Connect with us

Location

ಲೂಟಿ‌ ಮಾಡೋರಿಗೆ ನಮ್ಮ ಸರ್ಕಾರ ಅಂತ ಪ್ರೂವ್‌ ಮಾಡಿದ್ದಾರೆ – ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತೆ ಎಂದ HDK

Published

on

– ಡಿಕೆಶಿ ವಿರುದ್ಧದ ಸಿಬಿಐ ಕೇಸ್ ವಾಪಸ್ ಪಡೆಯುವ ಸರ್ಕಾರದ ನಡೆಗೆ ಮಾಜಿ ಸಿಎಂ ಖಂಡನೆ
– ಸಿಎಂ ವಿರುದ್ಧವೂ ವಾಗ್ದಾಳಿ

ರಾಮನಗರ: ಈ ಸರ್ಕಾರದಲ್ಲಿ ಬಡವರಿಗೆ ರಕ್ಷಣೆ ಇಲ್ಲ, ಲೂಟಿ‌ ಮಾಡುವವರಿಗೆ, ಕೊಳ್ಳೆ ಒಡೆದು ಬದುಕುವವರಿಗೆ ನಮ್ಮ ಸರ್ಕಾರ ಎಂಬುದನ್ನ ನಿರೂಪಿಸಿದ್ದಾರೆ. ಈ ನಡವಳಿಕೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತೆ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಕಿಡಿ ಕಾರಿದ್ದಾರೆ.

 

ಡಿಕೆಶಿ ವಿರುದ್ಧದ ಸಿಬಿಐ ಕೇಸ್ (CBI Case) ವಾಪಸ್ ಪಡೆಯುವ ಸರ್ಕಾರದ ನಡೆಗೆ ಕುಮಾರಸ್ವಾಮಿ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ನಿನ್ನೆ ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಹಲವಾರು ಸುಪ್ರೀಂ ಕೋರ್ಟ್ (Supreme Court) ತೀರ್ಪುಗಳು ನಮ್ಮ ಕಣ್ಣಮುಂದೆ ಇದೆ. ಈಗಾಗಲೇ ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್ ನಲ್ಲಿ ಚರ್ಚೆ ಆಗಿದೆ. ಎರಡು ಬಾರಿ ಅರ್ಜಿ ವಜಾಕ್ಕೆ ಮನವಿ ಸಲ್ಲಿಸಿದ್ರೂ ಕೋರ್ಟ್‌ನಲ್ಲಿ ತಿರಸ್ಕಾರ ಆಗಿದೆ. ಸೂಕ್ಷ್ಮ ವಿಚಾರ ನ್ಯಾಯಾಲಯದ ಮುಂದೆ ಇದ್ದಾಗ ಈ ರೀತಿಯ ಸರ್ಕಾರ ಏಕಾಏಕಿ ನಿರ್ಧಾರ ತೆಗೆದುಕೊಳ್ಳುವುದು ತಪ್ಪು. ಕಾನೂನನ್ನ ಧಿಕ್ಕರಿಸಿ, ಕಾನೂನಿಗಿಂತ ನಾವೇ ದೊಡ್ಡವರು ಎಂಬುದನ್ನ ಪ್ರದರ್ಶನ ಮಾಡಿಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಬಡವರಿಗೆ ರಕ್ಷಣೆ ಇಲ್ಲ, ಲೂಟಿ‌ ಮಾಡುವವರಿಗೆ, ಕೊಳ್ಳೆ ಒಡೆದು ಬದುಕುವವರಿಗೆ ನಮ್ಮ ಸರ್ಕಾರ ಎಂಬುದನ್ನ ನಿರೂಪಿಸಿದ್ದಾರೆ. ಡಿಸಿಎಂ ಎಂತಹಾ ದೊಡ್ಡತನ ತೋರಿಸಿದ್ದಾರೆ ಅಂದ್ರೆ, ಈ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆ ಆಗುತ್ತೆ. ಪಾಪ ನಿನ್ನೆ ದಿನ ಡಿಸಿಎಂ ಸಂಪುಟ ಸಭೆಗೂ ಹೋಗಿಲ್ಲ. ಕಳೆದ 3 ದಿನಗಳ ಹಿಂದೆ ಸೀನಿಯರ್ ಅಡ್ವೋಕೇಟ್‌ಗಳನ್ನ ಕರೆದು ಸಭೆಮಾಡಿ ಇದರಿಂದ ಯಾವ ರೀತಿ ರಕ್ಷಣೆ ಪಡೆಯಬೇಕು ಅಂತ ಚರ್ಚೆ ಮಾಡಿದ್ದಾರೆ. ನಮಗೆ ಎಲ್ಲಾ ಮಾಹಿತಿ ಇದೆ. ಮೊನ್ನೆಯೇ ಈ ವಿಚಾರ ಗಮನಕ್ಕೆ ಬಂತು. ಸರ್ಕಾರದ ನಿನ್ನೆಯ ತೀರ್ಮಾನ, ಈ ನಡವಳಿಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತೆ. ಈ ವಿಚಾರ ಮುಂದಿನ ಸದನದಲ್ಲಿ ಚರ್ಚೆ ಮಾಡ್ತೀನಿ ಎಂದು ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ.

