೇ ವಿಚಾರವಾಗಿ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಿದ್ದಾರೆ” ಎಂದು ತಿಳಿಸಿದರು.

ಮಾಧ್ಯಮಗಳ ಮುಂದೆ ಹೇಳಿಕೆಯಿಂದ ಪ್ರಯೋಜನವಿಲ್ಲ:

“ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ. ಇದು ಕೇವಲ ಕಾಂಗ್ರೆಸ್ ಮಾತ್ರವಲ್ಲ. ಬಿಜೆಪಿ, ಜೆಡಿಎಸ್, ರೈತ ಸಂಘ ಸೇರಿದಂತೆ ಯಾವುದೇ ಪಕ್ಷವಾದರೂ ಪಕ್ಷದ ವಿಚಾರವನ್ನು ಆಂತರಿಕವಾಗಿ ಚರ್ಚೆ ಮಾಡಬೇಕು ಎಂದು ಹೇಳುತ್ತೇನೆ. ನಾನು ಯಾವುದಾದರೂ ಹುದ್ದೆ ಬಯಸಿದರೆ ನೀವು (ಮಾಧ್ಯಮಗಳು) ಆ ಸ್ಥಾನ ನನಗೆ ಕೊಡಿಸುತ್ತೀರಾ? ಅಥವಾ ಈ ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಬದಲಿಗೆ ಇದರಿಂದ ವ್ಯತಿರಿಕ್ತ ಪರಿಣಾಮ ಬೀರುತ್ತದೆ” ಎಂದು ಕೇಳಿದರು.

ಯಾರೇ ಇರಲಿ, ಹೋಗಲಿ ಪಕ್ಷ ಇರುತ್ತದೆ

“ಈ ಪಕ್ಷವನ್ನು ಕೇವಲ ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿಲ್ಲ. ಕಾರ್ಯಕರ್ತರು, ಮತದಾರರು ನಮ್ಮ ಮೇಲೆ ಅಪಾರವಾದ ವಿಶ್ವಾಸ ಇಟ್ಟು ನಮಗೆ ಅಧಿಕಾರ ನೀಡಿದ್ದಾರೆ. ಇದನ್ನು ನಾವು ಉಳಿಸಿಕೊಳ್ಳಬೇಕು, ಉಳಿಸಿಕೊಳ್ಳುತ್ತೇವೆ. ಇದು ಕಾರ್ಯಕರ್ತರ ಹಾಗೂ ಮತದಾರರ ಪಕ್ಷ. ಇದಕ್ಕೆ ತನ್ನದೇ ಆದ ದೊಡ್ಡ ಇತಿಹಾಸವಿದೆ. ಯಾರೇ ಇರಲಿ, ಹೋಗಲಿ ತನ್ನನ್ನು ತಾನು ಉಳಿಸಿಕೊಳ್ಳುವ ಶಕ್ತಿ ಈ ಪಕ್ಷಕ್ಕೆ ಇದೆ. ಮಹಾತ್ಮಾ ಗಾಂಧೀಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಅಧಿಕಾರವನ್ನು ತ್ಯಾಗ ಮಾಡಿದ್ದಾರೆ. ಅಂಬೇಡ್ಕರ್ ಅವರು ಸಂವಿಧಾನ ಕೊಟ್ಟರು ಅವರು ಯಾವ ಅಧಿಕಾರ ಪಡೆದಿದ್ದಾರೆ? ನಾವು ಅವರನ್ನೆಲ್ಲ ಸ್ಮರಿಸಬೇಕು. ಹೀಗಾಗಿ ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ಪಕ್ಷ ಬಹಳ ಮುಖ್ಯ ಎಂದು ನಾನು ಬಹಳ ನಮ್ರತೆಯಿಂದ ಮನವಿ ಮಾಡುತ್ತೇನೆ. ಯಾರಿಗಾದರೂ ಏನೇ ಸಮಸ್ಯೆ ಇದ್ದರೂ ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಸಧ್ಯಕ್ಕೆ ನಾವು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆಯಲ್ಲಿದ್ದು, ಇದರ ಪರಿಶೀಲನೆಗೆ ಸುರ್ಜೆವಾಲ ಅವರು ಶುಕ್ರವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ನಿಮ್ಮ ಪ್ರಶ್ನೆಗಳು ಏನೇ ಇದ್ದರೂ ಅವರನ್ನು ಕೇಳಿ” ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶ್ನೆ ಮಾಡುವುದು ಸರಿಯಲ್ಲ

ಪಕ್ಷದ ಸಂಘಟನೆ ಕುಂಠಿತವಾಗಿದೆ, ಪಕ್ಷಕ್ಕೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿ ಎಂದು ಕೇಳಿದಾಗ, “ಈ ಬಗ್ಗೆ ಸ್ಪಷ್ಟನೆ ನೀಡಬೇಕಿರುವುದು ನಾನಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು. ಈ ವಿಚಾರವಾಗಿ ಅವರ ಬಳಿ ಕೇಳಿ. ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು” ಎಂದು ತಿಳಿಸಿದರು.