ಸರ್ಕಾರಕ್ಕೆ ಡಿಕೆಶಿ (DK Shivakumar) ಒತ್ತಡ ಹಾಕಿದ್ರಾ ಪ್ರಶ್ನೆಗೆ ಉತ್ತರಿಸಿ, ಇಲ್ಲಿ ಒತ್ತಡದ ಪ್ರಶ್ನೆಯೇ ಇಲ್ಲ. ಸರ್ಕಾರ ಇರೋದು ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡೋದಕ್ಕೆ. ತಿಳಿವಳಿಕೆ ಇರುವವರೇ ಇಂತಹ ನಿರ್ಣಯ ಮಾಡಿರೋದು ಸರ್ಕಾರಕ್ಕೆ ಛೀಮಾರಿ ಹಾಕಿದಂತೆ. ಒಂದು ಬಾರಿ ಆದೇಶ ಮಾಡಿದ ಮೇಲೆ ಬದಲಾವಣೆ ಮಾಡಲು ಆಗಲ್ಲ. ಸಿಬಿಐ ನಿಂದ ವಾಪಸ್ಸ್ ತಗೆದು ಲೋಕಾಯುಕ್ತ ಅಥವಾ ಸ್ಥಳೀಯ ಪೊಲೀಸರಿಂದ ಇದನ್ನ ತನಿಖೆ ಮಾಡಲು ಆಗುತ್ತಾ? ಲೋಕಾಯುಕ್ತ ಅಥವಾ ಪೊಲೀಸರು ಇದನ್ನ ಮಾಡಲು ಸಾಧ್ಯವೇ? ಹಿಂದಿನ ಸರ್ಕಾರ ಸ್ಪೀಕರ್ ಅನುಮತಿ ಪಡೆದಿರಲಿಲ್ಲ ಎನ್ನುವುದಾದರೇ, ಇವರು ಸ್ಪೀಕರ್ ನಿಂದ ಅನುಮತಿ ಪಡೆದಿದ್ದಾರಾ? ಇದೆಲ್ಲಾ ಕೇವಲ ಸಬೂಬುಗಳು ಅಷ್ಟೇ. ಈಗಾಗಲೇ ತನಿಖೆ ಮುಂದುವರಿಸಿ ಅಂತಾ ಕೋರ್ಟ್ ಆದೇಶ ಆಗಿದೆ. ಈಗ ಸ್ಪೀಕರ್ ಅನುಮತಿ ಪಡೆದ್ರೂ ಕೇಸ್ ವಾಪಸ್ಸ್ ಪಡೆಯಲು ಆಗುತ್ತಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದೇ ಸಿಎಂ ಸಿದ್ದರಾಮಯ್ಯ ಅವರು ಲೋಕಾಯುಕ್ತ ರದ್ದು ಮಾಡಿ, ಅಕ್ರಮ ಮುಚ್ಚಿಹಾಕಿದ್ರು. ಇದರಲ್ಲಿ ಸಿದ್ದರಾಮಯ್ಯ ನಿಪುಣರು. ಈ ಬಗ್ಗೆ ಅವರಿಗೆ ಬಹಳ ಅನುಭವ ಇದೆ. ಹಾಗಾಗಿ ಕಾನೂನು ವ್ಯವಸ್ಥೆಯಲ್ಲಿ ಹೊಸ ಹೆಜ್ಜೆಹಾಕಲು ಹೊರಟಿದ್ದಾರೆ ಎಂದು ಸಿಎಂ ವಿರುದ್ಧವೂ ಕಿಡಿ ಕಾರಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Mysore

ಏ.9 ರಂದು ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರೆ: ಪೂರ್ವ ಸಿದ್ಧತೆ ಕುರಿತು ದರ್ಶನ್‌ ದ್ರುವ ಸಭೆ

Published

on

ವರದಿ: ಮಹದೇವಸ್ವಾಮಿ ಪಟೇಲ್

ನಂಜನಗೂಡು: ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರೆಯ ಏ.9 ರಂದು ಜರುಗುವ ಮಹೋತ್ಸವದ ಹಿನ್ನೆಲೆ ಇಂದು ಬುಧವಾರ 2 ನೇ ಹಂತದ ಪೂರ್ವಭಾವಿ ಸಭೆಯನ್ನು ಎಡಿಸಿ ಜಿಲ್ಲಾಧಿಕಾರಿಗಳು ಹಾಗೂ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅಧ್ಯಕ್ಷತೆಯಲ್ಲಿ ನಡೆದ ದೊಡ್ಡ ಜಾತ್ರೆ ಪೂರ್ವ ಸಿದ್ಧತಾ ಸಭೆ ನಡೆಸಲಾಯಿತು.

ನಗರದ ಶ್ರೀಕಂಠೇಶ್ವರ ಸ್ವಾಮಿಯ ಅನ್ನದಾಹೋಹ ಭವನದಲ್ಲಿ ಆಯೋಜಿಸಿದ್ದ ದೊಡ್ಡ ಜಾತ್ರೆಯ ಪ್ರಯುಕ್ತ ಅಧಿಕಾರಿಗಳು ಮತ್ತು ಏಳೂರು ಗ್ರಾಮಸ್ಥರ ಸಲಹೆ ಸೂಚನೆಗಳ 2 ನೇ ಹಂತ ಪೂರ್ವದ ಸಭೆ ಆಯೋಜಿಸಲಾಯಿತು.

ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ ಶ್ರೀಕಂಠೇಶ್ವರ ದೇವಸ್ಥಾನ ಸುತ್ತು, ಅಂಬೇಡ್ಕರ್ ಭವನ, ನಗರ ಸಭೆ, ಸೇರಿದಂತೆ ದೀಪದ ಅಲಂಕಾರಗಳನ್ನು ಅದ್ದೂರಿಯಾಗಿ ಮಾಡಬೇಕೆಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಅಧಿಕಾರಿಗೆ ಸೂಚನೆ ನೀಡಿದರು.

ರಥೋತ್ಸವ ಜರುಗಲಿರುವಗ ರಥದ ಚಕ್ರಗಳು, ರಥದ ಹಗ್ಗ, ರಸ್ತೆಗಳಲ್ಲಿ ಹಳ್ಪಳ ದಿಟ್ಟನೆಗಳನ್ನು, ಪರಿಶೀಲಿಸಬೇಕು, ಅಧಿಕಾರಿಗಳು ನಿಮ್ಮ ಜವಾಬ್ದಾರಿಯಿಂದ ಅವಘಡನೆ ನಡೆಯದೆ ಹಾಗೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಗಡಕ್ ಸೂಚನೆ ಶಾಸಕ ದರ್ಶನ್ ಧ್ರುವನಾರಾಯಣ್ ನೀಡಿದರು.

ಎಡಿಸಿ ಶಿವರಾಜ್ ಮಾತನಾಡಿ ಕ್ಷೇತ್ರದಲ್ಲಿ ಇಂತಹ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರು ಹೆಚ್ಚು ಸಹಕಾರ ಬೆಂಬಲ ಕೊಡುತ್ತಿದ್ದಾರೆ ಖುಷಿಯಾಗುತ್ತದೆ. ಆದ್ದರಿಂದ ಅಧಿಕಾರಿಗಳು ನಿಮ್ಮ ಜವಾಬ್ದಾರಿಯಿಂದ ಕೆಲಸಗಳನ್ನು ನಿರ್ವಹಿಸಬೇಕು

ಜಾತ್ರೆ ಕಳೆದು ವರ್ಷಕ್ಕಿಂತ ಅದ್ದೂರಿಯಾಗಿ ಅಲಂಕಾರ ಮಾಡಿ ಯಾವುದೇ ಇತರ ಘಟಕಗಳ ನಡುವೆ ಅದ್ದೂರಿಯಾಗಿ ಜಾತ್ರೆ ನಡೆಯಬೇಕು.

ದೇವಸ್ಥಾನ ಸುತ್ತ ಹಾಗೂ ತೇರು ಎಳೆಯುವಾಗ ಸಿಸಿಟಿವಿ ಅಳವಡಿಸಿರಬೇಕು. ರಥ ಚಕ್ರದ ಹಿಂಭಾಗದಲ್ಲಿ ಎದ್ದಿನ ಮರ ಕೊಡುವವರು ಜಾಗೃತಿ ಆಗಿರಬೇಕು ಅವರಿಗೆ ಟೀ ಶರ್ಟ್ ಕೊಡಬೇಕೆಂದು ದೇವಸ್ಥಾನ ಅಧಿಕಾರಿಗೆ ಸೂಚನೆ ನೀಡಿದರು

ಶಾಸಕರಿಂದ ಸಭಾಷ್ ಅದ್ದೂರಿಯಾಗಿ ನಡೆಯಿತು ಎಂದು ಅನಿಸಿಕೊಂಡರೆ ಸಂತೋಷವಾಗುತ್ತದೆ. ನಂಜುಂಡೇಶ್ವರ ಸ್ವಾಮಿ ನಮ್ಮ ಮನೆ ದೇವರು ಎಂದುಕೊಂಡು. ನಂಜುಂಡೇಶ್ವರ ಸ್ವಾಮಿಯ ಭಯಕ್ಕೆ ಶ್ರದ್ಧೆ ಇಟ್ಟು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸಗಳನ್ನು ನಿರ್ವಹಿಸಿ ಎಂದು ಖಡಕ್ ಸೂಚನೆ ನೀಡಿದರು.

ಸಭೆಯಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಕಾಸ್ನರ್, ನಗರ ಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ, EO ಜಗದೀಶ್ , DYSP ರಘು , ನಗರಸಭಾ ಪೌರಯುಕ್ತರಾದ ವಿಜಯ್ ಸೇರಿದಂತೆ ವಿವಿಧ ಗ್ರಾಮದ ಯಜಮಾನರುಗಳು, ಮುಖಂಡರುಗಳು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Kodagu

ಮುದ್ದಂಡ ಹಾಕಿ ಉತ್ಸವಕ್ಕೆ ಅಂತಿಮ ಹಂತದ ಸಿದ್ಧತೆ

Published

on

ಮಡಿಕೇರಿ : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಮಡಿಕೇರಿ ನಗರದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದ್ದು, ಬೆಳ್ಳಿ ಹಬ್ಬದ ಪ್ರಯುಕ್ತ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮುದ್ದಂಡ ಹಾಕಿ ಹಬ್ಬದ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ.

ಹಾಕಿ ಪಂದ್ಯಾವಳಿ ನಡೆಯುವ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿ ಕೊಡವ ಕುಟುಂಬಗಳ ದಾಖಲೆಯ ೩೯೬ ತಂಡಗಳು ನೋಂದಾಯಿಸಿಕೊಂಡಿದ್ದು, ಮಡಿಕೇರಿಯ ಕೇಂದ್ರ ಸ್ಥಾನದಲ್ಲಿ ಪಂದ್ಯಾವಳಿ ನಡೆಯುತ್ತಿರುವುದು ಈ ಬಾರಿಯ ವಿಶೇಷ ಎಂದರು.

ಪಂದ್ಯಾವಳಿಯ ವಿಜೇತ ತಂಡಕ್ಕೆ ರೂ.೫ ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ೩ ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ಸೆಮಿಫೈನಲ್‌ಗೆ ಬಂದ ಎರಡು ತಂಡಗಳಿಗೆ ತಲಾ ೧ ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಪಂದ್ಯಾವಳಿಯ ಯಶಸ್ಸಿಗೆ ಸರ್ಕಾರದ ಸಂಪೂರ್ಣ ಸಹಕಾರ ಇದ್ದು, ಬೇಡಿಕೆಗಳನ್ನು ಈಡೇರಿಸುವ ಭರವಸೆ ದೊರೆತ್ತಿದೆ. ಜಿಲ್ಲೆಯ ಶಾಸಕದ್ವಯರು ಹಾಗೂ ಸಂಸದರು ಮೊದಲ ದಿನದಿಂದಲೂ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆಗಳ ಎಲ್ಲಾ ಕೊಡವ ಸಮಾಜಗಳು ಹಾಗೂ ಕೊಡವ ಕೇರಿಗಳ ಸಹಕಾರವನ್ನು ಪಡೆಯಲಾಗಿದ್ದು, ಹಾಕಿ ಉತ್ಸವ ಯಶಸ್ವಿಯಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕ್ರೀಡಾ ಜ್ಯೋತಿ : ಕೊಡವ ಹಾಕಿ ಉತ್ಸವದ ಜನಕರಾದ ಕರಡ ಗ್ರಾಮದ ಪಾಂಡಂಡ ಕುಟುಂಬದ ಐನ್’ಮನೆಯಲ್ಲಿ ಮುದ್ದಂಡ ಹಾಕಿ ಉತ್ಸವದ ಕ್ರೀಡಾಜ್ಯೋತಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಕೊಡವ ಹಾಕಿ ಹಬ್ಬದ ಜನಕ ದಿ.ಪಾಂಡಂಡ ಕುಟ್ಟಪ್ಪ ಅವರ ಪತ್ನಿ ಲೀಲ ಕುಟ್ಟಪ್ಪ ಉದ್ಘಾಟಿಸಿದ್ದು, ಇದುವರೆಗೆ ಹಾಕಿ ಉತ್ಸವ ಆಯೋಜಿಸಿದ್ದ ೨೪ ಕುಟುಂಬಗಳನ್ನು ಸ್ಮರಿಸುವ ಮತ್ತು ಗೌರವದಿಂದ ಕಾಣುವ ಉದ್ದೇಶದಿಂದ ಎಲ್ಲಾ ಐನ್’ಮನೆಗಳಿಗೆ ಮ್ಯಾರಥಾನ್ ಮೂಲಕ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯುತ್ತಿರುವುದು ಈ ಬಾರಿಯ ವಿಶೇಷ.