Continue Reading

Politics

ರಾಜ್ಯ ಹೆದ್ದಾರಿ ಯೋಜನೆಗಳ ಬಗ್ಗೆ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್.ಡಿ.ಕುಮಾರಸ್ವಾಮಿ

Published

on

ನವದೆಹಲಿ: ರಾಜ್ಯದ ವಿವಿಧ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಹಲವಾರು ಮನವಿಗಳನ್ನು ಸಲ್ಲಿಸಿ ಆದಷ್ಟು ಬೇಗ ಕ್ರಮ ವಹಿಸುವಂತೆ ಕೋರಿದರು.

ನವದೆಹಲಿಯಲ್ಲಿ ಬುಧವಾರ ಬೆಳಗ್ಗೆ ನಿತಿನ್ ಗಡ್ಕರಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಕುಮಾರಸ್ವಾಮಿ ಅವರು; ರಾಜ್ಯದಲ್ಲಿ ಹಲವಾರು ಹೆದ್ದಾರಿ ಯೋಜನೆಗಳ ಅಭಿವೃದ್ಧಿ ಆಗಬೇಕಿದ್ದು, ಆ ಬಗ್ಗೆ ಕ್ರಮ ವಹಿಸಬೇಕು ಎಂದು ಹತ್ತಕ್ಕೂ ಹೆಚ್ಚು ಯೋಜನೆಗಳ ಮನವಿ ಪತ್ರಗಳನ್ನು ಸಲ್ಲಿಸಿದರು. ಈ ಪೈಕಿ ಕೆಲ ಯೋಜನೆಗಳ ಬಗ್ಗೆ ತಕ್ಷಣವೇ ಖುದ್ದಾಗಿ ಗಮನ ಹರಿಸುವುದಾಗಿ ಗಡ್ಕರಿ ಅವರು ಭರವಸೆ ನೀಡಿದರು.


ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು ಮುಂತಾದ ಜಿಲ್ಲೆಗಳ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಸಾರಿಗೆ ಸಚಿವರ ಜತೆ ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಿದರು.

ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಸಾರಿಗೆ ಸಚಿವರು; ಎಲ್ಲಾ ಯೋಜನೆಗಳ ಬಗ್ಗೆ ಖುದ್ದು ಗಮನ ಹರಿಸುವುದಾಗಿ ಗಡ್ಕರಿ ಅವರು ಭರವಸೆ ನೀಡಿದರು ಎಂಬುದಾಗಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಮಂಡ್ಯದ ಹೊರ ವರ್ತುಲ ರಸ್ತೆ:

ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಅಗಲೀಕರಣ ಮಾಡುವುದು, ಅದರ ವೈಟ್ ಟ್ಯಾಪಿಂಗ್ ಹಾಗೂ NH-275ರಲ್ಲಿರುವ ಮಂಡ್ಯ ನಗರದ ಎಲ್ಲಾ ಜಂಕ್ಷನ್ ಗಳು, ಪಾದಚಾರಿ ಮಾರ್ಗಗಳನ್ನೂ ಅಭಿವೃದ್ಧಿ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಕೋರಿದರು.

ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಹಳ್ಳದಿಣ್ಣೆ ಬಿದ್ದು ವಾಹನ ಸವಾರರಿಗೆ ಬಹಳಷ್ಟು ತೊಂದರೆ ಆಗಿದೆ. ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ಸಂಚಾರ ಮಾಡುವುದು ಅಪಾಯಕಾರಿ ಆಗಿದೆ ಎಂದು ಎಂದು ಗಡ್ಕರಿ ಅವರಿಗೆ ಕುಮಾರಸ್ವಾಮಿ ಅವರು ಮನವರಿಕೆ ಮಾಡಿಕೊಟ್ಟರು.

ಜೇವರ್ಗಿ- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ (NH-150A)ಯಲ್ಲಿನ ಪಾಂಡವಪುರ ಪಟ್ಟಣ, ಕಿರಂಗೂರು ಬಳಿಯ ಹೆದ್ದಾರಿ ಅಭಿವೃದ್ಧಿ ಮಾಡುವ ಬಗ್ಗೆಯೂ ಸಚಿವರು ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು.

ಆಂಧ್ರ ಪ್ರದೇಶದ ಕುಪ್ಪಂ- ಬಂಗಾರಪೇಟೆ- ಕೋಲಾರ -ಚಿಂತಾಮಣಿ; ಚಿಂತಾಮಣಿಯ ಗಜಾನನ ಸರ್ಕಲ್- ಚೇಳೂರು; ,ರಾಷ್ಟ್ರೀಯ ಹೆದ್ದಾರಿ NH-75ರಿಂದ ಹೊಸಕೋಟೆ -ಹೆಚ್.ಕ್ರಾಸ್- ಚಿಂತಾಮಣಿ ನಡುವೆ ಸಂಪರ್ಕ ಕಲ್ಪಿಸುವ NH-69, NH-42ರಿಂದ ಹೊಸಕೋಟೆ -ಗೌನಿಪಲ್ಲಿ – ಶ್ರೀನಿವಾಸಪುರ ಮೂಲಕ NH-75ಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಯೋಜನೆಗಳ ಬಗ್ಗೆಯೂ ಸಚಿವರು ಸಾರಿಗೆ ಸಚಿವರ ಗಮನ ಸೆಳೆದರು.

Continue Reading

Trending

error: Content is protected !!