ಈಗಾಗಲೇ ಪಾಂಡಂಡ ಕುಟುಂಬದ ಐನ್ ಮನೆಯ ನಂತರ ಕಿರುಗೂರು ಚೆಪ್ಪುಡಿರ, ಅಲಮೇಂಗಡ, ಟಿ.ಶೆಟ್ಟಿಗೇರಿ- ಒಂಟಿಯಂಗಡಿ ಮಚ್ಚಮಾಡ, ಚೆಕ್ಕೇರ, ಕಳ್ಳಿಚಂಡ, ಕುಂದ ಮನೆಯಪಂಡ, ನಾಂಗಾಲ ಕುಪ್ಪಂಡ, ವಿರಾಜಪೇಟೆ ಕಾವಾಡಿ ನೆಲ್ಲಮಕ್ಕಡ, ಚೆಂಬೆಬೆಳ್ಳೂರು ಈಶ್ವರ ದೇವಾಲಯ, ಮಂಡೇಪಂಡ, ಕುಕ್ಲೂರು ತಾತಂಡ, ವಿರಾಜಪೇಟೆ ಕೊಡವ ಸಮಾಜ, ಅರಮೇರಿ ಮುದ್ದಂಡ, ಐಚೆಟ್ಟಿರ, ಕಾಕೋಟುಪರಂಬು ಮಂಡೇಟಿರ, ಬಲ್ಲಚಂಡ, ಕರಡ ಕೋಡಿರ, ಬಾವಲಿ ಬಿದ್ದಂಡ ಐನ್ ಮನೆಗಳಿಗೆ ಕೊಡಗಿನ ಮ್ಯಾರಥಾನ್ ಪಟುಗಳು ಕ್ರೀಡಾಜ್ಯೋತಿಯೊಂದಿಗೆ ಸಾಗಿದ್ದು, ಗೌರವ ಸಲ್ಲಿಸಲಾಗಿದೆ ಎಂದು ಹೇಳಿದರು.

ಮಾ.೨೭ರಂದು ಬಾವಲಿ ಮಾದಂಡ, ಕಲಿಯಂಡ, ನೆಲ್ಜಿ ಮಾಳೆಯಂಡ, ಅಪ್ಪಚೆಟ್ಟೋಳಂಡ, ನಾಪೋಕ್ಲು ಕುಲ್ಲೇಟಿರ, ಬಿದ್ದಾಟಂಡ, ಕೊಳಕೇರಿ ಕುಂಡ್ಯೋಳಂಡ, ಮಡಿಕೇರಿ ಶಾಂತೆಯಂಡ ಮೂಲಕ ಮಾ.೨೮ರಂದು ಜನರಲ್ ತಿಮ್ಮಯ್ಯ ವೃತ್ತ ತಲುಪಲಿದೆ. ನಂತರ ಬೆಳಿಗ್ಗೆ ೯ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಮುಖ್ಯ ರಸ್ತೆಯ ಮೂಲಕ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನಕ್ಕೆ ಬೃಹತ್ ಮೆರವಣಿಗೆಯ ಮೂಲಕ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುವುದು.
ಉದ್ಘಾಟನಾ ಸಮಾರಂಭದ ಪ್ರಯುಕ್ತ ಪ್ರದರ್ಶನ ಪಂದ್ಯ ಮಧ್ಯಾಹ್ನ ೧೨.೩೦ ಗಂಟೆಗೆ ಕೊಡಗು ಜಿಲ್ಲಾಡಳಿತ ಹಾಗೂ ಆಯೋಜಕ ಕುಟುಂಬ ಮತ್ತು ಕೊಡವ ಹಾಕಿ ಅಕಾಡೆಮಿ ಘಿ೧ ಹಾಗೂ ಕರ್ನಾಟಕ ಘಿ೧ ತಂಡದ ನಡುವೆ ನಡೆಯಲಿದೆ ಎಂದು ರಶಿನ್ ಸುಬ್ಬಯ್ಯ ತಿಳಿಸಿದರು.

ಸೈಕ್ಲೋಥಾನ್ :: ಏ.೨೬ ರಂದು ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವರೆಗೆ ಸುಮಾರು ೮೩ ಕಿ.ಮೀ ನ ಸೈಕ್ಲೋಥಾನ್ ನಡೆಯಲಿದೆ. ಇದಕ್ಕೆ ಅಂತರರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಹಾಗೂ ಸ್ಥಳೀಯ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದು, ವಿವಿಧ ವಿಭಾಗದಲ್ಲಿ ಬಹುಮಾನ ನೀಡಲಾಗುವುದು.

ಮೈದಾನದಲ್ಲಿ ಸುಮಾರು ೨೫ ಸಾವಿರಕ್ಕೂ ಹೆಚ್ಚು ಮಂದಿ ಕುಳಿತುಕೊಳ್ಳಬಹುದಾದ ಗ್ಯಾಲರಿ ನಿರ್ಮಾಣ ಮಾಡಲಾಗಿದ್ದು, ೩೫ ಪುಡ್ ಸ್ಟಾಲ್‌ಗಳು ಇರಲಿದೆ ಎಂದು ಹೇಳಿದರು.

ಮಹಿಳಾ ಹಾಕಿ ಸಂಭ್ರಮ: ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಈಗಾಗಲೇ ೪೦ ತಂಡಗಳು ನೋಂದಾಯಿಸಿಕೊಂಡಿವೆ. ನೋಂದಣಿಯ ಕೊನೆಯ ದಿನಾಂಕ ಏ.೧೦ ಆಗಿರುವುದರಿಂದ ಮತ್ತಷ್ಟು ತಂಡಗಳು ಸೇರ್ಪಡೆಗೊಳ್ಳಲಿವೆ. ಮೂರನೇ ಮೈದಾನದಲ್ಲಿ ಮಹಿಳಾ ಹಾಕಿ ಪಂದ್ಯಾವಳಿ ನಡೆಯಲಿದೆ ಎಂದರು.

ಪಂದ್ಯಾವಳಿಯ ವಿಜೇತರಿಗೆ ರೂ.೨ ಲಕ್ಷ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ೧ ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಸೆಮಿಫೈನಲ್ ಸಂದರ್ಭ ಭಾರತೀಯ ಮಹಿಳಾ ಹಾಕಿ ತಂಡದ ನಾಯಕಿ ಲಾಲ್ ರಿಮ್ ಸಿಯಾಮಿ ಅವರು ಆಗಮಿಸಿದ ಹಾಕಿ ಕ್ರೀಡೆಯ ಕುರಿತು ಮಾಹಿತಿ ನೀಡಲಿದ್ದಾರೆ. ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹಾಗೂ ಒಲಂಪಿಯನ್ ಮನ್ ಪ್ರೀತ್ ಸಿಂಗ್ ಕೂಡ ಪಂದ್ಯಾವಳಿಯ ಸಂದರ್ಭ ಪಾಲ್ಗೊಳ್ಳಲಿದ್ದಾರೆ. ಸೆಮಿ ಫೈನಲ್ ಪಂದ್ಯಾವಳಿಗೆ ಹಿರಿಯ ರಾಜಕರಣಿ ಅಜಯ್ ಮಕೆನ್ ಆಗಮಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಮಾ.೨೮ ರಂದು ಮಡಿಕೇರಿಯ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಹಾಕಿ ಉತ್ಸವ ಉದ್ಘಾಟನೆಗೊಳ್ಳಲಿದೆ. ಅಂದು ಬೆಳಿಗ್ಗೆ ೯.೪೫ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ.ಕಾರ್ಯಪ್ಪ ಕಾಲೇಜು ಮೈದಾನದವರೆಗೆ ಕೊಡವ ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ನಡೆಯಲಿದ್ದು, ನಂತರ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು.

ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಅರ್ಜುನ ಪ್ರಶಸ್ತಿ ವಿಜೇತ ಒಲಂಪಿಯನ್ ಅಂಜಪರವಂಡ ಬಿ.ಸುಬ್ಬಯ್ಯ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ, ಅತಿಥಿಗಳಾಗಿ ಜಿಲ್ಲಾಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಅಶೋಕ್ ಸಂಗಪ್ಪ ಆಲೂರ, ಮಾಜಿ ಶಾಸಕರುಗಳಾದ ಮಂಡೇಪಂಡ ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ಶಾಂತೆಯಂಡ ವೀಣಾ ಅಚ್ಚಯ್ಯ, ಮಂಡೇಪಂಡ ಸುನಿಲ್ ಸುಬ್ರಮಣಿ ಹಾಗೂ ಚೆಪ್ಪುಡಿರ ಅರುಣ್ ಮಾಚಯ್ಯ ಪಾಲ್ಗೊಳ್ಳಲಿದ್ದಾರೆ. ಮುದ್ದಂಡ ಕುಟುಂಬದ ಅಧ್ಯಕ್ಷ ಮುದ್ದಂಡ ಬಿ.ದೇವಯ್ಯ ಹಾಗೂ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಉಪಸ್ಥಿತರಿರುವರು.

ಮುದ್ದಂಡ ಹಾಕಿ ಹಬ್ಬದ ಉಪಾಧ್ಯಕ್ಷ ಡೀನ್ ಬೋಪಣ್ಣ ಮಾತನಾಡಿ, ಪಂದ್ಯಾವಳಿ ವೀಕ್ಷಣೆಗೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಸೂಕ್ತವಾದ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ ಅವರ ಅನುದಾನದಲ್ಲಿ ೧,೫೦೦ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ದಿಲೀಪ್ ನಾಚಪ್ಪ ಹಾಗೂ ಯಲದಾಳು ಮನೋಜ್ ಬೋಪಯ್ಯ ಅವರ ಜಾಗದಲ್ಲಿ ೧,೦೦೦ ವಾಹನದ ನಿಲುಗಡೆ ವ್ಯವಸ್ಥೆ ಮಾಡಲಾಗಿದ್ದು, ಸುಮಾರು ೨,೫೦೦ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಮುದ್ದಂಡ ಒಕ್ಕದ ಅಧ್ಯಕ್ಷ ಮುದ್ದಂಡ ಬಿ.ದೇವಯ್ಯ ಮಾತನಾಡಿ, ಮುದ್ದಂಡ ಕಪ್ ಹಾಕಿ ಉತ್ಸವವು ಜಿಲ್ಲೆಯಲ್ಲಿ ದಸರಾ ಹಬ್ಬದಂತೆ ನಡೆಯಲಿದ್ದು, ಕೊಡವ ಜನಾಂಗ ಹಾಗೂ ಕೊಡವೇತರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಕೋರಿದರು.

ಮುದ್ದಂಡ ಹಾಕಿ ಹಬ್ಬದ ಕಾರ್ಯದರ್ಶಿ ಆದ್ಯ ಪೂವಣ್ಣ ಉಪಸ್ಥಿತರಿದ್ದರು.

Continue Reading

Hassan

ವಿದೇಶಗಳಿಗೆ ಮಾದರಿಯಾಗಬಲ್ಲ ಸಾಂಸ್ಕೃತಿಕ ಹಿರಿಮೆ ಭಾರತದ್ದು: ಸಿಮೆಂಟ್‌ ಮಂಜು

Published

on

ವರದಿ: ಸತೀಶ್ ಚಿಕ್ಕಕಣಗಾಲು

ಆಲೂರು: ಜಗತ್ತಿನ ವಿವಿಧ ದೇಶಗಳಿಗೆ ಮಾದರಿಯಾಗಬಲ್ಲ ಸಾಂಸ್ಕೃತಿಕ ಹಿರಿಮೆ ಭಾರತದ್ದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ. ಹಾಗೂ ಸಾಂಸ್ಕೃತಿಕ ವೇದಿಕೆ ಇವುಗಳ ವತಿಯಿಂದ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಿದ್ದ ಜಾನಪದ ಉತ್ಸವ 2025ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತದ ಪ್ರತಿಯೊಂದು ಸಾಂಸ್ಕೃತಿಕ ಆಚರಣೆಗೂ ನಿರ್ದಿಷ್ಟ ಅರ್ಥವಿದೆ. ಈ ಕಾರಣಕ್ಕಾಗಿಯೇ ಭಾರತದ ಸಾಂಸ್ಕೃತಿಕ ಆಚರಣೆಗಳು ಉಡುಗೆ ತೊಡುಗೆಗಳು ಜಗತ್ತಿನ ವಿವಿಧ ದೇಶಗಳನ್ನು ಸೆಳೆದಿವೆ. ಪ್ರಾಚೀನ ಭಾರತದ ಇತಿಹಾಸ, ಕೌಟುಂಬಿಕ ಹಿನ್ನೆಲೆಗಳತ್ತ ದೃಷ್ಟಿ ಹಾಯಿಸಿ ದಾಗ ಇವು ಅವಿಭಕ್ತ ಕುಟುಂಬಗಳ ಹಿತಾಸಕ್ತಿಗೆ ಹೆಚ್ಚಿನ ಮಹತ್ವ ಮತ್ತು ರಕ್ಷಣೆ ನೀಡುತ್ತ ಬಂದಿರುವುದನ್ನು ನಾವು ಕಾಣಬಹುದು. ಅವಿಭಕ್ತ ಕುಟುಂಬಗಳು ಆರ್ಥಿಕವಾಗಿ, ಸಾಮಾಜಿಕವಾಗಿ ಹೆಚ್ಚು ಸ್ವಾವ ಲಂಬಿಯಾಗಿದ್ದವು.ಆದರೆ ಇಂದು ಎಲ್ಲೋ ಮನಸ್ಸಿನ ಮೂಲೆಯಲ್ಲಿ ಅಡಗಿದ ಸಂಶಯ, ಅಹಂಕಾರ, ಅಸೂಯೆ ಎಂಬ ಮಾಯಾ ಜಾಲದಲ್ಲಿ ಸಿಲುಕಿ, ಒಟ್ಟಾಗಿ ಬಾಳಿ ಬದುಕ ಬೇಕಾದ ಅವಿಭಕ್ತ ಕುಟುಂಬ ಗಳು ಇಂದು ವಿಭಕ್ತವಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಹಾಸನ ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಡಾ.ಹಂಪನಹಳ್ಳಿ ತಿಮ್ಮೇಗೌಡ ಮಾತನಾಡಿ, ನಮ್ಮ ನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಿದ್ದ ಅಪ್ಪಟ ಗ್ರಾಮೀಣ ಕ್ರೀಡೆಗಳು ದಿನದಿಂದ ದಿನಕ್ಕೆ ನಶಿಸಿ ಹೋಗುತ್ತಿದ್ದು, ಮುಂದಿನ ದಿನಗಳಲ್ಲಿ ಇತಿಹಾಸದ ಪುಟವನ್ನು ಸೇರುವ ಎಲ್ಲಾ ಸ್ಪಷ್ಟ ಲಕ್ಷಣಗಳು ಕಂಡುಬರುತ್ತಿದೆ ಆದ್ದರಿಂದ ಗ್ರಾಮೀಣ ಸೊಗಡು, ಸಂಸ್ಕೃತಿಯನ್ನು ನಶಿಸಿ ಹೋಗಲು ಬಿಡಬಾರದು, ಹಳ್ಳಿಗಳಲ್ಲಿ ನಡೆಯುವ ಉತ್ಸವ, ಜಾತ್ರೋತ್ಸವ ಮುಂತಾದ ಸಂಸ್ಕೃತಿ ಗ್ರಾಮೀಣ ಭಾಗದ ಸೊತ್ತಾಗಿದೆ. ಗ್ರಾಮೀಣ ಭಾಗದಲ್ಲಿ ನಡೆಯುವ ಉತ್ಸವಗಳಿಗೆ ಹಲವಾರು ಅರ್ಥಗಳಿರುತ್ತದೆ. ಈ ದಿಸೆಯಲ್ಲಿ ನೂರಾರು ವರ್ಷಗಳಿಂದ ಹಿರಿಯರು ಹಾಕಿಕೊಟ್ಟ ಗ್ರಾಮೀಣ ಭಾಗದ ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಬೆಳೆಸಿಕೊಂಡು ಹೋಗುವಂತೆ ಸಲಹೆ ನೀಡಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಆಲೂರು ಬಸ್ ನಿಲ್ದಾಣದಿಂದ ಕಾಲೇಜಿನವರೆಗೂ ಎತ್ತಿನಗಾಡಿಯ ಮೆರವಣಿಗೆ ನಡೆಯಿತು ಈ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿನಿಯರು ಕುಂಭಕಳಸ ಹೊತ್ತು‌ ಸಾಗಿದರೆ ವಿದ್ಯಾರ್ಥಿಗಳು ಡೊಳ್ಳು ಕುಣಿತಕ್ಕೆ ಹೆಜ್ಜೆ ಹಾಕಿದರು, ವೇದಿಕೆ ಕಾರ್ಯಕ್ರಮದಲ್ಲಿ ಶಿಕ್ಷಕಿ ವೇದಾವತಿಯವರು ಜಾನಪದ ಹಾಡುಗಳನ್ನು ಹಾಡುವ ಮೂಲಕ ಎಲ್ಲರ ಗಮನ ಸೆಳೆದರು ನಂತರ ಇದೇ ಕಾಲೇಜಿನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಬೇರೆಡೆಗೆ ವರ್ಗಾವಣೆಯಾದ ಉಪನ್ಯಾಸಹ ಮೋಹನ್ ಕುಮಾರ್ ಹಾಗೂ ಶಿವಪ್ರಸಾದ್ ಮತ್ತು ಕರವೇ ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ ರವರನ್ನು ಗೌರವಿಸಿ ಸನ್ಮಾನಿಸಲಾಯಿತು ನಂತರ ವಿಶ್ವ ಜಲದಿನ-2025″ ಅಂಗವಾಗಿ ಜಲ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಟಿ.ಪಿ ಪುಟ್ಟರಾಜು, ಉಪನ್ಯಾಸಕರಾದ ರಾಘವೇಂದ್ರ, ರಮೇಶ್, ವೆಂಕಟೇಶ್, ಪುರುಷೋತ್ತಮ್, ಮಾರುತಿ, ನಟರಾಜ್ ಗ್ರಾಮ ಪಂಚಾಯತಿ ಸದಸ್ಯರಾದ ನಂಜುಂಡಪ್ಪ, ಮೋಹನ್ ಕುಮಾರ್, ಬಿಜೆಪಿ ಮುಖಂಡರಾದ ನಂಜೇಶಣ್ಣ, ಹರೀಶ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಬಾಲಲೋಚನ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

Trending

error: Content is protected !!